ಸಿಎಂ ಸಿದ್ದರಾಮಯ್ಯ ಅವರು ನವಲಗುಂದವನ್ನು ವಿಧಾನಸಭಾ ಕ್ಷೇತ್ರವನ್ನಾಗಿ ಮಾಡಬೇಕೆಂದು ಚಿಂತನೆ ನಡೆಸಿದ್ದಾರೆ. ಶಿಕ್ಷಣ, ಆರೋಗ್ಯ,ಮತ್ತು ಕುಡಿಯುವ ನೀರು, ರಸ್ತೆ ,ರೈತರ ಕಲ್ಯಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ನವಲಗುಂದದ ಸಮಗ್ರ ಅಭಿವೃದ್ಧಿಯೇ ನಮ್ಮ ಗುರಿ ಎಂದು ಸಿದ್ದರಾಮಯ್ಯ ಅವರು ಸ್ಪಷ್ಟವಾಗಿ ಹೇಳಿದರು. ಜನರ ಬದುಕಿನಲ್ಲಿ ನಿಜವಾದ ಬದಲಾವಣೆ ತರುವ ಕೆಲಸ ಮುಂದುವರೆಯಲಿದೆ ಎಂದು ಸಿಎಂ ಭರವಸೆ ನೀಡಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು , ನವಲಗುಂದ ವಿಧಾನಸಭಾ ಕ್ಷೇತ್ರವನ್ನು ರಾಜ್ಯಕ್ಕೆ ಮಾದರಿಯಾದ ಕ್ಷೇತ್ರವನ್ನಾಗಿ ರೂಪಿಸಲು ಸರ್ಕಾರ ಶ್ರಮಿಸಲಿದೆ ಎಂದು ಹೇಳಿದರು. ಅಭಿವೃದ್ಧಿಯ ಕಾರ್ಯಗಳನ್ನು ನಾವು ಅತಿ ವೇಗವಾಗಿ ಮಾಡುತ್ತೇವೆ ಎಂದು ಮುನ್ಸೂಚನೆಯನ್ನು ಕೊಟ್ಟರು.ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ಅಭಿವೃದ್ಧಿ ಕೆಲಸಗಳು ಈಗಾಗಲೇ ಪ್ರಾರಂಭವಾಗಿದೆ ಅಣ್ಣಿಗೇರಿಗೆ ಯುಜಿಡಿ ಮಾಡುತ್ತೇವೆ ಜೊತೆಗೆ ಈ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ಈಗಾಗಲೇ ಮಾಡಲು ಶ್ರಮಿಸುತ್ತಿದ್ದೇವೆ ಎಂದು ಸ್ಪಷ್ಟವಾಗಿ ಹೇಳಿದರು.
ಶಿರಗುಪ್ಪಿಯಲ್ಲಿ ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿ ಚಾಲನೆ :
ಶಿರಗುಪ್ಪಿ ಗ್ರಾಮದಲ್ಲಿ ಭಾನುವಾರ ಜಲ ಸಂಪನ್ಮೂಲ ಇಲಾಖೆ ಹಾಗೂ ಕರ್ನಾಟಕ ನೀರಾವರಿ ನಿಗಮದ ನಿಯಮಿತ ಸಹಯೋಗದಲ್ಲಿ ಬೆಣ್ಣೆ ಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಕೆ ಶಂಕು ಸ್ಥಾಪನೆ ಮತ್ತು ನವಲಗುಂದ ವಿಧಾನಸಭಾ ಕ್ಷೇತ್ರದ ವಿವಿಧ ಕಾಮಗಾರಿಕೆಗಳು ಉದ್ಘಾಟನೆ ಭೂಮಿ ಪೂಜೆ ಸಮಾರಂಭಗಳು ದೀಪ ಬೆಳಗಿಸಿ ಉದ್ಘಾಟಿಸಿ ಅವರು ಈ ರೀತಿಯಾಗಿ ಮಾತನಾಡಿದರು.
200 ಕೋಟಿ ರೂಪಾಯಿ ವೆಚ್ಚದ ಬೆಣ್ಣೆ ಹಳ್ಳ ಯೋಜನೆಗೆ ಚಾಲನೆ ನೀಡಲಾಗಿದೆ. ಹೌದು ಈಗಾಗಲೇ ಈ ಕಾಮಗಾರಿ ಪ್ರಾರಂಭಗೊಂಡಿದ್ದು, ಬೆಣ್ಣೆ ಹಳ್ಳ ಪ್ರವಾಹ ನಿಯಂತ್ರಣ ಕಾಮಗಾರಿಕೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಅಲ್ಲದೆ ವಿವಿಧ ಕಾಮಗಾರಿಗಳ ಉದ್ಘಾಟನೆಯನ್ನು ಮಾಡಲಾಗಿದೆ ಎಂದು ಹೇಳಿದರು.ಜೊತೆಗೆ ಈ ಯೋಜನೆ ಪ್ರಾರಂಭಿಸಲು ಎನ್ಎಚ್ ಕೋನರೆಡ್ಡಿ ಅವರು ಒತ್ತಾಸೆ ಕಾರಣವಾಗಿದೆ. ಈ ಬೆಣ್ಣೆ ಹಳ್ಳ ದಿಂದ ಸುಮಾರು 37 ಹಳ್ಳಿಗಳು ಹಾಗೂ 20,000 ಹೆಕ್ಟರ್ ಪ್ರದೇಶಕ್ಕೆ ಪ್ರವಾಹ ಉಂಟಾಗುತ್ತಿದ್ದು 150 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿಕೆಗಳಿಗೆ ಚಾಲನೆ ನೀಡಲಾಗಿದೆ ಎಂದು ಸ್ಪಷ್ಟವಾಗಿ ತಿಳಿಸಿದರು.
ಇದರ ಜೊತೆಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಡೆಯುತ್ತಿಲ್ಲ ಎಂದು ಹೇಳಲಾಗುತ್ತಿದೆ ಆದರೆ ಹಲವಾರು ಅಭಿವೃದ್ಧಿ ಕಾಮಗಾರಿಕೆಗಳು ನಡೆಯುತ್ತಿವೆ ಎಂದು ಸ್ಪಷ್ಟವಾಗಿ ತಿಳಿಸಿದರು.ಇದರೊಂದಿಗೆ 2018 ರಲ್ಲಿ ಸುಪ್ರೀಂ ಕೋರ್ಟ್ ಕಳಸ ಬಂಡೂರಿ ಯೋಜನೆಗೆ ಒಪ್ಪಿಗೆ ಸೂಚಿಸಿದೆ.ಈಗಾಗಲೇ ಟೆಂಡರ್ ಕರೆದು ಏಜೆನ್ಸಿ ಒಪ್ಪಿಸಲಾಗಿದೆ ಮತ್ತು ಕೇಂದ್ರ ಅನುಮತಿ ಕೊಟ್ಟರೆ ನಾಳೆ ಕಾಮಗಾರಿ ಆರಂಭಿಸಲಾಗುವುದು ಎಂದು ಹೇಳಿದರು.
ಕೃಷ್ಣ ಮೇಲ್ದಂಡೆ ಯೋಜನೆ :
ಸಿದ್ದರಾಮಯ್ಯ ಅವರು ಮೂರನೇ ಹಂತದ ಕೃಷ್ಣ ಮೇಲ್ದಂಡೆ ಯೋಜನೆ ಕೇಂದ್ರ ಸರ್ಕಾರದಿಂದ ನಿಂತು ಹೋಗಿದೆ.ಕೇಂದ್ರ ಕೂಡಲೇ ಬಜೆಟ್ ನೋಟಿಫಿಕೇಶನ್ ಮಾಡಬೇಕು ಜೊತೆಗೆ ಮೇಕೆದಾಟು ಯೋಜನೆಗೂ ಸಹ ಕೇಂದ್ರ ಅನುಮತಿ ನೀಡಬೇಕು ಎಂದು ಹೇಳಿದರು.
ಈಗಾಗಲೇ ತಮಿಳುನಾಡು ಸಲ್ಲಿಸಿದ್ದ ಅರ್ಜಿ ವಜಾ ಆಗಿದೆ 65 ಪಿಎಂಸಿ ಕುಡಿಯುವ ನೀರಿನ ಯೋಜನೆ ಇದ್ದು,ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ಕೊಡುತ್ತೇವೆ ಎಂದು ಕೇಂದ್ರ ಸರ್ಕಾರ ಹೇಳಿತ್ತು,ಆದರೆ ಇದುವರೆಗೂ ಯಾವುದೇ ಹಣ ನೀಡಿಲ್ಲ ರಾಷ್ಟ್ರೀಯ ಯೋಜನೆಯಾಗಿ ಮಾಡುತ್ತಿವೆ ಎಂದು ಬಣ್ಣಿಸಿದ್ದರು.2005ರಲ್ಲಿ ಮನರಿಗ ಯೋಜನೆ ಜಾರಿ ಮಾಡಲಾಗಿತ್ತು ಆದರೆ ಕಳೆದ ಡಿಸೆಂಬರ್ ನಲ್ಲಿ ಈ ಯೋಜನೆಯನ್ನು ರದ್ದು ಮಾಡಿದ್ದಾರೆ ಇದರಿಂದ ಯುವಕರಿಗೆ ಮಹಿಳೆಯರಿಗೆ ಕೆಲಸವಿಲ್ಲದವರಿಗೆ ಕೆಲಸ ಕೊಡುವ ಯೋಜನೆ ನಿಂತು ಹೋಗಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದರು. ಇದರ ಜೊತೆಗೆ ಮೇಕೆದಾಟು ಯೋಜನೆಗೂ ಸಹ ಕೇಂದ್ರ ಸರ್ಕಾರ ಅನುಮತಿ ನೀಡಬೇಕು ಎಂದು ಹೇಳಿದರು.
ಈ ನಿಟ್ಟಿನಲ್ಲಿ ಸಿಎಂ ಅವರು ವರ್ಷಕ್ಕೆ 50 ಸಾವಿರ ಹಣ ನೇರವಾಗಿ ಮುಟ್ಟಲಿದೆ.ಸುಮಾರು 25,000 ಕೋಟಿ ನೀರಾವರಿಗೆ ಖರ್ಚು ಮಾಡಲಾಗಿದೆ ಜೊತೆಗೆ 4.5 ಲಕ್ಷ ಕೋಟಿಗು ಹೆಚ್ಚು ಹಣ ಕೇಂದ್ರಕ್ಕೆ ಕೊಡುತ್ತಿದ್ದೇವೆ.ಆದರೆ,ಕೇಂದ್ರದಿಂದ 60,000 ಕೋಟಿ ಮಾತ್ರ ರಾಜ್ಯಕ್ಕೆ ಮರಳುತ್ತಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದರು.
ಇದರ ಜೊತೆ ಜೊತೆಗೆ ಮಾತನಾಡಿದ ಸಿಎಂ ಅವರು ಶೇ.53 ರಷ್ಟು ಮಹಿಳೆಯರಿದ್ದಾರೆ ಮತ್ತು ಅದರಲ್ಲಿ ಶೇ.28 ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದವರು ಇದ್ದಾರೆ.ಮತ್ತು ಶೇ.17ರಷ್ಟು ಪರಿಶಿಷ್ಟ ಜಾತಿ ಹಾಗೂ ಶೇ.11ರಷ್ಟು ಪರಿಶಿಷ್ಟ ಪಂಗಡದ ವರ್ಗದವರಿದ್ದಾರೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.ಹಾಗೆ ಸುಮಾರು 1.16 ಲಕ್ಷ ಕೋಟಿ ಹಣವನ್ನು ಗ್ಯಾರಂಟಿ ಯೋಜನೆಗೆ ವಿಧಿಸಲಾಗಿದೆ ಹಾಗಾಗಿ ವಾರ್ಷಿಕವಾಗಿ ಸುಮಾರು 54,000 ಕೋಟಿಗೂ ಅಧಿಕ ಹಣವನ್ನು ಗ್ಯಾರಂಟಿ ಯೋಜನೆಗೆ ಬಳಸಲಾಗುತ್ತಿದೆ ಎಂದು ಸ್ಪಷ್ಟವಾಗಿ ತಿಳಿಸಿದರು.
ಇನ್ನಷ್ಟು ಓದಿರಿ:
Pariksha Pe Charcha 2026: ಕನಸು ಕಾಣದಿರುವುದು ಒಂದು ಕ್ರೈಂ : PM ಮೋದಿ