<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬೆಳಗಾವಿಯಲ್ಲಿ ಮಳೆ ಅಬ್ಬರ ಮನೆ ಗೋಡಿ ಕುಸಿದು ಏಳು ಮಂದಿ ಅದೃಷ್ಟಾವಶಾತ್ ಪಾರು

ಬೆಳಗಾವಿಯಲ್ಲಿ ಮಳೆ ಅಬ್ಬರ  ಮನೆ ಗೋಡಿ ಕುಸಿದು ಏಳು ಮಂದಿ ಅದೃಷ್ಟಾವಶಾತ್ ಪಾರು
Summary: A house wall collapsed in Belgaum due to heavy rains, and seven people inside the house escaped with a narrow escape. The incident has created panic and locals are moving to safer places.

Belagavi News:

ಬೆಳಗಾವಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ಪರಿಣಾಮ ಮನೆ ಗೋಡೆಯೊಂದು ಏಕಾಏಕಿ ಕುಸಿತ ಘಟನೆ ನಡೆದಿದೆ. ಘಟನೆಯ ವೇಳೆ ಮನೆಯೊಳಗಿದ್ದ ಏಳು ಜನರು ಕೂದಲೆಳೆಯ ಅಂತರದಲ್ಲಿ ಪರಾಗಿದ್ದು, ಭಾರಿ ಅನಾಹುತ ತಪ್ಪಿದೆ.

ಮಳೆ ನಿರಂತರವಾಗಿ ಸುರಿಯುತ್ತಿರುವ ಹಿನ್ನೆಲೆ ಮನೆಯ ಗೋಡೆ ದುರ್ಬಲಗೊಂಡು ಕುಸಿದಿರುವುದಾಗಿ ತಿಳಿದು ಬಂದಿದೆ. ಗೋಡಿ ಕುಸಿದ ತಕ್ಷಣ ಕುಟುಂಬದ ಸದಸ್ಯರು ಸುರಕ್ಷಿತ ಸ್ಥಳಕ್ಕೆ ತೆರಳಿದ್ದರಿಂದ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಘಟನೆ ಸ್ಥಳಕ್ಕೆ ಸ್ಥಳೀಯರು ಹಾಗೂ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಧಾರಾಕಾರ ಮಳೆಯಿಂದ ಜಿಲ್ಲೆಯ ಹಲವು ಭಾಗಗಳಲ್ಲಿ ಮನೆಗಳಿಗೆ ಹಾನಿ, ರಸ್ತೆಗಳಲ್ಲಿ ನೀರು ನಿಲ್ಲುವುದು ಸೇರಿದಂತೆ ಜನ ಜೀವನ ಅಸ್ತವ್ಯಸ್ತಗೊಂಡಿದೆ. ಹಳೆಯ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಿಸುವವರು ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

ಬೆಳಗಾವಿಯಲ್ಲಿ ಮಳೆರಾಯನ ಅಬ್ಬರ - ಮನೆಗೆ ನುಗ್ಗಿದ ನೀರು, ಗೋಡಿ ಕುಸಿತ ; ಕುಟುಂಬದ ಏಳು ಜನರು ಕೂದಲೆಳೆಯ ಅಂತರದಲ್ಲಿ ಪಾರು :

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಜನ ಜೀವನ ಅಸ್ತವ್ಯಸ್ತವಾಗಿದೆ. ಒಂದೆಡೆ ಸುರಿಯುತ್ತಿರುವ ಮಳೆಯಿಂದ ಮನೆಗಳಿಗೆ ನೀರು ನುಗ್ಗಿ ನಿವಾಸಿಗಳು ಸಂಕಷ್ಟಕ್ಕೆ ಸಿಲುಕಿದ್ದರೆ, ಮತ್ತೊಂದೆಡೆ ಮನೆ ಗೋಡೆ ಕುಸಿದು ಭಾರಿ ಅನಾಹುತ ತಪ್ಪಿದ ಘಟನೆ ನಡೆದಿದೆ.

ಚಿಕ್ಕೋಡಿ ತಾಲೂಕಿನ ಜೋಡರಕುರುಳಿ ಗ್ರಾಮದಲ್ಲಿ ಗಂಗವ್ವ ವರಾಳೆ ಅವರಿಗೆ ಸೇರಿದ ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದಿದೆ. ಘಟನೆ ನಡೆದ ವೇಳೆ ಮನೆಯೊಳಗಿದ್ದ ಏಳು ಜನರು ಕೂದಲೆಳೆಯ ಅಂತರದಲ್ಲಿ ಪಾರಾಗಿದ್ದು, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಗೋಡಿ ಕುಸಿತ ಪರಿಣಾಮ ಮನೆಗೆ ಹಾನಿಯಾಗಿದ್ದು, ಕುಟುಂಬದ ಸದಸ್ಯರು ಆತಂಕಕ್ಕೊಳಗಾಗಿದ್ದಾರೆ.

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯಿಂದ ಮನೆಗೋಡೆ ದುರ್ಬಲಗೊಂಡು ಕುಸಿದಿರುವ ಸಾಧ್ಯತೆ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಘಟನೆ ಬಳಿಕ ಗ್ರಾಮಸ್ಥರು ಸ್ಥಳಕ್ಕೆ ಧಾವಿಸಿ ಕುಟುಂಬಕ್ಕೆ ನೆರವು ನೀಡಿದ್ದು, ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.

ಬೆಳಗಾವಿ ಜಿಲ್ಲೆಯ ವಿವಿಧ ಭಾಗಗಳಲ್ಲಿ ಮಳೆಯ ಅಬ್ಬರ ಮುಂದುವರಿದಿದ್ದು, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು, ರಸ್ತೆಗಳಲ್ಲಿ ನೀರು ನಿಲ್ಲುವುದು ಹಾಗೂ ಮನೆಗಳಿಗೆ ಹಾನಿಯಾಗುತ್ತಿರುವ ಪ್ರಕರಣಗಳು ವರದಿಯಾಗಿವೆ. ಹಳೆಯ ಹಾಗೂ ಶಿಥಿಲಾವಸ್ಥೆಯಲ್ಲಿರುವ ಮನೆಗಳಲ್ಲಿ ವಾಸಿಸುವವರು ಮುನ್ನೆಚ್ಚರಿಕೆವಹಿಸುವಂತೆ ಅಧಿಕಾರಿಗಳು ಸೂಚಿಸಿದ್ದಾರೆ.

ಬೆಳಗಾವಿಯಲ್ಲಿ ಭಾರಿ ಮಳೆ ಅವಾಂತರ - ಗೋಡೆ ಕುಸಿದ ಭೀಕರ ಶಬ್ದ ಕೇಳಿ ಹೊರಗೆ ಓಡಿದ ಕುಟುಂಬ - ಏಳು ಜನರು ಕೂದಲೆಳೆಯ ಅಂತರದಲ್ಲಿ ಪಾರು :

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯ ನಡುವೆ ಭಾರಿ ಅನಾಹುತ ಒಂದು ಕೂದಲೆಳೆಯ ಅಂತರದಲ್ಲಿ ತಪ್ಪಿದೆ. ಚಿಕ್ಕೋಡಿ ತಾಲೂಕಿನ ಜೋಡರಕುರಳಿ ಗ್ರಾಮದಲ್ಲಿ ಗಂಗವ್ವ ವರಾಳೆ ಅವರಿಗೆ ಸೇರಿದ ಮನೆಯ ಗೋಡೆ ಏಕಾಂಗಿ ಕುಸಿದು ಬಿದ್ದಿದೆ.

ಗೋಡಿ ಕುಸಿಯುವ ಭೀಕರ ಶಬ್ದ ಕೇಳುತ್ತಿದ್ದಂತೆ ಮನೆಯಲ್ಲಿದ್ದ ಏಳು ಜನರು ತಕ್ಷಣ ಹೊರಗೆ ಓಡಿ ಬಂದಿದ್ದು, ಅದೃಷ್ಟಾವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ. ಕೆಲವೇ ಕ್ಷಣಗಳ ವಿಳಂಬವಾಗಿದ್ದರು ದೊಡ್ಡ ದುರಂತ ಸಂಭವಿಸುವ ಸಾಧ್ಯತೆ ಇತ್ತು ಎಂದು ಸ್ಥಳೀಯರು ತಿಳಿಸಿದ್ದಾರೆ.

ಘಟನೆಯಿಂದ ಮನೆಗೆ ಭಾರಿ ಹಾನಿಯಾಗಿದ್ದು, ಕುಟುಂಬ ಮನೆ ಕಳೆದುಕೊಂಡು ಬೀದಿಗೆ ಬಿದ್ದಿದೆ. ಸದ್ಯ ಕುಟುಂಬ ಸದಸ್ಯರು ಸುರಕ್ಷಿತ ಆಶ್ರಯಕ್ಕಾಗಿ ಪರದಾಡುವಂತಾಗಿದೆ. ಸ್ಥಳೀಯರು ಕುಟುಂಬಕ್ಕೆ ನೆರವು ನೀಡಿದ್ದು, ಸಂಬಂಧಪಟ್ಟ ಅಧಿಕಾರಿಗಳಿಂದ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ನಿರಂತರ ಮಳೆಯಿಂದ ಬೆಳಗಾವಿ ಜಿಲ್ಲೆಯ ಹಲವು ಭಾಗಗಳಲ್ಲಿ ಮನೆಗಳಿಗೆ ಹಾನಿ, ತಗ್ಗು ಪ್ರದೇಶಗಳಿಗೆ ನೀರು ನುಗ್ಗುವುದು ಹಾಗೂ ಜನಜೀವನ ಅಸ್ತವ್ಯಸ್ತವಾಗಿರುವ ಘಟನೆಗಳು ವರದಿಯಾಗುತ್ತಿವೆ. ಈ ಅವಘಡ ಚಿಕ್ಕೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಂಭವಿಸಿದೆ.

ಬೆಳಗಾವಿ ಗಡಿ ಜಿಲ್ಲೆಯಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ ಜನ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ನಗರದ ವೀರಭದ್ರನಗರ ಪ್ರದೇಶದಲ್ಲಿ ಮಳೆ ನೀರು ಮನೆಗಳಿಗೆ ನುಗ್ಗಿ ನಿವಾಸಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಮಹಮ್ಮದ್ ಅಲಿ ಅವರಿಗೆ ಸೇರಿದ ಮನೆ ಸೇರಿದಂತೆ ಮೂರರಿಂದ ನಾಲ್ಕು ಮನೆಗಳಿಗೆ ಮಳೆ ನೀರು ನುಗ್ಗಿದ್ದು, ದವಸ - ಧಾನ್ಯ, ಗೃಹ ಉಪಯೋಗಿ ವಸ್ತುಗಳು ಹಾಗೂ ಇತರೆ ಸಾಮಗ್ರಿಗಳು ನೀರಿನಲ್ಲಿ ಮುಳುಗಿವೆ. ಇದರಿಂದ ಕುಟುಂಬಗಳು ಆರ್ಥಿಕ ನಷ್ಟ ಅನುಭವಿಸಿದ್ದು, ಮಳೆ ನೀರನ್ನು ಹೊರ ಹಾಕಲು ನಿವಾಸಿಗಳು ಹರಸಾಹಸ ಪಡುತ್ತಿದ್ದಾರೆ.

ಸ್ಥಳೀಯರ ಆರೋಪದ ಪ್ರಕಾರ, ಚರಂಡಿಗಳು ಸಮರ್ಪಕವಾಗಿ ಸ್ವಚ್ಛಗೊಳಿಸದ ಕಾರಣ ಮಳೆ ನೀರು ಸರಾಗವಾಗಿ ಹರೆಯದೆ ಮನೆಗಳಿಗೆ ನುಗ್ಗಿದೆ. ಈ ಹಿನ್ನಲೆಯಲ್ಲಿ ಮಹಾನಗರ ಪಾಲಿಕೆ ಅಧಿಕಾರಿಗಳ ನಿರ್ಲಕ್ಷ ವಿರುದ್ಧ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕೂಡಲೇ ಚರಂಡಿಗಳನ್ನು ಸ್ವಚ್ಛಗೊಳಿಸಿ, ಮಳೆ ನೀರು ಸರಾಗವಾಗಿ ಹರಿಯುವಂತೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ನಿವಾಸಿಗಳು ಮಹಾನಗರ ಪಾಲಿಕೆ ಒತ್ತಾಯಿಸಿದ್ದಾರೆ. ಬೆಳಗಾವಿ ನಗರದಲ್ಲಿ ಮಳೆಯ ಅಬ್ಬರ ಮುಂದುವರೆದಿರುವ ಹಿನ್ನೆಲೆಯಲ್ಲಿ ತಗ್ಗು ಪ್ರದೇಶಗಳ ನಿವಾಸಿಗಳು ಎಚ್ಚರಿಕೆಯನ್ನು ವಹಿಸುವುದು ಅತ್ಯಂತ ಅಗತ್ಯವಾಗಿದೆ ಎಂದು ಸೂಚಿಸಲಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online