Belagavi news:
ನೂತನವಾಗಿ ಆಯ್ಕೆಯಾದ ಶಾಸಕ ಸಮರ್ಥ್ ಅವರು ತಮ್ಮ ಮೊದಲ ಸಭೆಗೆ ಲ್ಯಾಪ್ಟಾಪ್ ಹಿಡಿದು ಹಾಜರಾಗುವ ಮೂಲಕ ಎಲ್ಲರ ಗಮನವನ್ನು ಸೆಳೆದಿದ್ದಾರೆ. ಗಳನ್ನು ಡಿಜಿಟಲ್ ರೀತಿಯ ತಮ್ಮ ಕ್ಷೇತ್ರದ ಸಮಸ್ಯೆಗಳನ್ನು ಪ್ರಸ್ತುತಪಡಿಸಿದ ಅವರು, ಸಭೆಯಲ್ಲಿ ಕುಡಿಯುವ ನೀರಿನ ಗಂಭೀರ ಸಮಸ್ಯೆಯನ್ನು ಪ್ರಮುಖವಾಗಿ ಎತ್ತಿ ಹಿಡಿದರು.
ಸಭೆಯಲ್ಲಿ ಸಮರ್ಥ್ ಅವರು ತಮ್ಮ ಕ್ಷೇತ್ರದ ಹಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಹೆಚ್ಚುತ್ತಿರುವ ಬಗ್ಗೆ ಅಂಕಿ ಅಂಶಗಳೊಂದಿಗೆ ವಿವರಿಸಿದ್ದರು. ಸಮಸ್ಯೆಯ ತೀವ್ರತೆಯನ್ನು ಅಧಿಕಾರಿಗಳಿಗೆ ಸ್ಪಷ್ಟಪಡಿಸಿ, ತಕ್ಷಣದ ಪರಿಹಾರ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದರು.
ಮೊದಲ ಸಭೆಯಲ್ಲೇ ಡಿಜಿಟಲ್ ಪ್ರಸ್ತುತಿ ಮೂಲಕ ವಿಷಯ ಮಂಡಿಸಿದ ಅವರ ಶೈಲಿ ಆಡಳಿತ ವಲಯದಲ್ಲಿ ಗಮನ ಸೆಳೆದಿದ್ದು, ಹೊಸ ತಲೆಮಾರಿನ ಶಾಸಕರಾಗಿ ಅವರ ಕಾರ್ಯ ಪದ್ಧತಿಗೆ ಮೆಚ್ಚುಗೆ ವ್ಯಕ್ತವಾಗಿದೆ.
ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವತ್ತ ಸರ್ಕಾರ ಗಮನಹರಿಸಬೇಕೆಂದು ಅವರು ಸಭೆಯಲ್ಲಿ ಒತ್ತಾಯಿಸಿದ್ದು, ತಮ್ಮ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ತಿಳಿಸಿದ್ದಾರೆ.
ಸಮರ್ಥ್ ಅವರ ಈ ವಿಭಿನ್ನ ಮತ್ತು ಸಕ್ರಿಯ ನಡೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ನೂತನವಾಗಿ ಶಾಸಕರಾಗಿ ಪ್ರಮಾಣವಚನ ಸ್ವೀಕರಿಸಿದ ಸಮರ್ಥ ಶಾಮನೂರು ಅವರು ಪ್ರಮಾಣ ವಚನದ ಮರುದಿನವೇ ಪ್ರಗತಿ ಪರಿಶೀಲನ ಸಭೆ ನಡೆಸುವ ಮೂಲಕ ಗಮನ ಸೆಳೆದಿದ್ದಾರೆ. ನಿನ್ನೆ ವಿಧಾನಸೌಧದಲ್ಲಿ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಅವರು, ಇಂದು ಅಧಿಕಾರಿಗಳೊಂದಿಗೆ ಮೊದಲ ಅಧಿಕೃತ ಸಭೆ ನಡೆಸಿದ್ದಾರೆ.
ಸಭೆಯಲ್ಲಿ ತಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳು, ಮೂಲಸೌಕರ್ಯ ಯೋಜನೆಗಳು ಹಾಗೂ ಸಾರ್ವಜನಿಕ ಸಮಸ್ಯೆಗಳ ಕುರಿತು ಅಧಿಕಾರಿಗಳೊಂದಿಗೆ ವಿವರವಾಗಿ ಚರ್ಚೆ ನಡೆಸಿದರು. ಪ್ರಾಥಮಿಕ ಹಂತದಲ್ಲಿ ಆಡಳಿತಾತ್ಮಕ ಕಾರ್ಯಗಳಲ್ಲಿ ಸಕ್ರಿಯ ರಾಗಿರುವ ಅವರು ನಡೆ ಆಡಳಿತ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
ಪ್ರಮಾಣವಚನ ಸ್ವೀಕರಿಸಿದ ತಕ್ಷಣವೇ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ ನೀಡಿರುವ ಸಮರ್ಥ್ ಅವರ ಕಾರ್ಯ ಶೈಲಿಗೆ ಸ್ಥಳೀಯ ಮಟ್ಟದಲ್ಲಿ ಮೆಚ್ಚುಗೆ ವ್ಯಕ್ತವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆಗಳಿಗೆ ವೇಗ ನೀಡುವ ನಿರೀಕ್ಷೆ ವ್ಯಕ್ತವಾಗಿದೆ.
ಹೈ ನಿಕೆ ನೂತನ ಶಾಸಕರ ಈ ಸಕ್ರಿಯತೆ ರಾಜಕೀಯ ವಲಯದಲ್ಲಿಯೂ ಗಮನ ಸೆಳೆಯುತ್ತಿದೆ.
ದಾವಣಗೆರೆಯಲ್ಲಿ ಮೊದಲ ಸಭೆ ನಡೆಸಿದ ಶಾಸಕ ಸಮರ್ಥ್ ಶಾಮನೂರು :
ದಾವಣಗೆರೆ ನಗರದ ಅರುಣ ಸರ್ಕಲ್ ಬಳಿ ಇರುವ ಪಶು ಸಂಗೋಪನೆ ಇಲಾಖೆ ಸಭಾಂಗಣದಲ್ಲಿ ನೂತನ ಶಾಸಕ ಸಮರ್ಥ್ ಶ್ರಮನೂರು ಅವರು ಪ್ರಗತಿ ಪರಿಶೀಲನ ಸಭೆ ನಡೆಸಿದರು. ಪ್ರಮಾಣವಚನ ಸ್ವೀಕರಿಸಿದ ಮರು ದಿನವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಗಳಿಂದ ಕ್ಷೇತ್ರದ ಅಭಿವೃದ್ಧಿ ವಿಚಾರಗಳಲ್ಲಿ ಸಕ್ರಿಯತೆ ತೋರಿಸಿದ್ದಾರೆ.
ಸಭೆಯ ವೇಳೆ ಅಧಿಕಾರಿಗಳು ನೀಡಿದ ಮಾಹಿತಿಯನ್ನು ಸಮರ್ಥ್ ಅವರು ಲ್ಯಾಪ್ಟಾಪ್ ನಲ್ಲಿ ದಾಖಲಿಸಿಕೊಂಡು ಡಿಜಿಟಲ್ ರೀತಿಯಲ್ಲಿ ವಿಚಾರಗಳನ್ನು ನಿರ್ವಹಿಸಿದರು. ಸಭೆಯಲ್ಲಿ ಪ್ರಮುಖವಾಗಿ ಕುಡಿಯುವ ನೀರಿನ ಸಮಸ್ಯೆ ಕುರಿತು ವಿಶೇಷ ಚರ್ಚೆ ನಡೆಯಿತು.
ಯಾವ ಯಾವ ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಇದೆ ಎಂಬ ಬಗ್ಗೆ ವಿವರಗಳು ಪರಿಶೀಲನೆ ನಡೆಸಿದ ಬಳಿಕ ತಕ್ಷಣಕ್ಕೆ ನಾಲ್ಕು ಕಡೆಗಳಲ್ಲಿ ಬೋರ್ವೆಲ್ ಕೊರೆಯಿಸಲು ನಿರ್ಧಾರ ಕೈಗೊಳ್ಳಲಾಗಿದೆ. ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿದುಬಂದಿದೆ.
ಸಭೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಶಾಸಕ ಸಮರ್ಥ್, ಅಧಿಕಾರಿಗಳು, ಸಾರ್ವಜನಿಕರು ಹಾಗೂ ಮಾಧ್ಯಮ ಪ್ರತಿನಿಧಿಗಳು ನೀಡುವ ಮಾಹಿತಿಯನ್ನು ಆದರಿಸಿ ಸೂಕ್ತ ನಿರ್ಧಾರಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು. ಕ್ಷೇತ್ರದ ಅಭಿವೃದ್ಧಿಗೆ ಪಾರದರ್ಶಕ ಹಾಗೂ ತ್ವರಿತ ಆಡಳಿತಕ್ಕೆ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.
ನೂತನ ಶಾಸಕರ ಈ ತ್ವರಿತ ಕಾರ್ಯ ಶೈಲಿ ಸ್ಥಳೀಯ ಮಟ್ಟದಲ್ಲಿ ಮೆಚ್ಚುಗೆಗೆ ಪಾತ್ರವಾಗಿದ್ದು, ಮುಂದಿನ ದಿನಗಳಲ್ಲಿ ಇನ್ನಷ್ಟು ಅಭಿವೃದ್ಧಿ ಯೋಜನೆಗಳ ನಿರೀಕ್ಷೆ ವ್ಯಕ್ತವಾಗಿದೆ
Also Read:
Rain Alert Karnataka: ರಾಜ್ಯದಲ್ಲಿ 3 ದಿನ ಭಾರೀ ಮಳೆ, ಹವಮಾನ ಇಲಾಖೆ ಮುನ್ಸೂಚನೆ