<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಮೂವರು ಸರ್ಕಾರಿ ಅಧಿಕಾರಿಗಳಿಗೆ ಶಾಕ್: 14 ಸ್ಥಳಗಳಲ್ಲಿ ಲೋಕಾಯುಕ್ತ ಏಕಕಾಲದ ದಾಳಿ

ಮೂವರು ಸರ್ಕಾರಿ ಅಧಿಕಾರಿಗಳಿಗೆ ಶಾಕ್: 14 ಸ್ಥಳಗಳಲ್ಲಿ ಲೋಕಾಯುಕ್ತ ಏಕಕಾಲದ ದಾಳಿ
Summary: Lokayukta officials have conducted raids in various areas of Davangere and inspected the houses, offices and other places related to government officials. The operation was carried out in the wake of allegations of having assets beyond their means, and the work of collecting important documents and information is ongoing.

belagavi news :

ದಾವಣಗೆರೆ ಸೇರಿದಂತೆ ರಾಜ್ಯದ ವಿವಿಧ ಭಾಗಗಳಲ್ಲಿ ಲೋಕಾಯುಕ್ತ ದಾಳಿಗಳು ಇಂದು ಬೆಳ್ಳಂಬೆಳಗ್ಗೆ ಭರ್ಜರಿ ಕಾರ್ಯಚರಣೆ ನಡೆಸಿದ್ದು, ಮೂವರು ಸರಕಾರಿ ಅಧಿಕಾರಿಗಳಿಗೆ ಸೇರಿದ ಮನೆ, ಕಚೇರಿ ಹಾಗೂ ಇತರೆ ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ಮಾಡಿದ್ದಾರೆ. ಒಟ್ಟು 14 ಕಡೆಗಳಲ್ಲಿ ನಡೆಯುತ್ತಿರುವ ಈ ದಾಳಿಯ ವೇಳೆ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸಿ ಮಹತ್ವದ ಮಾಹಿತಿಯನ್ನು ಸಂಗ್ರಹಿಸಿದ್ದಾರೆ.

ಹುಬ್ಬಳ್ಳಿಯ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಯಾಂತ್ರಿಕ ಇಂಜಿನಿಯರ್ ಸಿದ್ದೇಶ್ವರ್ ಹೆಬ್ಬಾಳ್, ಚಿತ್ರದುರ್ಗ ಬಯಲು ಸೀಮೆ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕೃಷ್ಣ ನಾಯ್ಕ್ ಹಾಗೂ ಬೆಳಗಾವಿಯ ಕೆ.ಆರ್.ಐ.ಡಿ.ಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರಿಗೆ ಸೇರಿದ ಸ್ಥಳಗಳಲ್ಲಿ ಲೋಕಾಯುಕ್ತ ತಂಡಗಳು ತನಿಖೆ ಮುಂದುವರಿಸಿವೆ.

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪಗಳ ಹಿನ್ನೆಲೆ ಈ ದಾರಿ ನಡೆದಿರುವ ಶಂಕೆ ವ್ಯಕ್ತವಾಗಿದ್ದು, ಅಧಿಕಾರಿಗಳ ನಿವಾಸ, ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಖಲೆಗಳು, ಆಸ್ತಿ ವಿವರಗಳು ಹಾಗೂ ಹಣಕಾಸು ವ್ಯವಹಾರಗಳಿಗೆ ಸಂಬಂಧಿಸಿದ ಮಾಹಿತಿಯನ್ನು ಪರಿಶೀಲಿಸಲಾಗುತ್ತಿದೆ. ದಾರಿಯ ಪೂರ್ಣ ವಿವರಗಳು ಮತ್ತು ವಶಪಡಿಸಿಕೊಂಡ ದಾಖಲೆಗಳ ಮಾಹಿತಿ ತನಿಖೆ ಪೂರ್ಣಗೊಂಡ ಬಳಿಕ ಲಭ್ಯವಾಗುವ ಸಾಧ್ಯತೆ ಇದೆ.

Sponsored

ಲೋಕಾಯುಕ್ತ ದಾಳಿ: ಸಿದ್ದೇಶ್ವರ ಹೆಬ್ಬಾಳ್, ಕೃಷ್ಣ ನಾಯ್ಕ್ ಆಸ್ತಿಗಳ ಮೇಲೆ ಶೋಧ ಮುಂದುವರಿಕೆ:

ಲೋಕಾಯುಕ್ತ ಅಧಿಕಾರಿಗಳು ನಡೆಸುತ್ತಿರುವ ಭರ್ಜರಿ ಕಾರ್ಯಾಚರಣೆಯಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಸೇರಿದ ಹಲವು ಸ್ಥಳಗಳಲ್ಲಿ ಶೋಧ ಕಾರ್ಯ ಮುಂದುವರೆದಿದೆ. ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮುಖ್ಯ ಯಾಂತ್ರಿಕ ಸಿದ್ದೇಶ್ವರ ಹೆಬ್ಬಾಳ್ ಅವರಿಗೆ ಸೇರಿದ ನಾಲ್ಕು ಸ್ಥಳಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ದಾವಣಗೆರೆ ನಗರದ ಆಂಜನೇಯ ಬಡಾವಣೆಯಲ್ಲಿರುವ ಅವರ ನಿವಾಸ ಸೇರಿದಂತೆ ಹುಬ್ಬಳ್ಳಿಯ ಕಚೇರಿ ಹಾಗೂ ಇತರೆ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಯುತ್ತಿದೆ. ಆಸ್ತಿ, ಹಣಕಾಸು ವ್ಯವಹಾರಗಳು ಮತ್ತು ಸಂಬಂಧಿತ ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

ಇನ್ನೊಂದೆಡೆ, ಚಿತ್ರದುರ್ಗ ಬಯಲು ಸೀಮೆಯ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಕೃಷ್ಣ ನಾಯ್ಕ್ ಅವರಿಗೆ ಸೇರಿದ 5 ಸ್ಥಳಗಳಲ್ಲಿ ಲೋಕಾಯುಕ್ತ ತಂಡಗಳು ಶೋಧ ಕಾರ್ಯ ಕೈಗೊಂಡಿವೆ. ದಾವಣಗೆರೆ ನಗರದ ಸಿದ್ಧವೀರಪ್ಪ ಬಡಾವಣೆಯಲ್ಲಿರುವ ಅವರ ಮನೆ, ಚಿತ್ರದುರ್ಗದ ಕಚೇರಿ ಸೇರಿದಂತೆ ವಿವಿಧ ಸ್ಥಳಗಳಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

Sponsored

ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಆರೋಪಗಳ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆದಿರುವ ಸಾಧ್ಯತೆ ಇದ್ದು, ಶೋಧ ಕಾರ್ಯ ಪೂರ್ಣಗೊಂಡ ಬಳಿಕ ಹೆಚ್ಚಿನ ಮಾಹಿತಿ ಹೊರಬೀಳುವ ನಿರೀಕ್ಷೆ

ಆದಾಯ ಮೀರಿ ಆಸ್ತಿ ಆರೋಪ: ತನ್ನ ಕೆಂಚಪ್ಪ ಸೇರಿ ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ದಾಳಿ:

ಆದಾಯ ಮಿತಿಗಿಂತ ಹೆಚ್ಚು ಆಸ್ತಿ ಗಳಿಸಿರುವ ಆರೋಪದ ಹಿನ್ನೆಲೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಭಾಗಗಳಲ್ಲಿ ವ್ಯಾಪಕ ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರ್ಯಾಚರಣೆಯ ಭಾಗವಾಗಿ ಬೆಳಗಾವಿಯ ಕೆ.ಆರ್.ಐ.ಡಿ.ಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ಅವರಿಗೆ ಸೇರಿದ ಐದು ಸ್ಥಳಗಳಲ್ಲಿ ಲೋಕಾಯುಕ್ತರು ದಾರಿ ನಡೆಸಿದ್ದಾರೆ.

ದಾವಣಗೆರೆಯಲ್ಲಿರುವ ಅವರ ನಿವಾಸ, ಬೆಳಗಾವಿಯ ಮನೆ ಸೇರಿದಂತೆ ಒಟ್ಟು ಐದು ಕಡೆಗಳಲ್ಲಿ ದಾಖಲೆ ಗಳ ಪರಿಶೀಲನೆ ನಡೆಯುತ್ತಿದ್ದು, ಆಸ್ತಿ ವಿವರಗಳು, ಬ್ಯಾಂಕ್ ವ್ಯವಹಾರಗಳು ಹಾಗೂ ಇತರೆ ಹಣಕಾಸು ದಾಖಲೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ.

Sponsored

ಭರ್ಜರಿ ಕಾರ್ಯಾಚರಣೆಗೆ ದಾವಣಗೆರೆ ಲೋಕಾಯುಕ್ತ ಎಸ್‌ಪಿ ಎಂ.ಎಸ್.ಕೌಲಾಪುರೆ ನೇತೃತ್ವ ವಹಿಸಿದ್ದು, ಒಟ್ಟು 12 ಕಚೇರಿಗಳು ಏಕಕಾಲದಲ್ಲಿ ವಿವಿಧ ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ಕೈಗೊಂಡಿವೆ. ಮೂವರು ಸರಕಾರಿ ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಚೇರಿ ಮತ್ತು ಇತರೆ ಆಸ್ತಿಗಳ ಮೇಲೆ ದಾರಿ ನಡೆಸಿ ಮಹತ್ವದ ದಾಖಲೆಗಳ ಪರಿಶೀಲನೆ ನಡೆಸಲಾಗುತ್ತಿದೆ.

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮುಖ್ಯ ಯಾಂತ್ರಿಕ ಇಂಜಿನಿಯರ್ ಸಿದ್ದೇಶ್ವರ್ ಹೆಬ್ಬಾಳ್, ಚಿತ್ರದುರ್ಗ ಬಯಲು ಸೀಮೆ ಅಭಿವೃದ್ದಿ ಪ್ರಾಧಿಕಾರದ ಕಾರ್ಯದರ್ಶಿ ಕೃಷ್ಣ ನಾಯ್ಕ್ ಹಾಗೂ ಕೆ.ಆರ್.ಐ.ಡಿ.ಎಲ್ ಅಧೀಕ್ಷಕ ಇಂಜಿನಿಯರ್ ಸಣ್ಣ ಕೆಂಚಪ್ಪ ವಿರುದ್ಧ ಆದಾಯಕ್ಕೆ ಮೀರಿ ಆಸ್ತಿ ಗಳಿಸಿರುವ ಆರೋಪ ಕೇಳಿ ಬಂದ ಹಿನ್ನೆಲೆ ಲೋಕಾಯುಕ್ತರು ಈ ಕಾರ್ಯಾಚರಣೆ ನಡೆಸಿದ್ದಾರೆ. ಶೋಧ ಕಾರ್ಯಾಚರಣೆ ಪೂರ್ಣಗೊಂಡ ಬಳಿಕ ಹೆಚ್ಚಿನ ವಿವರಗಳು ಬಹಿರಂಗವಾಗುವ ಸಾಧ್ಯತೆ ಇದೆ.

Also Read:

ರಾಜ್ಯದಲ್ಲಿ ಮಳೆ ಕೊರತೆ ಹೆಚ್ಚಳ : ಪ್ರಮುಖ ಅಣೆಕಟ್ಟುಗಳಲ್ಲಿ ಆತಂಕಕಾರಿ ನೀರಿನ ಮಟ್ಟ

Sponsored
You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online