Belagavi News:
ಬೆಂಗಳೂರು (ಮೇ 21): ಮೆಡಿಕಲ್ ಆಕಾಂಕ್ಷಿಗಳಿಗೆ ರಾಜ್ಯಗಳು ಸ್ವಾತಂತ್ರವಾಗಿ CET ಪರೀಕ್ಷೆ ನಡೆಸಲು ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಆಗ್ರಹಿಸಿದ್ದಾರೆ.
Indian Youth Congress ವತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಆಯೋಜಿಸಿದ್ದ NEET ಪರೀಕ್ಷೆ ಅಕ್ರಮ ಖಂಡನಾ ಪ್ರತಿಭಟನೆಯಲ್ಲಿ ಮಾತನಾಡಿದ ಸಿಎಂ, "ಒಕ್ಕೂಟ ವ್ಯವಸ್ಥೆ ಎಂಬುದರ ಅರ್ಥವನ್ನು ಕೇಂದ್ರ ಸರ್ಕಾರ ಮರೆತಂತಾಗಿದೆ" ಎಂದು ವಾಗ್ದಾಳಿ ನಡೆಸಿದರು.
NEET ಪರೀಕ್ಷೆಯ ಪಾರದರ್ಶಕತೆ ಹಾಗೂ ಅಕ್ರಮಗಳ ಬಗ್ಗೆ ಆತಂಕ ವ್ಯಕ್ತಪಡಿಸಿದ ಅವರು, "ರಾಜ್ಯಗಳಲ್ಲಿ ಯಶಸ್ವಿಯಾಗಿ ಜಾರಿಯಲ್ಲಿರುವ CET ಮಾದರಿ ಯನ್ನು ಕೇಂದ್ರ ಸರ್ಕಾರ NEET ಪರೀಕ್ಷೆಗೆ ಅಳವಡಿಸಿಕೊಳ್ಳಬೇಕು. ಅದು ಸಾಧ್ಯವಾಗದಿದ್ದರೆ, ವೈದ್ಯಕೀಯ ಪ್ರವೇಶ ಪರೀಕ್ಷೆ ನಡೆಸಲು ರಾಜ್ಯಗಳಿಗೆ ಸ್ವಾತಂತ್ರ ಅಧಿಕಾರ ನೀಡಬೇಕು" ಎಂದು ಒತ್ತಾಯಿಸಿದರು.
ರಾಜ್ಯದ ವಿದ್ಯಾರ್ಥಿಗಳ ಹಿತಾಸಕ್ತಿ ಮತ್ತು ಪ್ರಾದೇಶಿಕ ಶಿಕ್ಷಣ ವ್ಯವಸ್ಥೆಯ ವೈಶಿಷ್ಟ್ಯ ಗಳನ್ನು ಗಮನದಲ್ಲಿಟ್ಟುಕೊಂಡು ವೈದ್ಯಕೀಯ ಪ್ರವೇಶ ಪ್ರಕ್ರಿಯೆಯಲ್ಲಿ ರಾಜ್ಯಗಳಿಗೆ ಹೆಚ್ಚಿನ ಸ್ವಾಯತ್ತತೆ ಅಗತ್ಯವಿದೆ ಎಂದು ಸಿದ್ದರಾಮಯ್ಯ ಅಭಿಪ್ರಾಯ ಪಟ್ಟರು.
ಮಾಜಿ ಮುಖ್ಯಮಂತ್ರಿಗಳಾದ ಬಸವರಾಜ ಬೊಮ್ಮಾಯಿ, ಮತ್ತು ಬಿ. ಎಸ್. ಯಡಿಯೂರಪ್ಪ ಅಧಿಕಾರದಲ್ಲಿದ್ದ ಅವಧಿಯಲ್ಲೇ PSI ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ ನಡೆದಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆರೋಪಿಸಿದರು.
"ADGP ಮಟ್ಟದ ಅಧಿಕಾರಿಯೇ ಜೈಲಿಗೆ ಹೋಗುವಂತ ಪರಿಸ್ಥಿತಿ ಹಿಂದೆ ಕಂಡಿರಲಿಲ್ಲ. ಬಿಜೆಪಿ ಸರ್ಕಾರದ ಅವಧಿಯಲ್ಲಿ ನಿರಂತರವಾಗಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳು ನಡೆದಿವೆ. ಇದಕ್ಕೆ ಯಾರು ಹೊಣೆ? ಇದರ ರಾಜಕೀಯ ಮತ್ತು ಆಡಳಿತಾತ್ಮಕ ಜವಾಬ್ದಾರಿ ಹೊರುವವರು ಪ್ರಧಾನಿ ನರೇಂದ್ರ ಮೋದಿ ಎಂದು ಅವರು ಕಿಡಿಕಾರಿದರು.
NEET ಮತ್ತು PSI ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಕಾಪಾಡಲು ಕೇಂದ್ರ ಮತ್ತು ರಾಜ್ಯಮಟ್ಟದಲ್ಲಿ ಕಟ್ಟುನಿಟ್ಟಿನ ಕ್ರಮ ಅಗತ್ಯವಿದೆ ಎಂದು ಒತ್ತಾಯಿಸಿದರು .
Also Read: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಪಾಕಿಸ್ತಾನಕ್ಕೆ ಭಾರತದ ತಿರುಗೇಟು