<?= $pageTitle ?>
Logo
ಮುಖಪುಟ ಓದುವುದು ಕೇಳು
Education

SSLC Exam 2026: ಪರೀಕ್ಷೆಗೆ ಹೊಸ ಗೈಡ್ ಲೈನ್ಸ್ ಪ್ರಕಟ, ಶಿಕ್ಷಕರಿಗೂ ಮಹತ್ವದ ಸೂಚನೆ.

SSLC Exam 2026: ಪರೀಕ್ಷೆಗೆ ಹೊಸ ಗೈಡ್ ಲೈನ್ಸ್ ಪ್ರಕಟ, ಶಿಕ್ಷಕರಿಗೂ ಮಹತ್ವದ ಸೂಚನೆ.
Summary: ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಸಂಬಂಧಿಸಿದಂತೆ ಕರ್ನಾಟಕ ಶಿಕ್ಷಣ ಇಲಾಖೆ ಹೊಸ ಗೈಡ್ ಲೈನ್ಸ್ ಪ್ರಕಟಿಸಿದೆ. ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟ ಮತ್ತು ಪರೀಕ್ಷಾ ಫಲಿತಾಂಶ ಸುಧಾರಣೆಯ ಉದ್ದೇಶದಿಂದ ಈ ಹೊಸ ಮಾರ್ಗಸೂಚಿಗಳನ್ನು ಜಾರಿಗೊಳಿಸಲಾಗಿದೆ. ಪರೀಕ್ಷಾ ಸಿದ್ಧತೆಯಲ್ಲಿ ಶಿಸ್ತು, ಸಮಯಪಾಲನೆ ಹಾಗೂ ಪಠ್ಯ ಪುನರವಲೋಕನಕ್ಕೆ ಹೆಚ್ಚಿನ ಒತ್ತು ನೀಡುವಂತೆ ವಿದ್ಯಾರ್ಥಿಗಳಿಗೆ ಖಡಕ್ ಸೂಚನೆ ನೀಡಲಾಗಿದೆ.
belagavi news:

ಇದುಕ್ಕೂ, ಜೊತೆಗೂಡಿ ಶಿಕ್ಷಕರು ಕೂಡ ನಿಯಮಿತವಾಗಿ ತರಗತಿಗಳನ್ನು ನಡೆಸಬೇಕು. ವಿದ್ಯಾರ್ಥಿಗಳ ಅನುಮಾನಗಳನ್ನು ಪರಿಹರಿಸಬೇಕು ಹಾಗೂ ಪರೀಕ್ಷೆ ಮುಗಿಯುವವರೆಗೂ ಕಟ್ಟುನಿಟ್ಟಾಗಿ ಮಾರ್ಗದರ್ಶನ ನೀಡಬೇಕು ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ ಹೊಸ ಗೈಡ್ ಲೈನ್ಸ್ ವಿದ್ಯಾರ್ಥಿ ಶಿಕ್ಷಕರಿಗೆ ಸೂಚನೆ ಸೇರಿದಂತೆ ಸಂಪೂರ್ಣ ಮಾಹಿತಿ ನೀಡಿದ್ದಾರೆ.


ಎಸ್ ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವ ಘಟನೆ ರಾಜ್ಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ತಮ್ಮ ಶಾಲೆಗಳ ಪಲಿತಾಂಶ ಹೆಚ್ಚಿಸಲು ಕೆಲಸ ಅಲ್ಲ ಮುಖ್ಯ ಶಿಕ್ಷಕರು ಅಕ್ರಮ ಮಾರ್ಗಗಳನ್ನು ಅನುಸರಿಸಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.


ಲಭ್ಯ ಮಾಹಿತಿಯಂತೆ ಕೆಲವು ಶಾಲೆಗಳು ವಿದ್ಯಾರ್ಥಿಗಳನ್ನು ಪರೀಕ್ಷೆಗೆ ಪೂರಕವಾಗಿ ತಯಾರಿಸುವ ನೆಪದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಮುಂಚಿತವಾಗಿಯೇ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದವು ಎಂದು ತಿಳಿದುಬಂದಿದೆ. ಈ ಗಂಭೀರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದಿಂದ ಕರ್ನಾಟಕ ಶಿಕ್ಷಣ ಇಲಾಖೆ ಅಲರ್ಟ್ ಆಗಿದ್ದು ಎಸ್ ಎಸ್ ಎಲ್ ಸಿ ಪರೀಕ್ಷೆಯ ಪ್ರಾವಿತ್ರ್ಯ ಕಾಪಾಡುವ ಉದ್ದೇಶದಿಂದ ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ.
ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಶಿಸ್ತು ಮತ್ತು ನಾಯತತ್ವ ಕಾಪಾಡಲು ಈ ಹೊಸ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುವುದು ಎಂದು ಶಿಕ್ಷಣ ಇಲಾಖೆ ತಿಳಿಸಿದೆ.


ಜನೆವರಿ 19ರಂದು ಎಸ್ ಎಸ್ ಎಲ್ ಸಿ ಪೂರಕ (Preparatory) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬೆನ್ನೆಲೆ ರಾಜ ಶಿಕ್ಷಣ ಇಲಾಖೆ Karnataka Education Department ಎಚ್ಚೆತ್ತುಗೊಂಡಿದೆ. ಈ ಗಂಭೀರ ಘಟನೆ ಹಿನ್ನೆಲೆಯಲ್ಲಿ ಎಸ್ ಎಸ್ ಎಲ್ ಸಿ ಮುಖ್ಯ ಪರೀಕ್ಷೆ ಗೆ ಸಂಬಂಧಿಸಿದಂತೆ ಹೊಸ ಗೈಡ್ ಲೈನ್ಸ್ ಗಳನ್ನು ಇಲಾಖೆ ಬಿಡುಗಡೆ ಮಾಡಿದೆ. ಹೊಸ ಮಾರ್ಗಸೂಚಿಗಳ ಪ್ರಕಾರ ಎಸ್ ಎಸ್ ಎಲ್ ಸಿ ಗೆ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಇದರ ಜೊತೆಗೆ ಈಗ ಶಿಕ್ಷಕರಿಗೂ ಪರೀಕ್ಷಾ ಕೇಂದ್ರಗಳಲ್ಲಿ ಮೊಬೈಲ್ ಬಳಸಲು ಅವಕಾಶವಿಲ್ಲ ಎಂದು ಸೂಚನೆ ಇಲಾಖೆ ಖಡಕ ಸೂಚನೆ ನೀಡಲಾಗಿದೆ.


ಅಲ್ಲದೆ, ಎಸ್ ಎಸ್ ಎಲ್ ಸಿ ೨ನೇ ಮತ್ತು ೩ನೇ ಪರೀಕ್ಷೆಗಳನ್ನು ಆಯುಕ್ತರ (Commissioner) ನೇರ ನೇತೃತ್ವದಲ್ಲಿ ನಡೆಸಲಾಗುವುದು ಎಂದು ಇಲಾಖೆ ತಿಳಿಸಿದೆ. ಈ ಕ್ರಮದಿಂದ ಪರೀಕ್ಷೆಯ ಪಾರದರ್ಶಕತೆ ಶಿಸ್ತು ಮತ್ತು ವಿಶ್ವಸಾರ್ಹತೆ ಹೆಚ್ಚಾಗಿ ಇದೆ, ಎಂಬ ನಿರೀಕ್ಷೆ ವ್ಯಕ್ತಪಡಿಸಲಾಗಿದೆ.


ಹೊಸ ಮಾರ್ಗಸೂಚಿಯಲ್ಲೇನಿದೆ?

ಈ ಹಿಂದೆ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ಕರ್ನಾಟಕ ಪರೀಕ್ಷಾ ಮಂಡಳಿ ಮತ್ತು ಮೌಲ್ಯ ನಿರ್ಣಯ ಮಂಡಳಿ ಈ (Evolution Board ) ನೇತೃತ್ವದಲ್ಲಿ ನಡೆಸಲಾಗುತ್ತಿತ್ತು, ಆದರೆ ಹೊಸ ಗೈಡ್ ಲೈನ್ಸ್ ಪ್ರಕಾರ ಮುಂದಿನ ಎರಡನೇ ಮತ್ತು ಮೂರನೇ ಪರೀಕ್ಷೆಗಳನ್ನು ಆಯುಕ್ತರ (Commissioner) ನೇತೃತ್ವದಲ್ಲಿ ನಡೆಸಲು ನಿರ್ಧರಿಸಲಾಗಿದೆ.


ಅದೇ ವೇಳೆ ಡಿಡಿಪಿಐ ( DDPI) ಬಿಇಓ (BEO) ಗಳಿಗೆ ಪರೀಕ್ಷೆಯ ಸಂಪೂರ್ಣ ಜವಾಬ್ದಾರಿಯನ್ನು ನೀಡಲಾಗಿದೆ. ಈ ಹೊಸ ಕ್ರಮದಿಂದ ಪರೀಕ್ಷೆಯ ಪಾರದರ್ಶಕತೆ ಶಿಸ್ತು ಮತ್ತು ಪರಿಣಾಮಕಾರಿತ್ವ ಹೆಚ್ಚಿಸಲು ಮತ್ತು ಹಿಂದಿನ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ಮರುಕಳದಂತೆ ತಡೆಯಲು ಉದ್ದೇಶಿಸಲಾಗಿದೆ.


ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹೊಸ ಮಾರ್ಗಸೂಚಿ: ಮೊಬೈಲ್ ನಿರ್ಬಂಧ, ಪ್ರಶ್ನೆ ಪತ್ರಿಕೆ ಗೌಪ್ಯತೆ ಕಡ್ಡಾಯ


ಕರ್ನಾಟಕ ಶಿಕ್ಷಣ ಇಲಾಖೆ ಹೊಸ ಮಾರ್ಗಸೂಚಿ ಬಿಡುಗಡೆ ಮಾಡಿದು ಎಸ್ ಎಸ್ ಎಲ್ ಸಿ ಗೆ ಪರೀಕ್ಷೆ ವೇಳೆ ವಿದ್ಯಾರ್ಥಿಗಳು ಮೊಬೈಲ್ ತರುವಂತಿಲ್ಲ, ಎಂದು ಖಡಕ್ ಸೂಚನೆ ನೀಡಲಾಗಿದೆ. ಜೊತೆಗೆ ಶಿಕ್ಷಕರು ಸಹ ಪರೀಕ್ಷಾ ಸಮಯದಲ್ಲಿ ಮೊಬೈಲ್ ತರಬಾರದು.
ಪ್ರಶ್ನೆ ಪತ್ರಿಕೆ ಸೋರಿಕೆ ಅಥವಾ ಯಾವುದೇ ಅವ್ಯವಹಾರ ತಡೆಗಟ್ಟಲು ಕೇಂದ್ರ ಹಾಗೂ ಶಾಲೆಗಳಿಗೆ ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ ಯಾವುದೇ ಪ್ರಶ್ನೆ ಪತ್ರಿಕೆ ಸೋರಿಕೆ ತಡೆದರೆ ಸಂಬಂಧಿತ ಪೊಲೀಸ್ ಠಾಣೆಯಲ್ಲಿ ದೂರ ದಾಖಲು ಮಾಡಬೇಕು.


ಹೊಸ ಮಾರ್ಗಸೂಚಿಯ ಪ್ರಕಾರ ಪ್ರಶ್ನೆ ಪತ್ರಿಕೆಗಳನ್ನು ಮುಖ್ಯೋಪಾಧ್ಯಾಯರೇ ಡೌನ್ಲೋಡ್ ಮಾಡಬೇಕು ಮತ್ತು ಗೌಪ್ಯತೆಯನ್ನು ಕಟ್ಟುನಿಟ್ಟಾಗಿ ಕಾಯ್ದುಕೊಳ್ಳಬೇಕು . ಜೊತೆಗೆ ಪ್ರಾಂಶುಪಾಲರು (Principles) ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ. ಪರಿಶೀಲನೆ ನಡೆಸುವಂತೆ ಸೂಚಿಸಲಾಗಿದೆ. ಈ ಕ್ರಮದಿಂದ ಪರೀಕ್ಷೆಯ ಪಾರದರ್ಶಕತೆ ಶಿಸ್ತು ಮತ್ತು ವಿಶ್ವಸಾರ್ಹತೆ ಹೆಚ್ಚಾಂಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದ್ದಾರೆ.


ರಾಜ್ಯಮಟ್ಟದ ಪೂರ್ವಭಾವಿ ಪರೀಕ್ಷೆಯಲ್ಲಿ ಪ್ರಶ್ನೆ ಪತ್ರಿಕೆ ಲೀಕ್: ಕೆಲವು ಶಿಕ್ಷಕರು ಸಿಕ್ಕಿಪಟ್ಟರು
ಕಳೆದ ವಾರ ರಾಜಮಟ್ಟದ ಪೂರ್ವಭಾವಿ ಪರೀಕ್ಷೆಯಲ್ಲಿ ಗಣಿತ್ ವಿಭಾಗದ ಪ್ರಶ್ನೆ ಪತ್ರಿಕೆ ಜನವರಿ 6 ರಂದು ಆಗಿರುವ ಪ್ರಕರಣ ಬೆಳಕಿಗೆ ಬಂದಿದೆ. ವಿಶೇಷವಾಗಿ ಶಿವಮೊಗ್ಗ ಮತ್ತು ಕಲಬುರ್ಗಿ ಜಿಲ್ಲೆಗಳಲ್ಲಿ ಈ ಪ್ರಶ್ನೆ ಪತ್ರಿಕೆ ಸಾಮಾಜಿಕ ಜಾಲತಾಣಗಳಲ್ಲಿ ವೈರಲ ಆಗಿತ್ತು.


ಶಿಕ್ಷಣ ಇಲಾಖೆ ತನಿಖೆ ನಡೆಸಿದಂತೆ ಕೆಲವು ಶಾಲೆಗಳು ಈ ಪ್ರಶ್ನೆ ಪತ್ರಿಕೆ ಸೋರಿಕೆ ಕೃತ್ಯದಲ್ಲಿ ಭಾಗಿಯಾಗಿವೆ. ಹೀಗಾದರೂ ಇತ್ತೀವರೆಗೆ ಆರು ಶಿಕ್ಷಕರು ಮಾತ್ರ ಪತ್ತೆಯಾಗಿದ್ದಾರೆ ತನಿಕೆಯಲ್ಲಿ ಗೊತ್ತಾಗದಂತೆ ಪರೀಕ್ಷೆಗೂ ಮೂರು ಗಂಟೆಗಳಿಗೂ ಮುನ್ನ ಪ್ರಶ್ನೆ ಪತ್ರಿಕೆಗಳ ಫೋಟೋ ಪ್ರತಿಗಳನ್ನು ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಲಾಗಿತ್ತು.


ಈ ಪ್ರಕರಣದಿಂದ ಕರ್ನಾಟಕ ಶಿಕ್ಷಣ ಇಲಾಖೆ ಎಚ್ಚರಗೊಳ್ಳುತ್ತಿದೆ ಮತ್ತು ಮುಂದಿನ ಪರೀಕ್ಷೆಗಳಲ್ಲಿ ಪಾರದರ್ಶಕತೆ, ಕಾಪಾಡಲು ಹೊಸ ಗೈಡ್ ಲೈನ್ಸ್ ಜಾರಿಗೊಳಿಸಿದೆ.


ಎಸ್ ಎಸ್ ಎಲ್ ಸಿ ಪಿ ಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟ : ಪ್ರಶ್ನಿ ಪತ್ರಿಕೆ ಮಾರಾಟ ಪ್ರಕರಣದಲ್ಲಿ ವಿದ್ಯಾರ್ಥಿಗಳು ಸಿಕ್ಕಿಬಿದ್ದರು.


ಕರ್ನಾಟಕದಲ್ಲಿ ಈ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ಪಿಯು ಪರೀಕ್ಷೆ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ. ಪರೀಕ್ಷೆ ಮುಂದಿನ ದಿನಗಳಲ್ಲಿ ಪಾರದರ್ಶಕವಾಗಿ ನಡೆಸಲು ಶಿಕ್ಷಣ ಇಲಾಖೆ ಸಂಪೂರ್ಣ ವ್ಯವಸ್ಥೆ ಮಾಡಿಕೊಂಡಿದೆ.


ಇದಕ್ಕೂ ನಡುವೆ ಕೆಲ ಅಕ್ರಮ ಕೃತ್ಯಗಳು ಕೂಡ ಬೆಳಕಿಗೆ ಬಂದಿವೆ ಪ್ರಶ್ನೆ ಪತ್ರಿಕೆ ಮಾರಾಟಕ್ಕಾಗಿ ಇನ್ಸ್ಟಾಗ್ರಾಮ್ ನಲ್ಲಿ ಡೆಲ್ಟಾ ಹ್ಯಾಕರ್ 32 ಡೆಲ್ಟಾ ಹ್ಯಾಕರ್ ಸೇರಿದಂತೆ 8ಕ್ಕೂ ಹೆಚ್ಚು ಖಾತೆಗಳನ್ನು ತೆರೆದಿದ್ದವು ಜೊತೆಗೆ ಟೆಲಿಗ್ರಾಂ ಮತ್ತು ವಾಟ್ಸಪ್ ನಲ್ಲಿ ಗ್ರೂಪ್ ಗಳನ್ನು ರಚಿಸಿ ಕೆಲವರು ಪ್ರಶ್ನೆ ಪತ್ರಿಕೆ ಮಾರಾಟ ಮಾಡಿದರು.
ಈ ಅಕ್ರಮ ಕಾರ್ಯಾಚರಣೆ ಸಂಬಂಧಿ ತನಿಕೆಯಲ್ಲಿ ರಾಮನಗರ ಉಡುಪಿ, ಶಿವಮೊಗ್ಗ ಹಾಗೂ ತುಮಕೂರು ಸೇರಿದಂತೆ 10 ವಿದ್ಯಾರ್ಥಿಗಳು ಸಿಕ್ಕಿಬಿದ್ದಿದ್ದಾರೆ ಇದೀಗ ವಿದ್ಯಾರ್ಥಿಗಳು ವಿರುದ್ಧ ಕ್ರಮ ಕೈಗೊಳ್ಳಲು ಸಂಬಂಧಿತ ಅಧಿಕಾರಿಗಳು ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.


ಇನ್ನಷ್ಟು ಓದಿರಿ:


ಉಡುಪಿ ಕೃಷ್ಣ ಮಠಕ್ಕೆ ಬರುವ ಭಕ್ತರಿಗೆ ಹೊಸ ನಿಯಮ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online