BELAGAVI NEWS :
ಬೆಂಗಳೂರು (ಮೇ 24): ಕರ್ನಾಟಕದ ಮುಖ್ಯಮಂತ್ರಿ ಕುರ್ಚಿಯನ್ನು ಸುತ್ತುವರಿದ ರಾಜಕೀಯ ಚರ್ಚೆಗಳು ಮತ್ತೆ ತೀವ್ರ ಗೊಂಡಿರುವ ನಡುವೆಯೇ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿಯಾಗುವ ಕುರಿತು ಹೊಸ ಭವಿಷ್ಯವಾಣಿ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿದೆ.
ಸಿಎಂ ಸ್ಥಾನಕ್ಕಾಗಿ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವಿನ ರಾಜಕೀಯ ಸಮೀಕರಣಗಳು ನಿರಂತರ ಚರ್ಚೆಗೆ ಗ್ರಾಸವಾಗುತ್ತಿರುವ ಸಂದರ್ಭದಲ್ಲಿ ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ಮಹತ್ವದ ಭವಿಷ್ಯ ನುಡಿದಿದ್ದಾರೆ.
"ಡಿಸಿಎಂ ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ" ಎಂದು ಸ್ವಾಮೀಜಿ ಹೇಳಿರುವುದು ಕಾಂಗ್ರೆಸ್ ವಲಯದಲ್ಲೇ ಹೊಸ ಚರ್ಚೆಗೆ ಕಾರಣವಾಗಿದೆ. ಈ ಹೇಳಿಕೆ ಡಿಕೆ ಶಿವಕುಮಾರ್ ಅವರ ಸಿಎಂ ಆಸೆಗೆ ಮತ್ತಷ್ಟು ಬಲ ತುಂಬಿದಂತಾಗಿದೆ.
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದಲಾವಣೆ ಕುರಿತ ಊಹಾಪೋಹಗಳು ನಡೆಯುತ್ತಿರುವ ಸಂದರ್ಭದಲ್ಲಿ ಸ್ವಾಮೀಜಿಯವರ ಈ ಭವಿಷ್ಯವಾಣಿ ಸಾಕಷ್ಟು ಗಮನ ಸೆಳೆದಿದೆ.
ಕರ್ನಾಟಕ ರಾಜಕೀಯದಲ್ಲಿ ಮುಖ್ಯಮಂತ್ರಿ ಸ್ಥಾನ ಕುರಿತ ಚರ್ಚೆಗಳು ನಡೆಯುತ್ತಿರುವ ನಡುವೆಯೇ, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವ ಕುರಿತು ಕಾಡಸಿದ್ದೇಶ್ವರ ಮಠದ ನೊಣವಿನಕೆರೆ ಸ್ವಾಮೀಜಿ ನೀಡಿದ ಭವಿಷ್ಯವಾಣಿ ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಮಾತನಾಡಿದ ಸ್ವಾಮೀಜಿ, "ಡಿ.ಕೆ. ಶಿವಕುಮಾರ್ ಮುಖ್ಯಮಂತ್ರಿ ಆಗುವ ಸಂಕಲ್ಪ ಮಾಡಿದ್ದಾರೆ. ಅವರ ಮೇಲೆ ಶ್ರೀಮಠದ ಆಶೀರ್ವಾದವಿದೆ. ಸಮಯ ಮತ್ತು ಅವಕಾಶಕ್ಕಾಗಿ ಕಾಯಲಾಗುತ್ತಿದೆ. ಆದಷ್ಟು ಬೇಗ ಅವರು ಮುಖ್ಯಮಂತ್ರಿಯಾಗುತ್ತಾರೆ " ಎಂದು ಹೇಳಿದ್ದಾರೆ.
ಸ್ವಾಮೀಜಿಯವರ ಈ ಹೇಳಿಕೆ ಕಾಂಗ್ರೆಸ್ ವಲಯದಲ್ಲಿ ಇದು ಹೊಸ ರಾಜಕೀಯ ಚರ್ಚೆಗೆ ಕಾರಣವಾಗಿದ್ದು ಡಿ.ಕೆ. ಶಿವಕುಮಾರ್ ಅವರ ಸಿಎಂ ಆಸೆ ಮತ್ತೆ ಮುನ್ನೆಲೆಗೆ ಬಂದಿದೆ.
ರಾಜ್ಯ ರಾಜಕೀಯದಲ್ಲಿ ನಾಯಕತ್ವ ಬದ್ಧವಾನಿ ಕುರಿತ ಊಹಾಪೋಹಗಳು ಮುಂದುವರಿದಿರುವ ಸಂದರ್ಭದಲ್ಲಿ ಈ ಭವಿಷ್ಯವಾಣಿ ಹೆಚ್ಚಿನ ಗಮನ ಸೆಳೆಯುತ್ತಿದೆ.
Also Read:
ಅಪರೂಪದ ಇತಿಹಾಸ ಹೊಂದಿದ ಕೆಂಚರಾಯಸ್ವಾಮಿಯ ಜಾತ್ರೆ : ಕೋಟೆಯ ಗಾಳಿ ಕೆರೆಯಲ್ಲಿ ವಿಜೃಂಭಣೆಯ ಆಚರಣೆ