Belagavi News:
"ಅಯೋಗ್ಯ 2" ಚಿತ್ರದ ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕರ ಕುರಿತು ನೀಡಿದ ಹೇಳಿಕೆ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ನಟ ಸತೀಶ್ ವಿಡಿಯೋ ಸಂದೇಶದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಹೇಳಿದ್ದಾರೆ.
ಸತೀಶ್ ಅವರು ಸ್ಪಷ್ಟಪಡಿಸಿರುವಂತೆ, "ಶಿಕ್ಷಣ ಅಂದ್ರೆ ಶಾಲೆಗೆ ಹೋಗುವುದಲ್ಲ " ಎಂಬ ಹೇಳಿಕೆಯಿಂದ ಉದ್ದೇಶಿತ ಅರ್ಥವೂ ಬೇರೆಯಾಗಿತ್ತು. ಚಿತ್ರರಂಗದ ಕಾರ್ಯವಿಧಾನ, ನಿರ್ಮಾಣ ಪ್ರಕ್ರಿಯೆ ಹಾಗೂ ಹಣಕಾಸು ನಿರ್ವಹಣೆ ಕುರಿತು ಹೊಸ ನಿರ್ಮಾಪಕರಿಗೆ ಅಗತ್ಯಜ್ಞಾನ ಇರಬೇಕು ಎಂಬುದೇ ತಮ್ಮ ಮಾತಿನ ಉದ್ದೇಶವಾಗಿತ್ತು ಎಂದು ತಿಳಿಸಿದ್ದಾರೆ.
ಹೊಸ ನಿರ್ಮಾಪಕರು ಚಿತ್ರ ನಿರ್ಮಾಣದಲ್ಲಿ ಅನಗತ್ಯ ನಷ್ಟ ಅನುಭವಿಸಬಾರದು ಎಂಬ ಕಾಳಜಿಯಿಂದ ಈ ಹೇಳಿಕೆ ನೀಡಿದ್ದಾಗೆ ಅವರು ವಿವರಿಸಿದ್ದಾರೆ. ತಮ್ಮ ಮಾತಿನಿಂದ ಯಾರಿಗಾದರೂ ನೋವಾಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ ಎಂದು ಸತೀಶ್ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ಈ ಹೇಳಿಕೆ ಪತ್ರಿಕಾಗೋಷ್ಠಿಯ ನಂತರ ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಚಿತ್ರರಂಗದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿತ್ತು. ಹಲವರು ಈ ಹೇಳಿಕೆಯನ್ನು ಬೆಂಬಲಿಸಿದರೆ, ಕೆಲವರು ಟೀಕಿಸಿದ್ದರು. ಈ ಹಿನ್ನಲೆಯಲ್ಲಿ ಸತೀಶ್ ಅವರ ಸ್ಪಷ್ಟನೆ ಮತ್ತು ಕ್ಷಮೆಯಾಚನೆ ಮಹತ್ವ ಪಡೆದಿದೆ.
"ಅಯೋಗ್ಯ 2" ವಿವಾದ - ನಿರ್ಮಾಪಕರ ಕುರಿತು ಹೇಳಿಕೆಗೆ ನೀನಾಸಂ ಸತೀಶ್ ಸ್ಪಷ್ಟನೆ, ಅನುಭವ ಹಂಚಿಕೊಂಡು ಕ್ಷಮೆಯಾಚನೆ:
"ಅಯೋಗ್ಯ 2" ಕಾರ್ಯಕ್ರಮದ ವೇದಿಕೆಯಲ್ಲಿ ನಿರ್ಮಾಪಕರ ಕುರಿತಾಗಿ ನೀಡಿದ ಹೇಳಿಕೆ ಚಿತ್ರರಂಗದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೇ ನಟ ನೀನಾಸಂ ಸತೀಶ್ ವಿಡಿಯೋ ಸಂದೇಶದ ಮೂಲಕ ಸ್ಪಷ್ಟನೆ ನೀಡಿದ್ದಾರೆ. ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇತ್ತೀಚಿಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ್ದ ಸತೀಶ್, " ಸಿನಿಮಾ ಸೋಲುತ್ತದೆ ಎಂಬುದು ಗೊತ್ತಿದ್ದ ಮೇಲು ಯಾಕೆ ಸಿನಿಮಾ ಮಾಡಬೇಕು? ನಿರ್ಮಾಪಕರಿಗೆ ಶಿಕ್ಷಣದ ಅವಶ್ಯಕತೆ ಇದೆ" ಎಂಬ ಹೇಳಿಕೆ ನೀಡಿದ್ದರು. ಈ ಮಾತು ನಿರ್ಮಾಪಕ ವಲಯದಲ್ಲಿ ಅಸಮಾಧಾನಕ್ಕೆ ಕಾರಣವಾಗಿತ್ತು.
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿದ ಸತೀಶ್, 'ಎಜುಕೇಶನ್' ಎಂಬ ಪದವನ್ನು ಬಳಸಿದ್ದರು ಅದರ ಅರ್ಥ ಶಾಲಾ ಶಿಕ್ಷಣವಲ್ಲ ಎಂದು ಹೇಳಿದ್ದಾರೆ. ಚಿತ್ರರಂಗಕ್ಕೆ ಹೊಸದಾಗಿ ಬರುವ ನಿರ್ಮಾಪಕರಿಗೆ ಸಿನಿಮಾ ನಿರ್ಮಾಣದ ಪ್ರಕ್ರಿಯೆ, ಹಣಕಾಸು ನಿರ್ವಹಣೆ ಮತ್ತು ವಿಭಾಗವಾರು ವೆಚ್ಚಗಳ ಬಗ್ಗೆ ಮೂಲಭೂತ ಜ್ಞಾನ ಇರಬೇಕು ಎಂಬುದೇ ತಮ್ಮ ಉದ್ದೇಶವಾಗಿತ್ತು ಎಂದು ವಿವರಿಸಿದ್ದಾರೆ.
"ಯಾವ ಇಲಾಖೆಗೆ ಎಷ್ಟು ಹಣ ಹೋಗುತ್ತದೆ, ಯಾವ ವಿಭಾಗದಲ್ಲಿ ನಾವು ತೊಡಗಿಸಿಕೊಳ್ಳಬೇಕು ಎಂಬ ಕನಿಷ್ಠ ತುಳುಗಳಿಗೆ ಇದ್ದರೆ ಒಳ್ಳೆಯದು ಎಂಬುದೇ ನನ್ನ ಮಾತಿನ ಅರ್ಥವಾಗಿತ್ತು" ಎಂದು ಅವರು ತಿಳಿಸಿದ್ದಾರೆ. ನಾನು ಕೂಡ ನಿರ್ಮಾಪಕರಾಗಿ ತೋಟ ಅನುಭವ ಹೊಂದಿದ್ದೇನೆ. ಆ ಸೋಲಿನಿಂದ ಕಲಿಯಲು ನನಗೆ ಸಮಯ ಬೇಕಾಯಿತು ಎಂದು ತಮ್ಮ ವಯಕ್ತಿಕ ಅನುಭವವನ್ನು ಹಂಚಿಕೊಂಡಿದ್ದಾರೆ.
ಹೊಸ ನಿರ್ಮಾಪಕರು ಚಿತ್ರರಂಗಕ್ಕೆ ಬಂದು ನಷ್ಟ ಅನುಭವಿಸಬಾರದು ಎಂಬ ಕಾಳಜಿಯಿಂದ ಈ ಮಾತು ಹೇಳಿದ್ದಾಗಿ ಅವರು ಹೇಳಿದ್ದಾರೆ. ತಮ್ಮ ಹೇಳಿಕೆಯಿಂದ ಯಾರಿಗಾದರೂ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇವೆ ಎಂದು ಸತೀಶ್ ವಿಡಿಯೋ ಮೂಲಕ ತಿಳಿಸಿದ್ದಾರೆ.
ಈ ವಿವಾದಾತ್ಮಕ ಹೇಳಿಕೆ ಬಳಿಕ ಚಿತ್ರರಂಗದಲ್ಲಿ ಪರ ವಿರೋಧ ಚರ್ಚೆಗಳು ನಡೆದಿದ್ದು, ಸತೀಶ್ ಅವರ ಸ್ಪಷ್ಟನೆ ಇದೀಗ ಚರ್ಚೆಗೆ ತಾತ್ಕಾಲಿಕ ವಿರಾಮ ನೀಡುವ ನಿರೀಕ್ಷೆ ಇದೆ.
ನಿರ್ಮಾಪಕರಿದ್ದರೆ ಮಾತ್ರ ಚಿತ್ರರಂಗ - ವಿವಾದದ ನಡುವೆ ನೀನಾಸಂ ಸತೀಶ್ ಕ್ಷಮೆಯಾಚನೆ, ಸ್ಪಷ್ಟನೇ:
ಅಯೋಗ್ಯ 2 ಚಿತ್ರಕ್ಕೆ ಸಂಬಂಧಿಸಿದ ನಿರ್ಮಾಪಕರ ಕುರಿತು ಹೇಳಿಕೆ ವಿವಾದಕ್ಕೆ ಕಾರಣವಾದ ಬೆಂದಲ್ಲೇ ನಟ ನೀನಾಸಂ ಸತೀಶ್ ಮತ್ತೊಮ್ಮೆ ಸ್ಪಷ್ಟನೆ ನೀಡಿ ನಿರ್ಮಾಪಕರ ಸಂಘಕ್ಕೆ ಕ್ಷಮೆಯಾಚಿಸಿದ್ದಾರೆ. ತಮ್ಮ ಮಾತುಗಳನ್ನು ತಪ್ಪಾಗಿ ಅರ್ಥೈಸಲಾಗಿದೆ ಎಂದು ಅವರು ಹೇಳಿದ್ದಾರೆ.
"ಕನ್ನಡ ಚಿತ್ರರಂಗದಲ್ಲಿ ಲಕ್ಷಾಂತರ ಜನರ ಬದುಕು ಅಡಗಿದೆ . ಚಿತ್ರರಂಗ ಉಳಿಯಬೇಕು ಮತ್ತು ಬೆಳೆಯಬೇಕು ಎನ್ನುವುದಷ್ಟೇ ನನ್ನ ಆಶಯ. ನಿರ್ಮಾಪಕರು ಇದ್ದರೆ ಮಾತ್ರ ಚಿತ್ರರಂಗ ಇರಲು ಸಾಧ್ಯ. ಚಿತ್ರರಂಗವನ್ನು ಕಟ್ಟುವಲ್ಲಿ ಪ್ರತಿಯೊಬ್ಬ ನಿರ್ಮಾಪಕನ ಕೊಡುಗೆಯು ದೊಡ್ಡದಿದೆ", ಎಂದು ಸತೀಶ್ ಹೇಳಿದ್ದಾರೆ.
ತಾವು ನೀಡಿದ ಹೇಳಿಕೆ ಯಾರನ್ನು ವೈಯಕ್ತಿಕವಾಗಿ ನಿಂದಿಸುವ ಉದ್ದೇಶದಿಂದಲ್ಲ ಎಂದು ಸ್ಪಷ್ಟಪಡಿಸಿರುವವರು, ತಮ್ಮ ಮಾತಿನಿಂದ ಹಿರಿಯನಿರ್ವಾಪಕರಿಗೆ ಹಾಗೂ ನಿರ್ಮಾಪಕರ ಸಂಘದ ಪದಾಧಿಕಾರಿಗಳಿಗೆ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ ಎಂದು ತಿಳಿಸಿದ್ದಾರೆ.
"ಯಾರನ್ನು ನೋಯಿಸಿ ಖುಷಿಪಡುವ ವ್ಯಕ್ತಿತ್ವ ನನ್ನದಲ್ಲ. ನಾನು ಕೂಡ ಇನ್ನೂ ಕಲಿಯುತ್ತಿರುವ ಹಂತದಲ್ಲೇ ಇದ್ದೇನೆ. ಸಾಮಾಜಿಕ ಜಾಲತಾಣಗಳಲ್ಲಿ ಚಿತ್ರಗಳ ಬಗ್ಗೆ ನೆಗೆಟಿವ್ ಅಭಿಪ್ರಾಯಗಳು ಬಂದಾಗ ಚಿತ್ರತಂಡಗಳು ಡಿಮೋಟಿವೇಟ್ ಆಗುತ್ತವೆ ಎಂಬ ಕಾರಣಕ್ಕೆ ನಾನು ಧ್ವನಿ ಎತ್ತಿದ್ದೆ", ಎಂದು ಅವರು ಹೇಳಿದ್ದಾರೆ.
ಇದೇ ವೇಳೆ ಅಯೋಗ್ಯ 2 ಚಿತ್ರದ ಬಿಡುಗಡೆಯ ಹಿನ್ನೆಲೆಯಲ್ಲಿ ಮಾತನಾಡಿರುವ ಸತೀಶ್, ಇಡೀ ಚಿತ್ರರಂಗ ಹಾಗೂ ನಿರ್ಮಾಪಕರ ಬೆಂಬಲ ಅಗತ್ಯವಿದೆ ಎಂದು ಮನವಿ ಮಾಡಿದ್ದಾರೆ. ಚಿತ್ರರಂಗದ ಸಹಕಾರವಿಲ್ಲದೆ ಯಾವುದೇ ಸಿನಿಮಾ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ. ಈ ಹೇಳಿಕೆಗಳ ಹಿನ್ನೆಲೆಯಲ್ಲಿ ನಿರ್ಮಾಪಕರ ಕುರಿತು ವಿವಾದಕ್ಕೆ ತಾತ್ಕಾಲಿಕ ವಿರಾಮ ಬೀಳುವ ಸಾಧ್ಯತೆ ಇದೆ ಎಂದು ಚಿತ್ರರಂಗದಲ್ಲಿ ಚರ್ಚೆ ನಡೆಯುತ್ತಿದೆ.
Also Read:
ಫಿಫಾ ವಿಶ್ವಕಪ್ 2026 : 92 ವರ್ಷಗಳ ಬಳಿಕ ಮೊದಲ ಗೆಲುವಿನ ಇತಿಹಾಸ