Belagavi News:
ಬೆಂಗಳೂರು ನಗರದಲ್ಲಿ ಸುರಿದ ಭಾರೀ ಮುಂಗಾರು ಮಳೆಯ ಪರಿಣಾಮ ಹಲವೆಡೆ ರಸ್ತೆಗಳು ಜಲಾವೃತಗೊಂಡು ಕೆರೆಯಂತಾಗಿವೆ. ಪ್ರಮುಖ ರಸ್ತೆಗಳು ಹಾಗೂ ಒಳಚರಂಡಿ ನೀರಿನಿಂದ ತುಂಬಿ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ವಾಹನ ಸವಾರರು ತೀವ್ರ ಪರದಾಟ ಅನುಭವಿಸಿದ್ದಾರೆ.
ಮಳೆಯ ಅಬ್ಬರದಿಂದ ಹಲವು ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿ ಸಾರ್ವಜನಿಕರು ಗಂಟೆಗಟ್ಟಲೆ ವಾಹನಗಳಲ್ಲಿ ಸಿಲುಕಿಕೊಂಡರು. ರಸ್ತೆಗಳ ಮೇಲೆ ನೀರು ನಿಂತ ಪರಿಣಾಮ ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಎದುರಿಸಿದರು.
ನಗರದ ಟಗುಪ್ರದೇಶಗಳಲ್ಲಿ ನೀರು ಮನೆಗಳು ಮತ್ತು ಅಂಗಡಿಗಳಿಗೆ ನುಗ್ಗಿದ ವರದಿಗಳು ಕೇಳಿಬಂದಿವೆ. ಹವಾಮಾನ ಇಲಾಖೆ ಇನ್ನೂ ಕೆಲವು ದಿನಗಳ ಕಾಲ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ.
ಮಳೆ ನೀರು ಸರಾಗವಾಗಿ ಹರಿದು ಹೋಗಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಾರ್ವಜನಿಕರು ನಗರ ಆಡಳಿತಕ್ಕೆ ಆಗ್ರಹಿಸಿದ್ದಾರೆ. ಮುಂಗಾರು ಮಳೆಯ ಮೊದಲ ಹಂತದಲ್ಲೇ ಬೆಂಗಳೂರು ಮತ್ತೊಮ್ಮೆ ಜಲಾವೃತ ಸಮಸ್ಯೆಯನ್ನು ಎದುರಿಸುತ್ತಿರುವುದು ನಗರ ಮೂಲ ಸೌಕರ್ಯದ ಬಗ್ಗೆ ಪ್ರಶ್ನೆಗಳನ್ನು ಹುಟ್ಟು ಹಾಕಿದೆ.
ಬೆಂಗಳೂರು ಮಳೆ ಅವಾಂತರ: ರಾತ್ರಿ ಇಡೀ ಸುರಿದ ಧಾರಾಕಾರ ಮಳೆಗೆ ರಸ್ತೆಗಳು ಜಲಾವೃತ:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂಗಾರು ಮಳೆ ಚುರುಕುಕೊಂಡಿದ್ದು, ಶುಕ್ರವಾರ ತಡೆ ರಾತ್ರಿ ಸುರಿದ ಭಾರಿ ಮಳೆ ನಗರ ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ರಾತ್ರಿ ಇಡೀ ಸುರಿದ ಮಳೆಯಿಂದ ಹಲವು ರಸ್ತೆಗಳು ಜಲಾವೃತಗೊಂಡು ಕೆರೆಯಂತಾಗಿದ್ದು, ವಾಹನ ಸವಾರರು ಮತ್ತು ಪಾದಚಾರಿಗಳು ತೀವ್ರ ಸಂಕಷ್ಟ ಅನುಭವಿಸಿದರು.
ನಗರದ ಶಾಂತಿನಗರ, ಕಂಟೋನ್ಮೆಂಟ್, ವಸಂತನಗರ, ಸದಾಶಿವನಗರ, ಶೇಷಾದ್ರಿಪುರಂ, ಮಲೆಶ್ವರಂ, ಮತ್ತಿಕೆರೆ, ದೊಮಲೂರು, ಇಂದಿರಾನಗರ, ಹೆಬ್ಬಾಳ, ಕುಮಾರಸ್ವಾಮಿ ಲೇಔಟ್ ಹಾಗೂ ಉತ್ತರಹಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಿದೆ. ಮಳೆಯಾ ಅಬ್ಬರಕ್ಕೆ ತಗ್ಗು ಪ್ರದೇಶಗಳ ರಸ್ತೆಗಳು ನೀರಿನಿಂದ ಆವೃತಗೊಂಡು ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿತು.
ಹಲವಡೆ ರಸ್ತೆಗಳಲ್ಲಿ ನೀರು ನಿಂತ ಪರಿಣಾಮ ವಾಹನಗಳ ಸಂಚಾರ ನಿಧಾನಗೊಂಡಿದ್ದು, ಬೆಳಗಿನ ಜಾವ ಕಚೇರಿಗೆ ತೆರಳುವ ಪ್ರಯಾಣಿಕರು ಟ್ರಾಫಿಕ್ ಸಮಸ್ಯೆ ಎದುರಿಸಿದರು. ದ್ವಿಚಕ್ರ ವಾಹನ ಸವಾರರು ಹಾಗೂ ಪಾದಚಾರಿಗಳು ಜಲಾವೃತ ರಸ್ತೆಗಳ ನಡುವೆ ಪರದಾಡುವಂತೆ ಆಯಿತು.
ಹವಾಮಾನ ಇಲಾಖೆ ಮುಂದಿನ ಕೆಲವು ದಿನಗಳ ಕಾಲ ಬೆಂಗಳೂರಿನಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದ್ದು, ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದೆ. ಮುಂಗಾರು ಮಳೆಯ ಮೊದಲ ಹಂತದಲ್ಲೇ ನಗರದ ಹಲವು ಪ್ರದೇಶಗಳಲ್ಲಿ ನೀರು ನಿಂತಿರುವುದು ಒಳಚರಂಡಿ ಹಾಗೂ ಮಳೆ ನೀರು ನಿರ್ವಹಣೆಯ ಬಗ್ಗೆ ಮತ್ತೆ ಪ್ರಶ್ನೆಗಳು ಹುಟ್ಟು ಹಾಕಿವೆ.
ಬೆಂಗಳೂರು ಮಳೆಯ ಆವಾಂತರದಿಂದ ಸಿಲ್ಕ್ ಬೋರ್ಡ್ ನಲ್ಲಿ ಮಂಡಿ ಯುದ್ಧ ನೀರು, ವಾಹನ ಸವಾರರ ಪರದಾಟ:
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮುಂದುವರೆದಿರುವ ಮುಂಗಾರು ಮಳೆಯಿಂದ ಹಲವೆಡೆ ರಸ್ತೆಗಳಲ್ಲಿ ನೀರು ನಿಂತು ಜನ ಜೀವನ ಅಸ್ತವ್ಯಸ್ತವಾಗಿದೆ. ಎಲೆಕ್ಟ್ರಾನಿಕ್ ಸಿಟಿ ಸರ್ಜಾಪುರ ರಸ್ತೆ, ಹೊಸೂರು ರಸ್ತೆ, ಹಾಗೂ ಸಿಲ್ಕ್ ಬೋರ್ಡ್ ವ್ಯಾಪ್ತಿಯಲ್ಲಿ ಮಳೆ ನೀರು ರಸ್ತೆಯ ಮೇಲೆ ಹರಿದಿದ್ದರಿಂದ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸಿದ್ದಾರೆ.
ಸಿಲ್ಕ್ ಬೋರ್ಡ್ ಜಂಕ್ಷನ್ ನಲ್ಲಿ ಮಂಡಿಯ ಯುದ್ಧ ನೀರು ನಿಂತಿದ್ದರಿಂದ ವಿಚಕ್ರ ವಾಹನ ಸವಾರರು ವಾಹನಗಳನ್ನು ತಳ್ಳಿಕೊಂಡು ಹೋಗುವ ದೃಶ್ಯಗಳು ಕಂಡುಬಂದವು. ಟ್ರಾಫಿಕ್ ನಿಧಾನಗೊಂಡು ಬೆಳಗಿನ ಮತ್ತು ಸಂಜೆ ಪೀಕ್ ಅವರ್ ಗಳಲ್ಲಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತು.
ಇದೇ ವೇಳೆ ಹವಾಮಾನ ಇಲಾಖೆಯ ವರದಿಯ ಪ್ರಕಾರ ಮುಂದಿನ ಐದು ದಿನಗಳ ಕಾಲ ರಾಜ್ಯಾದ್ಯಂತ ಮಳೆಯ ಪ್ರಮಾಣ ಮುಂದುವರೆಯುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಹವಾಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.
ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇರುವುದಾಗಿ ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ನಿರಂತರ ಮಳೆಯ ಹಿನ್ನೆಲೆಯಲ್ಲಿ ನಾಗರಿಕರು ಅಗತ್ಯ ಮುನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಲಾಗಿದೆ.
Also Read: