ತೀವ್ರ ಸ್ವರೂಪ ಕಬ್ಬು ಬೆಳೆಗಾರರ ಪ್ರತಿಭಟನೆ ಪೊಲೀಸರ ಲಾಠಿ ಚಾರ್ಜ್ ಗೆ ಪ್ರತಿಯಾಗಿ ರೈತರಿಂದ ಕಲ್ಲೇಟು
ಬೆಳಗಾವಿಯಲ್ಲಿ ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಹತ್ತರಗಿ ಬಳಿ ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡಲು ಬಂದ ರೈತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದ್ದಾರೆ. ಇದರಿಂದ ರೈತರ ಸಹನೆ ಕಟ್ಟೆ ಹೊಡೆದಿದ್ದು, ಪೊಲೀಸರ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ.
ಬೆಳಗಾವಿ:
ಬೆಳಗಾವಿಯಲ್ಲಿ (Belagavi) ನಡೆಯುತ್ತಿರುವ ಕಬ್ಬು ಬೆಳೆಗಾರರ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. ಪ್ರತಿ ಕ್ವಿಂಟಾಲ್ಗೆ 3500 ನೀಡುವಂತೆ ಪಟ್ಟು ಹಿಡಿದು ಹೆದ್ದಾರಿ ಬಂದ್ಗೆ ಮುಂದಾಗಿರುವ ರೈತರ ಮೇಲೆ ಪೊಲಿಸರು ಲಾಠಿಚಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಲಾಠಿ ಚಾರ್ಜ್ಗೆ ಪ್ರತಿಯಾಗಿ ಪೊಲೀಸರ ವಾಹನದ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಇದರಿಂದ ಹತ್ತರಗಿಯಲ್ಲಿ ಪರಿಸ್ಥಿತಿ ಉದ್ವಿಗ್ನಗೊಂಡಿದೆ.
ಒಂದೆಡೆ ಬೆಂಗಳೂರಿನಲ್ಲಿ ಸಿಎಂ ಸಿದ್ದರಾಮಯ್ಯನವರು ಕಬ್ಬು ಕಾರ್ಖಾನೆ ಮಾಲೀಕರ ನಡೆ ನಡೆಸಿದ್ದರೆ ಇತ್ತ ಪ್ರತಿ ಟನ್ ಕಬ್ಬಿಗೆ 3500 ರೂ. ದರ ನಿಗದಿ ಪಡಿಸುವಂತೆ ಒತ್ತಾಯಿಸಿ ಬೆಳಗಾವಿ ಜಿಲ್ಲೆಯಲ್ಲಿ ರೈತರು ನಡೆಸುತ್ತಿರುವ ಹೋರಾಟ ಇಂದು ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಗೇಟ್ ಬಳಿ ಹೋಗಿದ್ದು, ರೈತರು ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆಗೆ ಮುಂದಾಗಿದ್ದಾರೆ. ಆ ವೇಳೆ ಪೊಲೀಸರು ಲಾಠಿ ಚಾರ್ಜ್ ಮೂಲಕ ರೈತರನ್ನು ಚದುರಿಸಲು ಮುಂದಾಗಿದ್ದಾರೆ. ಇದರಿಂದ ಆಕ್ರೋಶಗೊಂಡ ರೈತರು ಪೊಲಿಸ್ ವಾಹನಗಳ ಮೇಲೆ ಕಲ್ಲು ತೂರಿದ್ದಾರೆ. ಇದರಿಂದ ಸ್ಥಳದಲ್ಲಿ ಉದ್ವಿಗ್ನಿ ಪರಿಸ್ಥಿತಿ ನಿರ್ಮಾಣವಾಗಿದ್ದು, ಕ್ಷಣ ಕ್ಷಣಕ್ಕೂ ರೈತರ ಹೋರಾಟ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.
ಅತ್ತ ಮೂಡಲಗಿ ತಾಲೂಕಿನ ಗುರ್ಲಾಪುರ ಕ್ರಾಸ್ನಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ನೇತೃತ್ವದಲ್ಲಿ ರೈತರ ಹೋರಾಟ 9ನೇ ದಿನಕ್ಕೆ ಕಾಲಿಟ್ಟಿದೆ. ಇತ್ತ ಹುಕ್ಕೇರಿ ತಾಲೂಕಿನ ಸಾವಿರಾರು ರೈತರು ಟ್ರ್ಯಾಕ್ಟರ್ಗಳ ಸಮೇತ ಹತ್ತರಗಿ ಟೋಲ್ ಗೇಟ್ ಬಳಿ ರಾಷ್ಟ್ರೀಯ ಹೆದ್ದಾರಿಗೆ ನುಗ್ಗಿದ್ದು. ಈ ವೇಳೆ ರಾಜ್ಯ ಸರ್ಕಾರ ಮತ್ತು ಕಾರ್ಖಾನೆ ಮಾಲೀಕರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ, ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಲಾಠಿ ಜಾರ್ಜ್ ನಡೆಸಿದ್ದಾರೆ. ಇದರಿಂದ ರೊಚ್ಚಿಗೆದ್ದ ರೈತರು ಪೊಲೀಸರ ವಿರುದ್ಧ ಸಿಡಿದೆದ್ದಿದ್ದು, ಕಲ್ಲು ತೂರಾಟ ನಡೆಸಿದ್ದಾರೆ.
ಇನ್ನಷ್ಟು ಓದಿರಿ :
ಮೋಸ್ಟ್ ವಾಂಟೆಂಡ್ ಕ್ರಿಮಿನಲ್ ಆದ ಶ್ರೀಕಾಂತ್ ತಿವಾರಿ ಜೈದೀಪ್ ವಿಲನ್