<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಮಹಿಳೆಯರ ಆರತಿಗೆ ಸಿದ್ದರಾಮಯ್ಯ ವಿಭಿನ್ನ ಪ್ರತಿಕ್ರಿಯೆ : ಫುಲ್ ವೈರಲ್

ಮಹಿಳೆಯರ ಆರತಿಗೆ ಸಿದ್ದರಾಮಯ್ಯ ವಿಭಿನ್ನ ಪ್ರತಿಕ್ರಿಯೆ : ಫುಲ್ ವೈರಲ್
Summary: The video of CM Siddaramaiah giving a sharp note to the women who welcomed him by performing aarti has gone viral on social media. A huge discussion has started among netizens about the CM's reaction.

Belagavi news:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಾರ್ವಜನಿಕ ಕಾರ್ಯಕ್ರಮ ಒಂದರಲ್ಲಿ ಭಾಗವಹಿಸಿದ್ದ ವೇಳೆ ನಡೆದ ಒಂದು ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಕಾರ್ಯಕ್ರಮಕ್ಕೆ ಆಗಮಿಸಿದ ಸಿಎಂ ಗೆ ಮಹಿಳೆಯರು ಆರತಿಯತ್ತಿ ಸಂಪ್ರದಾಯ ಬದ್ಧವಾಗಿ ಸ್ವಾಗತ ಕೋರಿದ ಸಂದರ್ಭ, ಸಿದ್ದರಾಮಯ್ಯ ಅವರು ಮಹಿಳೆಯರತ್ತ ಗರಿಗರಿ ನೋಟ್ ನೀಡಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಈ ವಿಡಿಯೋ ದಲ್ಲಿ ವೈರಲ್ ಆಗುತ್ತಿದ್ದಂತೆ ನೆಟ್ಟಿಗರು ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ನೀಡುತ್ತಿದ್ದಾರೆ. ಕೆಲವರು ಸಿಎಂ ಮುಖಭಾವದ ಬಗ್ಗೆ ಪ್ರಶ್ನೆ ಎತ್ತಿದರೆ, ಇನ್ನು ಕೆಲವರು ಅದು ಕ್ಷಣಿಕ ಪ್ರತಿಕ್ರಿಯೆ ಆಗಿರಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.

ಕಾರ್ಯಕ್ರಮದ ವೇಳೆ ಮಹಿಳೆಯರು ಆರತಿ ತಟ್ಟೆ ಹಿಡಿದು ಸಿಎಂ ಗೆ ಸ್ವಾಗತ ಕೋರಿದರು. ಇದೇ ವೇಳೆ ಸಿದ್ದರಾಮಯ್ಯ ಅವರು ಗಂಭೀರ ಮುಖಭಾವದೊಂದಿಗೆ ಮಹಿಳೆಯರತ್ತ ನೋಡಿದ ದೃಶ್ಯ ಹೆಚ್ಚು ಚರ್ಚೆಗೆ ಕಾರಣವಾಗಿದೆ. ವಿಡಿಯೋ ವೈರಲ್ ಆದ ಬಳಿಕ ಫೇಸ್ಬುಕ್, ಇನ್ಸ್ಟಾಗ್ರಾಮ್, ಹಾಗೂ ಎಕ್ಸ್ ನಲ್ಲಿ ಈ ಘಟನೆ ಟ್ರೆಂಡಿಂಗ್ ಆಗಿದೆ.

ರಾಜಕೀಯ ವಲಯದಲ್ಲೂ ಈ ವಿಡಿಯೋ ಚರ್ಚೆಗೆ ಗ್ರಾಸವಾಗಿದ್ದು, ಸಿಎಂ ಸಿದ್ದರಾಮಯ್ಯರ ಪ್ರತಿಕ್ರಿಯೆ ಬಗ್ಗೆ ಪರ ವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.

ಆನೇಕಲ್ ನಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಗೆ ಶಂಕುಸ್ಥಾಪನೆ; ಸಿಎಂ ಸಿದ್ದರಾಮಯ್ಯಗೆ ಭವ್ಯ ಸ್ವಾಗತ :

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ನಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಮಾರಂಭ ವಿಜ್ರಂಭಣೆಯಿಂದ ನಡೆಯಿತು. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿ ಯೋಜನೆಗೆ ಚಾಲನೆ ನೀಡಿದರು.

ಸಿಎಂ ಆಗಮನದ ವೇಳೆ ಅಪಾರ ಸಂಖ್ಯೆಯ ಜನರು ನೆರೆದಿದ್ದು ಭವ್ಯ ಸ್ವಾಗತ ಕೋರಲಾಯಿತು. ಮಹಿಳೆಯರು ಆರ್ಥಿಯತಿ ಸಂಪ್ರದಾಯ ಬದ್ಧವಾಗಿ ಸ್ವಾಗತಿಸಿದರೆ, ಕಾರ್ಯಕರ್ತರು ಘೋಷಣೆ ಕೂಗಿ ಸಿಎಂ ರನ್ನು ಬರಮಾಡಿಕೊಂಡರು. ಕಾರ್ಯಕ್ರಮದ ಸುತ್ತಮುತ್ತ ಹಬ್ಬದ ವಾತಾವರಣ ನಿರ್ಮಾಣವಾಗಿತ್ತು.

ಆನೇಕಲ್ ನಲ್ಲಿ ನಿರ್ಮಾಣವಾಗಲಿರುವ ಈ ನೂತನ ಕ್ರಿಕೆಟ್ ಸ್ಟೇಡಿಯಂ ಬೆಂಗಳೂರು ಹಾಗೂ ಕರ್ನಾಟಕದ ಕ್ರೀಡಾ ಕ್ಷೇತ್ರಕ್ಕೆ ಹೊಸ ಮೈಲಿಗಲ್ಲಾಗಲಿದೆ. ಅತ್ಯಾಧುನಿಕ ಸೌಲಭ್ಯಗಳೊಂದಿಗೆ ನಿರ್ಮಾಣವಾಗಲಿರುವ ಈ ಕ್ರೀಡಾಂಗಣ ಭವಿಷ್ಯದಲ್ಲಿ ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪಂದ್ಯಗಳಿಗೆ ವೇದಿಕೆಯಾಗುವ ನಿರೀಕ್ಷೆ ಇದೆ.

ರಾಜ್ಯದ ಕ್ರೀಡಾ ಅಭಿವೃದ್ಧಿಗೆ ಸರ್ಕಾರ ಬದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು. ಹೊಸ ಸ್ಟೇಡಿಯಂ ನಿರ್ಮಾಣದಿಂದ ಯುವ ಪ್ರತಿಭೆಗಳಿಗೆ ಹೆಚ್ಚಿನ ಅವಕಾಶಗಳು ಸಿಗಲಿದ್ದು, ಬೆಂಗಳೂರಿನ ಕ್ರೀಡಾ ಪ್ರಭಾವ ಮತ್ತಷ್ಟು ವಿಸ್ತಾರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಕಾರ್ಯಕ್ರಮದ ಫೋಟೋಗಳು ಹಾಗೂ ವಿಡಿಯೋಗಳು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ಕ್ರಿಕೆಟ್ ಅಭಿಮಾನಿಗಳಿಂದ ಭಾರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಬೆಂಗಳೂರು ಸಮೀಪದ ಆನೇಕಲ್ ನಲ್ಲಿ ದೇಶದ ಎರಡನೇ ಅತಿ ದೊಡ್ಡ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣಕ್ಕೆ ಶಂಕುಸ್ಥಾಪನೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಭವಿಷ್ಯದಲ್ಲಿ ಇದು ಎಂ ಚಿನ್ನಸ್ವಾಮಿ ಸ್ಟೇಡಿಯಂ ಬಳಿಕ ಬೆಂಗಳೂರಿನ ಮತ್ತೊಂದು ಪ್ರಮುಖ ಕ್ರಿಕೆಟ್ ಅಖಾಡವಾಗಿ ಹೊರಹೊಮ್ಮಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ್ದು, ಅವರಿಗೆ ಜನರಿಂದ ಭರ್ಜರಿ ಸ್ವಾಗತ ದೊರೆಯಿತು. ಸಾವಿರಾರು ಜನರು ಸಮಾರಂಭಕ್ಕೆ ಆಗಮಿಸಿ ಸಂಭ್ರಮಿಸಿದರು. "ಚೆಲ್ಲಾ ಚೆಲ್ಲಾನೆ ಉದುರವ್ವ" ಸೇರಿದಂತೆ ಜನಪದ ಹಾಗೂ ಡೊಳ್ಳು ಕುಣಿತದ ಹಾಡುಗಳು ಕಾರ್ಯಕ್ರಮದ ಮೆರಗೂ ಹೆಚ್ಚಿಸಿತು. ಜನರು ಪರಸ್ಪರ ಶುಭಾಶಯ ಕೋರಿ ಹಬ್ಬದ ವಾತಾವರಣ ಸೃಷ್ಟಿಸಿದರು.

ಇದೇ ವೇಳೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್, ಸಚಿವ ಜಮೀರ್ ಅಹ್ಮದ್ ಖಾನ್ ಸೇರಿದಂತೆ ಹಲವು ಗಣ್ಯರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ವೇಳೆ ಮಹಿಳೆಯರು ಆರತಿ ಎತ್ತಿ ಸಿಎಂ ಸಿದ್ದರಾಮಯ್ಯ ಅವರನ್ನು ಸಾಂಪ್ರದಾಯ ಬದ್ಧವಾಗಿ ಸ್ವಾಗತಿಸಿದ್ದರು. ಇದೇ ಸಂದರ್ಭದಲ್ಲಿ ಸಿಎಂ ಮಹಿಳೆಯರತ್ತ ಗಂಭೀರ ಹಾಗೂ ಗರಿಗರಿ ನೋಟ್ ನೀಡಿದ ದೃಶ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿದೆ. ಸಿಎಂ ಅವರ ಮುಖಭಾವದ ಬಗ್ಗೆ ನೆಟ್ಟಿಗರು ವಿವಿಧ ರೀತಿಯ ಪ್ರತಿಕ್ರಿಯೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ.

ಹೊಸ ಕ್ರಿಕೆಟ್ ಸ್ಟೇಡಿಯಂ ನಿರ್ಮಾಣದಿಂದ ಬೆಂಗಳೂರಿನ ಕ್ರೀಡಾ ಮೂಲಸೌಕರ್ಯಕ್ಕೆ ಮತ್ತಷ್ಟು ಬಲ ಸಿಗಲಿದ್ದು, ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಪಂದ್ಯಗಳನ್ನು ಆಯೋಜಿಸುವ ಸಾಮರ್ಥ್ಯ ಹೆಚ್ಚಲಿದೆ ಎನ್ನಲಾಗಿದೆ.

Also Read:

ಪ್ರಧಾನಿ ಮೋದಿ ನೇತೃತ್ವದ ರೋಜ್ ಗಾರ್ ಮೇಳ: 47 ಕೇಂದ್ರಗಳಲ್ಲಿ 51 ಸಾವಿರ ಉದ್ಯೋಗ ನೇಮಕಾತಿ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online