Belagavi News:
ಕರ್ನಾಟಕ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರನ್ನು ಭೇಟಿ ಮಾಡಿ ಮಹತ್ವದ ಸಭೆ ನಡೆಸಿದ್ದರು. ರಾಜ್ಯ ರಾಜಕೀಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳ ನಡುವೆ ಈ ಬೇಟಿ ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಮುಖ್ಯಮಂತ್ರಿ ಸ್ಥಾನ ತ್ಯಜಿಸಿದ ಒಂದು ದಿನದ ಬಳಿಕವೇ ಸಿದ್ದರಾಮಯ್ಯ ದೆಹಲಿ ಪ್ರವಾಸ ಕೈಗೊಂಡಿದ್ದು, ಕಾಂಗ್ರೆಸ್ ಹೈಕಮಾಂಡ್ ಜೊತೆಗೆ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಸುಧೀರ್ಘ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ದೆಹಲಿಗೆ ಆಗಮಿಸಿದ ಸಿದ್ದರಾಮಯ್ಯ ಅವರು ಮೊದಲಿಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ನಿವಾಸಕ್ಕೆ ಭೇಟಿ ನೀಡಿದರು. ಈ ವೇಳೆ ಲೋಕಸಭೆಯ ಪ್ರತಿ ಪಕ್ಷ ನಾಯಕ ರಾಹುಲ್ ಗಾಂಧಿ ಅವರೊಂದಿಗೆ ಮಹತ್ವದ ಮಾತು ಕಥೆ ನಡೆಸಿದರು ಎನ್ನಲಾಗಿದೆ. ರಾಜ್ಯದ ನಾಯಕತ್ವ ಬದಲಾವಣೆ, ಕಾಂಗ್ರೆಸ್ ಸಂಘಟನೆ ಹಾಗೂ ಮುಂದಿನ ರಾಜಕೀಯ ತಂತ್ರಗಳ ಕುರಿತು ಚರ್ಚೆ ನಡೆದಿರುವ ಸಾಧ್ಯತೆ ಇದೆ.
ಸಿದ್ದರಾಮಯ್ಯ ರಾಜೀನಾಮೆ ಬಳಿಕ ಕರ್ನಾಟಕ ಕಾಂಗ್ರೆಸ್ ನಲ್ಲಿ ಹೊಸ ನಾಯಕತ್ವ ಸಮೇಕರಣಗಳು ಜೋರಾಗಿ ಕೇಳಿ ಬರುತ್ತಿದೆ. ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೆ ಏರಲಿದ್ದಾರೆ ಎಂಬ ಚರ್ಚೆಗಳ ನಡುವೆ, ಸಿದ್ದರಾಮಯ್ಯ ಅವರ ದೆಹಲಿ ಭೇಟಿ ರಾಜಕೀಯ ಮಹತ್ವ ಪಡೆದುಕೊಂಡಿದೆ.
ರಾಜ್ಯದ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುವುದರ ಬಗ್ಗೆ ಕಾಂಗ್ರೆಸ್ ವಲಯದಲ್ಲಿ ತೀವ್ರ ಕುತೂಹಲ ನಿರ್ಮಾಣವಾಗಿದೆ. ದೆಹಲಿ ಭೇಟಿಯ ಬಳಿಕ ರಾಜ್ಯ ರಾಜಕಾರಣದಲ್ಲಿ ಇನ್ನಷ್ಟು ಬದಲಾವಣೆಗಳು ಸಂಭವಿಸುವ ಸಾಧ್ಯತೆಯು ಇದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ದೆಹಲಿಯಲ್ಲಿ ಸಿದ್ದರಾಮಯ್ಯ ಹೈಕಮಾಂಡ್ ಭೇಟಿ ; ರಾಹುಲ್ ಗಾಂಧಿ, ಖರ್ಗೆ ಜೊತೆ ಮಹತ್ವದ ಚರ್ಚೆ :
ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೆಹಲಿಗೆ ತೆರಳಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ನಾಯಕರದ ರಾಹುಲ್ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಮಹತ್ವದ ಸಭೆ ನಡೆಸಿದರು. ಈ ಬೇಟಿ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲಕ್ಕೆ ಕಾರಣವಾಗಿದೆ.
ಚರ್ಚೆಯ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಐಸಿಸಿ ರಾಜ್ಯ ಉಸ್ತುವಾರಿ ರಣದೀಪ ಸಿಂಗ್ ಸುರ್ಜಿವಾಲ್,"ಸಿದ್ದರಾಮಯ್ಯ ಅವರು ಇಂದು ರಾಹುಲ್ ಗಾಂಧಿ ಅವರನ್ನು ಭೇಟಿಯಾದರು ಇದು ತುಂಬಾ ಆಹ್ಲಾದಕರವಾದ ಭೇಟಿಯಾಗಿತ್ತು. ಈ ಸಂದರ್ಭದಲ್ಲಿ ಹಲವಾರು ರಾಜಕೀಯ ವಿಷಯಗಳ ಬಗ್ಗೆ ಚರ್ಚೆ ನಡೆಯಿತು" ಎಂದು ತಿಳಿಸಿದ್ದಾರೆ.
ಬಳಿಕ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ನಿವಾಸಕ್ಕೆ ಭೇಟಿ ನೀಡಿ ಕೆಲವೊಂದು ಮಹತ್ವದ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ, ಮಾಜಿ ಶಾಸಕ ಪ್ರಿಯಾಂಕ್ ಖರ್ಗೆ, ಶಾಸಕ ಕೆ.ಜೆ ಜಾರ್ಜ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.
ಈ ಬಗ್ಗೆ ಸ್ವತಹ ಸಿದ್ದರಾಮಯ್ಯ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, "ಇಂದು ದೆಹಲಿಯಲ್ಲಿ ನಾನು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಮತ್ತು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿ ಚರ್ಚೆ ನಡೆಸಿದೆ. ಈ ಸಮಯದಲ್ಲಿ ಶಾಸಕರಾದ ಕೆ.ಜೆ.ಜಾರ್ಜ್ ಪ್ರಿಯಾಂಕ್ ಖರ್ಗೆ, ಡಾ.ಯತಿಂದ್ರ ಸಿದ್ದರಾಮಯ್ಯ, ನನ್ನೊಂದಿಗೆ ಇದ್ದರು" ಎಂದು ತಿಳಿಸಿದ್ದಾರೆ.
ಸಿದ್ದರಾಮಯ್ಯ ರಾಜೀನಾಮೆ ಬಳಿಕ ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ ಚರ್ಚೆಗಳು ಜೋರಾಗಿದ್ದು, ಡಿಕೆ ಶಿವಕುಮಾರ್ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಸಾಧ್ಯತೆಗಳ ನಡುವೆ ಈ ದೆಹಲಿ ಭೇಟಿ ಮತ್ತಷ್ಟು ರಾಜಕೀಯ ಮಹತ್ವ ಪಡೆದುಕೊಂಡಿದೆ.
ರಾಜ್ಯದ ಮುಂದಿನ ರಾಜಕೀಯ ಬೆಳವಣಿಗೆಗಳ ಕುರಿತು ಕಾಂಗ್ರೆಸ್ ಹೈಕಮಾಂಡ್ ಯಾವ ನಿರ್ಧಾರ ಕೈಗೊಳ್ಳಲಿದೆ ಎಂಬುದರ ಬಗ್ಗೆ ತೀವ್ರ ಕುತೂಹಲ ನಿರ್ಮಾಣವಾಗಿದ್ದು, ದೆಹಲಿ ಸಭೆಗಳತ್ತ ರಾಜ್ಯ ರಾಜಕೀಯದ ಗಮನ ನೆಟ್ಟಿದೆ.
ಮುಂದಿನ ಸಿಎಂಐಕೆ ಹೈಕಮಾಂಡ್ ತೀರ್ಮಾನ :
ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಪ್ರಶ್ನೆ ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ನಡುವೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ನಾಯಕರೊಂದಿಗೆ ಮಹತ್ವದ ಮಾತುಕತೆ ನಡೆಸಿದ್ದಾರೆ.
ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ,"ಮುಂದಿನ ಮುಖ್ಯಮಂತ್ರಿ ಯಾರೆಂಬುದನ್ನು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಹಾಗೂ ಹೈಕಮಾಂಡ್ ತೀರ್ಮಾನಿಸಲಿದೆ" ಎಂದು ಸ್ಪಷ್ಟಪಡಿಸಿದರು. ಆದರೆ, ನೀವು ರಾಜ್ಯಸಭೆಗೆ ಬರಲು ನಿರಾಕರಿಸಿದ್ದೀರಾ ಎಂಬ ಪ್ರಶ್ನೆಗೆ ಯಾವುದೇ ಉತ್ತರ ನೀಡದೆ ತೆರಳಿರುವುದು ರಾಜಕೀಯ ವಲಯದಲ್ಲಿ ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ದೆಹಲಿಗೆ ತೆರಳಿ ಕಾಂಗ್ರೆಸ್ ಹೈಕಮಾಂಡ್ ನಾಯಕರ ರಾಹುಲ್ ಗಾಂಧಿ, ಮಲ್ಲಿಕಾರ್ಜುನ್ ಖರ್ಗೆ ಸೇರಿದಂತೆ ಹಿರಿಯ ನಾಯಕರನ್ನು ಭೇಟಿ ಮಾಡಿ ರಾಜ್ಯದ ರಾಜಕೀಯ ಬೆಳವಣಿಗೆಗಳ ಕುರಿತು ಸುದೀರ್ಘ ಚರ್ಚೆ ನಡೆಸಿದರು.
ಮೂಲಗಳ ಪ್ರಕಾರ, ಹೈಕಮಾಂಡ್ ಜೊತೆಗಿನ ಮಾತು ಕಥೆಯಲ್ಲಿ ಹೊಸ ಸಚಿವ ಸಂಪುಟ ರಚನೆ ಹೇಳಿ ತಮ್ಮ ಆಪ್ತ ನಾಯಕರಿಗೆ ಅವಕಾಶ ನೀಡುವಂತೆ ಸಿದ್ದರಾಮಯ್ಯ ಮಾಡಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲದೆ, ಪುತ್ರ ಡಾ. ಯತೀಂದ್ರ ಸಿದ್ದರಾಮಯ್ಯ ಅವರಿಗೆ ಮಹತ್ವದ ಮಂತ್ರಿ ಸ್ಥಾನ ನೀಡುವ ಕುರಿತಾಗಿಯೂ ಚರ್ಚೆ ನಡೆದಿರಬಹುದು ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳು ಬರುತ್ತವೆ.
ಇದೇ ವೇಳೆ, ಹೊಸ ಸರ್ಕಾರ ರಚನೆಯ ಬಳಿಕ ಯಾವುದೇ ಗೊಂದಲ ಅಥವಾ ಬಿಕ್ಕಟ್ಟು ಉಂಟಾಗದಂತೆ ಪಕ್ಷವನ್ನು ಒಗ್ಗೂಡಿಸಿಕೊಂಡು ಹೋಗುವಲ್ಲಿ ಸಿದ್ದರಾಮಯ್ಯ ಅವರ ಮಾರ್ಗದರ್ಶನ ಅಗತ್ಯ ಎಂಬ ಅಭಿಪ್ರಾಯವೂ ಹೈಕಮಾಂಡ್ ಮಟ್ಟದಲ್ಲಿ ವ್ಯಕ್ತವಾಗಿದೆ ಎಂದು ತಿಳಿದು ಬಂದಿದೆ.
ರಾಜ್ಯ ಕಾಂಗ್ರೆಸ್ ನಲ್ಲಿ ನಾಯಕತ್ವ ಬದಲಾವಣೆ, ಸಚಿವ ಸಂಪುಟ ರಚನೆ ಹಾಗೂ ಹೈಕಮಾಂಡ್ ಮುಂದಿನ ಹೆಜ್ಜೆಗಳ ಬಗ್ಗೆ ತೀವ್ರ ಕುತೂಹಲ ಮುಂದುವರೆದಿದ್ದು, ದೆಹಲಿ ಸಭೆಗಳು ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪ್ರಭಾವ ಬೀರುವ ಸಾಧ್ಯತೆ ಇದೆ.
Also Read :
ಕಾಂಗ್ರೆಸ್ ನಲ್ಲಿ ದೊಡ್ಡ ಬದಲಾವಣೆ ! ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಸ್ಥಾನದ ಆಫರ್