<?= $pageTitle ?>
Logo
ಮುಖಪುಟ ಓದುವುದು ಕೇಳು
Entertainment

ಪೋಕ್ಸೋ ಕಾಯ್ದೆ ಅಡಿ ಕಿರುತೆರೆಯ ನಟ ಬಂಧನ ; ತನಿಖೆ ಮುಂದುವರಿಕೆ

ಪೋಕ್ಸೋ ಕಾಯ್ದೆ ಅಡಿ ಕಿರುತೆರೆಯ ನಟ ಬಂಧನ ; ತನಿಖೆ ಮುಂದುವರಿಕೆ
Summary: The police have arrested a TV actor under the POCSO Act on charges of molesting a minor girl. Investigation into the case is ongoing.

Belagavi News:

ಹಿಂದಿ ಕಿರುತೆರೆಯ ಜನಪ್ರಿಯ ನಟ ರೋಹಿತ್ ಚಂದೇಲ್ ಅವರನ್ನು ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದಾರೆ. 16 ವರ್ಷದ ಬಾಲಕಿಯನ್ನು ಹಿಂಬಾಲಿಸುವುದು, ವಿವಿಧ ನಂಬರ್ ಗಳಿಂದ ಕರೆ ಮಾಡಿ ಮಾನಸಿಕ ಕಿರುಕುಳ ನೀಡುವುದು ಹಾಗೂ ಹಲ್ಲೆ ನಡೆಸಿದ ಆರೋಪ ನಟನ ಮೇಲಿದೆ.

ಆರೋಪದ ಹಿನ್ನೆಲೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ನಟನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಕ್ರಮ ಕೈಗೊಳ್ಳಲಾಗಿದೆ. ಪ್ರಕರಣದ ತನಿಗೆ ಮುಂದುವರೆದಿದ್ದು, ಆರೋಪಿಗೆ ಸಂಬಂಧಿಸಿದ ವಿಚಾರಣೆ ನಡೆಯುತ್ತಿದೆ.

ನ್ಯಾಯಾಲಯವು ರೋಹಿತ್ ಚಂದೇಲ್ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಪೊಲೀಸರು ಹೆಚ್ಚಿನ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆ. ಪ್ರಕರಣದ ಸಂಪೂರ್ಣ ತನಿಖೆಯ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಘಟನೆ ಹಿಂದಿ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಅಪ್ರಾಪ್ತರ ಸುರಕ್ಷತೆ ಕುರಿತು ಮತ್ತೊಮ್ಮೆ ಗಮನ ಸೆಳೆದಿದೆ.

Rohit Chandel arrest - ಪೋಕ್ಸೋ ಪ್ರಕರಣದಲ್ಲಿ ನಟ ರೋಹಿತ್ ಚಂದೇಲ್ ಪೊಲೀಸ್ ಕಸ್ಟಡಿಗೆ - ದೂರಿನಲ್ಲಿ ಗಂಭೀರ ಆರೋಪ :

ಹಿಂದಿ ಇರುತ್ತಾರೆ ನಟ ರೋಹಿತ್ ಚಂದೇಲ್ ಅವರನ್ನು ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಅಡಿಯಲ್ಲಿ ಮುಂಬೈ ಪೊಲೀಸರು ಬಂಧಿಸಿದ್ದು, ನ್ಯಾಯಾಲಯವು ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

29 ವರ್ಷದ ರೋಹಿತ್ ಚಂದೇಲ್ ಅವರು 'ಪಾಂಡ್ಯ ಸ್ಟೋರ್' ಮತ್ತು 'ಕಾಶಿಬಾಯಿ ಬಾಜಿರಾವ್ ಬಲ್ಲಾಳ್' ಧಾರಾವಾಹಿಗಳ ಮೂಲಕ ಜನಪ್ರಿಯರಾಗಿದ್ದಾರೆ. ಪಂತ್ ನಗರ ಪೊಲೀಸರು ದಹಿಸರ್ ನಲ್ಲಿರುವ ಅವರ ನಿವಾಸದಲ್ಲಿ ಬಂಧಿಸಿ, ಬಳಿಕ ವಿಶೇಷ ಪೋಕ್ಸೋ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ನಟನ ವಿರುದ್ಧ ಪೋಕ್ಸೋ ಕಾಯ್ದೆ ಅಡಿ ಪ್ರಕರಣ ದಾಖಲಾಗಿದ್ದು, ಪ್ರಕರಣದ ತನಿಖೆ ಮುಂದುವರಿದಿದೆ. ನ್ಯಾಯಾಲಯದ ಆದೇಶದಂತೆ ಸದ್ಯ ರೋಹಿತ್ ಚಂದೇಲ್ ಪೊಲೀಸ್ ಕಸ್ಟಡಿಯಲ್ಲಿದ್ದಾರೆ.

ದೂರಿನಲ್ಲಿ ಏನಿದೆ ? :

ದೂರಿನ ಪ್ರಕಾರ, ರೋಹಿತ್ ಚಂದೇಲ್ ಅವರು ತಮ್ಮ ವೈಯಕ್ತಿಕ ಮೊಬೈಲ್ ನಂಬರ್ ಸೇರಿದಂತೆ ಬೇರೆಬೇರೆ ನಂಬರ್ ಗಳಿಂದ ಬಾಲಕಿಗೆ ಪದೇ ಪದೇ ಕರೆ ಮಾಡಿ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಲಾಗಿದೆ.

ಈ ಕಿರುಕುಳದಿಂದ ಬಾಲಕಿ ಮಾನಸಿಕವಾಗಿ ತೊಂದರೆ ಅನುಭವಿಸಿದ್ದಾಳೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಜುಲೈ 5 ರಂದು ಮುಂಬೈನ ಉಪನಗರ ಪ್ರದೇಶದಲ್ಲಿ ಬಾಲಕಿ ಇದ್ದ ಸ್ಥಳಕ್ಕೆ ನಟ ಬಂದಿದ್ದು, ಆಕೆಯನ್ನು ಹಿಂಬಾಲಿಸಿ ಗಲಾಟೆ ಮಾಡಿದ್ದಲ್ಲದೆ, ನಿಂದಿಸಿ ಕೈಯಿಂದ ಹಲ್ಲೆ ನಡೆಸಿದ್ದಾರೆ ಎಂಬ ಆರೋಪವು ಕೇಳಿ ಬಂದಿದೆ.

ಪೊಲೀಸರು ಪ್ರಕರಣದ ಎಲ್ಲಾ ವ್ಯಾಯಾಮಗಳನ್ನು ಪರಿಶೀಲಿಸುತ್ತಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ.

Rohit Chandel arrest - ಭಾರತೀಯ ನ್ಯಾಯ ಸಂಹಿತೆ ಅಡಿ ಪ್ರಕರಣ ದಾಖಲು - ನಟನ ವಿರುದ್ಧ ತನಿಖೆ ಮುಂದುವರಿಕೆ :

ಅಪ್ರಾಪ್ತ ಬಾಲಕಿಗೆ ಕಿರುಕುಳ ನೀಡಿದ ಆರೋಪದ ಪ್ರಕರಣದಲ್ಲಿ ಹಿಂದಿ ಕಿರುತೆರೆ ನಟ ರೋಹಿತ್ ಚಂದೇಲ್ ವಿರುದ್ಧ ಭಾರತೀಯ ನ್ಯಾಯ ಸಂಹಿತೆ ಹಾಗೂ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ನಟನ ಬಂಧನವನ್ನು ಪೊಲೀಸ್ ಅಧಿಕಾರಿಗಳು ಖಚಿತಪಡಿಸಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

ಪೊಲೀಸರ ಪ್ರಕಾರ, ನಟ ಮತ್ತು ಬಾಲಕಿಗೆ ಮೊದಲೇ ಪರಿಚಯವಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಲಭ್ಯವಿರುವ ಮಾಹಿತಿ, ಸಾಕ್ಷ್ಯ ಗಳು ಹಾಗೂ ಆರೋಪಗಳು ಕುರಿತು ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ರೋಹಿತ್ ಚಂದೇಲ್ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಸದ್ಯ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಪ್ರಕರಣದ ಪ್ರತಿಯೊಂದು ಅಂಶಗಳ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಹಿಂದಿ ಕಿರುತೆರೆಯಲ್ಲಿ ಗುರುತಿಸಿಕೊಂಡಿರುವ ನಟನ ವಿರುದ್ಧ ದಾಖಲಾಗಿರುವ ಈ ಪ್ರಕರಣವು ಇದೀಗ ಚರ್ಚೆಗೆ ಗ್ರಾಸವಾಗಿದ್ದು, ಮುಂದಿನ ತನಿಕ ಬೆಳವಣಿಗೆಗಳತ್ತ ಗಮನ ಹರಿಸಲಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online