<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಭದ್ರತಾ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮೋದಿ ಸಾಗುವ ಮಾರ್ಗದಲ್ಲಿ ಸ್ಪೋಟಕ ಪತ್ತೆ, ತನಿಖೆ ವಿವರಗಳು ಬಹಿರಂಗ

ಭದ್ರತಾ ಪ್ರಕರಣದಲ್ಲಿ ಶಾಕಿಂಗ್ ಟ್ವಿಸ್ಟ್: ಮೋದಿ ಸಾಗುವ ಮಾರ್ಗದಲ್ಲಿ ಸ್ಪೋಟಕ ಪತ್ತೆ, ತನಿಖೆ ವಿವರಗಳು ಬಹಿರಂಗ
Summary: The case of explosives found on Modi's route has now taken a new turn. Many surprising facts have been revealed during the investigation, and security agencies are seriously examining the case. The exact reasons behind the incident and more information about the people involved will come to light from the investigation.

Belagavi news:

ಮೋದಿ ಮಾರ್ಗದಲ್ಲಿ ಪತ್ತೆಯಾದ ವಸ್ತು ಕುರಿತು ತನಿಖೆಯಲ್ಲಿ ಹೊಸ ಮಾಹಿತಿ, ಅಮೋನಿಯಂ ನೈಟ್ರೇಟ್ ಜೆಲ್ ಎಂದು ದೃಢತೆ

ಬೆಂಗಳೂರು ಮೇ 16: ಪ್ರಧಾನಿ ನರೇಂದ್ರ ಮೋದಿ ಅವರು ಸಂಚರಿಸುವ ಮಾರ್ಗದಲ್ಲಿ ಪತ್ತೆಯಾದ ಸಂಶಯಾಸ್ಪದ ವಸ್ತುವಿನ ಕುರಿತು ಪೊಲೀಸರ ತನಿಖೆಯಿಂದ ಹೊಸ ಮಾಹಿತಿ ಬಹಿರಂಗವಾಗಿದೆ. ಆರಂಭದಲ್ಲಿ ಇದನ್ನು ಜಿಲೇಟಿನ್ ಕಡ್ಡಿಗಳು ಎಂದು ಶಂಕಿಸಲಾಗಿತ್ತು. ಆದರೆ ಪ್ರಾಥಮಿಕ ಪರಿಶೀಲನೆ ಹಾಗೂ ವೈಜ್ಞಾನಿಕ ವಿಶ್ಲೇಷಣೆಯ ನಂತರ, ಅದು ಅಮೋನಿಯಂ ನೈಟ್ರೇಟ್ ಜೆಲ್ ಎಂದು ದೃಢಪಟ್ಟಿದೆ ಎಂದು ಮೂಲಗಳು ತಿಳಿಸಿವೆ.

ಘಟನೆಗೆ ಸಂಬಂಧಿಸಿದಂತೆ ಭದ್ರತಾ ಸಂಸ್ಥೆಗಳು ಹೆಚ್ಚಿನ ತನಿಖೆ ಕೈಗೊಂಡಿದ್ದು ವಸ್ತು ಹೇಗೆ ಅಲ್ಲಿಗೆ ತಲುಪಿತು ಇದರ ಹಿಂದಿನ ಉದ್ದೇಶ ಏನು ಎಂಬುದರ ಕುರಿತು ಆಳವಾದ ಪರಿಶೀಲನೆ ನಡೆಯುತ್ತಿದೆ.

ಭದ್ರತಾ ವ್ಯವಸ್ಥೆಯ ಲೋಪಗಳ ಕುರಿತು ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಪೊಲೀಸರು ಮತ್ತು ಇತರೆ ಭದ್ರತಾ ಏಜೆನ್ಸಿಗಳು ಹೆಚ್ಚಿನ ಮಾಹಿತಿಯನ್ನು ಸಂಗ್ರಹಿಸುತ್ತಿವೆ.

ಅಮೋನಿಯಂ ನೈಟ್ರೇಟ್ ಎಂಬುದು ಸ್ಪೋಟಕ ಗಳಲ್ಲಿ ಬಳಸಲಾಗುವ ಅಪಾಯಕಾರಿ ರಾಸಾಯನಿಕವಾಗಿದ್ದು, ಈ ವಸ್ತುವಿನ ಪತ್ತೆಯಿಂದ ಭಯದ ವಾತಾವರಣ ಉಂಟಾಗಿದೆ.

ಈ ಕೃತ್ಯವನ್ನು ಭಯ ಹುಟ್ಟಿಸುವ ಉದ್ದೇಶದಿಂದ ಮಾಡಿರುವ ಸಾಧ್ಯತೆ ಇದೆ ಎಂದು ಪೊಲೀಸ್ ಮೂಲಗಳು ತಿಳಿಸುವೆ ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.

ಸ್ಪೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಮಹತ್ವದ ಮಾಹಿತಿ: 11 ಗಂಟೆಗಳ ಅವಧಿಯಲ್ಲಿ ಘಟನೆ ಸಂಭವಿಸಿದ ಶಂಕೆ

ಪ್ರಧಾನಿ ಮೋದಿ ಅವರ ಸಂಚರಿಸುವ ಮಾರ್ಗದಲ್ಲಿ ಸಂಶಯಾಸ್ಪದ ವಸ್ತು ಪಥಯಾದ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯಲ್ಲಿ ಹೊಸ ವಿವರಗಳು ಬೆಳಕಿಗೆ ಬಂದಿವೆ. ಈ ಘಟನೆ ಮೇ 9ರ ರಾತ್ರಿ 8:05 ರಿಂದ ಮೇ 10ರ ಬೆಳಗ್ಗೆ 7:00 ಗಂಟೆಯ ನಡುವೆ, ಸುಮಾರು 11 ಗಂಟೆಗಳ ಅವಧಿಯಲ್ಲಿ ನಡೆದಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ.

ತನಿಖೆ ಪ್ರಕಾರ, ಈ ಅವಧಿಯಲ್ಲಿ ಸಂಬಂಧಿತ ಸ್ಥಳದಲ್ಲಿ ಪೊಲೀಸರ ನಿಯಮಿತಗಸ್ತು ಇರಲಿಲ್ಲ ಎಂದು ತಿಳಿದು ಬಂದಿದೆ. ಜೊತೆಗೆ, ಆ ಪ್ರದೇಶದಲ್ಲಿ ಸಿಸಿಟಿವಿ ಕ್ಯಾಮೆರಾ ಗಳು ಇಲ್ಲದಿರುವುದು ತನಿಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ.

ಈ ಹಿನ್ನೆಲೆಯಲ್ಲಿ ಭದ್ರತಾ ಲೋಪಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದು, ವಸ್ತು ಹೇಗೆ ಮತ್ತು ಯಾರಿಂದ ಅಲ್ಲಿ ಇಡಲಾಯಿತು ಎಂಬುದರ ಕುರಿತು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಲಾಗಿದೆ.

ಆರೋಪಿಗಳನ್ನು ಪತ್ತೆಹಚ್ಚಲು ಪೊಲೀಸರು ತಾಂತ್ರಿಕ ವಿಶ್ಲೇಷಣೆಗಳ ಸಹಾಯವನ್ನು ಪಡೆಯುತ್ತಿದ್ದಾರೆ. ಸ್ಪೋಟಕ ವಸ್ತುವಿನೊಂದಿಗೆ ಯಾವುದೇ ಡಿಟೋನೇಟರ್ ಗಳು ಪತ್ತೆಯಾಗಿಲ್ಲದ ಕಾರಣ, ಸ್ಪೋಟ ಸಂಭವಿಸುವ ಸಾಧ್ಯತೆ ಕಡಿಮೆ ಇತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ ಪ್ರಕರಣದ ತನಿಖೆ ಮುಂದುವರೆದಿದೆ.

Also Read:

Sleeper Bus Fire Accident: ಟೈರ್ ಸ್ಪೋಟದ ಬಳಿಕ ಖಾಸಗಿ ಬಸ್ ಹೊತ್ತಿ ಉರಿದ ಘಟನೆ, ಪ್ರಯಾಣಿಕರು ಪಾರು

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online