<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಉತ್ತರ ಪ್ರದೇಶದಲ್ಲಿ ಭೀಕರ ವಿಮಾನ ದುರಂತ : ತರಬೇತಿ ವಿಮಾನ ಪತನ, ಮಹಿಳಾ ಪೈಲೆಟ್ ಆಸ್ಪತ್ರೆಗೆ ದಾಖಲು

ಉತ್ತರ ಪ್ರದೇಶದಲ್ಲಿ ಭೀಕರ ವಿಮಾನ ದುರಂತ : ತರಬೇತಿ ವಿಮಾನ ಪತನ, ಮಹಿಳಾ ಪೈಲೆಟ್ ಆಸ್ಪತ್ರೆಗೆ ದಾಖಲು
Summary: A training plane crashed in Kasganj, Uttar Pradesh, seriously injuring a woman pilot. Rescue personnel rushed to the spot and admitted her to the hospital, and an investigation has been launched into the cause of the accident.

Belagavi News :

ಉತ್ತರ ಪ್ರದೇಶದ ಕಾಸಗಂಜ್ ಜಿಲ್ಲೆಯಲ್ಲಿ ಮಂಗಳವಾರ ತರಬೇತಿ ವಿಮಾನ ಒಂದು ಪತನಗೊಂಡ ಪರಿಣಾಮ ಮಹಿಳಾ ಪೈಲೆಟ್ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.

ಮಾಹಿತಿಯ ಪ್ರಕಾರ, ತರಬೇತಿ ಹೋರಾಟ ನಡೆಸುತ್ತಿದ್ದ ವೇಳೆ ವಿಮಾನ ತಾಂತ್ರಿಕ ದೋಷಕ್ಕೀಡಾಗಿ ನಿಯಂತ್ರಣ ತಪ್ಪಿ ನೆಲಕ್ಕೆ ಅಪ್ಪಳಿಸಿದೆ. ಅಪಘಾತದ ಹೊಡೆತಕ್ಕೆ ವಿಮಾನ ತೀವ್ರವಾಗಿ ಹಾನಿಗೊಳಗಾಗಿದ್ದು, ಪೈಲೆಟ್ ಗೆ ಗಂಭೀರ ಗಾಯಗಳಾಗಿವೆ.

ಅಪಘಾತದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು, ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಮಹಿಳಾ ಪೈಲೆಟ್ ಅವರನ್ನು ರಕ್ಷಿಸಿ ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಅವರ ಆರೋಗ್ಯ ಸ್ಥಿತಿ ಕುರಿತು ವೈದ್ಯರು ನಿಗಾ ವಹಿಸಿದ್ದಾರೆ.

ವಿಮಾನ ಪತನಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷವೇ ಅಥವಾ ಬೇರೆ ಯಾವುದೇ ಕಾರಣವೇ ಎಂಬುದರ ಕುರಿತು ಸಂಬಂಧಿತ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದ್ದು, ವಿಮಾನ ಅಪಘಾತದ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ.

ಉತ್ತರ ಪ್ರದೇಶದ ಕಾಸಗಂಜ್ ನಲ್ಲಿ ತರಬೇತಿ ವಿಮಾನ ಪತನ - ನಿರ್ಮಾಣ ಹಂತದ ಹೆದ್ದಾರಿಯಲ್ಲಿ ಬಿದ್ದ ವಿಮಾನ :

ಉತ್ತರಪ್ರದೇಶದ ಕಾಸಗಂಜ್ ಜಿಲ್ಲೆಯಲ್ಲಿ ಮಂಗಳವಾರ ತರಬೇತಿ ವಿಮಾನ ಪಥನಗೊಂಡಿದ್ದು, ಸ್ಥಳೀಯರಲ್ಲಿ ತೀವ್ರ ಆತಂಕಕ್ಕೆ ಕಾರಣವಾಗಿದೆ. ನಿರ್ಮಾಣ ಹಂತದಲ್ಲಿರುವ ಹೆದ್ದಾರಿ ಎಂದರೆ ವಿಮಾನ ಬಿದ್ದು ಘಟನೆ ಕ್ಯಾಂಪೂರ್ - ಬಹೇರಿಯಾ ಪ್ರದೇಶದ ಸಮೀಪ ನಡೆದಿದೆ.

ಮಾಹಿತಿ ಪ್ರಕಾರ, ತರಬೇತಿ ಹಾರಾಟ ನಡೆಸುತ್ತಿದ್ದ ವೇಳೆ ವಿಮಾನ ಏಕಾಏಕಿ ನಿಯಂತ್ರಣ ತಪ್ಪೇ ನಿರ್ಮಾಣ ಹಂತದ ಹೆದ್ದಾರಿಯ ಮೇಲೆ ಪತನಗೊಂಡಿದೆ. ವಿಮಾನ ನೆಲಕ್ಕೆ ಅಪ್ಪಳಿಸುತ್ತಿದ್ದಂತೆ ಸ್ಥಳದಲ್ಲಿ ಭಾರಿ ಸದ್ದು ಕೇಳಿಬಂದಿದ್ದು, ಸುತ್ತಮುತ್ತಲಿನ ಜನರು ಬೆಚ್ಚಿಬಿದ್ದಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನೂರಾರು ಜನ ಜಮಾಯಿಸಿದ್ದು, ಪೊಲೀಸರು, ಅಗ್ನಿಶಾಮಕ ದಳ ಹಾಗೂ ರಕ್ಷಣಾ ಸಿಬ್ಬಂದಿ ತಕ್ಷಣ ಧಾವಿಸಿ ರಕ್ಷಣಾ ಕಾರ್ಯಚರಣೆ ಕೈಗೊಂಡರು. ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದ ನಿಖರ ಕಾರಣ ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ.

ಈ ಘಟನೆಗೆ ಸಂಬಂಧಿಸಿದ ವಿಡಿಯೋಗಳು ಮತ್ತು ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲಾಗುತ್ತಿದ್ದು, ದೇಶಾದ್ಯಂತ ಗಮನ ಸಳೆದಿವೆ.

ಪ್ರಾಥಮಿಕ ಮಾಹಿತಿ ಪ್ರಕಾರ, ವಿಮಾನ ಅಪಘಾತ ಸಂಭವಿಸಿದ ವೇಳೆ ವಿಮಾನದಲ್ಲಿ ಮಹಿಳಾ ತರಬೇತಿ ಪೈಲೆಟ್ ಮಾತ್ರ ಇದ್ದರು. ವಿಮಾನ ಪಥನಗೊಂಡ ಪರಿಣಾಮ ಅವರಿಗೆ ಗಂಭೀರ ಗಾಯಗಳಾಗಿದ್ದು, ಸ್ಥಳದಲ್ಲಿ ತುರ್ತು ಪ್ರಥಮ ಚಿಕಿತ್ಸೆ ನೀಡಲಾಯಿತು.

ಬಳಿಕ ಹೆಚ್ಚಿನದಾಗಿ ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ವೈದ್ಯರ ಮಾಹಿತಿಯಂತೆ, ಮಹಿಳಾ ತರಬೇತಿ ಪೈಲೆಟ್ ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿದ್ದು, ತಜ್ಞ ವೈದ್ಯರ ತಂಡದಿಂದ ನಿರಂತರ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತಕ್ಕೆ ಕಾರಣವೇನು ಎಂಬುದರ ಕುರಿತು ಸಂಬಂಧಿತ ಅಧಿಕಾರಿಗಳು ತನಿಖೆ ಆರಂಭಿಸಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

ವಿಮಾನ ಅಪಘಾತ ಸಂಭವಿಸಿದ ತಕ್ಷಣ ಪೊಲೀಸರು ಹಾಗೂ ಜಿಲ್ಲಾಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ, ರಕ್ಷಣಾ ಮತ್ತು ಭದ್ರತಾ ಕಾರ್ಯಾಚರಣೆಯನ್ನು ಆರಂಭಿಸಿದರು. ಮುನ್ನೆಚ್ಚರಿಕಾ ಕ್ರಮವಾಗಿ ಇಡೀ ಅಪಘಾತ ಪ್ರದೇಶವನ್ನು ತಮ್ಮ ಸುಪರ್ದಿಗೆ ಪಡೆದು ಸಾರ್ವಜನಿಕರ ಪ್ರವೇಶವನ್ನು ನಿರ್ಭಂಧಿಸಲಾಯಿತು.

ವಿಮಾನದ ಅವಶೇಷಗಳನ್ನು ವೀಕ್ಷಿಸಲು ಅಪಾರ ಸಂಖ್ಯೆಯಲ್ಲಿ ಸ್ಥಳೀಯ ನಿವಾಸಿಗಳು ಸ್ಥಳಕ್ಕೆ ಆಗಮಿಸಿದ್ದರಿಂದ ಕೆಲ ಕಾಲ ಜನ ಸಂದಣಿ ಉಂಟಾಯಿತು. ಪರಿಸ್ಥಿತಿಯನ್ನು ನಿಯಂತ್ರಣದಲ್ಲಿಡಲು ಮತ್ತು ಯಾವುದೇ ಅನಾಹುತ ಸಂಭವಿಸದಂತೆ ತಡೆಯಲು ಅಧಿಕಾರಿಗಳು ಹೆಚ್ಚುವರಿ ಪೊಲೀಸ್ ಸಿಬ್ಬಂಧಿಯನ್ನು ನಿಯೋಜಿಸಿದರು.

ಈ ನಡುವೆ ಅಪಘಾತದ ನಿಖರ ಕಾರಣ ಪತ್ತೆ ಹಚ್ಚಲು ಸಂಬಂಧಿಸಿದ ಇಲಾಖೆಗಳು ತನಿಖೆ ಆರಂಭಿಸಿದ್ದು, ವಿಮಾನದ ವಿಶೇಷಗಳನ್ನು ಪರಿಶೀಲಿಸಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸುತ್ತಿವೆ. ಅಧಿಕಾರಿಗಳು ಸಾರ್ವಜನಿಕರು ವದಂತಿಗಳಿಗೆ ಕಿವಿಗೊಡದೆ ಅಧಿಕೃತ ಮಾಹಿತಿಯನ್ನು ಮಾತ್ರ ನಂಬುವಂತೆ ಮನವಿ ಮಾಡಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online