belagavi news :
ಮೈಸೂರು: ಆಷಾಢ ಮಾಸದ ಮೂರನೇ ಶುಕ್ರವಾರದ ಅಂಗವಾಗಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಕುಟುಂಬ ಸಮೇತರಾಗಿ ಮೈಸೂರಿನ ನಾಡಿನ ಅಧಿದೇವತೆ ಶ್ರೀ ಚಾಮುಂಡೇಶ್ವರಿ ದೇವಿ ದೇಗುಲಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಚಾಮುಂಡಿಬೆಟ್ಟಕ್ಕೆ ಆಗಮಿಸಿದ ಯಡಿಯೂರಪ್ಪ ಅವರು ದೇವಿಯ ದರ್ಶನ ಪಡೆದು ರಾಜ್ಯದ ಸುಖ, ಶಾಂತಿ ಮತ್ತು ಸಮೃದ್ಧಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಅವರ ಪುತ್ರ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಕುಟುಂಬದ ಇತರ ಸದಸ್ಯರು ಉಪಸ್ಥಿತರಿದ್ದು, ವಿಶೇಷ ಪೂಜೆಯನ್ನು ಭಾಗವಹಿಸಿದ್ದರು.
ಆಷಾಢ ಶುಕ್ರವಾರದ ಹಿನ್ನೆಲೆಯಲ್ಲಿ ಚಾಮುಂಡೇಶ್ವರಿ ದೇವಾಲಯದಲ್ಲಿ ಮುಂಜಾನೆ ಇಂದಲೇ ಸಾವಿರಾರು ಭಕ್ತರು ದೇವಿಯ ದರ್ಶನಕ್ಕಾಗಿ ಆಗಮಿಸಿದ್ದರು. ಈ ನಡುವೆ ಯಡಿಯೂರಪ್ಪ ಅವರ ಭೇಟಿ ಭಕ್ತರ ಗಮನ ಸೆಳೆಯಿತು. ಮಾಜಿ ಮುಖ್ಯಮಂತ್ರಿಯನ್ನು ನೋಡಲು ದೇವಾಲಯದ ಆವರಣದಲ್ಲಿ ಭಕ್ತರು ಮತ್ತು ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.
ಯಡಿಯೂರಪ್ಪ ಅವರ ಭೇಟಿಯ ಹಿನ್ನೆಲೆಯಲ್ಲಿ ಚಾಮುಂಡಿಬೆಟ್ಟದಲ್ಲಿ ಪೊಲೀಸ್ ಭದ್ರತೆಯನ್ನು ಹೆಚ್ಚಿಸಲಾಗಿತ್ತು. ಭಕ್ತರ ದರ್ಶನಕ್ಕೆ ಯಾವುದೇ ತೊಂದರೆಯಾಗದಂತೆ ದೇವಾಲಯದ ಆಡಳಿತ ಮಂಡಳಿ ಹಾಗೂ ಪೊಲೀಸ್ ಇಲಾಖೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಿತು ಭಕ್ತರ ಸುಗಮ ಸಂಚಾರ ಮತ್ತು ದರ್ಶನ್ ಕ್ಕೆ ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿತ್ತು.
ನಾಡಿನ ಅಧಿದೇವತೆ ಚಾಮುಂಡೇಶ್ವರಿ ದೇವಿಯ ಆಶೀರ್ವಾದ ಪಡೆಯಲು ಯಡಿಯೂರಪ್ಪ ಕುಟುಂಬ ಸಮೇತರಾಗಿ ಆಗಮಿಸಿದ್ದು, ಆಷಾಢ ಶುಕ್ರವಾರದ ಧಾರ್ಮಿಕ ಸಂಭ್ರಮಕ್ಕೆ ಮತ್ತಷ್ಟು ವಿಶೇಷತೆ ತಂದಿತು.