belagavi news:
ಬೆಂಗಳೂರು: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಅವರು ತಮ್ಮ ನಿರ್ಧಾರವನ್ನು ಹಿಂಪಡೆದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
ನಗರದಲ್ಲಿ ರಾಮಲಿಂಗಾ ರೆಡ್ಡಿ ಅವರೊಂದಿಗೆ ಮಹತ್ವದ ಮಾತುಕತೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸುರ್ಜೇವಾಲಾ, "ರಾಮಲಿಂಗಾ ರೆಡ್ಡಿ" ಅವರು ಸಚಿವ ಸ್ಥಾನಕ್ಕೆ ನೀಡಿದ್ದ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ. ಅವರು ಮುಂದುವರಿದು ಸರ್ಕಾರದ ಭಾಗವಾಗಿರಲಿದ್ದು, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಸಚಿವ ಸಂಪುಟದಲ್ಲಿಯೇ ಕಾರ್ಯನಿರ್ವಹಿಸಲಿದ್ದಾರೆ ಎಂದು ಹೇಳಿದರು.
ಇತ್ತೀಚಿನ ದಿನಗಳಲ್ಲಿ ಖಾತೆ ಹಂಚಿಕೆ ಸಂಬಂಧ ಉಂಟಾಗಿದ್ದ ಅಸಮಾಧಾನದಿಂದ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಅವರನ್ನು ಮನವೊಲಿಸುವಲ್ಲಿ ಕಾಂಗ್ರೆಸ್ ನಾಯಕತ್ವ ಯಶಸ್ವಿಯಾಗಿದ್ದು, ಈ ಮೂಲಕ ಪಕ್ಷದೊಳಗಿನ ಗೊಂದಲಕ್ಕೆ ತಾತ್ಕಾಲಿಕ ತೆರೆ ಬಿದ್ದಂತಾಗಿದೆ. ಈ ಬೆಳವಣಿಗೆ ರಾಜ್ಯ ರಾಜಕೀಯ ವಲಯದಲ್ಲಿ ಮಹತ್ವದ ಚರ್ಚೆಗೆ ಕಾರಣವಾಗಿದೆ.
ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ರಾಮಲಿಂಗಾ ರೆಡ್ಡಿ ಅವರು ತಪ್ಪು ತಿಳುವಳಿಕೆಯಿಂದ ಈ ನಿರ್ಧಾರ ಕೈಗೊಂಡಿದ್ದು, ಇದೀಗ ತಮ್ಮ ರಾಜೀನಾಮೆಯನ್ನು ಹಿಂಪಡಿದಿದ್ದಾರೆ ಎಂದು ಕಾಂಗ್ರೆಸ್ ರಾಜ್ಯ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, "ಕೆಲವು ತಪ್ಪು ತಿಳುವಳಿಕೆಗಳ ಕಾರಣದಿಂದ ರಾಮಲಿಂಗಾ ರೆಡ್ಡಿ ಅವರು ರಾಜೀನಾಮೆ ನೀಡಿದ್ದರು. ಈಗ ಆ ಎಲ್ಲಾ ವಿಚಾರಗಳು ಚರ್ಚೆಯ ಮೂಲಕ ಬಗೆಹರಿದಿದ್ದು, ಅವರು ತಮ್ಮ ರಾಜೀನಾಮೆಯನ್ನು ವಾಪಸ್ ಪಡೆದಿದ್ದಾರೆ" ಎಂದು ಹೇಳಿದರು.
ಇದೇ ವೇಳೆ ರಾಮಲಿಂಗಾ ರೆಡ್ಡಿ ಅವರ ಕೊಡುಗೆಯನ್ನು ಶ್ಲಾಘಿಸಿದ ಸುರ್ಜೇವಾಲಾ, " ರಾಮಲಿಂಗಾ ರೆಡ್ಡಿ ಅವರು ಕಾಂಗ್ರೆಸ್ ಪಕ್ಷದ ಅಮೂಲ್ಯ ಆಸ್ತಿ. ಪಕ್ಷದ ಸಂಘಟನೆ ಮತ್ತು ಸರ್ಕಾರದಲ್ಲಿ ಅವರ ಪಾತ್ರ ಮಹತ್ವದ್ದಾಗಿದೆ" ಎಂದು ಹೇಳಿದರು.
ಈ ಬೆಳವಣಿಗೆಯೊಂದಿಗೆ ಸಚಿವರ ರಾಜೀನಾಮೆ ಸುತ್ತಲಿನ ರಾಜಕೀಯ ಗೊಂದಲಕ್ಕೆ ತಾತ್ಕಾಲಿಕ ತೆರೆ ಬಿದ್ದಿದ್ದು, ಕಾಂಗ್ರೆಸ್ ನಾಯಕತ್ವದ ಮನವೊಲಿಕೆ ಯಶಸ್ವಿಯಾಗಿದೆ.
Also Read:
"ಗಾಂಜಾ ಮತ್ತು ಬೆಟ್ಟಿಂಗ್ ಹಾವಳಿ ಮುಂದುವರಿಕೆ : ಕೋಲಾರ್ ಎಸ್‌ಪಿಗೆ ಶಾಸಕ ಸಮೃದ್ಧಿ ಮಂಜುನಾಥ್"