Belagavi News:
ಕರ್ನಾಟಕದಲ್ಲಿ ಈ ವರ್ಷದ ನೈರುತ್ಯ ಮುಂಗಾರು ಆರಂಭದಲ್ಲೇ ತೀವ್ರ ಹಿನ್ನಡೆ ಅನುಭವಿಸಿದೆ. ಜೂನ್ ತಿಂಗಳಿನಲ್ಲೇ ರಾಜ್ಯದಲ್ಲಿ ಸರಾಸರಿ ಶೇ. 41 ರಷ್ಟು ಮಳೆ ಕೊರತೆ ದಾಖಲಾಗಿದ್ದು, ಭಾರತೀಯ ಹವಾಮಾನ ಇಲಾಖೆ ಹಾಗೂ ಹವಾಮಾನ ತಜ್ಞರು ಇದನ್ನು 'ವಿಫಲ ಮುಂಗಾರು' ಎಂದು ಪರಿಗಣಿಸಿದ್ದಾರೆ. ಎಲ್ ನಿನೋ ಪ್ರಭಾವ, ಜಾಗತಿಕ ತಾಪಮಾನ ಏರಿಕೆ ಹಾಗೂ ಅರಬ್ಬಿ ಸಮುದ್ರ ಮತ್ತು ಬಂಗಾಳ ಕೊಲ್ಲಿಯಲ್ಲಿ ನಿರೀಕ್ಷಿತ ವಾತಾವರಣ ವ್ಯವಸ್ಥೆಗಳು ರೂಪಗೊಳ್ಳುತ್ತಿರುವುದು ಮಳೆ ಕೊರತೆಗೆ ಪ್ರಮುಖ ಕಾರಣಗಳಾಗಿವೆ.
ರಾಜ್ಯದ ವಿವಿಧ ಭಾಗಗಳಲ್ಲಿ ಮಳೆ ಕೊರತೆಯ ಪ್ರಮಾಣ ಆತಂಕಕಾರಿಯಾಗಿದೆ. ಕರಾವಳಿ ಭಾಗದಲ್ಲಿ ಶೇ.50ರಷ್ಟು, ಬೆಂಗಳೂರು ಪ್ರದೇಶದಲ್ಲಿ ಶೇ. 25 ರಷ್ಟು ಮಳೆ ಕೊರತೆ ದಾಖಲಾಗಿದ್ದು, ಹಲೋ ಜಿಲ್ಲೆಗಳಲ್ಲಿ ಕೃಷಿ ಚಟುವಟಿಕೆಗಳು ಹಿನ್ನಡೆಯಾಗುವ ಸಾಧ್ಯತೆ ಎದುರಾಗಿದೆ. ಮುಂಗಾರು ಮಾರುತಗಳು ದುರ್ಬಲ ಗೊಂಡಿರುವುದರಿಂದ ರೈತರು ಆತಂಕದಲ್ಲಿದ್ದು, ಬಿತ್ತನೆ ಕಾರ್ಯಗಳ ಮೇಲು ಪರಿಣಾಮ ಬೀಳುವ ಸಾಧ್ಯತೆ ಇದೆ.
ಹವಾಮಾನ ತಜ್ಞರ ಪ್ರಕಾರ, ಅರಬ್ಬಿ ಸಮುದ್ರ ಹಾಗೂ ಬಂಗಾಳ ಕೊಲ್ಲಿಯಲ್ಲಿ ನಿರೀಕ್ಷಿತ ಪ್ರಮಾಣದ ಕಡಿಮೆ ಒತ್ತಡ ಪ್ರದೇಶಗಳು ಮತ್ತು ಪೂರಕ ವಾತಾವರಣ ವ್ಯವಸ್ಥೆಗಳು ರೂಪಗೊಳ್ಳದಿರುವುದರಿಂದ ಮುಂಗಾರು ಚುರುಕುಗೊಳ್ಳಲಿಲ್ಲ. ಇದೇ ಪರಿಸ್ಥಿತಿ ಮುಂದುವರೆದರೆ ಜಲಾಶಯಗಳ ನೀರಿನ ಮಟ್ಟ, ಕುಡಿಯುವ ನೀರಿನ ಮಟ್ಟ, ಕುಡಿಯುವ ನೀರಿನ ಲಭ್ಯತೆ, ವಿದ್ಯುತ್ ಉತ್ಪಾದನೆ ಹಾಗೂ ಕೃಷಿ ಕ್ಷೇತ್ರದ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ.
ಮಳೆ ಕೊರತೆಯು ಕೇವಲ ಕರ್ನಾಟಕಕ್ಕಷ್ಟೇ ಸೀಮಿತವಾಗದೆ ದೇಶದ ಆಹಾರ ಉತ್ಪಾದನೆ, ಆರ್ಥಿಕತೆ ಹಾಗೂ ಗ್ರಾಮೀಣ ಜೀವನದ ಮೇಲೂ ಪರಿಣಾಮ ಬೀರುವ ಆತಂಕವನ್ನು ತಜ್ಞರು ವ್ಯಕ್ತಪಡಿಸಿದ್ದಾರೆ. ಮುಂದಿನ ವಾರಗಳಲ್ಲಿ ಮುಂಗಾರು ಚುರುಕುಗೊಳ್ಳುತ್ತದೆಯೇ ಎಂಬುವುದನ್ನು ಹವಾಮಾನ ಇಲಾಖೆ ನಿಕಟವಾಗಿ ಪರಿಶೀಲಿಸುತ್ತಿದೆ.
ವಾಡಿಕೆ ಗಿಂತ ಬಾರಿ ಖುಷಿ ಪಖಂಡ ಮುಂಗಾರು ಮಳೆ ಪ್ರಮಾಣ - ಕರ್ನಾಟಕದಲ್ಲಿ ಜೂನ್ ನಲ್ಲೇ 41% ಮಳೆ ಕೊರತೆ :
ಈ ವರ್ಷದ ನೈರುತ್ಯ ಮುಂಗಾರು ಕರ್ನಾಟಕದಲ್ಲಿ ನಿರೀಕ್ಷೆಯಂತೆ ತುರುಕುಗೊಳ್ಳದೆ ಇವರ ಹಿನ್ನಡೆ ಅನುಭವಿಸಿದೆ. ಜೂನ್ ತಿಂಗಳಿನಲ್ಲಿ ರಾಜ್ಯದಲ್ಲಿ ವಾಡಿಕೆ ಗಿಂತ ಭಾರಿ ಪ್ರಮಾಣದ ಮಳೆ ಕೊರತೆ ದಾಖಲಾಗಿದ್ದು, ಕೃಷಿ, ಕುಡಿಯುವ ನೀರು ಹಾಗೂ ಜಲಾಶಯಗಳ ನೀರಿನ ಮಟ್ಟದ ಬಗ್ಗೆ ಆತಂಕ ಹೆಚ್ಚಿಸಿದೆ.
ಭಾರತೀಯ ಅವಮಾನ ಇಲಾಖೆ ಅಧಿಕೃತ ಅಂಕಿ ಅಂಶಗಳ ಪ್ರಕಾರ, ಜೂನ್ 25ರವರೆಗೆ ರಾಜ್ಯದಲ್ಲಿ ಸಾಮಾನ್ಯವಾಗಿ 162.5 ಮಿಲಿ ಮೀಟರ್ ಮಳೆಯಾಗಬೇಕಿತ್ತು. ಆದರೆ ಈ ಬಾರಿ ಕೇವಲ 95.2 ಮಿಮಿ ಮಳೆಯಷ್ಟೇ ದಾಖಲಾಗಿದೆ. ಇದರೊಂದಿಗೆ ಕರ್ನಾಟಕದಲ್ಲಿ ಸರಾಸರಿ ಶೇ. 41 ರಷ್ಟು ಮಳೆ ಕೊರತೆ ಉಂಟಾಗಿದ್ದು, ಈ ವರ್ಷದ ಮುಂಗಾರು ಆರಂಭವೇ ನಿರಾಸೆ ಮೂಡಿಸದೆ,
ರಾಜಧಾನಿ ಬೆಂಗಳೂರಿನಲ್ಲೂ ಮಳೆಯ ಪ್ರಮಾಣ ಗಮನಾರ್ಹ ಕುಸಿತ ಕಂಡು ಬಂದಿದೆ. ಸಾಮಾನ್ಯವಾಗಿ 89 ಮಿಮೀ ಮಳೆ ಆಗಬೇಕಿದ್ದರೆ. ಈ ಬಾರಿ ಕೇವಲ 66 ಮಿಮೀ ಮಳೆಯಾಗಿದೆ. ಮಳೆ ಕೊರತೆಯಿಂದ ನಗರದಲ್ಲಿ ತಾಪಮಾನ ಹೆಚ್ಚಳವಾಗಿದ್ದು, ನೀರಿನ ಲಭ್ಯತೆ ಹಾಗೂ ಅಂತರ್ಜಲ ಮಟ್ಟದ ಮೇಲೂ ಪರಿಣಾಮ ಬೀಳುವ ಸಾಧ್ಯತೆ ಇದೆ.
ಎಲ್ ನಿನೋ ಪ್ರಭಾವವೇ ಪ್ರಮುಖ ಕಾರಣ :
ಈ ಬಾರಿ ಮುಂಗಾರು ವೈಫಲ್ಯಕ್ಕೆ ಎಲ್ ನಿನೋ ಪ್ರಭಾವವೇ ಪ್ರಮುಖ ಕಾರಣವಾಗಿದೆ ಎಂದು ಭಾರತೀಯ ಅವಮಾನ ಇಲಾಖೆ ಹಿರಿಯ ವಿಜ್ಞಾನಿ ಸಿ.ಎಸ್. ಪಾಟೀಲ್ ತಿಳಿಸಿದ್ದಾರೆ. ಅರಬ್ಬಿ ಸಮುದ್ರ ಮತ್ತು ಬಂಗಾಳಕೊಲ್ಲಿಯಲ್ಲಿ ನಿರೀಕ್ಷಿತ ಪ್ರಮಾಣದ ಹವಾಮಾನ ವ್ಯವಸ್ಥೆಗಳು ರೂಪಗೊಳ್ಳುತ್ತಿರುವುದರಿಂದ ಮುಂಗಾರು ಮಾರುತಗಳು ದುರ್ಬಲಗೊಂಡಿವೆ ಎಂದು ಅವರು ಹೇಳಿದ್ದಾರೆ.
ಮುಂಗಾರು ಅವಧಿಯಲ್ಲಿ ಮಳೆ ಕೈಕೊಟ್ಟಿರುವುದರಿಂದ ರಾಜ್ಯದ ಹಲವು ಭಾಗಗಳಲ್ಲಿ ತಾಪಮಾನ ಗಣನೀಯವಾಗಿ ಏರಿಕೆಯಾಗಿದೆ. ಇತ್ತೀಚೆಗೆ ಕಲಬುರಗಿಯಲ್ಲಿ ಗರಿಷ್ಠ 38 ಡಿಗ್ರಿ ಸೆಲ್ಸಿಯ ಸ್ಥಾಪಮಾನ ದಾಖಲಾಗಿದ್ದು, ಮಳೆಗಾಲದಲ್ಲೇ ಬೇಸಿಗೆ ಅಂತಹ ವಾತಾವರಣ ನಿರ್ಮಾಣವಾಗಿದೆ.
ಹವಾಮಾನ ಇಲಾಖೆಯ ಮಾಹಿತಿ ಪ್ರಕಾರ, ಕರಾವಳಿ ಕರ್ನಾಟಕದಲ್ಲಿ ಶೇ. 50 ರಷ್ಟು ಮಳೆ ಕೊರತೆ ದಾಖಲಾಗಿದ್ದರೆ, ಬೆಂಗಳೂರು ಪ್ರದೇಶದಲ್ಲಿ ಶೇ 25 ರಷ್ಟು ಮಳೆ ಕೊರತೆ ಕಂಡು ಬಂದಿದೆ. ಇದೇ ಪರಿಸ್ಥಿತಿ ಮುಂದುವರೆದರೆ ಕೃಷಿ ಚಟುವಟಿಕೆಗಳು, ಬಿತ್ತನೆ ಕಾರ್ಯ, ಜಲಾಶಯಗಳ ನೀರಿನ ಸಂಗ್ರಹ ಹಾಗೂ ಕುಡಿಯುವ ನೀರಿನ ಪೂರೈಕೆ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ತಜ್ಞರು ಎಚ್ಚರಿಸಿದ್ದಾರೆ.
ಸೂಪರ್ ಎಲ್ ನಿನೋ ಭೀತಿ - ಬರ ಪರಿಸ್ಥಿತಿ ಎದುರಿಸಲು ಸಜ್ಜಾಗಿ, ಅಧಿಕಾರಿಗಳಿಗೆ ಡಿಸಿಎಂ ಪರಮೇಶ್ವರ್ ಸೂಚನೆ :
ರಾಜ್ಯದಲ್ಲಿ ಮಳೆ ಕೊರತೆ ಮತ್ತು ನೀರಿನ ಬಿಕ್ಕಟ್ಟು ತೀವ್ರಗೊಳ್ಳುತ್ತಿರುವ ಹಿನ್ನೆಲೆ ಉಪಮುಖ್ಯಮಂತ್ರಿ ಡಾ ಜಿ ಪರಮೇಶ್ವರ್ ಕಂದಾಯ ಮತ್ತು ವಿಪತ್ತು ನಿರ್ವಹಣಾ ಇಲಾಖೆಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿದರು. 'ಸೂಪರ್ ಎಲ್ ನಿನೋ' ಪರಿಣಾಮದಿಂದ ಮುಂದಿನ ತಿಂಗಳುಗಳಲ್ಲಿ ಸಂಭವಿಸಬಹುದಾದ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಅವರು ನಿರ್ದೇಶನ ನೀಡಿದರು.
ಅಧಿಕಾರಿಗಳ ಮಾಹಿತಿ ಪ್ರಕಾರ, ರಾಜ್ಯದ 122 ತಾಲೂಕುಗಳು ಕುಡಿಯುವ ನೀರಿನ ತೀವ್ರ ಆಭಾವ ಎದುರಿಸುತ್ತಿವೆ. ಜನರಿಗೆ ನಿರಂತರ ನೀರು ಪೂರೈಸಲು 139 ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿದ್ದು, 669 ಗ್ರಾಮಗಳಿಗೆ 789 ಖಾಸಗಿ ಬೋರ್ ವೆಲ್ ಗಳನ್ನು ಸರ್ಕಾರ ವಶಕ್ಕೆ ಪಡೆದು ನೀರು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ.
ಇದೇ ವೇಳೆ, ತಜ್ಞರು ಕ್ಲೌಡ್ ಸೀಡಿಂಗ್ ಸದ್ಯದ ಪರಿಸ್ಥಿತಿಯಲ್ಲಿ ಪರಿಣಾಮಕಾರಿಯಾಗಿ ಪರಿಹಾರವಾಗುವುದಿಲ್ಲ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಹೀಗಾಗಿ, ಹವಾಮಾನ ವೈಪರಿತ್ಯ ಮತ್ತು ಮಳೆ ಕೊರತೆಯನ್ನು ಗಮನದಲ್ಲಿಟ್ಟುಕೊಂಡು ಸರ್ಕಾರವು ದೀರ್ಘಾವಧಿಯ ಬರನಿರ್ವಹಣಾ ಯೋಜನೆಗಳನ್ನು ರೂಪಿಸುವ ಅಗತ್ಯವಿದೆ ಎಂದು ತಜ್ಞರು ಸಲಹೆ ನೀಡಿದ್ದಾರೆ.
Also Read :
ಮದುವೆ ಬೇಡ ಎಂದ ಸಿಯಾ ; ಕೇತನ್ ಬೆದರಿಕೆ ಹಾಕಿದ್ದ- “ಎಲ್ಲಿದ್ದರೂ ಹುಡುಕ್ತೀವಿ"ಎಂದು ಆರೋಪ