<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಟಿವಿಕೆಗೆ ಸರ್ಕಾರ ರಚನೆ ಅವಕಾಶ ನೀಡಿದ ಬಗ್ಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ

ಟಿವಿಕೆಗೆ ಸರ್ಕಾರ ರಚನೆ ಅವಕಾಶ ನೀಡಿದ ಬಗ್ಗೆ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ
Summary: Minister Satish Jarkiholi has expressed happiness that the Governor has given the green light to TVK to form the government. He is of the opinion that a constitutional decision has been taken, albeit late.

belagavi news:

ಹಾವೇರಿ: ತಮಿಳುನಾಡು ವಿಧಾನಸಭೆ ಚುನಾವಣೆಯ ಫಲಿತಾಂಶ ಬಂದ ದಿನವೇ ರಾಜ್ಯಪಾಲರು ಟಿವಿಕೆ ನಾಯಕ ವಿಜಯ್ ಅವರಿಗೆ ಸರ್ಕಾರ ರಚನೆಗೆ ಆಹ್ವಾನ ನೀಡಬೇಕಾಗಿತ್ತು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಭಿಪ್ರಾಯಪಟ್ಟರು.

ನಗರದಲ್ಲಿ ಭಾನುವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೆಚ್ಚು ಸ್ಥಾನ ಗಳಿಸಿದ ಪಕ್ಷದ ನಾಯಕನಿಗೆ ಸರ್ಕಾರ ರಚನೆಗೆ ಆಹ್ವಾನಿಸುವುದು ಕಾನೂನಿನಲ್ಲಿಯೇ ಇದೆ ಎಂದು ತಿಳಿಸಿದರು.

ಅಲ್ಲಿ ರಾಜ್ಯಪಾಲರು ಬಿಜೆಪಿ ಮೈತ್ರಿಕೂಟದ ಸರ್ಕಾರ ರಚನೆಗೆ ಅವಕಾಶ ನೀಡುವ ಪ್ರಯತ್ನ ಮಾಡಿದ್ದರು. ಆದರೆ ಆ ಪ್ರಯತ್ನ ಸಫಲವಾಗದೆ ಹಿನ್ನೆಲೆ ಅನಿವಾರ್ಯವಾಗಿ ಟಿವಿಗೆ ಸರಕಾರ ರಚಿಸಲಾ ಅವಕಾಶ ನೀಡಿದರು ಎಂದು ಆರೋಪಿಸಿದರು. ತಡವಾಗಿ ಆದರೂ ಟಿವಿಕೆಗೆ ಸರ್ಕಾರ ರಚಿಸಲು ಅವಕಾಶ ನೀಡುವುದು ಸಂತೋಷದ ವಿಚಾರ ಎಂದು ಸತೀಶ್ ಜಾರಕಿಹೊಳಿ ಹೇಳಿದರು.

ಇನ್ನು ಕೇರಳದಲ್ಲಿ ಇನ್ನೆರಡು ಮೂರು ದಿನಗಳಲ್ಲಿ ಮುಖ್ಯಮಂತ್ರಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಳ್ಳಲಿದೆ. ಕಾಂಗ್ರೆಸ್ ಹೈಕಮಾಂಡ್ ಶೀಘ್ರದಲ್ಲೇ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದರು.

ಪಶ್ಚಿಮ ಬಂಗಾಳದಲ್ಲಿ ಬಿಜೆಪಿಯ ಸುವೇಂದು ಅಧಿಕಾರಿ ಮುಖ್ಯಮಂತ್ರಿಆಗಿದ್ದಾರೆ. ಅವರು ಉತ್ತಮ ಆಡಳಿತ ನೀಡಲಿ ಎಂದು ಹಾರೈಸಿದರು.

ಉಪಚುನಾವಣೆ ಫಲಿತಾಂಶವು ಮುಂದಿನ ಚುನಾವಣೆಯ ದಿಕ್ಸೂಚಿಯಾಗಬಹುದು. ಆದರೆ ದಾವಣಗೆರೆ ಮತ್ತು ಬಾಗಲಕೋಟೆ ಕ್ಷೇತ್ರಗಳಲ್ಲಿ ಮಾತ್ರ ಅದನ್ನು ಸೀಮಿತಗೊಳಿಸಬಾರದು. ಈ ಗೆಲುವಿನ ಹಾದಿಯನ್ನು ಮುಂದುವರೆಸಿಕೊಂಡು ಹೋಗಬೇಕು ಎಂದು ಹೇಳಿದರು.

ಕರ್ನಾಟಕದಲ್ಲಿ ನಡೆಯುತ್ತಿರುವ ಕುರ್ಚಿ ಕಿತ್ತಾಟದ ಬಗ್ಗೆ ಪ್ರಧಾನಿ ಮೋದಿ ರಾಜಕೀಯವಾಗಿ ಪ್ರತಿಕ್ರಿಯಿಸುವುದು ಸಹಜ. ರಾಜ್ಯದಲ್ಲಿ ನಾಯಕತ್ವದ ಗುದ್ಧಾಟ ಇರುವುದೇ ಅಲ್ಲವೇ ಎಂದು ಪ್ರಶ್ನಿಸಿದರು.

ಮೋದಿಯವರ ಕಾರ್ಯ ಶೈಲಿ ಬೇರೆ. ಪಶ್ಚಿಮ ಬಂಗಾಳ ಮತ್ತು ಮಹಾರಾಷ್ಟ್ರದಲ್ಲಿ ಅವರು ಹೇಗೆ ಅಧಿಕಾರಕ್ಕೆ ಬಂದರು ಎಂಬುದು ಎಲ್ಲರಿಗೂ ಗೊತ್ತಿದೆ ಎಂದು ಟೀಕಿಸಿದರು. ಆದರೆ ಕಾಂಗ್ರೆಸ್ ಪಕ್ಷದ ಕಾರ್ಯವೈಖರಿ ಭಿನ್ನವಾಗಿದ್ದು, ಅವರು ಹೇಳಿದ ರೀತಿಯಲ್ಲಿ ನಾವು ಮಾತನಾಡಲು ಸಾಧ್ಯವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಭೇಟಿ ವೇಲಿ ಭದ್ರತಾ ವೈಫಲ್ಯ ಉಂಟಾಗಿದೆ ಎಂಬ ಆರೋಪಗಳಿಗೆ ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ, ಆ ರೀತಿಯ ಘಟನೆಗಳು ನಡೆಯುವುದಿಲ್ಲ ಎಂದು ಹೇಳಿದರು. ಪೊಲೀಸರು ಭದ್ರತಾ ವ್ಯವಸ್ಥೆಯನ್ನು ನೋಡಿಕೊಳ್ಳುತ್ತಾರೆ ಎಲ್ಲೋ ನಡೆದ ಘಟನೆಯನ್ನು ಪ್ರಧಾನಿ ಮಂತ್ರಿಯವರ ಭದ್ರತೆಗೆ ಹೋಲಿಕೆ ಮಾಡಲು ಸಾಧ್ಯವಿಲ್ಲ. ಪ್ರಧಾನಿ ಎಂದರೆ ಪ್ರಧಾನಿಯೇ ಎಂದು ಹೇಳಿದರು.

ಪ್ರಧಾನಿಯವರ ಭದ್ರತೆಯ ಜವಾಬ್ದಾರಿ ರಾಜ್ಯ ಸರ್ಕಾರದಷ್ಟೇ ಅಲ್ಲ ಕೇಂದ್ರ ಭದ್ರತಾ ಸಂಸ್ಥೆಗಳ ಮೇಲು ಇರುತ್ತದೆ. ಆದ್ದರಿಂದ ಆತಂಕ ಪಡುವ ಅಗತ್ಯವೇ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪರಿಸಿದರು.

ಗ್ಯಾರಂಟಿ ಬಗ್ಗೆ ಬಿಜೆಪಿಯವರ ಟೀಕೆ ಮಾಡ್ತಾರೆ. ನಮ್ಮದೇ ಕಾಪಿ ಮಾಡಿ ಅದನ್ನೇ ಬೇರೆ ಕಡೆ ಜಾರಿಗೊಳಿಸುತ್ತಾರೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿರುಗೇಟು ನೀಡಿದರು.

Also Read:

ವಿಜಯ್ ಅವರ ಎಲ್ಲಾ ವಾಹನಗಳಿಗೆ 0277 ಸಂಖ್ಯೆ ಏಕೆ? ಭಾವುಕ ಕಾರಣ ಏನು?

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online