<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಮೋದಿ- ತಕೈಚಿ ಭೇಟಿಯ ವಿಶೇಷ ಕ್ಷಣ: ' ನನ್ನ ತಂಗಿ' ಎಂದು ಕರೆದ ಪ್ರಧಾನಿ ಮೋದಿ

ಮೋದಿ- ತಕೈಚಿ ಭೇಟಿಯ ವಿಶೇಷ ಕ್ಷಣ: ' ನನ್ನ ತಂಗಿ' ಎಂದು ಕರೆದ ಪ್ರಧಾನಿ ಮೋದಿ
Summary: Prime Minister Narendra Modi has extended a warm welcome to Japanese Prime Minister Sanae Takaichi, who is on a three-day official visit to India. Modi's remark, in which he addressed Takaichi as 'my sister', drew attention and once again reflected the strong bond of India-Japan friendship.

Belagavi News :

ನವದೆಹಲಿ: ಭಾರತ ಮತ್ತು ಜಪಾನ್ ತಮ್ಮ ಮೊದಲ ರಕ್ಷಣಾ ಸಹ-ಅಭಿವೃದ್ಧಿ ಒಪ್ಪಂದಕ್ಕೆ ಸಹಿ ಹಾಕಿದ್ದು, ಉಭಯ ದೇಶಗಳ ನಡುವಿನ ವಿಶೇಷ ಕಾರ್ಯತಂತ್ರ ಮತ್ತು ಜಾಗತಿಕ ಪಾಲುದಾರಿಕೆಯನ್ನು ಮತ್ತಷ್ಟು ಬಲಪಡಿಸುವ ಹಲವು ಮಹತ್ವದ ಉಪಕ್ರಮಗಳನ್ನು ಘೋಷಿಸಿವೆ.

ಈ ಸಂದರ್ಭದಲ್ಲಿ ನಡೆದ ದ್ವಿಪಕ್ಷೀಯ ಮಾತುಕತೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಜಪಾನ್ ಪ್ರಧಾನಿ ಸನಾಯೆ ತಕೈಚಿ ಅವರನ್ನು ಆತ್ಮೀಯವಾಗಿ "ನನ್ನ ತಂಗಿ " ಎಂದು ಸಂಬೋಧಿಸಿದ್ದು, ಈ ಮಾತು ಎಲ್ಲರ ಗಮನ ಸೆಳೆಯಿತು. ಉದಯ ನಾಯಕರ ನಡುವಿನ ಆತ್ಮೀಯ ಬಾಂಧವ್ಯ ಹಾಗೂ ಭಾರತ-ಜಪಾನ್ ಸ್ನೇಹದ ಗಾಢತೆಯನ್ನು ಈ ಸಂಬೋಧನೆ ಪ್ರತಿಬಿಂಬಿಸಿತು.

ರಕ್ಷಣಾ ಸಹಕಾರ, ತಂತ್ರಜ್ಞಾನ, ಆರ್ಥಿಕ ಪಾಲುದಾರಿಕೆ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ಸಹಯೋಗವನ್ನು ಮತ್ತಷ್ಟು ವಿಸ್ತರಿಸುವ ಉದ್ದೇಶದಿಂದ ಹಲವು ಮಹತ್ವದ ವಿಷಯಗಳ ಕುರಿತು ಉಭಯ ನಾಯಕರು ಚರ್ಚೆ ನಡೆಸಿದರು. ಈ ಭೇಟಿ ಭಾರತ-ಜಪಾನ್ ಸಂಬಂಧಕ್ಕೆ ಹೊಸ ಬಲ ತುಂಬುವ ಮಹತ್ವದ ಹೆಜ್ಜೆಯಾಗಿ ಪರಿಗಣಿಸಲಾಗಿದೆ.

16ನೇ ಭಾರತ - ಜಪಾನ್ ವಾರ್ಷಿಕ ಶೃಂಗಸಭೆಯ ಹಿನ್ನೆಲೆಯಲ್ಲಿ ಉಭಯ ದೇಶಗಳ ನಾಯಕರು ಮಹತ್ವದ ಮಾತುಕತೆಗಳನ್ನು ನಡೆಸಿದರು. ಮಾತುಕತೆಗಳ ಬಳಿಕ ಜಂಟಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಮಂತ್ರಿ ನರೇಂದ್ರ ಮೋದಿ, ಜಪಾನ್ ಪ್ರಧಾನಿಯಾಗಿ ಮೊದಲ ಬಾರಿಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿರುವ ತಕೈಚಿ ಅವರನ್ನು ಆತ್ಮೀಯವಾಗಿ ಸ್ವಾಗತಿಸಿದರು.

ಈ ಭೇಟಿಯು ಭಾರತ- ಜಪಾನ್ ದ್ವಿಪಕ್ಷೀಯ ಸಂಬಂಧಗಳಲ್ಲಿ ಒಂದು ಹೊಸ ಅಧ್ಯಾಯದ ಆರಂಭವನ್ನು ಸೂಚಿಸುತ್ತದೆ ಎಂದು ಪ್ರಧಾನಿ ಮೋದಿ ಹೇಳಿದರು. ಉಭಯ ದೇಶಗಳ ನಡುವಿನ ಸಹಕಾರವನ್ನು ಇನ್ನಷ್ಟು ಬಲಪಡಿಸುವ ದಿಕ್ಕಿನಲ್ಲಿ ಈ ಶೃಂಗಸಭೆ ಮಹತ್ವದ ಹೆಜ್ಜೆಯಾಗಿದ್ದು, ಪರಸ್ಪರ ನಂಬಿಕೆ, ಹೂಡಿಕೆ ಮತ್ತು ತಂತ್ರಜ್ಞಾನ ಕ್ಷೇತ್ರಗಳಲ್ಲಿ ಸಹಭಾಗಿತ್ವವನ್ನು ವಿಸ್ತರಿಸಲು ಇದು ಸಹಾಯಕವಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಭಾರತ-ಜಪಾನ್ ವಾರ್ಷಿಕ ಶೃಂಗಸಭೆ: ದ್ವಿಪಕ್ಷೀಯ ಸಹಕಾರಕ್ಕೆ ಹೊಸ ಗತಿ

ಭಾರತ-ಜಪಾನ್ ವಾರ್ಷಿಕ ಶೃಂಗಸಭೆಯ ಹಿನ್ನೆಲೆಯಲ್ಲಿ ಮೊದಲ ಬಾರಿಗೆ ಭಾರತಕ್ಕೆ ಅಧಿಕೃತ ಭೇಟಿ ನೀಡಿದ ಜಪಾನ್ ಪ್ರಧಾನಿ ಮಂತ್ರಿ ತಕೈಚಿ ಅವರನ್ನು ಪ್ರಧಾನಿ ನರೇಂದ್ರ ಮೋದಿ ಆತ್ಮೀಯವಾಗಿ ಸ್ವಾಗತಿಸಿದರು. ಅವರನ್ನು " ನನ್ನ ಕಿರಿಯ ತಂಗಿ" ಎಂದು ಉಲ್ಲೇಖಿಸಿದ ಪ್ರಧಾನಿ ಮೋದಿ, ಅವರು ಜಪಾನ್ ನ ಮೊದಲ ಮಹಿಳಾ ಪ್ರಧಾನಮಂತ್ರಿಯಾಗಿರುವುದನ್ನು ಹಾಗೂ ದುರದೃಷ್ಟಿಯುಳ್ಳ ಜನಪ್ರಿಯ ನಾಯಕಿಯಾಗಿ ತಮ್ಮ ಸ್ಥಾನವನ್ನು ನಿರ್ಮಿಸಿಕೊಂಡಿರುವುದನ್ನು ಶ್ಲಾಘಿಸಿದರು.

ಭಾರತದ ಬೆಳವಣಿಗೆಯ ಪಯಣದಲ್ಲಿ ಜಪಾನ್ ನೀಡಿರುವ ಮಹತ್ವದ ಪಾತ್ರವನ್ನು ಸ್ಮರಿಸಿದ ಪ್ರಧಾನಿ ಮೋದಿ, ಉಭಯ ರಾಷ್ಟ್ರಗಳ ಸಹಕಾರವು ಹಲವು ದಶಕಗಳಿಂದ ಬಲವಾಗಿಯೇ ಮುಂದುವರೆದಿದೆ ಎಂದು ಹೇಳಿದರು. ಪ್ರಸ್ತುತ ವಿಶ್ವದ ಐದು ಪ್ರಮುಖ ಆರ್ಥಿಕತೆಗಳಲ್ಲಿ ಸ್ಥಾನ ಪಡೆದಿರುವ ಭಾರತ ಮತ್ತು ಜಪಾನ್, ಮುಂದಿನ ದಿನಗಳಲ್ಲಿ ಶಾಂತಿ, ಸ್ಥಿರತೆ ಹಾಗೂ ನಿಯಮಾಧಾರಿತ ಪ್ರಾದೇಶಿಕ ವ್ಯವಸ್ಥೆಯನ್ನು ಉತ್ತೇಜಿಸಲು ಒಟ್ಟಾಗಿ ಕೆಲಸ ಮಾಡಲಿವೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online