<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಹಿರಿಯ ಕಾಂಗ್ರೆಸ್ ಮುಖಂಡ ಸೈಯದ್ ಯಾಸಿನ್ ಇನ್ನಿಲ್ಲ : ರಾಯಚೂರಿನಲ್ಲಿ ಶೋಕಾಚರಣೆ

ಹಿರಿಯ ಕಾಂಗ್ರೆಸ್ ಮುಖಂಡ ಸೈಯದ್ ಯಾಸಿನ್ ಇನ್ನಿಲ್ಲ : ರಾಯಚೂರಿನಲ್ಲಿ ಶೋಕಾಚರಣೆ
Summary: Senior Congress leader Syed Yasin from Raichur has passed away. Political dignitaries, Congress leaders and supporters have condoled his demise.

belagavi News:

ರಾಯಚೂರು ನಗರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಸೈಯದ್ ಯಾಸೀನ್ ಅವರು ಭಾನುವಾರ ಬೆಳಗ್ಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 74 ವಯಸ್ಸಾಗಿತ್ತು.

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಸೈಯದ್ ಯಾಸಿನ್ ಅವರು ಚಿಕಿತ್ಸೆ ಫಲಕಾರಿಯಾಗದೆ ಕೊನೆ ಉಸಿರಲಿದ್ದಾರೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಸೈಯದ್ ಯಾಸಿನ್ ಅವರ ಪತ್ನಿ , ನಾಲ್ವರು ಪುತ್ರರು, ಬಂಧು - ಬಳಗ ಹಾಗೂ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಅಗಲಿದ್ದಾರೆ. ಅವರ ಅಗಲಿಕೆಯಿಂದ ರಾಯಚೂರು ಜಿಲ್ಲೆಯ ರಾಜಕೀಯ ವಲಯದಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ಅವರ ಪಾರ್ಟಿವ ಶರೀರವನ್ನು ಬೆಂಗಳೂರಿನಿಂದ ರೈಚೂರಿಗೆ ತರಲಾಗಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕಾಂಗ್ರೆಸ್ ನಾಯಕರು, ವಿವಿಧ ಪಕ್ಷಗಳ ಮುಖಂಡರು ಹಾಗೂ ಅಭಿಮಾನಿಗಳು ಅಂತಿಮ ನಮನ ಸಲ್ಲಿಸಲು ಆಗಮಿಸುವ ನಿರೀಕ್ಷೆ ಇದೆ.

ಸೈಯದ್ ಯಾಸಿನ್ ಅವರು ರಾಯಚೂರು ರಾಜಕೀಯದಲ್ಲಿ ಪ್ರಮುಖ ನಾಯಕರಾಗಿ ಗುರುತಿಸಿಕೊಂಡಿದ್ದು, ಸಾರ್ವಜನಿಕ ಸೇವೆಯ ಮೂಲಕ ಜನರ ವಿಶ್ವಾಸಗಳಿಸಿದ್ದರು. ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ವಿವಿಧ ಸಂಘಟನೆಗಳು ಸಂತಾಪ ಸೂಚಿಸುತ್ತಿವೆ.

ಸೈಯದ್ ಯಾಸಿನ್ ರಾಜಕೀಯ ಪಯಣ - ಎರಡು ಬಾರಿ ಶಾಸಕ, ಕಾಂಗ್ರೆಸ್ ನ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು :

ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ರಾಯಚೂರು ನಗರ ಕ್ಷೇತ್ರದ ಮಾಜಿ ಶಾಸಕ ಸಯ್ಯದ್ ಯಾಸೀನ್ ಅವರು ತಮ್ಮ ರಾಜಕೀಯ ಜೀವನದಲ್ಲಿ ಜನಸೇವೆ ಮತ್ತು ಪಕ್ಷ ಸಂಘಟನೆಗೆ ಮಹತ್ವದ ಕೊಡುಗೆ ನೀಡಿದ ನಾಯಕರಾಗಿ ಗುರುತಿಸಿಕೊಂಡಿದ್ದರು.

ರಾಯಚೂರು ನಗರ ವಿಧಾನಸಭಾ ಕ್ಷೇತ್ರದಿಂದ ಒಟ್ಟು ಆರು ಬಾರಿ ಚುನಾವಣಾ ಕಣಕ್ಕೆ ಇಳಿದಿದ್ದ ಸೈಯದ್ ಯಾಸಿನ್, 1999 ಮತ್ತು 2008ರ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿ ಎರಡು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದ್ದರು. ಕ್ಷೇತ್ರದ ಅಭಿವೃದ್ಧಿ ಜನ ಸಂಪರ್ಕ ಮತ್ತು ಸಾರ್ವಜನಿಕ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಿದ ಜನನಾಯಕರೆಂದು ಹೆಸರು ಪಡೆದಿದ್ದರು.

ರಾಜಕೀಯ ಜೀವನದಲ್ಲಿ ಅವರು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದು, ಅಲ್ಪಸಂಖ್ಯಾತ ಸಮುದಾಯದ ಅಭಿವೃದ್ಧಿಗೆ ಹಲವು ಯೋಜನೆಗಳನ್ನು ಮುನ್ನಡೆಸಿದ್ದರು. ಅಲ್ಲದೆ, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ರಾಜ್ಯಾಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಸೈಯದ್ ಯಾಸಿನ್ ಅವರು ಕೇಂದ್ರದ ಮಾಜಿ ರೈಲ್ವೆ ಸಚಿವ ಸಿ.ಕೆ. ಜಾಫರ್ ಷರೀಫ್ ಅವರ ಅಳಿಯರು ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕನಾಗಿ ಅವರ ಸೇವೆ ಹಾಗೂ ರಾಜಕೀಯ ಅನುಭವಕ್ಕೆ ವ್ಯಾಪಕ ಗೌರವ ದೊರೆತಿತ್ತು.

ಅವರ ನಿಧನದಿಂದ ರಾಯಚೂರು ಜಿಲ್ಲೆಯ ರಾಜಕೀಯ ವಲಯ ಮಾತ್ರವಲ್ಲದೆ, ರಾಜ್ಯ ಕಾಂಗ್ರೆಸ್ ಪಕ್ಷವು ಅನುಭವಿ ನಾಯಕರನ್ನು ಕಳೆದುಕೊಂಡಿದೆ ಎಂದು ಹಲವು ನಾಯಕರು ಸಂತಾಪ ಸೂಚಿಸಿದ್ದಾರೆ.

ಸೈಯದ್ ಯಾಸಿನ್ ಅಂತ್ಯಕ್ರಿಯೆ ಇಂದು ರಾಯಚೂರಿನಲ್ಲಿ - ಅಂತಿಮ ನಮನ ಸಲ್ಲಿಸಲು ಅಭಿಮಾನಿಗಳ ಆಗಮನ :

ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಶಾಸಕ ಸೈಯದ್ ಯಾಸಿನ್ ಅವರ ಅಂತ್ಯಕ್ರಿಯೆ ಭಾನುವಾರ ಸಂಜೆ ರಾಯಚೂರು ನಗರದ ಕಮಲಿವಾಲೆ ಬಾಬಾ ಕಬರಸ್ಥಾನದಲ್ಲಿ ನಡೆಯಲಿದೆ ಎಂದು ಕುಟುಂಬದ ಸದಸ್ಯರು ತಿಳಿಸಿದ್ದಾರೆ.

ಅವರ ಪಾರ್ಟಿವ ಶರೀರವನ್ನು ಬೆಂಗಳೂರಿನಿಂದ ರಾಯಚೂರಿಗೆ ತರಲಾಗುತ್ತಿದ್ದು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಕುಟುಂಬಸ್ಥರು, ಬಂಧು ಬಳಗ ರಾಜಕೀಯ ಮುಖಂಡರು ಹಾಗೂ ಸಾವಿರಾರು ಅಭಿಮಾನಿಗಳ ಅಂತಿಮ ನಮನ ಸಲ್ಲಿಸಲು ಆಗಮಿಸುತ್ತಿದ್ದಾರೆ.

ಸೈಯದ್ ಯಾಸೀನ್ ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆಯೇ ವಿವಿಧ ರಾಜಕೀಯ ಪಕ್ಷಗಳ ನಾಯಕರು, ಸಾಮಾಜಿಕ ಸಂಘಟನೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಸಂತಾಪ ಸೂಚಿಸಿದ್ದಾರೆ. ಅವರ ನಿವಾಸದತ್ತ ಬೆಂಬಲಿಗರು ಮತ್ತು ಅಭಿಮಾನಿಗಳ ಆಗಮನ ಮುಂದುವರಿದಿದ್ದು, ರಾಯಚೂರಿನಲ್ಲಿ ಶೋಕದ ವಾತಾವರಣ ನಿರ್ಮಾಣವಾಗಿದೆ.

ರಾಯಚೂರು ರಾಜಕೀಯದಲ್ಲಿ ಸುದೀರ್ಘ ಸೇವೆ ಸಲ್ಲಿಸಿದ್ದ ಸೈಯದ್ ಯಾಸಿನ್ ಅವರ ಅಗಲಿಕೆಯನ್ನು ಜಿಲ್ಲೆಯ ಸಾರ್ವಜನಿಕರು ಮತ್ತು ಕಾಂಗ್ರೆಸ್ ಕಾರ್ಯಕರ್ತರು ದೊಡ್ಡ ನಷ್ಟವೆಂದು ಬಣ್ಣಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online