belagavi news :
ಮೇಕೆದಾಟು ಯೋಜನೆಗೆ ತಮಿಳುನಾಡಿನ ಗಟ್ಟಿಯಾದ ವಿರೋಧ!
ಕರ್ನಾಟಕ ಸರ್ಕಾರದ ಮಹತ್ವಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆ ವಿರುದ್ಧ ತಮಿಳುನಾಡು ವಿಧಾನಸಭೆ ಇಂದು ಸರ್ವಾನುಮತದ ನಿರ್ಣಯವನ್ನು ಅಂಗೀಕರಿಸಿದೆ. ಮುಖ್ಯಮಂತ್ರಿ ಜೋಸೆಫ್ ವಿಜಯ್ ಮಂಡಿಸಿದ ಈ ನಿರ್ಣಯಕ್ಕೆ ಕಾಂಗ್ರೆಸ್, ವಿಸಿಕೆ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದೆ.
ನಿರ್ಣಯದಲ್ಲಿ, ಮೇಕೆದಾಟು ಯೋಜನೆಗೆ ಯಾವುದೇ ರೀತಿಯ ಅನುಮೋದನೆ ನೀಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದ್ದು, ಇಂತಹ ಯೋಜನೆಗಳು ಅಸ್ತಿತ್ವದಲ್ಲಿರುವ ಕಾನೂನು ಚೌಕಟ್ಟುಗಳು ಹಾಗೂ ತಮಿಳುನಾಡಿನ ಜನರ ನೀರಿನ ಹಕ್ಕುಗಳನ್ನು ಉಲ್ಲಂಘಿಸುತ್ತವೆ ಎಂದು ಹೇಳಲಾಗಿದೆ.
ಕಾವೇರಿ ನೀರಿನ ಹೆಚ್ಚಿಗೆ ವಿಚಾರದಲ್ಲಿ ಈಗಾಗಲೇ ಸೂಕ್ಷ್ಮ ಪರಿಸ್ಥಿತಿ ಇರುವ ಸಂದರ್ಭದಲ್ಲಿ, ಈ ಬೆಳವಣಿಗೆ ಕರ್ನಾಟಕ ತಮಿಳುನಾಡು ನಡುವಿನ ನೀರಿನ ವಿವಾದಕ್ಕೆ ಮತ್ತಷ್ಟು ಮಹತ್ವ ಪಡೆದುಕೊಳ್ಳುವಂತೆ ಮಾಡಿದೆ. ಮೇಕೆದಾಟು ಯೋಜನೆ ಕುರಿತು ಮುಂದಿನ ರಾಜಕೀಯ ಹಾಗೂ ಕಾನೂನು ಬೆಳವಣಿಗೆಗಳ ಮೇಲೆ ಎಲ್ಲರ ಕಣ್ಣು ನೆಟ್ಟಿದೆ.
ಮೇಕೆದಾಟು ಆಣೆಕಟ್ಟು ಯೋಜನೆ ವಿಚಾರವಾಗಿ ತಮಿಳುನಾಡು ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಜೋಸೆಫ್ ವಿಜಯ್ ಮಂಡಿಸಿದ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ. ನಿರ್ಣಯ ಮಂಡಿಸಿದ ವೇಳೆ ವಿಜಯ್, 2007ರ ಕಾವೇರಿ ಜಲ ವಿವಾದ ನ್ಯಾಯಮಂಡಳಿಯ ಅಂತಿಮ ತೀರ್ಪು ಹಾಗೂ 2018ರ ಸುಪ್ರೀಂ ಕೋರ್ಟ್ ತೀರ್ಪುಗಳನ್ನು ಗೌರವಿಸದೇ ಕರ್ನಾಟಕ ಸರಕಾರ ಏಕ ಪಕ್ಷಿಯವಾಗಿ ಮುಂದುವರೆದಿದೆ ಎಂದು ಆರೋಪಿಸಿದರು.
ಸಂಬಂಧಿತ ಜಲಾನಯನ ರಾಜ್ಯಗಳ ಒಪ್ಪಿಗೆ ಪಡೆಯದೇ, ಕೇಂದ್ರ ಸರ್ಕಾರದ ಅನುಮೋದನೆ ಇಲ್ಲದೇ ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಅಣೆಕಟ್ಟು ನಿರ್ಮಿಸಲು ಕರ್ನಾಟಕ ಕೈಗೊಂಡಿರುವ ಪ್ರಯತ್ನಕ್ಕೆ ತಮಿಳುನಾಡು ವಿಧಾನಸಭೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.ಇಂತಹ ಕ್ರಮಗಳು ಸ್ವೀಕಾರಾರ್ಹವಲ್ಲ ಎಂದು ನಿರ್ಣಯದಲ್ಲಿ ಸ್ಪಷ್ಟಪಡಿಸಲಾಗಿದೆ.
ಇದಲ್ಲದೆ,ಮೇಕೆದಾಟು ಯೋಜನೆಗೆ ಅಗತ್ಯವಿರುವ ಎಲ್ಲ ಅನುಮತಿಗಳನ್ನು ಕೇಂದ್ರ ಸರ್ಕಾರ ತಡೆಹಿಡಿಯಬೇಕು ಎಂದು ಸದನ ಒತ್ತಾಯಿಸಿದೆ.ಈ ನಿರ್ಣಯಕ್ಕೆ ಆಡಳಿತ ಹಾಗೂ ಪ್ರತಿಪಕ್ಷಗಳು ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳು ಬೆಂಬಲ ಸೂಚಿಸಿದ್ದು,ಕಾವೇರಿ ನೀರಿನ ಹಂಚಿಕೆ ವಿಚಾರದಲ್ಲಿ ತಮಿಳುನಾಡಿನ ಏಕ ಮತದ ನಿಲುವು ಮತ್ತೊಮ್ಮೆ ವ್ಯಕ್ತವಾಗಿದೆ.
ಈ ಬೆಳವಣಿಗೆ ಕರ್ನಾಟಕ ತಮಿಳುನಾಡು ನಡುವಿನ ಕಾವೇರಿ ವಿವಾದಕ್ಕೆ ಹೊಸ ರಾಜಕೀಯ ಮತ್ತು ಕಾನೂನು ಆಯಾಮ ನೀಡುವ ಸಾಧ್ಯತೆ ಇದೆ.
ಮೇಕೆದಾಟು ಆಣೆಕಟ್ಟು ಯೋಜನೆಗೆ ತಾಂತ್ರಿಕ ಮತ್ತು ಪರಿಸರ ಅನುಮತಿಗಳು ಸೇರಿದಂತೆ ಯಾವುದೇ ರೀತಿಯ ಅನುಮೋದನೆ ನೀಡಬಾರದು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತೇವೆ ಎಂದು ಅವರು ತಿಳಿಸಿದರು.
ಕಾವೇರಿ ಜಲಾನಯನ ಪ್ರದೇಶವು ಈಗಾಗಲೇ ನೀರಿನ ಕೊರತೆಯನ್ನು ಎದುರಿಸುತ್ತಿದ್ದು,ಲಭ್ಯವಿರುವ ನೀರನ್ನು ರಾಜ್ಯಗಳ ನಡುವೆ ಹಂಚಿಕೆ ಮಾಡಲಾಗಿದೆ. ಹೀಗಾಗಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಯಾವುದೇ ಹೊಸ ಯೋಜನೆ ಅಥವಾ ಹೆಚ್ಚುವರಿ ನೀರಿನ ಬಳಕೆಗೆ ಅವಕಾಶವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿಧಾನಸಭೆಯಲ್ಲಿ ಸ್ಪಷ್ಟಪಡಿಸಿದರು.
ಕಾವೇರಿ ತಮಿಳುನಾಡು ಮತ್ತು ಕರ್ನಾಟಕದ ನಡುವಿನ ಅತ್ಯಂತ ಸೂಕ್ಷ್ಮ ವಿಷಯವಾಗಿದ್ದು,ಇತರ ಜಲಾನಯನ ರಾಜ್ಯಗಳ ಒಪ್ಪಿಗೆ ಹಾಗೂ ಕೇಂದ್ರ ಸರ್ಕಾರದ ಅನುಮೋದನೆ ಇಲ್ಲದೆ ಅಣೆಕಟ್ಟು ಅಥವಾ ಹೊಸ ನೀರು ಸಂಗ್ರಾಯ ಯೋಜನೆ ಕೈಗೊಳ್ಳದಂತೆ ಕರ್ನಾಟಕ ಸರ್ಕಾರಕ್ಕೆ ಸಲಹೆ ನೀಡಬೇಕು ಎಂದು ಕೇಂದ್ರ ಸರ್ಕಾರವನ್ನು ತಮಿಳುನಾಡು ವಿಧಾನಸಭೆ ಒತ್ತಾಯಿಸಿದೆ.
ಇದಲ್ಲದೆ, ಕರ್ನಾಟಕ ಸರ್ಕಾರ ಸಲ್ಲಿಸಿರುವ ಮೇಕೆದಾಟು ಯೋಜನೆಯ ವಿವರವಾದ ಯೋಜನಾ ವರದಿಗೆ ಯಾವುದೇ ಅನುಮೋದನೆ ನೀಡಬಾರದು ಎಂದು ನಿರ್ಣಯದಲ್ಲಿ ಆಗ್ರಹಿಸಲಾಗಿದೆ. ತಮಿಳುನಾಡಿನ ರೈತರ ಹಿತಾಸಕ್ತಿಗಳನ್ನು ಕಾಪಾಡಲು ಕರ್ನಾಟಕದ ಈ ಪ್ರಯತ್ನವನ್ನು ತಡೆಯಲು ರಾಜ್ಯ ಸರ್ಕಾರ ಕೈಗೊಂಡಿರುವ ಎಲ್ಲಾ ಕ್ರಮಗಳಿಗೆ ವಿಧಾನಸಭೆ ಸರ್ವಾನುಮತದ ಬೆಂಬಲ ವ್ಯಕ್ತಪಡಿಸಿದೆ.
ಈ ನಿರ್ಣಯದೊಂದಿಗೆ ಮೇಕೆದಾಟು ವಿವಾದ ಮತ್ತೊಮ್ಮೆ ರಾಜಕೀಯವಾಗಿ ಕಾವೇರಿದ್ದು,ಕರ್ನಾಟಕ ತಮಿಳುನಾಡು ನಡುವಿನ ಕಾವೇರಿ ನೀರಿನ ಹಂಚಿಕೆ ವಿಚಾರಕ್ಕೆ ಹೊಸ ಚರ್ಚೆಗೆ ಕಾರಣವಾಗಿದೆ.
Also Read:
ಮಂಗಳೂರು ಉದ್ಯೋಗ ಮೇಳ 2026 : ಐಟಿಐ ಅಭ್ಯರ್ಥಿಗಳಿಗೆ ಜೂನ್ 22ರಂದು ದೊಡ್ಡ ಅವಕಾಶ