belagavi news :
ದೆಹಲಿಗೆ ತೆರಳುವ ಮುನ್ನ ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೊಸ ಶೈಕ್ಷಣಿಕ ವರ್ಷ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಶುಭವಾಗಲಿ, ಯಶಸ್ಸು ಸಿಗಲಿ ಎಂದು ಸರ್ಕಾರದ ಪರವಾಗಿ ಹಾಗೂ ವೈಯಕ್ತಿಕವಾಗಿ ಹಾರೈಸುತ್ತೇನೆ" ಎಂದು ಹೇಳಿದರು.
ರಾಜ್ಯದ ವಿದ್ಯಾರ್ಥಿಗಳ ಸಾಧನೆಯನ್ನು ಶ್ಲಾಘಿಸಿದ ಅವರು, ಕರ್ನಾಟಕದಲ್ಲಿ ಶಿಕ್ಷಣ ಪಡೆದಿರುವ ವಿದ್ಯಾರ್ಥಿಗಳು ಜಾಗತಿಕ ಮಟ್ಟದಲ್ಲಿ ಅಮೂಲ್ಯ ಮಾನವ ಸಂಪನ್ಮೂಲವಾಗಿ ಹೊರಹೊಮ್ಮಿದ್ದು, ವಿಶ್ವದ ವಿವಿಧ ಕ್ಷೇತ್ರಗಳಲ್ಲಿ ತಮ್ಮದೇ ಆದ ಕೊಡುಗೆಯನ್ನು ನೀಡಿದ್ದಾರೆ ಎಂದು ತಿಳಿಸಿದರು."ನಮ್ಮ ಜ್ಞಾನದ ಬಂಡಾರ ಇಡೀ ವಿಶ್ವವನ್ನೇ ಆಕರ್ಷಿಸುತ್ತಿದೆ. ಜಗತ್ತಿನ ಬಹುತೇಕ ವಿಶ್ವವಿದ್ಯಾಲಯಗಳು ನಮ್ಮ ವಿದ್ಯಾರ್ಥಿಗಳು ಶಿಕ್ಷಣ ಪಡೆದು ಅನೇಕ ಸಾಧನೆಗಳನ್ನು ಮಾಡಿದ್ದಾರೆ" ಎಂದು ಡಿಕೆ ಶಿವಕುಮಾರ್ ಹೇಳಿದರು.
ಹಿಜಾಬ್ ವಿವಾದ, ಕೇಸರಿ ಶಾಲು ಕುರಿತ ರಾಜಕೀಯ ಚರ್ಚೆಗಳು ಮತ್ತು ಶಿಕ್ಷಣ ಕ್ಷೇತ್ರದ ಬೆಳವಣಿಗೆಗಳ ನಡುವೆ ಡಿಕೆ ಶಿವಕುಮಾರ್ ಅವರ ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದೆ. 'ನಮ್ಮಲ್ಲಿ ಅಮೂಲ್ಯವಾದ ಸಂಪನ್ಮೂಲಗಳಿವೆ. ಹೀಗಾಗಿ ಜಗತ್ತು ಭಾರತವನ್ನು ಕರ್ನಾಟಕ ಮೂಲಕ ನೋಡುತ್ತಿದೆ. ಅದೇ ಕಾರಣಕ್ಕೆ ನಮ್ಮ ಹಿರಿಯರು, ಐಐಟಿ, ಐಐಎಂ, ರಾಷ್ಟ್ರೀಯ ಕಾನೂನು ಕಾಲೇಜು, ಇಸ್ರೋ ಸೇರಿದಂತೆ ಎಚ್.ಎ.ಎಲ್ ಇತರೆ ಪ್ರಮುಖ ಸಂಸ್ಥೆಗಳನ್ನು ಇಲ್ಲೇ ಆರಂಭಿಸಿದ್ದಾರೆ. ಇವುಗಳನ್ನು ಮುಂದುವರಿಸಿಕೊಂಡು ಹೋಗುವ ನಿಟ್ಟಿನಲ್ಲಿ ಮಕ್ಕಳು ತಮ್ಮ ವಿದ್ಯಾಭ್ಯಾಸ ಮಾಡಬೇಕಾಗುತ್ತದೆ'ಎಂದು ಸಲಹೆ ನೀಡಿದರು.
ಐಪಿಎಲ್ ಫೈನಲ್ ಪಂದ್ಯ ಯೋಜನೆ ವಿಚಾರವಾಗಿ ಮಾತನಾಡಿದ ಡಿಕೆ ಶಿವಕುಮಾರ್, "ಗುಜರಾತ್ ನವರು ತಮ್ಮ ಪ್ರಭಾವ ಬಳಸಿ ನಮ್ಮಿಂದ ಫೈನಲ್ ಕಪ್ ಪಂದ್ಯವನ್ನು ಕಿತ್ತುಕೊಂಡಿದ್ದಾರೆ. ಮುಂದೆ ಇಂತಹ ಪರಿಸ್ಥಿತಿ ಮರುಕಳಿಸದಂತೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ಮಾಡುತ್ತಿದ್ದೇವೆ. ಇದಕ್ಕೆ ಸ್ವಲ್ಪ ಸಮಯ ಬೇಕಾಗುತ್ತದೆ"ಎಂದು ಹೇಳಿದರು.
ರಾಜ್ಯದ ಕ್ರೀಡಾ ಮೂಲಸೌಕರ್ಯ ಹಾಗೂ ಯುವ ಪ್ರತಿಭೆಗಳ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಅವರು,"ನಮ್ಮ ಸ್ಟೇಡಿಯಂಗೆ ಅನ್ಯಾಯವಾಗಿದೆ. ನಮ್ಮಲ್ಲಿರುವ ಯುವ ಕ್ರೀಡಾಪಟುಗಳಿಗೆ ಅನ್ಯಾಯವಾಗಿದೆ. ಕರ್ನಾಟಕಕ್ಕೆ ಐಪಿಎಲ್ ಫೈನಲ್ ಪಂದ್ಯ ಸಿಗಬೇಕಿತ್ತು"ಎಂದು ಅಭಿಪ್ರಾಯಪಟ್ಟರು.
ಇದೇ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಾಧನೆಯನ್ನು ಶ್ಲಾಘಿಸಿದ ಡಿಕೆ ಶಿವಕುಮಾರ್,"ನಮ್ ಆರ್ಸಿಬಿ ಕರ್ನಾಟಕದ ಹೆಸರಿನಲ್ಲಿ ಆಡುತ್ತಿದೆ. ನಮ್ಮ ರಾಜ್ಯದ ಆಟಗಾರರು ಐಪಿಎಲ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅವರಿಗೆ ಅಭಿನಂದನೆಗಳು"ಎಂದು ಹೇಳಿದರು. ಕರ್ನಾಟಕ ಸರ್ಕಾರ ಮತ್ತು ರಾಜ್ಯದ ಅಭಿಮಾನಿಗಳ ಪರವಾಗಿ ತಂಡಕ್ಕೆ ಶುಭಾಶಯ ತಿಳಿಸಿದ ಅವರು,'ಕರ್ನಾಟಕವನ್ನು ಹೆಮ್ಮೆ ಪಡುವಂತೆ ಮಾಡಿದ್ದೀರಿ. ನಿಮ್ಮ ಸಾಧನೆ ರಾಜ್ಯದ ಯುವಕರಿಗೆ ಸ್ಪೂರ್ತಿಯಾಗಿದೆ"ಎಂದು ಹಾರೈಸಿದರು.
ಐಪಿಎಲ್ ಫೈನಲ್ ಆತಿಥ್ಯ, ಕ್ರೀಡಾ ಮೂಲ ಸೌಕರ್ಯ ಅಭಿವೃದ್ಧಿ ಮತ್ತು ಆರ್ .ಸಿ.ಬಿ ಸಾಧನೆ ಕುರಿತ ಡಿಕೆ ಶಿವಕುಮಾರ್ ಅವರ ಹೇಳಿಕೆ ಇದೀಗ ರಾಜ್ಯದ ಕ್ರೀಡಾ ಹಾಗೂ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದೆ.
ಡಿಕೆ ಶಿವಕುಮಾರ್ ಅವರು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಐತಿಹಾಸಿಕ ಸಾಧನೆಯನ್ನು ಶ್ಲಾಘಿಸಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.
ತಮ್ಮ ಪೋಸ್ಟ್ ನಲ್ಲಿ ಅವರು,"ಆರ್ಸಿಬಿ ಸತತ ಎರಡನೇ ಫೈನಲ್ ಪ್ರಶಸ್ತಿಯನ್ನು ಗೆಲ್ಲುವ ಮೂಲಕ ಇತಿಹಾಸ ಸೃಷ್ಟಿಸಿದೆ. ಧೈರ್ಯ, ಸೈಯಮ್ಮ ಮತ್ತು ನಿಜವಾದ ಚಾಂಪಿಯನ್ ಗಳ ಹೃದಯದಿಂದ ಮತ್ತೊಮ್ಮೆ ಬೆಂಗಳೂರಿಗೆ ಹೆಮ್ಮೆ ತಂದಿದೆ"ಎಂದು ಬರೆದಿದ್ದಾರೆ.
ತಂಡದ ಯಶಸ್ಸಿನಲ್ಲಿ ಪ್ರಮುಖ ಪಾತ್ರವಹಿಸಿದ ಆಟಗಾರರು, ತರಬೇತುದಾರರು, ಸಹಾಯಕ ಸಿಬ್ಬಂದಿ ಹಾಗೂ ಕೋಟ್ಯಾಂತರ ಅಭಿಮಾನಿಗಳ ಕೊಡುಗೆಯನ್ನು ಸ್ಮರಿಸಿದ ಡಿಕೆ ಶಿವಕುಮಾರ್, "ತಂಡದ ಪ್ರತಿ ಹೆಜ್ಜೆಯಲ್ಲೂ ಬೆಂಬಲವಾಗಿ ನಿಂತ ಆಟಗಾರರು, ತರಬೇತಿದಾರರು, ಸಹಾಯಕ ಸಿಬ್ಬಂದಿ ಮತ್ತು ಲಕ್ಷಾಂತರ ಅಭಿಮಾನಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು"ಎಂದು ತಿಳಿಸಿದ್ದಾರೆ.
ಆರ್ಸಿಬಿಯ ಈ ಸಾಧನೆ ಕರ್ನಾಟಕದ ಕ್ರೀಡಾಭಿಮಾನಿಗಳಲ್ಲಿ ಸಂಭ್ರಮದ ವಾತಾವರಣವನ್ನು ಸೂಚಿಸಿದ್ದು, ರಾಜ್ಯದ ಯುವ ಕ್ರೀಡಾಪಟುಗಳಿಗೆ ಹೊಸ ಪ್ರೇರೇಪಣೆ ಪರಿಣಮಿಸಿದೆ. ಸತತ ಎರಡು ಬಾರಿ ಐಪಿಎಲ್ ಕಿರೀಟ ಗೆದ್ದ ಸಾಧನೆಯೊಂದಿಗೆ ಆರ್ಸಿಬಿ ಭಾರತೀಯ ಕ್ರಿಕೆಟ್ ಇತಿಹಾಸದಲ್ಲಿ ಹೊಸ ಅಧ್ಯಯ ಬರೆದಿದೆ.
Also Read:
ಅಭಿಷೇಕ್ ಬ್ಯಾನರ್ಜಿ ಮೇಲೆ ದಾಳಿ ಆರೋಪ: ಲೋಕಸಭೆ ಸ್ಪೀಕರ್ ಗೆ ಪತ್ರ, ನ್ಯಾಯಾಲಯಕ್ಕೂ ಅರ್ಜಿ