Belagavi news:
ಟೆಸ್ಟ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿ ಸರಿಯಾಗಿ ಒಂದು ವರ್ಷವಾದರೂ, ವಿರಾಟ್ ಕೊಹ್ಲಿ ಅವರ ಆಕಸ್ಮಿಕ ನಿರ್ಧಾರದ ಹಿಂದಿನ ಕಾರಣಗಳು ಇದೀಗ ಕ್ರಿಕೆಟ್ ವಲಯದಲ್ಲಿ ಚರ್ಚೆಯಲ್ಲಿ ಇವೆ. ಈ ಹಿನ್ನೆಲೆಯಲ್ಲಿ ಆರ್‌ಸಿಬಿ ಪಾಡ್ ಕಾಸ್ಟ್ ನ ಹೊಸ ಸಂಚಿಕೆಯಲ್ಲಿ ಕೊಹ್ಲಿ ಸಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದು , ಕ್ರಿಕೆಟ್ ಜಗತ್ತಿನಲ್ಲಿ ಮತ್ತೆ ದೊಡ್ಡ ಚರ್ಚೆಗೆ ಕಾರಣವಾಗಿದೆ.
ಕ್ರೀಡಾ ನಿರೂಪಕಿ ಮಾಯಾಂತಿ ಲ್ಯಾಂಗರ್ ಅವರೊಂದಿಗೆ ಮಾತನಾಡಿದ ಕೊಹ್ಲಿ, ತಮ್ಮ ಟೆಸ್ಟ್ ನಿವೃತ್ತಿಯ ಹಿಂದಿನ ಕಹಿ ಸತ್ಯಗಳನ್ನು ಪರೋಕ್ಷವಾಗಿ ಬಹಿರಂಗಪಡಿಸಿದ್ದಾರೆ ಎಂದು ವರದಿಯಾಗಿದೆ. ತಂಡದ ಒಳಗಿನ ಗೊಂದಲಮಯ ವಾತಾವರಣ ಮತ್ತು ಗೌರವದ ಕೊರತೆಯೇ ತಮ್ಮ ನಿರ್ಧಾರಕ್ಕೆ ಪ್ರಮುಖ ಕಾರಣವಾಗಿತ್ತು ಎಂದು ಅವರು ಸೂಚಿಸಿದ್ದಾರೆ.
ಭಾರತೀಯ ಕ್ರಿಕೆಟ್ ಇತಿಹಾಸದ ಅತ್ಯಂತ ಯಶಸ್ವಿ ಟೆಸ್ಟ್ ನಾಯಕರಲ್ಲಿ ಒಬ್ಬರಾಗಿರುವ ವಿರಾಟ್ ಕೊಹ್ಲಿ, ತಮ್ಮ ನಿರ್ಧಾರ ಸುಲಭವಾಗಿರಲಿಲ್ಲ ಎಂದು ಹೇಳಿದ್ದು, ಪ್ರಸ್ತುತ ಕ್ರಿಕೆಟ್ ನಿರ್ವಹಣಾ ವ್ಯವಸ್ಥೆಯ ಮೇಲಿನ ಅಸಮಾಧಾನವು ತಮ್ಮ ನಿರ್ಧಾರದಲ್ಲಿ ಪಾತ್ರವಹಿಸಿದೆ ಎಂಬುದಾಗಿ ಪರೋಕ್ಷವಾಗಿ ತಿಳಿಸಿದ್ದಾರೆ.
ಇದೇ ವೇಳೆ 2027ರ ಏಕದಿನ ವಿಶ್ವಕಪ್ ನಲ್ಲಿ ಆಡುವ ಕುರಿತು ಅವರು ಕೆಲವು ಶರತ್ತುಗಳನ್ನು ಇಟ್ಟಿರುವುದಾಗಿ ವರದಿಯಾಗಿದೆ. ಕೊಹ್ಲಿಯ ಈ ಹೇಳಿಕೆಗಳು ಇದೀಗ ಕ್ರಿಕೆಟ್ ಅಭಿಮಾನಿಗಳ ನಡುವೆ ಭಾರಿ ಚರ್ಚೆಗೆ ಕಾರಣವಾಗಿವೆ.
ಭಾರತೀಯ ಕ್ರಿಕೆಟ್ ತಂಡದ ಮಾಜಿ ಟೆಸ್ಟ್ ನಾಯಕ ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ನಿವೃತ್ತಿಯ ಹಿಂದಿನ ಕಾರಣವನ್ನು ಮೊದಲ ಬಾರಿಗೆ ಬಹಿರಂಗಪಡಿಸಿದ್ದು, ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. 2024 25 ಬಾರ್ಡರ್ - ಗವಾಸ್ಕರ್ ಟ್ರೋಫಿ ಸರಣಿಯ ನಂತರ ಕೊಹ್ಲಿ ಟೆಸ್ಟ್ ಕ್ರಿಕೆಟ್ ಗೆ ಹಠಾತ್ ವಿದಾಯ ಹೇಳಿದ್ದರು.
ಆರ್‌ಸಿಬಿ ಪಾಡ್ ಕಾಸ್ಟ್ ನಲ್ಲಿ ಆ ದಿನಗಳನ್ನು ನೆನೆದ ಕೊಹ್ಲಿ, ತಮ್ಮ ನಿರ್ಧಾರದ ಹಿಂದಿನ ಭಾವನಾತ್ಮಕ ಕಾರಣಗಳನ್ನು ಹಂಚಿಕೊಂಡಿದ್ದಾರೆ. "ನನ್ನ ಮೇಲೆ ಮತ್ತು ನನ್ನ ಆಟದ ಮೇಲೆ ನಂಬಿಕೆ ಇಲ್ಲದ ವಾತಾವರಣದಲ್ಲಿ ನನಗೆ ಮುಂದುವರೆಯಲು ಸಾಧ್ಯವಿರಲಿಲ್ಲ. ನನ್ನ ಸಾಮರ್ಥ್ಯ ಮತ್ತು ತಂಡಕ್ಕೆ ನಾನೇನು ಎಂಬ ಮೌಲ್ಯವನ್ನು ಪದೇಪದೇ ಸಾಬೀತುಪಡಿಸಬೇಕಾದ ಪರಿಸ್ಥಿತಿ ಬಂದರೆ, ನಾನು ಆ ಜಾಗದಲ್ಲಿ ಇರಲು ಇಷ್ಟಪಡುವುದಿಲ್ಲ" ಎಂದು ಅವರು ಹೇಳಿದ್ದಾರೆ.
"ಟೆಸ್ಟ್ ಕ್ರಿಕೆಟ್ ಬಿಡುವುದು ಸುಲಭವಾಗಿರಲಿಲ್ಲ, ಆದರೆ ಆ ಸಮಯದಲ್ಲಿ ಆ ನಿರ್ಧಾರವೇ ಸರಿಯಾಗಿತ್ತು. ಎಲ್ಲದಕ್ಕಿಂತ ಸ್ವಾಭಿಮಾನವೇ ಮುಖ್ಯ" ಎಂದು ಕೊಹ್ಲಿ ಸ್ಪಷ್ಟಪಡಿಸಿದ್ದಾರೆ. ಈ ಹೇಳಿಕೆಗಳ ಮೂಲಕ ತಂಡದೊಳಗಿನ ಗೌರವದ ಕೊರತೆ ಮತ್ತು ಒತ್ತಡದ ವಾತಾವರಣವೇ ತಮ್ಮ ನಿರ್ಧಾರಕ್ಕೆ ಕಾರಣವಾಗಿರಬಹುದು ಎಂಬ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದೆ.
ಇದರೊಂದಿಗೆ ಮ್ಯಾನೇಜ್ಮೆಂಟ್ ಹಾಗೂ ಕೋಚ್ ಗಳಿಂದ ಒತ್ತಡ ಇದ್ದಿರಬಹುದೆಂಬ ವಿಚಾರವೂ ಕ್ರಿಕೆಟ್ ವಲಯದಲ್ಲಿ ಮತ್ತೆ ಸದ್ದು ಮಾಡುತ್ತಿದೆ. ಈಗ ಅಭಿಮಾನಿಗಳ ಗಮನ 2027ರ ಏಕದಿನ ವಿಶ್ವಕಪ್ ಕಡೆಗೆ ತಿರುಗಿದ್ದು, ವಿರಾಟ್ ಕೊಹ್ಲಿ ಯಲ್ಲಿ ಕಣಕ್ಕಿಳಿಯಲಿದ್ದಾರಾ ಎಂಬ ಪ್ರಶ್ನೆ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.
2027ರ ಏಕದಿನ ವಿಶ್ವಕಪ್ ನಲ್ಲಿ ವಿರಾಟ್ ಕೊಹ್ಲಿ ಆಡುವರೇ ಎಂಬ ಪ್ರಶ್ನೆ ಇದೀಗ ಕ್ರಿಕೆಟ್ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ಭಾರತ ಏಕದಿನ ತಂಡದಲ್ಲಿ ತಮ್ಮ ಸ್ಥಾನ ಕುರಿತು ಕೇಳಿ ಬರುತ್ತಿರುವ ಟೀಕೆಗಳಿಗೆ ಕೊಹ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದು, ತಮ್ಮ ಭವಿಷ್ಯದ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.
"ನಾನು ನನ್ನ ವೃತ್ತಿ ಜೀವನದ ಅಂತಹ ಹಂತದಲ್ಲಿದ್ದೇನೆ, ಇಲ್ಲಿ ನಾನು ಯಾರಿಗೂ ನನ್ನ ಯೋಗ್ಯತೆ ಅಥವಾ ತಂಡಕ್ಕೆ ನನ್ನ ಮೌಲ್ಯವನ್ನು ಪದೇಪದೇ ಸಾಬೀತುಪಡಿಸುವ ಅಗತ್ಯವಿಲ್ಲ", ಎಂದು ಕೊಹಿಲಿ ಹೇಳಿದ್ದಾರೆ ಎಂದು ವರದಿಯಾಗಿದೆ. ಈ ಮೂಲಕ ತಮ್ಮ ಅನುಭವ ಮತ್ತು ಸಾಧನೆಯ ಬಗ್ಗೆ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಇದೆ ವೇಳೆ 2027ರ ವಿಶ್ವಕಪ್ ನಲ್ಲಿ ಭಾರತ ತಂಡವನ್ನು ಮುನ್ನಡೆಸುವ ಆಸೆ ಇರುವುದಾಗಿ ಅವರು ತಿಳಿಸಿದ್ದಾರೆ. ಆದರೆ ಅದಕ್ಕೆ ಒಂದು ಶರತು ಇಟ್ಟಿದ್ದಾರೆ ಎನ್ನಲಾಗಿದ್ದು,"ಪ್ರತಿ ವಾರವು ನನ್ನ ಬ್ಯಾಟಿಂಗ್ ಶೈಲಿಯನ್ನು ಪ್ರಶ್ನಿಸುವ ಅಥವಾ ಹೊಗಳುವ ವಾತಾವರಣ ನನಗೆ ಬೇಡ. ತಂಡದ ಮ್ಯಾನೇಜ್ಮೆಂಟ್ ನನ್ನನ್ನು ಸಂಪೂರ್ಣವಾಗಿ ಗೌರವಿಸುತ್ತದೆ ಮತ್ತು ನನ್ನ ಅವಶ್ಯಕತೆ ಇದೆ ಎಂದು ಭಾವಿಸಿದರೆ ಮಾತ್ರ ನಾನು ಆಡುತ್ತೇನೆ", ಎಂದು ಕೊಹ್ಲಿ ಹೇಳಿದ್ದಾರೆ.
ಒಟ್ಟಾರೆಯಾಗಿ ಕೊಹ್ಲಿಯ ಈ ಹೇಳಿಕೆಗಳು ಕೇವಲ ಸಂದರ್ಶನವಲ್ಲ, ಒಬ್ಬ ದಿಗ್ಗಜ ಆಟಗಾರನ ಸ್ವಾಭಿಮಾನದ ಧ್ವನಿಯಾಗಿ ಪರಿಣಮಿಸಿದೆ. ಟೆಸ್ಟ್ ಕ್ರಿಕೆಟ್ಗೆ ವಿದಾಯ ಹೇಳಿದ್ದರು, ಐಪಿಎಲ್ ಮತ್ತು ಏಕದಿನ ಕ್ರಿಕೆಟ್ ನಲ್ಲಿ ಅವರು ಇನ್ನೂ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದಾರೆ. ಮ್ಯಾನೇಜ್ಮೆಂಟ್ ಈ ಷರತ್ತುಗಳಿಗೆ ಗೌರವ ನೀಡಿದರೆ, 2027ರ ವಿಶ್ವಕಪ್ ನಲ್ಲಿ 'ಕಿಂಗ್ ಕೊಹ್ಲಿ' ಮತ್ತೊಮ್ಮೆ ಭಾರತಕ್ಕೆ ಕಿರೀಟ ತಂದುಕೊಡಬಹುದು ಎಂಬ ನಿರೀಕ್ಷೆ ಅಭಿಮಾನಿಗಳಲ್ಲಿದೆ.
Also Read:
ನೆದರ್ಲ್ಯಾಂಡ್ಸ್ ನಲ್ಲಿ ಮೋದಿ ಭಾಷಣಕ್ಕೆ ಸಂಭ್ರಮ: ಝಲ್ಮುರಿ ಪ್ರಶ್ನೆಗೆ ಜನರ ಭರ್ಜರಿ ಪ್ರತಿಕ್ರಿಯೆ