<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

Tamil Nadu Politics: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

Tamil Nadu Politics: ರಾಜ್ಯಪಾಲರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ
Summary: The issue of the Governor's late assent to bills passed by the assembly in Tamil Nadu has become a hot topic of political debate. The Congress has demanded that the mandate be respected and criticized the Governor's move as being against constitutional values. The development has led to a fresh debate on Centre-State relations.

belagavi news:

ತಮಿಳುನಾಡಿನಲ್ಲಿ ಸರ್ಕಾರ ರಚನೆ ಸಂಬಂಧ ಬಹುಮತದ ವಿವರಗಳನ್ನು ಸಲ್ಲಿಸುವಂತೆ ರಾಜ್ಯಪಾಲರು ಟಿವಿಕೆ ಪಕ್ಷವನ್ನು ಕೋರಿರುವ ಬೆಳವಣಿಗೆಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಜನಾದೇಶವನ್ನು ಗೌರವಿಸಬೇಕು ಹಾಗೂ ಸಂವಿಧಾನಾತ್ಮಕ ಪದ್ದತಿಗಳಿಗೆ ವಿರುದ್ಧವಾಗಿ ಯಾವುದೇ ಕ್ರಮ ಕೈಗೊಳ್ಳಬಾರದು ಎಂದು ಕಾಂಗ್ರೆಸ್ ಎಚ್ಚರಿಸಿದೆ.

ಚೆನ್ನೈ (ತಮಿಳುನಾಡು): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಟಿವಿಕೆ ಪಕ್ಷ ಅತಿ ಹೆಚ್ಚು ಸ್ಥಾನಗಳನ್ನು ಗೆದ್ದಿದ್ದರು ಸರ್ಕಾರ ರಚಿಸಲು ಅಗತ್ಯವಾದ ಸ್ಪಷ್ಟ ಬಹುಮಾನ ಸಿಕ್ಕಿಲ್ಲ. ಇದರಿಂದ ರಾಜ್ಯದಲ್ಲಿ ಅತ್ಯಂತ ಪರಿಸ್ಥಿತಿ ನಿರ್ಮಾಣವಾಗಿದ್ದು, ರಾಜಕೀಯ ಚಟುವಟಿಕೆಗಳು ತೀವ್ರಗೊಂಡಿವೆ.

ಈ ನಡುವೆ ಕಾಂಗ್ರೆಸ್ ಪಕ್ಷ ಟಿವಿಕೆಗೆ ಷರತ್ತುಬದ್ಧ ಬೆಂಬಲ ನೀಡಲು ಮುಂದಾಗಿದೆ. ಆದಾಗ್ಯೂ, ಸರ್ಕಾರ ರಚನೆಗೆ ಇನ್ನೂ ಕೆಲವು ಶಾಸಕರ ಬೆಂಬಲ ಅಗತ್ಯವಿರುವ ಸ್ಥಿತಿ ಮುಂದುವರೆದಿದೆ.

Sponsored

ರಾಜದ ರಾಜಕೀಯ ಬೆಳವಣಿಗೆಗಳ ಕುರಿತು ಪ್ರತಿಕ್ರಿಯಿಸಿರುವ ತಮಿಳುನಾಡು ಕಾಂಗ್ರೆಸ್ ಘಟಕ "ಜನಾದೇಶಕ್ಕೆ ದ್ರೋಹ ಬಗೆಯಬಾರದು"ಎಂದು ರಾಜ್ಯಪಾಲರನ್ನು ಉದ್ದೇಶಿಸಿ ಅಸಮಾಧಾನ ವ್ಯಕ್ತಪಡಿಸಿದೆ. ಚುನಾವಣಾ ಫಲಿತಾಂಶದ ಆತ್ಮಕ್ಕೆ ಧಕ್ಕೆಯಾಗದಂತೆ ಸಂವಿಧಾನಾತ್ಮಕ ಮೌಲ್ಯಗಳನ್ನು ಕಾಪಾಡಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಟಿವಿಕೆ ಮುಖ್ಯಸ್ಥ ವಿಜಯ್ ರಾಜ್ಯದಲ್ಲಿ ಸರ್ಕಾರ ರಚಿಸಲು ಅಗತ್ಯ ಬೆಂಬಲ ಒಗ್ಗೂಡಿಸುವ ಪ್ರಯತ್ನ ಮುಂದುವರಿಸಿದ್ದಾರೆ ಕಾಂಗ್ರೆಸ್ ಪಕ್ಷದ 5 ಶಾಸಕರ ಬೆಂಬಳಿ ಈಗಾಗಲೇ ದೊರೆತಿದ್ದು ಇನ್ನು ಆರು ಶಾಸಕ ಬೆಂಬಲಕ್ಕಾಗಿ ಮಾತುಕತೆ ನಡೆಯುತ್ತಿದೆ ಎಂದು ತಿಳಿಸಲಾಗಿದೆ.

ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ತಮಿಳುನಾಡು ಕಾಂಗ್ರೆಸ್ ಸಮಿತಿ, " ಜನಾದೇಶಕ್ಕೆ ದ್ರೋಹ ಬಗೆಯಬೇಡಿ" ಹಾಗೂ ಯಾವುದೇ ರೀತಿಯ ರಾಜಕೀಯ ಮೋಸದಾಟ ನಡೆಯಬಾರದೆಂದು ಆಕ್ರೋಶ ವ್ಯಕ್ತಪಡಿಸಿದೆ.

ಗುರುವಾರ ವಿಜಯ್ ಅವರು ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರನ್ನು ಭೇಟಿ ಮಾಡಿದ್ದರು. ಈ ಭೇಟಿಯ ಬಳಿಕ ಪ್ರತಿಕ್ರಿಸಿದ ರಾಜ್ಯಪಾಲರು ಕಚೇರಿ ತಮಿಳುನಾಡು ವಿಧಾನಸಭೆಯಲ್ಲಿ ಸರ್ಕಾರ ರಚಿಸಲು ಟಿವಿಗೆ ಅಗತ್ಯ ಬಹುಮತದ ಬೆಂಬಲ ಇನ್ನು ಲಭ್ಯವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

Sponsored

ಈ ಕುರಿತು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ ಪ್ರತಿಕ್ರಿಯೆ ಮಿಡಿದು ಯಾವುದೇ ರಾಜಕೀಯ ಮೈತ್ರಿ ಅಥವಾ ಪಕ್ಷಕ್ಕೆ ಸ್ಪಷ್ಟ ಬಹುಮತ ಸಿಗದ ಸಂದರ್ಭದಲ್ಲಿ ರಾಜ್ಯಪಾಲರು ಚುನಾಯಿತ ಸದಸ್ಯರ ಸಂಖ್ಯಾಬಲದ ಆಧಾರದ ಮೇಲೆ ಏಕೈಕ ಅತಿ ದೊಡ್ಡ ಪಕ್ಷದ ನಾಯಕನನ್ನು ಸರ್ಕಾರ ರಚಿಸಲು ಆಹ್ವಾನಿಸಬೇಕು ಎಂದು ಹೇಳಿದ್ದಾರೆ. ಇದು ಸ್ಥಿರವಾದ ರಾಜಕೀಯ ಸಾಂಪ್ರದಾಯಿಕ ಹಾಗೂ ನಿಯಮವಾಗಿದೆ ಎಂದು ಅವರು ಅಭಿಪ್ರಾಯ ಪಟ್ಟಿದ್ದಾರೆ.

ಇನ್ನೊಂದೆಡೆ ಟಿವಿಕೆ ಜಂಟಿ ಪ್ರಧಾನ ಕಾರ್ಯದರ್ಶಿ ಸಿಟಿಆರ್ ನಿರ್ಮಲ ಕುಮಾರ್ ಅವರು ಭಾರತೀಯ ಕಮ್ಯುನಿಸ್ಟ್ ಪಕ್ಷ ನಾಯಕರನ್ನು ಭೇಟಿ ಮಾಡಿ ತಮಿಳುನಾಡಿನಲ್ಲಿ ಸರ್ಕಾರ ರಚನೆಗೆ ಬೆಂಬಲ ನೀಡುವಂತೆ ಮನವಿ ಮಾಡಿದ್ದಾರೆ.

ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದವರು ವಿಸಿಕೆ ಹಾಗೂ ಸಿಪಿಐ 2 ಪಕ್ಷಗಳು ಟಿವಿಗೆ ಬೆಂಬಲ ನೀಡುವ ಕುರಿತು ಆಂತರಿಕ ಸಭೆಗಳನ್ನು ನಡೆಸುತ್ತಿರುವ ಮಾಹಿತಿ ಇದೆ ಎಂದು ತಿಳಿಸಿದ್ದಾರೆ.

Also Read:

Sponsored

ದೇಶದ ಏಕತೆಗಾಗಿ ಭಾರತೀಯರಲ್ಲಿ ಏಕಭಾವ ಮೂಡಬೇಕಿದೆ :ಮೋಹನ್ ಭಾಗವತ

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online