BELAGAVI NEWS :
2028 ರ ಚುನಾವಣೆ ಸಿದ್ದರಾಮಯ್ಯ ನೇತೃತ್ವದಲ್ಲೇ : ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ
ವಿಧಾನಸಭಾ ಚುನಾವಣೆಯನ್ನು ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಎದುರಿಸಲಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಪಕ್ಷ ಸಂಘಟನೆಗೆ ಆಗಮಿಸಲಿದ್ದಾರೆ. "ನಾವು ಮೊದಲಿನಿಂದಲೂ ಅದನ್ನೇ ಹೇಳುತ್ತಿದ್ದೇವೆ. ಎಲ್ಲರೂ ಅದನ್ನೇ ಹೇಳುತ್ತಿದ್ದಾರೆ. ಮುಂದಿನ ಚುನಾವಣೆಯಲ್ಲಿ ಅವರ ನಾಯಕತ್ವದಲ್ಲಿಯೇ ಪಕ್ಷ ಮುನ್ನಡೆಯಲ್ಲಿದೆ" ಎಂದು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಡೆಗಣಿಸುವ ಪ್ರಶ್ನೆ ಇಲ್ಲ ಎಂದು ಸ್ಪಷ್ಟಪಡಿಸಿದ ಸಚಿವರು, ಅವರ ಅನುಭವ ಮತ್ತು ನಾಯಕತ್ವ ಮುಂದುವರೆಯಲಿದೆ ಎಂದರು.
ಇದೇ ವೇಳೆ ಅಹಿಂದ್ ನಾಯಕತ್ವದ ಕುರಿತು ನಡೆಯುತ್ತಿರುವ ಚರ್ಚೆ ಬಗ್ಗೆ ಪ್ರತಿಕ್ರಿಸಿದ ಅವರು, "ರೋಹಿತ್ ನಾಯಕತ್ವ ಯಾರೂ ವಹಿಸಿಕೊಳ್ಳುತ್ತಾರೆ ಎಂಬುದನ್ನು ಈಗಲೇ ಚರ್ಚಿಸುವ ಅಗತ್ಯವಿಲ್ಲ. ಕಾಲಕಾಲಕ್ಕೆ ಎಲ್ಲವೂ ಗೊತ್ತಾಗುತ್ತದೆ. ಈ ವಿಚಾರಕ್ಕೆ ಹೆಚ್ಚಿನ ಪ್ರಾಮುಖ್ಯತೆ ನೀಡುವ ಅಗತ್ಯವಿಲ್ಲ" ಎಂದು ಹೇಳಿದರು.
ಸತೀಶ್ ಜಾರಕಿಹೊಳಿ ಅವರ ಈ ಹೇಳಿಕೆ ರಾಜ್ಯ ಕಾಂಗ್ರೆಸ್‌ನ ಮುಂದಿನ ರಾಜಕೀಯ ತಂತ್ರಗಾರಿಕೆ ಹಾಗೂ 2026ರ ಚುನಾವಣೆಯ ಸಿದ್ಧತೆಗಳ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.
ಬೆಳಗಾವಿಗೆ ಮೂರು ಸಚಿವ ಸ್ಥಾನ ನೀಡಬೇಕು : ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ
ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಗೆ ಸಚಿವ ಸಂಪುಟದಲ್ಲಿ ಮೂರು ಸ್ಥಾನಗಳನ್ನು ನೀಡಿದರೆ ಉತ್ತಮವಾಗಲಿದೆ ಎಂದು ಲೋಕಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಚಿವ ಸ್ಥಾನ ಯಾರಿಗೆ ನೀಡಬೇಕು ಎಂಬ ಬಗ್ಗೆ ತಾವು ಯಾವುದೇ ಶಿಪಾರಸ್ಸು ಮಾಡಿಲ್ಲ. ಈ ಕುರಿತು ಅಂತಿಮ ತೀರ್ಮಾನವನ್ನು ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳಲಿದೆ ಎಂದರು.
"ಜಿಲ್ಲೆಯವರು ನಮ್ಮನ್ನು ಸಂಪರ್ಕ ಮಾಡಿಲ್ಲ. ಮುಂದಿನ ಚುನಾವಣೆಗೆ ಯಾರು ಅನುಕೂಲವಾಗುತ್ತಾರೆ ಎಂಬುದನ್ನು ಗಮನದಲ್ಲಿಟ್ಟುಕೊಂಡು ಪಕ್ಷ ತೀರ್ಮಾನ ಕೈಗೊಳ್ಳಲಿದೆ" ಎಂದು ಜಾರಕಿಹೊಳಿ ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದವರು, "ಸಂಪುಟ ವಿಸ್ತರಣೆ ಯಾವಾಗ ಬೇಕಾದರೂ ಆಗಲಿ, ಬೇಗ ಆಗಲಿ ಎಂಬುದು ನಮ್ಮ ಆಶಯ" ಎಂದರು. ಇದೇ ವೇಳೆ ಮಾಜಿ ಸಚಿವ ಬಿ.ಕೆ.ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ನಮಗೆ ಮಾಹಿತಿ ಇಲ್ಲ ಎಂದು ಸ್ಪಷ್ಟಪಡಿಸಿದರು.
ಎಸ್ ಐ ಆರ್ ಕುರಿತು ಸರ್ಕಾರ ದುರುಪಯೋಗಪಡಿಸಿಕೊಳ್ಳುತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಸಿದ ಸಚಿವರು, ಎಸ್ಐಆರ್ ಸುಗಮವಾಗಿ ನಡೆಯುತ್ತಿದೆ. ನಿಗದಿತ ಸಮಯದಲ್ಲಿ ಎಲ್ಲವೂ ಪೂರ್ಣಗೊಳ್ಳಲಿದೆ ಎಂದರು.
ಚುನಾವಣಾ ಆಯೋಗ ದೆಹಲಿಯಲ್ಲಿದ್ದು, ಯಾವುದೇ ಸಮಸ್ಯೆ ಇದ್ದರೆ ಅಲ್ಲಿಗೆ ದೂರು ನೀಡಬಹುದು. ಈಗಾಗಲೇ ಕೆಲವರು ದೂರು ನೀಡಿದ್ದಾರೆ, ಅದರ ಬಗ್ಗೆ ಸೂಕ್ತ ಪರಿಶೀಲನೆ ನಡೆಯಲಿದೆ ಎಂದು ಸತೀಶ್ ಜಾರಕಿಹೊಳಿ ಹೇಳಿದರು.
ರಾಮ ಮಂದಿರ ಹುಂಡಿ ಕಳ್ಳತನ ಪ್ರಕರಣ ಗಂಭೀರ : ತಪ್ಪಿತಸ್ಥರ ವಿರುದ್ಧ ಕ್ರಮ ಅಗತ್ಯ ಎಂದು ಸತೀಶ್ ಜಾರಕಿಹೊಳಿ
ರಾಮ ಮಂದಿರದ ಹುಂಡಿ ಕಳ್ಳತನ ಪ್ರಕರಣ ಗಂಭೀರ ವಿಷಯವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಯಬೇಕು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ.
ಪ್ರಕರಣದ ತನಿಖೆ ಈಗಾಗಲೇ ನಡೆಯುತ್ತಿದೆ.ತನಿಖೆ ಸರಿಯಾದ ದಿಕ್ಕಿನಲ್ಲಿ ಸಾಗಬೇಕು ಹಾಗೂ ತಪಿತಸ್ಥರು ಯಾರೇ ಆಗಿದ್ದರು ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದರು.
ಇದೇ ವೇಳೆ ಆರ್ ಎಸ್ ಎಸ್ ಕುರಿತು ಪ್ರತಿಕ್ರಿಸಿದ ಸಚಿವರು, "ಆರ್ ಎಸ್ ಎಸ್ ಹೇಳಿದರು ಅದು ಬಹಿರಂಗವಾಗಿ ಬರುವುದಿಲ್ಲ, ಗುಪ್ತವಾಗಿಯೇ ಇರುತ್ತದೆ" ಎಂದು ಹೇಳಿದರು.
ಬೆಳಗಾವಿಯಲ್ಲಿ ಮಳೆಹಾನಿ : ಸಮೀಕ್ಷೆ ಬಳಿಕ ಪರಿಹಾರ
ಬೆಳಗಾವಿ ಜಿಲ್ಲೆಯಲ್ಲಿ ಮಳೆಯ ಪ್ರಮಾಣದ ಬಗ್ಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ಈಗಾಗಲೇ ಅರ್ಧದಷ್ಟು ಮಳೆಯಾಗಿದೆ. ಜಲಾಶಯಗಳಿಗೆ ನೀರು ಬಂದಿದೆ. ಮುಂದೆಯೂ ಮಳೆಯ ನಿರೀಕ್ಷೆ ಇದೆ ಎಂದರು.
ಕೆಲವು ಪ್ರದೇಶಗಳಲ್ಲಿ ಮಳೆಯ ಕೊರತೆಯಿಂದ ಬೆಳೆ ಹಾನಿಯಾಗಿರುವ ಬಗ್ಗೆ ಮಾಹಿತಿ ಇದ್ದು, ಅಂತಹ ಪ್ರದೇಶಗಳಲ್ಲಿ ಸಮೀಕ್ಷೆ ನಡೆಸಲಾಗುವುದು. ಜಿಲ್ಲಾಧಿಕಾರಿಗಳ ವರದಿ ಆಧಾರದ ಮೇಲೆ ಪರಿಹಾರ ನೀಡುವ ಕುರಿತು ಸರ್ಕಾರ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದರು.
ಕೆಲವು ಕಡೆ ಬೆಳೆ ಉತ್ತಮವಾಗಿದ್ದರೆ, ಇನ್ನು ಕೆಲವು ಕಡೆ ಬೆಳೆ ನಷ್ಟವಾಗಿದೆ. ಸಮೀಕ್ಷೆಯ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.
ಸಾಲ ಮನ್ನಾ ಕುರಿತು ಸರ್ಕಾರ ತೀರ್ಮಾನಿಸಲಿದೆ
ರೈತರ ಸಾಲ ಮನ್ನಾ ಕುರಿತು ಪ್ರತಿಕ್ರಿಯಿಸಿದ ಸಚಿವರು, ಈ ವಿಚಾರ ಸರ್ಕಾರದ ಮಟ್ಟದಲ್ಲಿ ಚರ್ಚೆಯಾಗಬೇಕು. ಇದು ತಮ್ಮ ಹಂತದ ನಿರ್ಧಾರವಲ್ಲ ಎಂದು ಹೇಳಿದರು.
ಹಾಲಿನ ದರ ಹೆಚ್ಚಳದ ಬೇಡಿಕೆ ಕುರಿತು ಮಾತನಾಡಿದ ಅವರು, ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲ. ಸಂಬಂಧಿಸಿದ ಸಚಿವರು ಬಂದ ಬಳಿಕ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದರು.