<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್! ಬೆಂಗಳೂರಿನಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ಆರಂಭ

ಬೀದಿ ಬದಿ ವ್ಯಾಪಾರಿಗಳಿಗೆ ಶಾಕ್! ಬೆಂಗಳೂರಿನಲ್ಲಿ ಫುಟ್ಪಾತ್ ತೆರವು ಕಾರ್ಯಾಚರಣೆ ಆರಂಭ
Summary: Street vendors have expressed their anger during the footpath clearance operation in Bengaluru. The vendors have alleged that the BBMP's action is affecting their livelihood, creating a tense atmosphere in the area.

Belagavi News:

ನಗರದ ವಿವಿಧ ಭಾಗಗಳಲ್ಲಿ ಫುಟ್ಪಾತ್ ಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸುವ ಉದ್ದೇಶದಿಂದ ಬಿಬಿಎಂಪಿ ಅಧಿಕಾರಿಗಳು ಫುಟ್ ಪಾತ್ ತೆರವು ಕಾರ್ಯಾಚರಣೆ ನಡೆಸಿದರು. ಈ ವೇಳೆ ಫುಟ್ಪಾತ್ ನಲ್ಲಿ ವ್ಯಾಪಾರ ನಡೆಸುತ್ತಿದ್ದ ಬೀದಿ ಬದಿ ವ್ಯಾಪಾರಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿ, ಅಧಿಕಾರಿಗಳ ಗಮನಕ್ಕೆ ವಿರೋಧ ವ್ಯಕ್ತಪಡಿಸಿದರು.

ವ್ಯಾಪಾರಿಗಳ ಪ್ರಕಾರ, ಹಲವು ವರ್ಷಗಳಿಂದ ಇದೇ ಸ್ಥಳದಲ್ಲಿ ವ್ಯಾಪಾರ ನಡೆಸುತ್ತಿದ್ದು, ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ತೆರವು ಕಾರ್ಯಾಚರಣೆ ನಡೆಸಿರುವುದು ತಮ್ಮ ಜೀವನೋಪಾಯಕ್ಕೆ ದೊಡ್ಡ ಹೊಡೆತವಾಗಿದೆ. ಕುಟುಂಬದ ನಿರ್ವಹಣೆ ಸಂಪೂರ್ಣವಾಗಿ ಈ ವ್ಯಾಪಾರದ ಮೇಲೆ ಅವಲಂಬಿತವಾಗಿದ್ದು, ಏಕಾಂಗಿ ತೆರವುಗೊಳಿಸಿರುವುದರಿಂದ ಸಂಕಷ್ಟ ಎದುರಾಗಿದೆ ಎಂದು ಅವರು ಆರೋಪಿಸಿದರು.

ಇನ್ನೊಂದೆಡೆ, ಪಾದಚಾರಿಗಳ ಸುಗಮ ಸಂಚಾರ ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಅತಿಕ್ರಮಣ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಫುಟ್ಪಾತ್ ಗಳು ಸಾರ್ವಜನಿಕರ ಬಳಕೆಗೆ ಮೀಸಲಾಗಿದ್ದು, ಅಕ್ರಮ ಅತಿಕ್ರಮಣವನ್ನು ತೆರವುಗೊಳಿಸುವ ಕಾರ್ಯ ಮುಂದುವರೆಯಲಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕಾರ್ಯಚರಣೆ ವೇಳೆ ವ್ಯಾಪಾರಿಗಳು ಮತ್ತು ಅಧಿಕಾರಿಗಳ ನಡುವೆ ಮಾತಿನ ಚಕಮಕಿ ನಡೆದಿದ್ದು, ಸ್ಥಳದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸ್ಥಳದಲ್ಲೇ ಭದ್ರತೆ ಒದಗಿಸಿದರು.

ಫುಟ್ಪಾತ್ ತೆರವು ಕಾರ್ಯಾಚರಣೆ ಮುಂದುವರೆಯುವ ಸಾಧ್ಯತೆಯಿದ್ದು, ಬೀದಿಬದಿ ವ್ಯಾಪಾರಿಗಳಿಗೆ ಸೂಕ್ತ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು ಎಂಬ ಬೇಡಿಕೆ ಮತ್ತೊಮ್ಮೆ ಕೇಳಿಬಂದಿದೆ.

ನಗರದಲ್ಲಿ ಪಾದಚಾರಿ ಮಾರ್ಗಗಳನ್ನು ಅತಿಕ್ರಮಣದಿಂದ ಮುಕ್ತಗೊಳಿಸುವ ಉದ್ದೇಶದಿಂದ ಬಿಬಿಎಂಪಿ ಫುಟ್ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ. ನಗರದ ವಿವಿಧ ಪಾಲಿಕೆ ವ್ಯಾಪ್ತಿಗಳಲ್ಲಿ ಜೆಸಿಬಿ, ಟ್ಯಾಕ್ಟರ್ ಹಾಗೂ ಸಿಬ್ಬಂದಿಯ ನೆರವೇನಿಂದ ಅತಿಕ್ರಮಣ ತೆರವು ಕಾರ್ಯಾಚರಣೆ ಭರದಿಂದ ನಡೆಯುತ್ತಿದೆ.

ಚಾಮರಾಜಪೇಟೆಯ ಐದನೇ ಮುಖ್ಯ ರಸ್ತೆಯಲ್ಲಿ ಕೇಂದ್ರ ಪಾಲಿಕೆ ಅಧಿಕಾರಿಗಳು ವಿಶೇಷ ಕಾರ್ಯಾಚರಣೆ ನಡೆಸಿ, ಫುಟ್ಪಾತ್ ಮೇಲೆ ಇರಿಸಲಾಗಿದ್ದ ನಿರ್ಮಾಣ ಸಾಮಗ್ರಿಗಳು, ತಾತ್ಕಾಲಿಕ ಶೇಡ್ಗಳು ಹಾಗೂ ಬೀದಿಬದಿ ವ್ಯಾಪಾರಿಗಳ ಮಳಿಗೆಗಳನ್ನು ತೆರವುಗೊಳಿಸಿದರು. ಕಾರ್ಯಚರಣೆಯಿಂದ ಕೆಲಕಾಲ ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಹಲವು ವ್ಯಾಪಾರಿಗಳು ಅಧಿಕಾರಿಗಳ ಕ್ರಮಕ್ಕೆ ತೀವ್ರ ಸಮಾಧಾನ ವ್ಯಕ್ತಪಡಿಸಿದರು.

ವ್ಯಾಪಾರಿಗಳ ಪ್ರಕಾರ, ಯಾವುದೇ ಪರ್ಯಾಯ ವ್ಯವಸ್ಥೆ ಕಲ್ಪಿಸದೆ ತೆರವು ಕಾರ್ಯಾಚರಣೆ ನಡೆಸುವುದರಿಂದ ತಮ್ಮ ಜೀವನೋಪಾಯಕ್ಕೆ ತೀವ್ರ ಹೊಡೆತ ಬಿದ್ದಿದೆ. ವರ್ಷಗಳಿಂದ ಇದೇ ಸ್ಥಳದಲ್ಲಿ ವ್ಯಾಪಾರ ನಡೆಸುತ್ತಿದ್ದು, ಏಕಾಏಕಿ ಮಲಗಿಗಳನ್ನು ಕುಟುಂಬದ ಬದುಕಿನ ಮೇಲೆ ಪರಿಣಾಮ ಬೀರಲಿದೆ ಎಂದು ಅವರು ಆರೋಪಿಸಿದರು.

ಇನ್ನೊಂದೆಡೆ, ಸಾರ್ವಜನಿಕರ ಸುರಕ್ಷತೆ ಹಾಗೂ ಪಾದಚಾರಿಗಳ ಸುಗಮ ಸಂಚಾರವನ್ನು ಖಚಿತಪಡಿಸುವ ಉದ್ದೇಶದಿಂದ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಳ್ಳಲಾಗಿದೆ ಎಂದು ಪಾಲಿಕೆ ಅಧಿಕಾರಿಗಳು ತಿಳಿಸಿದ್ದಾರೆ. ನಗರದ ಪ್ರಮುಖ ರಸ್ತೆ ಹಾಗೂ ಪಾದಚಾರಿ ಮಾರ್ಗಗಳಲ್ಲಿ ಒಂದು ತೆರವು ಕಾರ್ಯಚರಣೆ ಮುಂದಿನ ದಿನಗಳಲ್ಲಿ ಮುಂದುವರೆಯಲಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು ಫುಟ್ಪಾತ್ ತೆರವು ಕಾರ್ಯಾಚರಣೆ - 'ಗುರುತಿನ ಚೀಟಿ ಕೊಟ್ಟವರೇ ಈಗ ಅಂಗಡಿ ತೆರವು ಮಾಡುತ್ತಿದ್ದಾರೆ' ಎಂದು ಬೀದಿ ಬದಿ ವ್ಯಾಪಾರಿಗಳ ಆಕ್ರೋಶ :

ನಗರದಾದ್ಯಂತ ಪಾಠಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ತೀವ್ರಗೊಳಿಸಿದ್ದು , ಫುಟ್ಪಾತ್ ನಲ್ಲಿ ಯಾವುದೇ ರೀತಿಯ ಕಟ್ಟಡ ಸಮಗ್ರಿಗಳು, ತಾತ್ಕಾಲಿಕ ಅಂಗಡಿಗಳು ಅಥವಾ ವ್ಯಾಪಾರ ಚಟುವಟಿಕೆಗಳಿಗೆ ಅವಕಾಶ ಇಲ್ಲ ಎಂದು ಅಧಿಕಾರಿಗಳು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

ಆದರೆ, ಈ ಕಾರ್ಯಾಚರಣೆಯಿಂದ ಬೀದಿಬದಿ ವ್ಯಾಪಾರಿಗಳಲ್ಲಿ ತೀವ್ರ ಸಮಾಧಾನ ವ್ಯಕ್ತವಾಗಿದೆ. ಬಿಬಿಎಂಪಿಯಿಂದ ಗುರುತಿನ ಚೀಟಿ ಪಡೆದು ಹಲವು ವರ್ಷಗಳಿಂದ ಫುಟ್ಪಾತ್ ನಲ್ಲಿ ವ್ಯಾಪಾರ ನಡೆಸುತ್ತಿದ್ದ ನಮ್ಮನ್ನೇ ಈಗ ತೆರವು ಮಾಡಲಾಗುತ್ತಿದೆ ಎಂದು ವ್ಯಾಪಾರಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

"ಗುರುತಿನ ಚೀಟಿ ಕೊಟ್ಟವರೇ ಈಗ ನಮ್ಮ ಅಂಗಡಿಗಳನ್ನು ತೆರವು ಮಾಡುತ್ತಿದ್ದಾರೆ. ನಾವು ಕುಟುಂಬವನ್ನು ಹೇಗೆ ನಿರ್ವಹಿಸಬೇಕು? ಎಲ್ಲಿಗೆ ಹೋಗಿ ವ್ಯಾಪಾರ ಮಾಡಬೇಕು?" ಎಂದು ವ್ಯಾಪಾರಿಗಳು ಪ್ರಶ್ನಿಸಿದ್ದಾರೆ. ಯಾವುದೇ ಪರ್ಯಾಯಸ್ಥಳ ಅಥವಾ ವ್ಯವಸ್ಥೆ ಕಲ್ಪಿಸದೆ ತೆರವು ಕಾರ್ಯಾಚರಣೆ ನಡೆಸುತ್ತಿರುವುದು ತಮ್ಮ ಜೀವನೋಪಾಯಕ್ಕೆ ದೊಡ್ಡ ಹೊಡೆತವಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಪಾದ ಚಾರಿಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ವ್ಯಾಪಾರ ಮಾಡಲು ಅವಕಾಶ ನೀಡಬೇಕು. ಜೀವನೋಪಾಯ ಮತ್ತು ಸಾರ್ವಜನಿಕ ಹಿತಾಸಕ್ತಿ ಎರಡನ್ನು ಗಮನದಲ್ಲಿಟ್ಟುಕೊಂಡು ಬಿಬಿಎಂಪಿ ಸೂಕ್ತ ಪರಿಹಾರ ಕಂಡುಹಿಡಿಯಬೇಕು ಎಂದು ಬೀದಿಬದಿ ವ್ಯಾಪಾರಿಗಳು ಮನವಿ ಮಾಡಿದ್ದಾರೆ.

ಇನ್ನೊಂದೆಡೆ, ಆಚಾರಿ ಮಾರ್ಗಗಳು ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕಾಗಿ ಮೀಸಲಾಗಿದ್ದು, ಅತಿಕ್ರಮಣ ತೆರವು ಕಾರ್ಯಾಚರಣೆ ಮುಂದುವರೆಯಲಿದೆ ಎಂದು ಪಾಲಿಕೆ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online