Belagavi News:
ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮತ್ತೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ಚರ್ಚೆ ಭಾರಿ ಸದ್ದು ಮಾಡುತ್ತಿದೆ. ಸಚಿವ ಸತೀಶ್ ಜಾರಕಿಹೊಳಿ ಇದೀಗ ಕೆಪಿಸಿಸಿ ಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ ಎನ್ನುವ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿ ಬೆನ್ನಲ್ಲೇ ಸಾಹುಕಾರ ಎಂದು ಖ್ಯಾತಿಯಾಗಿರುವ ಸತೀಶ್ ಜಾರಕಿಹೊಳಿ ಕೂಡ ದೆಹಲಿಗೆ ದೌಡಾಯಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಹೈಕಮಾಂಡ್ ನಾಯಕರ ಭೇಟಿಗಾಗಿ ದೆಹಲಿಗೆ ತೆರಳಿರುವ ಸತೀಶ್ ಜಾರಕಿಹೊಳಿ, ರಾಜ್ಯ ಕಾಂಗ್ರೆಸ್ ಸಂಘಟನೆ ಕುರಿತು ಮಹತ್ವದ ಚರ್ಚೆ ನಡೆಸಲಿದ್ದಾರೆ ಎನ್ನಲಾಗುತ್ತಿದೆ. ಮುಂಬರುವ ಚುನಾವಣೆಗಳು ಹಾಗೂ ಪಕ್ಷದ ಸಂಘಟನಾ ಬದಲಾವಣೆ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸಮುಖ ತರಲು ಕಾಂಗ್ರೆಸ್ ಚಿಂತನೆ ನಡೆಸಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ಈ ನಡುವೆ ಸತೀಶ್ ಜಾರಕಿಹೊಳಿ ದೆಹಲಿ ಭೇಟಿಯ ರಾಜಕೀಯ ಮಹತ್ವ ಏನು? ಕೆಪಿಸಿಸಿ ಅಧ್ಯಕ್ಷ ಪಟ್ಟದಲ್ಲಿ ಅವರ ಹೆಸರು ಫೈನಲ್ ಆಗುತ್ತದೆಯೇ? ಎಂಬ ಪ್ರಶ್ನೆಗಳು ಇದೀಗ ಕಾಂಗ್ರೆಸ್ ಪಾಳಯದಲ್ಲಿ ಚರ್ಚೆಗೆ ಗ್ರಾಸವಾಗಿವೆ. ಹೈಕಮಾಂಡ್ ಮುಂದಿನ ನಡೆ ಯಾವುದು ಎನ್ನುವುದರ ಮೇಲೆ ರಾಜ್ಯ ರಾಜಕೀಯದ ಹೊಸ ಸಮೀಕರಣಗಳು ನಿರ್ಧಾರವಾಗುವ ಸಾಧ್ಯತೆ ಇದೆ.
ಕರ್ನಾಟಕದ ಕಾಂಗ್ರೆಸ್ನಲ್ಲಿ ಮುಖ್ಯಮಂತ್ರಿ ಸ್ಥಾನ ಬದಲಾವಣೆ ಚರ್ಚೆ ಜೋರಾಗಿರುವ ನಡುವೆ ಇದೀಗ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಭಾರಿ ರಾಜಕೀಯ ಚಟುವಟಿಕೆ ಆರಂಭವಾಗಿದೆ. ಸಚಿವ ಸತೀಶ್ ಜಾರಕಿಹೊಳಿ ಕೆಪಿಸಿಸಿ ಅಧ್ಯಕ್ಷ ಪಟ್ಟ ಪ್ರಮುಖ ಆಕಾಂಕ್ಷಿಯಾಗಿ ಹೊರಹೊಮ್ಮಿದ್ದು, ದೆಹಲಿಗೆ ದೌಡಾಯಿಸಿರುವುದು ಕಾಂಗ್ರೆಸ್ ವಲಯದಲ್ಲಿ ಹೊಸ ಕುತೂಹಲ ಮೂಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈಗಾಗಲೇ ದೆಹಲಿಯಲ್ಲಿ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸುತ್ತಿರುವ ಬೆನ್ನಲ್ಲೇ ಜಾರಕಿಹೊಳಿ ಭೇಟಿ ರಾಜಕೀಯವಾಗಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. ಪಕ್ಷ ಸಂಘಟನೆ ಬಲಪಡಿಸುವ ಉದ್ದೇಶದಿಂದ ಕೆಪಿಸಿಸಿ ಹುದ್ದೆಯಲ್ಲಿ ಬದಲಾವಣೆ ಸಾಧ್ಯತೆ ಇದೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ.
ಸತೀಶ್ ಜಾರಕಿಹೊಳಿ ಅವರಿಗೆ ಹೈಕಮಾಂಡ್ ಬೆಂಬಲ ಸಿಗುತ್ತದೆಯೇ? ಕೆಪಿಸಿಸಿ ಅಧ್ಯಕ್ಷ ಸ್ಥಾನದಲ್ಲಿ ದೊಡ್ಡ ಬದಲಾವಣೆ ಆಗಲಿದೆಯೇ? ಎಂಬ ಚರ್ಚೆಗಳು ಕಾಂಗ್ರೆಸ್ ಪಾಳಾಯದಲ್ಲಿ ತೀವ್ರಗೊಂಡಿವೆ. ದೆಹಲಿ ರಾಜಕೀಯ ಬೆಳವಣಿಗೆಗಳು ರಾಜ್ಯ ಕಾಂಗ್ರೆಸ್ನ ಮುಂದಿನ ರಾಜಕೀಯ ದಿಕ್ಕು ನಿರ್ಧರಿಸುವ ಸಾಧ್ಯತೆ ಇದೆ.
ಕರ್ನಾಟಕ ಕಾಂಗ್ರೆಸ್ ನಲ್ಲಿ ರಾಜಕೀಯ ಚಟುವಟಿಕೆಗಳು ತೀರ ಗೊಂಡಿರುವ ನಡುವೆ ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನದತ್ತ ಕಣ್ಣಿಟ್ಟಿದ್ದಾರೆ ಎನ್ನುವ ಚರ್ಚೆಗಳು ಜೋರಾಗಿದೆ. ಇದೇ ವೇಳೆ ಸತೀಶ್ ಜಾರಕಿಹೊಳಿ ಪ್ರತ್ಯಕ್ಷವಾಗಿ ದೆಹಲಿಗೆ ತೆರಳಿ ತಮ್ಮದೇ ಆದಂತಹ ರಾಜಕೀಯ ತಂತ್ರಗಾರಿಕೆ ನಡೆಸುತ್ತಿರುವುದು ಕಾಂಗ್ರೆಸ್ ಪಾಳಯದಲ್ಲಿ ಕುತೂಹಲ ಹೆಚ್ಚಿಸಿದೆ.
ಮುಖ್ಯಮಂತ್ರಿ ಬದಲಾವಣೆ ಹಾಗೂ ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತ ಚರ್ಚೆಗಳ ನಡುವೆ ಜಾರಕಿಹೊಳಿ ದೆಹಲಿ ಭೇಟಿ ಮಹತ್ವ ಪಡೆದಿದೆ. ಮತ್ತೊಂದೆಡೆ ಸಚಿವ ಪ್ರಿಯಾಂಕ್ ಖರ್ಗೆ ಬುಲಾವ್ ಹಿನ್ನೆಲೆ ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕುರಿತು ಹೈಕಮಾಂಡ್ ಇನ್ನೂ ತಮ್ಮೊಂದಿಗೆ ಯಾವುದೇ ಚರ್ಚೆ ನಡೆಸಿಲ್ಲ ಎಂದು ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ. ಸಭೆಯಲ್ಲಿ ಯಾವ ಅಜೆಂಡ ಇರುತ್ತದೆಯೋ ಅದರ ಆಧಾರದ ಮೇಲೆ ನಿರ್ಧಾರವಾಗಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ದೆಹಲಿ ರಾಜಕೀಯ ಬೆಳವಣಿಗೆಗಳು ಕಾಂಗ್ರೆಸ್ನ ಮುಂದಿನ ಸಂಘಟನಾ ಬದಲಾವಣೆ ಹಾಗೂ ನಾಯಕತ್ವದ ಲೆಕ್ಕಾಚಾರಕ್ಕೆ ದಿಕ್ಕು ತೋರಲಿದೆ ಎನ್ನಲಾಗುತ್ತಿದೆ.
Also Read:
'ಮಹಾನ್' ಸಿನಿಮಾದಲ್ಲಿ ವಿಭಿನ್ನ ಪಾತ್ರದಲ್ಲಿ ವಿಜಯ ರಾಘವೇಂದ್ರ : ಬರ್ತಡೆ ಪ್ರಯುಕ್ತ ಫಸ್ಟ್ ಲುಕ್ ಬಿಡುಗಡೆ