<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ಬೆಳಗಾವಿ ನಗರದಲ್ಲಿ ಹಿರಿಯ ವೈದ್ಯ ಆತ್ಮಹತ್ಯೆ ಪ್ರಕರಣ

ಬೆಳಗಾವಿ ನಗರದಲ್ಲಿ ಹಿರಿಯ ವೈದ್ಯ ಆತ್ಮಹತ್ಯೆ ಪ್ರಕರಣ
Summary: The incident of a senior doctor committing suicide in Belagavi has shocked the city. The news of the death of a renowned doctor has caused discussion among the medical community and the public, and the police have started an investigation into the case. The exact reason for the suicide is yet to be revealed.

Belagavi News:

ಬೆಳಗಾವಿ: ಹಿರಿಯ ವೈದ್ಯರೊಬ್ಬರು ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ಬೆಳಗ್ಗೆ ನಡೆದಿದೆ.

ಡಾ. ದಿನೇಶ್ ಲಕ್ಷ್ಮಣ್ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯರಾಗಿದ್ದಾರೆ. ಮಂಡೋಳಿ ರಸ್ತೆಯ ಗೋಡ್ಸೇವಾಡಿಯಲ್ಲಿರುವ ತಮ್ಮ ನಿವಾಸದಲ್ಲೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ.

ಮೃತರು ಮೂಲತಃ ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನವರಾಗಿದ್ದು, ಹಲವು ವರ್ಷಗಳಿಂದ ವೈದ್ಯರಾಗಿ ಸೇವೆ ಸಲ್ಲಿಸಿ ಬಳಿಕ ಬೆಳಗಾವಿಯಲ್ಲಿ ನೆಲೆಸಿದ್ದರು. ಘಟನೆ ಸುದ್ದಿ ತಿಳಿಯುತ್ತಿದ್ದಂತೆಯೇ ಟಿಳಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Sponsored

ಹಿರಿಯ ವೈದ್ಯರ ಆತ್ಮಹತ್ಯೆ ಪ್ರಕರಣ ನಗರದಲ್ಲಿ ಚರ್ಚೆಗೆ ಗ್ರಾಸವಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ತನಿಖೆಯಿಂದ ತಿಳಿದು ಬರಬೇಕಿದೆ.

ಬೆಳಗಾವಿ ನಗರದ ಟಿಳಕವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಹಿರಿಯ ವೈದ್ಯರೊಬ್ಬರು ತಾವೇ ತಮ್ಮ ಮೇಲೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶುಕ್ರವಾರ ಬೆಳಗ್ಗೆ ನಡೆದಿದೆ.

ಡಾ. ದಿನೇಶ್ ಲಕ್ಷ್ಮಣ್ ಭಟ್ಕಳ (79) ಆತ್ಮಹತ್ಯೆ ಮಾಡಿಕೊಂಡ ವೈದ್ಯರಾಗಿದ್ದು, ಮಂಡೋಳಿ ರಸ್ತೆಯ ಗೋಡ್ಸೇವಾಡಿಯಲ್ಲಿರುವ ತಮ್ಮ ಮನೆಯ ಬಾಲ್ಕನಿಯಲ್ಲಿ ಈ ದುರ್ಘಟನೆ ನಡೆದಿದೆ. ಗುಂಡಿನ ಸದ್ದು ಕೇಳಿ ಮನೆಯವರು ಹಾಗೂ ಸುತ್ತಮುತ್ತಲಿನ ನಿವಾಸಿಗಳು ಸ್ಥಳಕ್ಕೆ ಧಾವಿಸಿದಾಗ ಘಟನೆ ಬೆಳಕಿಗೆ ಬಂದಿದೆ. ಆದರೆ ಅಷ್ಟರಲ್ಲಾಗಲೇ ಅವರ ಮೃತಪಟ್ಟಿದ್ದರು ಎಂದು ತಿಳಿದುಬಂದಿದೆ.

ಘಟನೆ ಮಾಹಿತಿ ತಿಳಿಯುತ್ತಿದ್ದಂತೆಯೇ ಟಿಳಕವಾಡಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪ್ರಾಥಮಿಕ ತನಿಖೆಯ ಪ್ರಕಾರ, ಡಾ. ಭಟ್ಕಳ ಅವರು ಅನಾರೋಗ್ಯ ಹಾಗೂ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದ್ದು, ಇದೇ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Sponsored

ಆದರೆ, ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಪೊಲೀಸರ ತನಿಕೆಯಿಂದಲೇ ಸ್ಪಷ್ಟವಾಗಬೇಕಿದೆ. ಈ ಘಟನೆ ಬೆಳಗಾವಿ ನಗರದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.

ಆತ್ಮಹತ್ಯೆ ಪರಿಹಾರವಲ್ಲ: ನೀವು ಆತ್ಮಹತ್ಯೆ ಆಲೋಚನೆಗಳನ್ನು ಹೊಂದಿದ್ದರೆ, ಅಥವಾ ಸ್ನೇಹಿತರ ಬಗ್ಗೆ ಚಿಂತಿತರಾಗಿದ್ದರೆ ಅಥವಾ ಭಾವನಾತ್ಮಕ ಬೆಂಬಲದ ಅಗತ್ಯವಿದ್ದರೆ, ಯಾರಾದರೂ ಯಾವಾಗಲೂ ಕೇಳಲು ಇರುತ್ತಾರೆ. ಸ್ನೇಹ ಫೌಂಡೇಶನ್- 04424640050 (24×7 ಲಭ್ಯವಿದೆ) ಅಥವಾ ಟಾಟಾ ಇನ್ಸ್ಟಿಟ್ಯೂಟ್ ಆಪ್ ಸೋಶಿಯಲ್ ಸೈನ್ಸಸನ ಸಹಾಯವಾಣಿ -9152987821 ಗೆ ಕರೆ ಮಾಡಿ, ಇದು ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 8 ರಿಂದ ರಾತ್ರಿ 10 ರವರೆಗೆ ಲಭ್ಯವಿದೆ.

Also Read:

ಗೃಹಲಕ್ಷ್ಮಿ ಯೋಜನೆ ಕಂತು ವಿಳಂಬ: ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಿದ ಹೈಕೋರ್ಟ್

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online