BELAGAVI NEWS :
"ಪ್ರಶ್ನೆ ಪತ್ರಿಕೆ ಸೋರಿಕೆಗಳು ಮಕ್ಕಳು ಮತ್ತು ಅವರ ಕುಟುಂಬಗಳಿಗೆ ಅಪಾರ ನೋವುಂಟು ಮಾಡಿವೆ. ಕೆಲ ವಿದ್ಯಾರ್ಥಿಗಳು ಆತ್ಮಹತ್ಯೆಯಂತಹ ದುರ್ಘಟನೆಗೆ ತಳ್ಳಲ್ಪಟ್ಟಿದ್ದಾರೆ. ಇದು ಕೇವಲ ಒಂದು ಕುಟುಂಬದ ನಷ್ಟವಲ್ಲ,ದೇಶದ ಶಿಕ್ಷಣ ವ್ಯವಸ್ಥೆಗೆ ಎಚ್ಚರಿಕೆಯ ಗಂಟೆಯಾಗಿದೆ. ಇಂತಹ ಘಟನೆಗಳು ಮರುಕಳಿಸದಂತೆ ಭಾರತದ ಪರೀಕ್ಷಾ ವ್ಯವಸ್ಥೆಯಲ್ಲಿ ಮರುತಿಸಬೇಕಾಗಿದೆ" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯ ತಾಯಿಯೊಂದಿಗೆ ನಡೆಸಿದ ಸಂವಾದದ ವಿಡಿಯೋವನ್ನು ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಈ ಘಟನೆ ಸಾವಿರಾರು ವಿದ್ಯಾರ್ಥಿಗಳು ಹಾಗೂ ಪೋಷಕರು ಎದುರಿಸುತ್ತಿರುವ ನೋವಿನ ಪ್ರತಿಬಿಂಬವಾಗಿದೆ ಎಂದು ಅವರು ಹೇಳಿದ್ದಾರೆ.
ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ ಮಾನಸಿಕ ಒತ್ತಡಕ್ಕೆ ಶಾಶ್ವತ ಪರಿಹಾರ ಕಂಡುಹಿಡಿಯಲು ಪಾರದರ್ಶಕ ಹಾಗೂ ವಿಶ್ವಾಸ್ ಅವರ ಪರೀಕ್ಷಾ ವ್ಯವಸ್ಥೆ ಅಗತ್ಯವಿದೆ ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯವನ್ನು ಕಾಪಾಡಲು ಶಿಕ್ಷಣ ಕ್ಷೇತ್ರದಲ್ಲಿ ಮೂಲಭೂತ ಸುಧಾರಣೆಗಳನ್ನು ಜಾರಿಗೆ ತರಬೇಕೆಂದು ಅವರು ಆಗ್ರಹಿಸಿದ್ದಾರೆ.
"ನೀಟ್ ಪ್ರಶ್ನೆಪರೀಕ್ಷೆ ಸೋರಿಕೆ ಪ್ರಕರಣದಲ್ಲಿ ಮಗಳು ರಿಯಾ ಅವರನ್ನು ಕಳೆದುಕೊಂಡ ರಾಜೇಶ್ ಅವರ ದುಃಖ ಮನ ಕಲಕುವಂತಿದೆ. ಅವರನ್ನು ಭೇಟಿಯಾದ ಪ್ರತಿಯೊಬ್ಬರ ಕಣ್ಣಲ್ಲೂ ನೀರು ಬಂತು. ಇದು ಕೇವಲ ಒಂದು ಕುಟುಂಬದ ನೋವಲ್ಲ,ಪ್ರಶ್ನೆ ಪತ್ರಿಕೆ ಸೋರಿಕೆಗಳಿಂದ ಸಂಕಷ್ಟ ಅನುಭವಿಸಿರುವ ಸಾವಿರಾರು ಕುಟುಂಬಗಳನ್ನು ಪ್ರತಿಬಿಂಬವಾಗಿದೆ" ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ರಾಹುಲ್ ಗಾಂಧಿ ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ವಿಡಿಯೋದಲ್ಲಿ,ದೇಶದ ಪರೀಕ್ಷಾ ವ್ಯವಸ್ಥೆಯಲ್ಲಿ ಸಮಗ್ರ ಸುಧಾರಣೆಯ ಅಗತ್ಯವಿದೆ ಎಂದು ಒತ್ತಾಯಿಸಿದ್ದಾರೆ. "ಇಡೀ ಪರೀಕ್ಷಾ ವ್ಯವಸ್ಥೆಯನ್ನೇ ಮರು ರೂಪಿಸಬೇಕಿದೆ. ಮಕ್ಕಳಿಗೆ ಒತ್ತಡವಲ್ಲ, ಭದ್ರತೆ ಮತ್ತು ನ್ಯಾಯಯುತ ಅವಕಾಶಗಳು ಸಿಗಬೇಕು.ಪೋಷಕರ ತ್ಯಾಗ ಮತ್ತು ಪರಿಶ್ರಮಕ್ಕೆ ಪ್ರತಿಫಲವಾಗಿ ಯಶಸ್ಸು ಸಿಗಬೇಕೇ ಹೊರತು ಕಣ್ಣೀರು ಅಲ್ಲ" ಎಂದು ಅವರು ಹೇಳಿದ್ದಾರೆ.
ಇದೇ ವೇಳೆ, ಕಳೆದ ಒಂದು ದಶಕದಲ್ಲಿ ಸುಮಾರು 7.5 ಕೋಟಿ ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ ಸೋರಿಕೆಗಳಿಂದ ಪರಿಣಾಮಕ್ಕೆ ಒಳಗಾಗಿದ್ದಾರೆ ಎಂದು ರಾಹುಲ್ ಗಾಂಧಿ ಆರೋಪಿಸಿದ್ದಾರೆ. ಈ ಗಂಭೀರ ಸಮಸ್ಯೆಯನ್ನು ತಡೆಗಟ್ಟುವಲ್ಲಿ ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಟೀಕಿಸಿರುವ ಅವರು, ವಿದ್ಯಾರ್ಥಿಗಳ ಭವಿಷ್ಯವನ್ನು ರಕ್ಷಿಸಲು ಪಾರದರ್ಶಕ, ವಿಶ್ವಾಸಾರ್ಹ ಮತ್ತು ಕಟ್ಟು ನಿಟ್ಟಿನ ಪರೀಕ್ಷಾ ವ್ಯವಸ್ಥೆಯನ್ನು ಜಾರಿಗೆ ತರಬೇಕೆಂದು ಆಗ್ರಹಿಸಿದ್ದಾರೆ.
ದೇಶದಲ್ಲಿ ನಡೆಯುತ್ತಿರುವ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣ ಬಗ್ಗೆ ತೀವ್ರ ಆತಂಕ ವ್ಯಕ್ತಪಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಪರೀಕ್ಷಾ ಅಕ್ರಮಗಳನ್ನು ತಡೆಯಲು ಕೇಂದ್ರ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ್ದಾರೆ.
"ದೇಶದಲ್ಲಿ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಗೆ ಉನ್ನತ ತಂತ್ರಜ್ಞಾನ ಬಳಸಲಾಗುತ್ತಿದೆ. ಹಣವಿದ್ದರೆ ಯಾವುದೇ ಪರೀಕ್ಷೆಯ ಪ್ರಶ್ನೆ ಪತ್ರಿಕೆಯನ್ನು ಇಂಟರ್ನೆಟ್ ಅಥವಾ ಟೆಲಿಗ್ರಾಂ ಮೂಲಕ ಪಡೆಯಬಹುದಾದ ಪರಿಸ್ಥಿತಿ ನಿರ್ಮಾಣವಾಗಿದೆ. ಇದು ನಮ್ಮ ಶಿಕ್ಷಣ ವ್ಯವಸ್ಥೆಯ ದುಸ್ಥಿತಿಯನ್ನು ತೋರಿಸುತ್ತದೆ. ಕಳೆದ ಹತ್ತು ವರ್ಷಗಳಲ್ಲಿ 152 ಪ್ರಶ್ನೆ ಪತ್ರಿಕೆಗಳು ಸೋರಿಕೆಯಾಗಿವೆ.ಆದರೆ, ಈ ಪ್ರಕರಣಗಳಲ್ಲಿ ಹೊಣೆಗಾರರ ವಿರುದ್ಧ ಪರಿಣಾಮಕಾರಿ ಕ್ರಮ ಕೈಗೊಳ್ಳಲಾಗಿಲ್ಲ" ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ಇದೇ ವೇಳೆ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ಬಳಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾ ಅವರ ತಂದೆ ರಾಕೇಶ್ ತಮ್ಮ ನೋವನ್ನು ಹಂಚಿಕೊಂಡಿದ್ದಾರೆ. "ನನ್ನ ಮಗಳು ಮೇ ಮೂರರಂದು ಪರೀಕ್ಷೆ ಬರೆದು ಸಂತೋಷದಿಂದ ಮನೆಗೆ ಬಂದಳು. ಪರೀಕ್ಷೆ ಚೆನ್ನಾಗಿ ಬರೆದಿದ್ದೇನೆ ಎಂದು ಖುಷಿಯಿಂದ ಹೇಳಿದ್ದಳು. ಆದರೆ,ಕೆಲವೇ ದಿನಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಸುದ್ದಿ ತಿಳಿದ ಬಳಿಕ ಆಕೆ ತೀವ್ರವಾಗಿ ಮನನೊಂದಳು. ಅಂತಿಮವಾಗಿ ತನ್ನ ಪ್ರಾಣವನ್ನೇ ಕಳೆದುಕೊಂಡಳು.ನನ್ನ ಮಗಳಿಗೆ ಆದಂತಹ ದುಃಖದ ಪರಿಸ್ಥಿತಿ ಮತ್ತಾವ ವಿದ್ಯಾರ್ಥಿಗೂ ಆಗಬಾರದು. ಆಕೆ ಇಲ್ಲದೆ ಬದುಕುವುದು ನನಗೆ ತುಂಬಾ ಕಷ್ಟವಾಗಿದೆ" ಎಂದು ರಾಕೇಶ್ ಕಣ್ಣೀರಿಟ್ಟರು.
ವಿದ್ಯಾರ್ಥಿಗಳು ಎದುರಿಸುತ್ತಿರುವ ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ, ಮಾನಸಿಕ ಒತ್ತಡ ಹಾಗೂ ಶಿಕ್ಷಣ ವ್ಯವಸ್ಥೆಯಲ್ಲಿನ ದೋಷಗಳ ಕುರಿತು ರಾಷ್ಟ್ರೀಯ ಮಟ್ಟದಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ರಾಹುಲ್ ಗಾಂಧಿ ಅವರು ಜೂನ್ 17ರಂದು ರಾಜಸ್ಥಾನದ ಕೋಟಾದಿಂದ 'ಛಾತ್ರೋನ್ ಕಿ ಗೂಂಜ್' ರಾಷ್ಟ್ರ ವ್ಯಾಪ್ತಿ ಅಭಿಯಾನಕ್ಕೆ ಚಾಲನೆ ನೀಡಿದ್ದರು.
ಅಭಿಯಾನದ ಮೂಲಕ ದೇಶದ ವಿವಿಧ ಭಾಗಗಳ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಣ ತಜ್ಞರ ಅಭಿಪ್ರಾಯಗಳನ್ನು ಸಂಗ್ರಹಿಸಿ, ಪರೀಕ್ಷಾ ವ್ಯವಸ್ಥೆಯಲ್ಲಿ ಪಾರದರ್ಶಕತೆ, ಹೊಣೆಗಾರಿಕೆ ಮತ್ತು ವಿದ್ಯಾರ್ಥಿನಿ ಸುಧಾರಣೆಯನ್ನು ತರಬೇಕೆಂದು ರಾಹುಲ್ ಗಾಂಧಿ ಒತ್ತಾಯಿಸುತ್ತಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮ ಗಳಿಗೆ ಶಾಶ್ವತ ಪರಿಹಾರ ಕಂಡುಹಿಡಿಯುವ ಅಗತ್ಯವಿದೆ ಎಂದು ಸಂದೇಶವನ್ನು ಅವರು ನಿರಂತರವಾಗಿ ನೀಡುತ್ತಿದ್ದಾರೆ.