belagavi news :
ವಿಜಯಪುರದಲ್ಲಿ ಮಾತನಾಡಿದ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್, ಸಿಎಂ ಸಿದ್ದರಾಮಯ್ಯ ಎಂದಿಗೂ ದ್ವೇಷದ ರಾಜಕಾರಣ ಮಾಡಿಲ್ಲ ಎಂದು ಹೇಳಿ ಪ್ರಶಂಸಿಸಿದ್ದಾರೆ. ಇದೇ ವೇಳೆ, ಸಿದ್ದರಾಮಯ್ಯ ರಾಜೀನಾಮೆ ಕುರಿತ ವದಂತಿಗಳ ಹಿನ್ನೆಲೆ ಕೆಲವರು ಪಟಾಕಿ ಸೇರಿಸಿ ಸಂಭ್ರಮಿಸಿದ್ದನ್ನು ತೀವ್ರವಾಗಿ ಖಂಡಿಸಿದ ಯತ್ನಾಳ್, ಇಂತಹ ರಾಜಕಾರಣ ಸಂಸ್ಕೃತಿ ಒಳ್ಳೆಯದಲ್ಲ ಎಂದು ಹೇಳಿದ್ದಾರೆ.
ಇನ್ನೊಂದೆಡೆ, ಡಿಕೆಶಿ ಸಿಎಂ ಆದರೆ ಅವರ ಬಿಸಿನೆಸ್ ಪಾರ್ಟ್ನರ್ ಆಗಿರುವ ಬಿ ವೈ ವಿಜಯೇಂದ್ರ ಅವರಿಗೆ ಹೆಚ್ಚು ಸಂತೋಷವಾಗುತ್ತದೆ ಎಂದು ಸ್ವಪಕ್ಷದ ನಾಯಕ ಮೇಲೆಯೇ ಪರೋಕ್ಷ ವಾಗ್ದಾಳಿ ನಡೆಸಿದರು. ಜೊತೆಗೆ ಬಿಜೆಪಿ ರಾಜ್ಯಧ್ಯಕ್ಷ ವಿಜಯೇಂದ್ರ ಹಾಗೂ ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಮಾತನಾಡುವ ಮುನ್ನ ಎಚ್ಚರಿಕೆ ಇರಬೇಕು ಎಂದು ಸಲಹೆ ನೀಡಿದರು.
ಭೀಮಾ ತೀರ ಪ್ರದೇಶದಲ್ಲಿ ಹೆಚ್ಚುತ್ತಿರುವ ರೌಡಿ ಚಟುವಟಿಕೆಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಯತ್ನಾಳ್, ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಯಾವುದೇ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಅವರ ಈ ಹೇಳಿಕೆಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಬಿಜೆಪಿ ಹಾಗೂ ಕಾಂಗ್ರೆಸ್ ವಲಯಗಳಲ್ಲಿ ಸಾಕಷ್ಟು ಕುತೂಹಲ ಮೂಡಿಸಿವೆ.
ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಭಾನುವಾರ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ರಾಜ್ಯ ರಾಜಕೀಯ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್, ಹಾಗೂ ವಿಜಯಪುರದ ಕಾನೂನು ಸುವ್ಯವಸ್ಥೆ ಕುರಿತು ಹಲವು ಹೇಳಿಕೆಗಳನ್ನು ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ವಿರುದ್ಧ ಆಗಾಗ್ಗೆ ವಾಗ್ದಾಳಿ ನಡೆಸುವ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಈ ಬಾರಿ ಅಚ್ಚರಿ ಮೂಡಿಸುವ ರೀತಿಯಲ್ಲಿ ಅವರ ಬಗ್ಗೆ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
"ನಾನೊಬ್ಬ ಲಿಂಗಾಯತ ನಾಯಕನಾಗಿ ಸಿದ್ದರಾಮಯ್ಯನವರ ಬಗ್ಗೆ ಕೀಳಾಗಿ ಮಾತನಾಡುವುದಿಲ್ಲ. ಅವರು ಹಿರಿಯ ರಾಜಕಾರಣಿ ಹಾಗೂ ಅತಿ ಹೆಚ್ಚು ಬಾರಿ ಬಜೆಟ್ ಮಂಡಿಸಿದ ಅನುಭವಿ ನಾಯಕರು. ಅವರಲ್ಲಿರುವ ಒಂದು ವಿಶೇಷ ಗುಣವೇನೆಂದರೆ, ಅವರು ಎಂದಿಗೂ ವಯಕ್ತಿಕ ದ್ವೇಷ ಸಾಧಿಸುವುದಿಲ್ಲ. ನಾವು ಎಷ್ಟೇ ಟೀಕೆ ಮಾಡಿದರು, ವಿರೋಧಿಸಿದರು ಹಳೆಯ ಫೈಲ್ಗಳನ್ನು ತೆಗೆದು ದೇಶದ ರಾಜಕಾರಣ ಮಾಡುವವರಲ್ಲ"ಎಂದು ಯತ್ನಾಳ್ ಹೇಳಿದ್ದಾರೆ.
ಇದೇ ವೇಳೆ,"ಮುಂದೆ ಬರುವ ಕೆಲವು ನಾಯಕರು ಮಾತ್ರ ವಯಕ್ತಿಕ ದ್ವೇಷದ ರಾಜಕಾರಣ ಮಾಡುತ್ತಾರೆ"ಎಂದು ಪರೋಕ್ಷವಾಗಿ ಟಾಂಗ ನೀಡಿದ ಯತ್ನಾಳ್, ಸಿದ್ದರಾಮಯ್ಯ ಅವರ ರಾಜಕೀಯ ನಡವಳಿಕೆಯನ್ನು ಶ್ಲಾಘಿಸಿದ್ದಾರೆ. ಸಿದ್ದರಾಮಯ್ಯ ವಿರುದ್ಧ ಕಿಡಿಕಾರುತ್ತಿದ್ದ ಯತ್ನಾಳ್ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ರಾಜಕೀಯ ವಲಯದ ಗಮನ ಸೆಳೆದಿದೆ.
ಮುಖ್ಯಮಂತ್ರಿ ಬದಲಾವಣೆ ಕುರಿತಾಗಿ ಹರಿದಾಡುತ್ತಿರುವ ವದಂತಿಗಳ ನಡುವೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಮತ್ತೊಮ್ಮೆ ಸ್ವಪಕ್ಷದ ನಾಯಕರ ವಿರುದ್ಧವೇ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ.
" ಸಿದ್ದರಾಮಯ್ಯ ರಾಜೀನಾಮೆ ನೀಡಿದರೆ, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಆಗುತ್ತಾರೆ ಎಂಬ ಲೆಕ್ಕಾಚಾರದಲ್ಲಿ ಕೆಲವರು ದೆಹಲಿಗೆ ಓಡಾಡುತ್ತಿದ್ದಾರೆ. ಆದರೆ ಡಿಕೆ ಶಿವಕುಮಾರ್ ಸಿಎಂ ಆದರೆ ಅವರಿಗಿಂತಲೂ ಹೆಚ್ಚು ಖುಷಿ ಪಡುವವರು ನಮ್ಮ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ. ಅವರಿಬ್ಬರು ಬಿಸಿನೆಸ್ ಪಾರ್ಟ್ನರ್ ಗಳು"ಎಂಬ ಯತ್ನಾಳ್ ಹೇಳುವ ಮೂಲಕ ರಾಜಕೀಯ ವಲಯದಲ್ಲಿ ಹೊಸ ಸಂಚಲನ ಸೃಷ್ಟಿಸಿದ್ದಾರೆ.
ಸ್ವಪಕ್ಷದ ರಾಜ್ಯಾಧ್ಯಕ್ಷರ ಹೆಸರನ್ನೇ ಉಲ್ಲೇಖಿಸಿ ಟೀಕಿಸಿರುವ ಯತ್ನಾಳ್ ಅವರ ಹೇಳಿಕೆ ಬಿಜೆಪಿ ಒಳಗಿನ ಭಿನ್ನಮತದ ಚರ್ಚೆಯನ್ನು ಮತ್ತೊಮ್ಮೆ ಮುನ್ನೆಲೆಗೆ ತಂದಿದ್ದಾರೆ. ಮುಖ್ಯಮಂತ್ರಿ ಬದಲಾವಣೆ ಕುರಿತ ಊಹಾ ಪೋಹಗಳ ನಡುವೆಯೇ ಈ ಹೇಳಿಕೆ ಸಾಕಷ್ಟು ಗಮನ ಸೆಳೆಯುತ್ತಿದೆ.
ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿದ್ದಾರೆ ಎಂಬ ವದಂತಿ ಹರಿದಾಡಿದ್ದ ಸಂದರ್ಭದಲ್ಲಿ ವಿಜಯಪುರದಲ್ಲಿ ಕೆಲವರು ಪಟಾಕಿ ಸೇರಿಸಿ ಸಂಭ್ರಮಿಸಿದ್ದ ಘಟನೆ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
"ಸಿದ್ದರಾಮಯ್ಯನವರು ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಬಂದಾಗ ವಿಜಯಪುರದಲ್ಲಿ ಕೆಲವರು ಪಟಾಕಿ ಸಿಡಿಸಿ ಸಂಭ್ರಮಿಸಿದರು. ಸಿದ್ದರಾಮಯ್ಯನವರು ಯಾರಿಗೂ ಅನ್ಯಾಯ ಮಾಡಲ್ಲ. ಆದರೂ ಇಂತಹ ಸಂಭ್ರಮ ಏಕೆ ಮಾಡಲಾಯಿತು ಎಂಬುದು ಪ್ರಶ್ನೆ ಯಾಗಿದ್ದು, ಇದು ಕೆಲವರ ಮನಸ್ಥಿತಿಯನ್ನು ಪ್ರತಿಬಿಂಬಿಸುತ್ತದೆ"ಎಂದು ಯತ್ನಾಳ್ ಹೇಳಿದ್ದಾರೆ.
ಇದೇ ವೇಳೆ, ಸಮಾಜದಲ್ಲಿ ಸೌಹಾರ್ದತೆ ಮತ್ತು ಪರಸ್ಪರ ಗೌರವ ಕಾಪಾಡುವುದು ಅಗತ್ಯ ಎಂದು ಹೇಳಿದ ಅವರು, ಧರ್ಮ,ಸಂಸ್ಕೃತಿ ಮತ್ತು ಜನರ ಹಿತಾಸಕ್ತಿಗೆ ಆದ್ಯತೆ ನೀಡಬೇಕು ಎಂದು ಅಭಿಪ್ರಾಯಪಟ್ಟರು.ಯತ್ನಾಳ್ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು,ವಿಜಯಪುರದ ಘಟನೆಯ ಘಟನೆಯ ಬಗ್ಗೆ ಮತ್ತೆ ಗಮನ ಸೆಳೆಯುವಂತಾಗಿದೆ.
ಭೀಮಾ ತೀರ ಪ್ರದೇಶದಲ್ಲಿ ಮತ್ತೆ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳು ಮತ್ತು ಸರಣಿ ಕೊಲೆಗಳ ಬಗ್ಗೆ ಶಾಸಕ ಬಸವನಗೌಡ ಪಾಟೀಲ ಯತ್ನಾಳ ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ.
ವಿಜಯಪುರ ಜಿಲ್ಲೆಯ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವ ಬಗ್ಗೆ ಕಳವಳ ವ್ಯಕ್ತಪಡಿಸಿದ ಅವರು,ರೌಡಿಗಳ ಹಾವಳಿಯನ್ನು ನಿಯಂತ್ರಿಸಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
"ಭೀಮಾ ತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿಸುತ್ತಿದೆ. ಸರಣಿ ಕೊಲೆಗಳು ನಡೆಯುತ್ತಿವೆ. ಈ ಹಿಂದೆ ಪರ pratap reddy ಎಸ್ ಪಿ ಆಗಿದ್ದಾಗ ಇಂತಹ ಚಟುವಟಿಕೆಗಳನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲಾಗುತ್ತಿತ್ತು. ಆದರೆ ಈಗ ಮತ್ತೆ ರೌಡಿಗಳ ಅಟ್ಟಹಾಸ ಹೆಚ್ಚಾಗಿದ್ದು, ಪೊಲೀಸ್ ಇಲಾಖೆಯ ಭಯವೇ ಇಲ್ಲದಂತಾಗಿದೆ"ಎಂದು ಯತ್ನಾಳ್ ಹೇಳಿದ್ದಾರೆ.
ಯಾವುದೇ ರಾಜಕೀಯ ಒತ್ತಡಕ್ಕೆ ಮಣಿಯದೆ, ತಪ್ಪಿತಸ್ಥರು ಎಷ್ಟೇ ಪ್ರಭಾವಿಗಳಾಗಿದ್ದರು ಅವರ ವಿರುದ್ಧ ನಿರ್ಧಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಪೊಲೀಸ್ ಇಲಾಖೆಗೆ ಸಲಹೆ ನೀಡಿದ ಅವರು, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಕಟ್ಟುನಿಟ್ಟಿನ ಕ್ರಮ ಅಗತ್ಯ ಎಂದು ಒತ್ತಾಯಿಸಿದರು. ಇಲ್ಲದಿದ್ದರೆ ಸಾರ್ವಜನಿಕರ ವಿಶ್ವಾಸ ಪೊಲೀಸ್ ವ್ಯವಸ್ಥೆ ಮೇಲೆ ಕುಸಿಯುವ ಅಪಾಯವಿದೆ ಎಂದು ಎಚ್ಚರಿಸಿದರು.
Also Read:
RCB ಕಪ್ ಗೆಲ್ಲಲಿ ಎಂದು ದಾವಣಗೆರೆಯಲ್ಲಿ ವಿಶೇಷ ಪ್ರಾರ್ಥನೆ