BELAGAVI NEWS:
ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿರುವ ಅಚ್ಚರಿಯ ಘಟನೆ ಒಂದು ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ವೈರಲಾಗಿದೆ. ಕುಟುಂಬ ಸಂಬಂಧಗಳನ್ನೇ ರಚಿಸುವಂತಹ ಈ ಘಟನೆ ಸ್ಥಳೀಯವಾಗಿ ಮಾತ್ರವಲ್ಲದೆ ಆನ್ಲೈನ್ ನಲ್ಲಿಯೂ ತೀವ್ರ ಚರ್ಚೆಗೆ ಕಾರಣವಾಗಿದೆ.
ವರದಿಗಳ ಪ್ರಕಾರ, ಒಬ್ಬ ವ್ಯಕ್ತಿ ತನ್ನ ಹೆಂಡತಿಗೆ ವಿಚ್ಛೇದನ ನೀಡಿದ ನಂತರ, ತನ್ನ ಅತ್ತೆಯ ಮೇಲೆ ಪ್ರೇಮ ಬೆಳೆಸಿಕೊಂಡು ಅಂತಿಮವಾಗಿ ಆಕೆಯನ್ನೇ ವಿವಾಹವಾಗಿರುವ ಘಟನೆ ನಡೆದಿದೆ. ಈ ವಿಚಿತ್ರ ಬೆಳವಣಿಗೆ ಕಾನ್ಪುರದಲ್ಲಿ ನಡೆದಿದೆ ಎಂದು ತಿಳಿದು ಬಂದಿದ್ದು,ಇವರಿಬ್ಬರೂ ನ್ಯಾಯಾಲಯದಲ್ಲಿ ಅಧಿಕೃತವಾಗಿ ಕೋರ್ಟ್ ಮ್ಯಾರೇಜ್ ಮಾಡಿಕೊಂಡಿದ್ದಾರೆ.
ಮದುವೆಯ ಫೋಟೋಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಅಳಿಯ ಮತ್ತು ಅತ್ತೆ ಪರಸ್ಪರ ಹಾರ ಬದಲಾಯಿಸಿಕೊಳ್ಳುತ್ತಿರುವ ದೃಶ್ಯಗಳು ಜನರ ಗಮನ ಸೆಳೆದಿದೆ. ಈ ಘಟನೆ ಕುಟುಂಬ ಸಂಬಂಧಗಳ ಪವಿತ್ರತೆ ಮತ್ತು ಸಾಮಾಜಿಕ ಮೌಲ್ಯಗಳ ಬಗ್ಗೆ ಗಂಭೀರ ಚರ್ಚೆಗೆ ಕಾರಣವಾಗಿದೆ.
ಸ್ಥಳೀಯ ನಿವಾಸಿಗಳು ಈ ಘಟನೆಯ ಬಗ್ಗೆ ಅಚ್ಚರಿ ಮತ್ತು ಅಸಮಾಧಾನ ವ್ಯಕ್ತಪಡಿಸಿದ್ದು, ಇದು ಕುಟುಂಬ ವ್ಯವಸ್ಥೆಗೆ ಧಕ್ಕೆ ತಂದಿರುವ ಘಟನೆ ಎಂದು ಹಲವರು ಅಭಿಪ್ರಾಯ ಪಟ್ಟಿದ್ದಾರೆ. ಇನ್ನು ಕೆಲವರು ಇದು ವೈಯಕ್ತಿಕ ಆಯ್ಕೆಯಿಂದ ಎಂದು ಹೇಳಿ ವಿಭಿನ್ನ ಪ್ರತಿಕ್ರಿಯೆ ನೀಡುತ್ತಿದ್ದಾರೆ.
ಸದ್ಯ ಈ ವಿಲಕ್ಷಣ ಘಟನೆ ಕಾನ್ಪುರದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ವಿಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ.
ಕಾನ್ಪುರದ ನಿವಾಸಿ ಒಬ್ಬರಿಗೆ ಕೇವಲ ವರ್ಷಗಳ ಹಿಂದೆ ವಿವಾಹವಾಗಿದ್ದು. ಮದುವೆಯಾದ ಆರಂಭದಲ್ಲಿ ದಂಪತಿಯ ನಡುವೆ ಎಲ್ಲವೂ ಸರಿಯಾಗಿ ಇತ್ತು. ಆದರೆ, ಕಾಲಕ್ರಮೇಣ ಪತ್ನಿಯ ತಾಯಿ, ಈ ದಂಪತಿಗಳ ಮನೆಗೆ ಬಂದಾಗ ಬಂದು ಉಳಿದುಕೊಳ್ಳಲು ಆರಂಭಿಸಿದರು. ಈ ಸಮಯದಲ್ಲಿ ಅಳಿಯ ಮತ್ತು ಅತ್ತೆಯ ನಡುವೆ ಪ್ರೇಮಾಂಕ್ರವಾಗಿದೆ ಎನ್ನಲಾಗಿದೆ.
ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿರುವ ಒಂದು ಅಚ್ಚರಿಯ ಹಾಗೂ ವಿವಾದಾತ್ಮಕ ಘಟನೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಬಾರಿ ಚರ್ಚೆಗೆ ಕಾರಣವಾಗಿದೆ.
ಕುಟುಂಬ ಸಂಬಂಧಗಳ ಗಡಿಯನ್ನು ರಚಿಸುವಂತಹ ಈ ಘಟನೆ ಸ್ಥಳೀಯ ಮಟ್ಟದಲ್ಲಿ ಮಾತ್ರವಲ್ಲದೆ ಆನ್ಲೈನ್ ನಲ್ಲಿಯೂ ತೀವ್ರ ಪ್ರತಿಕ್ರಿಯೆಗೆ ಕಾರಣವಾಗಿದೆ.
ವರದಿಗಳ ಪ್ರಕಾರ, ಒಬ್ಬ ವ್ಯಕ್ತಿ ತನ್ನ ಅತ್ತೆಯೊಂದಿಗಿನ ಸಂಬಂಧ ದಿನದಿಂದ ದಿನಕ್ಕೆ ಹಾಳವಾಗುತ್ತಿರುವ ಹಿನ್ನೆಲೆಯಲ್ಲಿ ತನ್ನ ಪತ್ನಿಯನ್ನು ದೂರವಾಗಲು ನಿರ್ಧರಿಸಿದ್ದಾನೆ. ಕೌಟುಂಬಿಕ ಕಲಹ ಹಾಗೂ ಭಿನ್ನಾಭಿಪ್ರಾಯಗಳ ಕಾರಣವನ್ನು ಮುಂದಿಟ್ಟುಕೊಂಡು ಆತ ಕಾನೂನು ಪ್ರಕ್ರಿಯೆಯ ಮೂಲಕ ತನ್ನ ಪತ್ನಿಗೆ ವಿಚ್ಛೇದನ ನೀಡಿದ್ದಾನೆ. ವಿಚ್ಛೇದನ ಪ್ರಕ್ರಿಯೆ ಪೂರ್ಣಗೊಂಡ ನಂತರ, ಆತ ತನ್ನ ಮಾಜಿ ಪತ್ನಿಯ ತಾಯಿಯನ್ನು, ಅಂದರೆ ತನ್ನ ಅತ್ತೆಯನ್ನು ಮದುವೆಯಾಗಲು ಮುಂದಾಗಿದ್ದಾನೆ. ನಂತರ ಇಬ್ಬರು ಒಪ್ಪಿಗೆಯೊಂದಿಗೆ ನ್ಯಾಯಾಲಯದಲ್ಲಿ ವಿವಾಹ ವಾದರೂ ಎಂದೂ ವರದಿಗಳು ಹೇಳುತ್ತಿವೆ.
ಈ ವಿಚಿತ್ರ ಮದುವೆಗೆ ಕುಟುಂಬ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಆದರೆ ದಂಪತಿ ತಮ್ಮ ನಿರ್ಧಾರದಲ್ಲಿ ಸ್ಥಿರವಾಗಿದ್ದು, ಕೋರ್ಟ್ ಮ್ಯಾರೇಜ್ ಮೂಲಕ ಸಂಬಂಧಗಳನ್ನು ಅಧಿಕೃತಗೊಳಿಸಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
ಸಾಮಾಜಿಕ ಜಾಲತಾಣ ಬಳಕೆದಾರರಲ್ಲಿ ಈ ಘಟನೆ ಕುರಿತು ವಿಭಿನ್ನ ಅಭಿಪ್ರಾಯಗಳನ್ನು ವ್ಯಕ್ತವಾಗುತ್ತಿವೆ. ಕೆಲವರು ಇದನ್ನು ವೈಯಕ್ತಿಕ ಆಯ್ಕೆ ಎಂದು ಹೇಳುತ್ತಿದ್ದರೆ, ಮತ್ತಷ್ಟು ಜನರು ಕುಟುಂಬ ಮೌಲ್ಯಗಳಿಗೆ ಧಕ್ಕೆ ತಂದ ಘಟನೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ವಿಷಯವು ಕಾನ್ಪುರದಲ್ಲಿ ಮಾತ್ರವಲ್ಲದೆ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದ್ದು, ಕುಟುಂಬ ಸಂಬಂಧಗಳ ಬಗ್ಗೆ ಹೊಸ ಚರ್ಚೆಗಳು ಹುಟ್ಟಾಕಿವೆ.
Also Read: