<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ರಾಜ್ಯಸಭೆಗೆ ಸಿದ್ದರಾಮಯ್ಯ ಪತ್ನಿ ? ರಾಹುಲ್ ಗಾಂಧಿ ಆಫರ್ ಗೆ ಮಾಜಿ ಸಿಎಂ ಹೇಳಿದ್ದೇನು?

ರಾಜ್ಯಸಭೆಗೆ ಸಿದ್ದರಾಮಯ್ಯ ಪತ್ನಿ ? ರಾಹುಲ್ ಗಾಂಧಿ ಆಫರ್ ಗೆ ಮಾಜಿ ಸಿಎಂ ಹೇಳಿದ್ದೇನು?
Summary: The information that Congress leader Rahul Gandhi had offered Chief Minister Siddaramaiah's wife a Rajya Sabha membership is now a topic of discussion in political circles.

Belagavi news:

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಮತ್ತು ಸಚಿವ ಸಂಪುಟ ರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿರುವ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಅಚ್ಚರಿಯ ಮಾಹಿತಿ ಎಂದು ಇದೀಗ ಬೆಳಕಿಗೆ ಬಂದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಪತ್ನಿಗೆ ರಾಜ್ಯಸಭಾ ಸ್ಥಾನವನ್ನು ಆಫರ್ ಮಾಡಿದ್ದರು ಎಂಬ ವಿಚಾರ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ.

ಸಚಿವ ಸಂಪುಟ ರಚನೆ ಹಾಗೂ ಡಿಸಿಎಂ ಹುದ್ದೆಗಳ ಹಂಚಿಕೆ ಕುರಿತು ಕಾಂಗ್ರೆಸ್ ಹೈಕಮಾಂಡ್ ಜೊತೆ ಚರ್ಚಿಸಲು ಸಿದ್ದರಾಮಯ್ಯ ಮತ್ತು ನಿಯೋಜಿತ ಸಿಎಂ ಡಿಕೆ ಶಿವಕುಮಾರ್ ಇಂದು ದೆಹಲಿಗೆ ತೆರಳುತ್ತಿದ್ದಾರೆ. ಸಂಭಾವ್ಯ ಸಚಿವರ ಪಟ್ಟಿ ಅಂತಿಮಗೊಳಿಸುವುದು ಸೇರಿದಂತೆ ಹಲವು ಮಹತ್ವದ ರಾಜಕೀಯ ನಿರ್ಧಾರಗಳ ಬಗ್ಗೆ ಹೈಕಮಾಂಡ್ ನಾಯಕರೊಂದಿಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.

ಈ ನಡುವೆ, ರಾಷ್ಟ್ರ ರಾಜಕಾರಣಕ್ಕೆ ಬರಲು ಸಿದ್ದರಾಮಯ್ಯ ಆಸಕ್ತಿ ತೋರದ ಹಿನ್ನೆಲೆಯಲ್ಲಿ, ಅವರ ಪತ್ನಿಗೆ ರಾಜ್ಯಸಭಾ ಸದಸ್ಯತ್ವದ ಅವಕಾಶ ನೀಡುವ ಪ್ರಸ್ತಾಪವನ್ನು ರಾಹುಲ್ ಗಾಂಧಿ ಮುಂದಿಟ್ಟಿದ್ದರು ಎನ್ನಲಾಗಿದೆ. ಆದರೆ ಆ ಆಫರ್ ಅನ್ನು ಸಿದ್ದರಾಮಯ್ಯ ತಿರಸ್ಕರಿಸಿದ್ದು, ರಾಜ್ಯ ರಾಜಕಾರಣದಲ್ಲಿ ಸಕ್ರಿಯವಾಗಿ ಮುಂದುವರೆಯುವ ನಿಲುವು ವ್ಯಕ್ತಪಡಿಸಿದ್ದರು ಎಂದು ಮೂಲಗಳು ತಿಳಿಸಿವೆ.

Sponsored

ರಾಜ್ಯದಲ್ಲಿ ಸಿಎಂ ಹುದ್ದೆ ಬದಲಾವಣೆ, ಸಂಪುಟ ವಿಸ್ತರಣೆ, ಡಿಸಿಎಂ ಹುದ್ದೆಗಳ ಹಂಚಿಕೆ ಹಾಗೂ ಕಾಂಗ್ರೆಸ್ನ ಮುಂದಿನ ರಾಜಕೀಯ ತಂತ್ರಗಳ ಕುರಿತು ದೆಹಲಿ ಸಭೆ, ಮಹತ್ವ ಪಡೆದಿದೆ. ಇದೇ ವೇಳೆ ರಾಜ್ಯಸಭಾ ಸ್ಥಾನಕ್ಕೆ ಸಂಬಂಧಿಸಿದ ಈ ಹೊಸ ಮಾಹಿತಿ ಕಾಂಗ್ರೆಸ್ ವಲಯದಲ್ಲಿ ಕುತೂಹಲಕ್ಕೆ ಕಾರಣವಾಗಿದ್ದು, ಸಿದ್ದರಾಮಯ್ಯ ಅವರ ರಾಜಕೀಯ ನಿರ್ಧಾರಗಳ ಬಗ್ಗೆ ಮತ ಚರ್ಚೆ ಆರಂಭವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಜೊತೆ ನಡೆಯಲಿರುವ ಸಭೆಯ ಬಳಿಕ ಸಂಪುಟ ಅಂತಿಮ ಚಿತ್ರಣ ಸ್ಪಷ್ಟವಾಗುವ ನಿರೀಕ್ಷೆಯಿದ್ದು, ರಾಜ್ಯ ರಾಜಕೀಯದಲ್ಲಿ ಮುಂದಿನ ಬೆಳವಣಿಗೆಗಳತ್ತ ಎಲ್ಲರ ಚಿತ್ತ ನೆಟ್ಟಿದೆ.

ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಗಳ ನಡುವೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತ ಅಚ್ಚರಿಯ ಮಾಹಿತಿ ಒಂದು ಹೊರ ಬಿದ್ದಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ರಾಜ್ಯಸಭಾ ಸದಸ್ಯತ್ವದ ಆಫರ್ ನೀಡಿದ್ದರು. ಆದರೆ ಈ ಪ್ರಸ್ತಾಪವನ್ನು ಸಿದ್ದರಾಮಯ್ಯ ಗೌರವಯುತವಾಗಿ ತಿರಸ್ಕರಿಸಿದ್ದಾರೆ ಎಂಬ ಮಾಹಿತಿ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.

ಮೂಲಗಳ ಪ್ರಕಾರ, ರಾಷ್ಟ್ರ ರಾಜಕಾರಣಕ್ಕೆ ಬರಲು ರಾಹುಲ್ ಗಾಂಧಿ ಸಿದ್ದರಾಮಯ್ಯ ಮೇಲೆ ಒತ್ತಡ ಹೇರಿದ್ದರು. ಒಂದು ವೇಳೆ ದೆಹಲಿ ರಾಜು ಕಾರಣಕ್ಕೆ ಬರಲು ಸಾಧ್ಯವಾಗದಿದ್ದರೆ, ಅವರ ಪತ್ನಿ ಪಾರ್ವತಿಯನ್ನು ರಾಜ್ಯಸಭೆಗೆ ಕಳುಹಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದರು ಎನ್ನಲಾಗಿದೆ. ಆದರೆ ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, "ನಾನು ರಾಜ್ಯ ರಾಜಕಾರಣದಲ್ಲಿ ಮುಂದುವರಿಯುತ್ತೇನೆ. ನನ್ನ ಪತ್ನಿ ಯಾವುದೇ ರಾಜಕೀಯ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ. ಹೀಗಾಗಿ ಆಕೆ ರಾಜ್ಯಸಭೆಗೆ ಹೋಗುವ ಪ್ರಶ್ನೆಯೇ ಇಲ್ಲ" ಎಂದು ಸ್ಪಷ್ಟಪಡಿಸಿದ್ದಾರೆಂದು ತಿಳಿದು ಬಂದಿದೆ.

ಅಷ್ಟೇ ಅಲ್ಲದೆ, ತಮಗೆ ನೀಡಲಾಗಿದ್ದ ಆ ಅವಕಾಶವನ್ನು ಹಿಂದುಳಿದ ವರ್ಗದ ಯೋಗ್ಯ ನಾಯಕರಿಗೆ ನೀಡುವಂತೆ ರಾಹುಲ್ ಗಾಂಧಿ ಬಳಿ ಮನವಿ ಮಾಡಿದ್ದಾರೆಂದು ಹೇಳಲಾಗುತ್ತಿದೆ. ಇದೇ ವೇಳೆ ಪುತ್ರ ಯತೀಂದ್ರರ ಸಿದ್ದರಾಮಯ್ಯ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಪ್ರಸ್ತಾಪವನ್ನು ಅವರು ಒಪ್ಪಿಲ್ಲ ಎನ್ನಲಾಗಿದೆ.

Sponsored

ಮೂವರಿಗೆ ಡಿಸಿಎಂ ಸ್ಥಾನ ನೀಡಲು ಸಿದ್ದು ಬಣದ ಒತ್ತಾಯ:

ಇನ್ನೊಂದೆಡೆ, ರಾಜ್ಯದಲ್ಲಿ ಹೆಚ್ಚುವರಿ ಉಪ ಮುಖ್ಯಮಂತ್ರಿ ಹುದ್ದೆಗಳ ಸೃಷ್ಟಿಗೆ ಸಿದ್ದರಾಮಯ್ಯ ಬಣ ತೀವ್ರ ಒತ್ತಡ ಹೇರುತ್ತಿದೆ. ಜಾತಿ ಸಮೀಕರಣವನ್ನು ಸಮತೋಲನಗೊಳಿಸುವ ಉದ್ದೇಶದಿಂದ ಕನಿಷ್ಠ ಮೂರು ಡಿಸಿಎಂ ಹುದ್ದೆಗಳನ್ನು ನೀಡಬೇಕು ಎಂಬುದು ಸಿದ್ದು ಬಣದ ವಾದವಾಗಿದೆ.

ಈ ಹಿನ್ನಲೆಯಲ್ಲಿ ಜಿ ಪರಮೇಶ್ವರ್, ಎಂ ಬಿ ಪಾಟೀಲ್ ಹಾಗೂ ಜಮೀರ್ ಅಹಮದ್ ಖಾನ್ ಅವರಿಗೆ ಉಪಮುಖ್ಯಮಂತ್ರಿ ಸ್ಥಾನ ನೀಡುವಂತೆ ಹೈಕಮಾಂಡ್ ಮಟ್ಟದಲ್ಲಿ ಸಿದ್ದರಾಮಯ್ಯ ಬ್ಯಾಟಿಂಗ್ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ದಲಿತ, ಲಿಂಗಾಯತ ಹಾಗೂ ಅಲ್ಪಸಂಖ್ಯಾತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡುವ ಉದ್ದೇಶದಿಂದ ಈ ಪ್ರಸ್ತಾಪ ಮುಂದಿಡಲಾಗಿದೆ ಎನ್ನಲಾಗಿದೆ.

ಸಚಿವ ಸಂಪುಟ ರಚನೆ, ಬಿಸಿಎಂ ಹುದ್ದೆಗಳ ಹಂಚಿಕೆ ಹಾಗೂ ಜಾತಿ ಸಮೀಕರಣದ ಲೆಕ್ಕಾಚಾರಗಳ ನಡುವೆ ಕಾಂಗ್ರೆಸ್ ಹೈಕಮಾಂಡ್ ಕೈಗೊಳ್ಳುವ ಅಂತಿಮ ನಿರ್ಧಾರ ಇದೀಗ ರಾಜ್ಯ ರಾಜಕೀಯದಲ್ಲಿ ತೀವ್ರ ಕುತೂಹಲವನ್ನು ಮೂಡಿಸಿದೆ.

Sponsored

ದೆಹಲಿಯಲ್ಲಿ ಹೈಕಮಾಂಡ್ ಫಿಲ್ಟರ್ : ಸಚಿವಾಕಾಂಕ್ಷಿಗಳಲ್ಲಿ ನಡುಕು! :

ಕರ್ನಾಟಕ ಸಚಿವ ಸಂಪುಟ ಪುನರಚನೆಗೆ ಸಂಬಂಧಿಸಿದ ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಸಭೆಗೂ ಮುನ್ನ ಸಚಿವಾಕಾಂಕ್ಷಿಗಳಲ್ಲಿ ತೀವ್ರ ಕುತೂಹಲ ಮತ್ತು ಆತಂಕ ಮನೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಬಣದ ಸಂಭಾವ್ಯ ಸಚಿವರ ಪಟ್ಟಿಯನ್ನು ಸಿದ್ಧಪಡಿಸಿಕೊಂಡಿದ್ದು, ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರಿಗೆ ಸಲ್ಲಿಸಲು ಮುಂದಾಗಿದ್ದಾರೆ.

ಸಿದ್ದರಾಮಯ್ಯ ಬಡದಿಂದ ಎ ಎಸ್ ಪೊನ್ನಣ್ಣ, ಶಿವರಾಜ್ ತಂಗಡಗಿ, ಪುಟ್ಟರಂಗಶೆಟ್ಟಿ, ಕೆ ವೆಂಕಟೇಶ್, ಬಸವರಾಜ ರಾಯರೆಡ್ಡಿ, ಬಿ.ಕೆ ಹರಿಪ್ರಸಾದ್, ಸಂತೋಷ್ ಲಾಡ್, ಎಚ್. ಸಿ.ಮಹದೇವಪ್ಪ, ಹಾಗೂ ಜಮೀರ್ ಅಹ್ಮದ್ ಖಾನ್ ಪ್ರಮುಖ ಸಚಿವ ಆಕಾಂಕ್ಷಿಗಳಾಗಿ ಗುರುತಿಸಿಕೊಂಡಿದ್ದಾರೆ. ಈಗಾಗಲೇ ಹಲವು ಆಕಾಂಕ್ಷಿಗಳು ದೆಹಲಿಯಲ್ಲಿ ಬಿಡು ಬಿಟ್ಟಿದ್ದು, ಹೈಕಮಾಂಡ್ ನ ಅಂತಿಮ ತೀರ್ಮಾನಕ್ಕಾಗಿ ಕಾಯುತ್ತಿದ್ದಾರೆ.

ಜಿಲ್ಲಾವಾರು ಸಮುದಾಯವಾರು ಸಮತೋಲನಕ್ಕೆ ಒತ್ತು:

Sponsored

ಈ ಬಾರಿ ಸಚಿವ ಸಂಪುಟ ರಚನೆಯಲ್ಲಿ ಜಿಲವಾರು ಮತ್ತು ಸಮುದಾಯವಾರು ಪ್ರಾತಿನಿಧ್ಯಕ್ಕೆ ವಿಶೇಷ ಆದ್ಯತೆ ನೀಡುವ ಸಾಧ್ಯತೆ ಇದೆ. ಹೈಕಮಾಂಡ್ ಪ್ರತಿ ರಾಜಕೀಯ ಲೆಕ್ಕಾಚಾರ ಹಾಗೂ ಜಾತಿ ಸಮೀಕರಣಗಳನ್ನು ಪರಿಶೀಲಿಸಿ ಅಂತಿಮ ಪಟ್ಟಿಗೆ ಮುದ್ರೆ ಒತ್ತಲಿದೆ ಎನ್ನಲಾಗುತ್ತಿದೆ.

ಹೈಕಮಾಂಡ್ ಸಭೆಯಲ್ಲಿ ಚರ್ಚೆಯಾಗಲಿರುವ 8 ಪ್ರಮುಖ ವಿಷಯಗಳು :

1. ಮೊದಲ ಹಂತದ ಸಚಿವರ ಆಯ್ಕೆ ಮತ್ತು ಪ್ರಮಾಣವಚನ ಸಮಾರಂಭದ ದಿನಾಂಕ

2. ಹಾಲಿ ಸಚಿವರಲ್ಲಿ ಯಾರನ್ನು ಮುಂದುವರಿಸಬೇಕು ಮತ್ತು ಯಾರನ್ನು ಕೈ ಬಿಡಬೇಕು ಎಂಬ ನಿರ್ಧಾರ

Sponsored

3. ಕೆಪಿಸಿಸಿ ಅಧ್ಯಕ್ಷ ಸ್ಥಾನ ಬದಲಾವಣೆ ಕುರಿತು ಚರ್ಚೆ

4. ರಾಜ್ಯಕ್ಕೆ ಹೆಚ್ಚುವರಿ ಡಿಸಿಎಂ ಹುದ್ದೆಗಳ ಅಗತ್ಯವಿದೆಯೇ ಎಂಬ ಪ್ರಶ್ನೆ

5. ಹೆಚ್ಚುವರಿ ಡಿಸಿಎಂ ಹುದ್ದೆ ಸೃಷ್ಟಿಯಾದರೆ ಯಾವ ಸಮುದಾಯಗಳಿಗೆ ಅವಕಾಶ ನೀಡಬೇಕು?

6. ಸರ್ಕಾರದ ಸುಗಮ ನಿರ್ವಹಣೆಗೆ ಸಮನ್ವಯ ಸಮಿತಿಯ ಅಥವಾ ಕೋರ್ ಕಮಿಟಿ ರಚನೆ

Sponsored

7. ಯತೀಂದ್ರ ಸಿದ್ದರಾಮಯ್ಯ ಅವರ ರಾಜಕೀಯ ಭವಿಷ್ಯ ಮತ್ತು ಸ್ಥಾನಮಾನ

8. ಮುಂಬರುವ ರಾಜ್ಯಸಭಾ ಚುನಾವಣೆ ಹಾಗೂ ಸಂಭಾವ್ಯ ಅಭ್ಯರ್ಥಿಗಳ ಆಯ್ಕೆ

ಬಿಸಿಎಂ ಹುದ್ದೆಗಳ ಬಗ್ಗೆ ತೀವ್ರ ಚರ್ಚೆ:

ಹೆಚ್ಚುವರಿ ಬಿಸಿಎಂ ಹುದ್ದೆಗಳ ಸೃಷ್ಟಿ ಕುರಿತಂತೆ ಕಾಂಗ್ರೆಸ್ ಒಳಗೆ ಗಂಭೀರ ಚರ್ಚೆಗಳು ನಡೆಯುತ್ತಿವೆ. ವಿವಿಧ ಸಮುದಾಯಗಳಿಗೆ ರಾಜಕೀಯ ಪ್ರಾತಿನಿಧ್ಯ ಕಲ್ಪಿಸುವ ಉದ್ದೇಶದಿಂದ ಒಂದಕ್ಕಿಂತ ಹೆಚ್ಚು ಡಿಸಿಎಂ ಹುದ್ದೆಗಳನ್ನು ನೀಡುವ ಪ್ರಸ್ತಾಪವು ಹೈಕಮಾಂಡ್ ಮುಂದೆ ಬರಲಿದೆ ಎನ್ನಲಾಗುತ್ತಿದೆ.

Sponsored

Also Read:

ಭಾರಿ ಸ್ಪೋಟದಿಂದ ನರ್ಮದಾ - ಕ್ಷಿಪ್ರ ಪೈಪ್ಲೈನ್ ಒಡೆದು ಸಾವಿರ ಅಡಿ ಎತ್ತರಕ್ಕೆ ಚಿಮ್ಮಿದ ನೀರು

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online