belagavi news:
ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಲು ಪ್ರಮುಖ ಪಾತ್ರ ವಹಿಸಿದ ಅರುಣ್ ಬಿನ್ನಡಿ ಅವರಿಗೆ ಸ್ವ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರು ಸನ್ಮಾನಿಸಿದ್ದಾರೆ. ಚುನಾವಣಾ ರಣತಂತ್ರ ಮತ್ತು ಸಂಘಟನಾ ಕಾರ್ಯಗಳಲ್ಲಿ ಸಕ್ರಿಯವಾಗಿ ಪಾಲ್ಗೊಂಡ ಅವರ ಸೇನೆಯನ್ನು ಗುರುತಿಸಿ ಈ ಗೌರವ ನೀಡಲಾಗಿದೆ ಎಂದು ತಿಳಿದುಬಂದಿದೆ .
ಚಿಕ್ಕಮಂಗಳೂರು: ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸಾಧಿಸಿದ ಯಶಸ್ಸಿನ ಹಿಂದೆ ರಾಜ್ಯದ ಯುವಕರೊಬ್ಬರ ಚಾಣಾಕ್ಷತನ ಮತ್ತು ತಂತ್ರಗಾರಿಕೆ ಪ್ರಮುಖ ಪಾತ್ರ ವಹಿಸುವುದು ರಾಜಕೀಯ ವಲಯದ ಗಮನ ಸೆಳೆದಿದೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿನ್ನಡಿ ಗ್ರಾಮದ ಅರುಣ್ ಬಿನ್ನಡಿ ಅವರ ರಾಜಕೀಯ ಕಾರ್ಯ ಚಟುವಟಿಕೆಗಳು ರಾಷ್ಟ್ರಮಟ್ಟದಲ್ಲಿ ಗಮನಾರ್ಹವಾಗಿದೆ. ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಗೆಲುವಿನ ಹಿಂದೆ ಘಟಾನುಘಟಿ ನಾಯಕರಷ್ಟೇ ಅಲ್ಲದೆ, ತೆರೆಮರೆಯಲ್ಲಿ ನಿಂತು ತಂತ್ರ ರೂಪಿಸಿದ ಅವರ ಶ್ರಮವು ಪ್ರಮುಖ ಕಾರಣವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.
ಕಾಫಿನಾಡಿನ ಈ ಯುವನಾಯಕ, ಕೈ ತುಂಬಾ ಸಂಬಳದ ಉದ್ಯೋಗವನ್ನು ತ
ತೊರೆದು ದೇಶಸೇವೆಯತ್ತ ಗಮನ ಹರಿಸಿದ್ದಾರೆ. ತಮ್ಮ ಪರಿಶ್ರಮ, ಸಂಘಟನಾ ಸಾಮರ್ಥ್ಯ ಮತ್ತು ತಂತ್ರಗಾರಿಕೆಯ ಮೂಲಕ ಅವರು ರಾಜಕೀಯ ವಲಯದಲ್ಲಿ ವಿಶಿಷ್ಟ ಗುರುತು ಗಳಿಸಿದ್ದಾರೆ. 2019ರ ಲೋಕಸಭೆ ಚುನಾವಣೆಯಂತೆಯೇ ಹಲವು ಪ್ರಮುಖ ಚುನಾವಣಾ ಕಾರ್ಯಗಳಲ್ಲಿ ಅವರು ಮಹತ್ವದ ಪಾತ್ರ ವಹಿಸುವುದು ಗಮನಾರ್ಹವಾಗಿದೆ.
ವಿಧಾನಸಭಾ ಚುನಾವಣೆಯಲ್ಲಿ ಕಲಬುರಗಿ ಭಾಗದಲ್ಲೂ ಪಕ್ಷದ ಸಂಘಟನೆ ಬಲಪಡಿಸುವಲ್ಲಿ ಭಿನ್ನಡಿ ತಮ್ಮದೇ ಆದ ಛಾಪು ಮೂಡಿಸಿದ್ದರು. ತಮ್ಮ ಮೇಲೆ ಬಂದ ಪ್ರತಿಯೊಂದು ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಬರುವವರಲ್ಲಿ ಯಶ ಕಂಡಿದ್ದಾರೆ.
ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಸಿಲಿಗುರಿ ನಾರ್ತ್ ಜೋನ್ ಸಂಘಟನಾ ಪ್ರಭಾರಿಯಾಗಿ ಕಾರ್ಯನಿರ್ವಹಿಸಿದ ಅರುಣ್ ಬಿನ್ನಡಿ ಅವರು ತಿಂಗಳುಗಳ ಕಾಲ ನೆಲಮಟ್ಟದಲ್ಲಿ ಸಕ್ರಿಯವಾಗಿ ಕೆಲಸ ಮಾಡಿ ಜಯದ ತಂತ್ರ ರೂಪಿಸಿದ್ದಾರೆ. ಸ್ಥಳೀಯ ಪರಿಸ್ಥಿತಿಗಳನ್ನು ಸೂಕ್ಷ್ಮವಾಗಿ ಅಧ್ಯಯನ ಮಾಡಿ, ಮತದಾರರ ಮನೋಭಾವಕ್ಕೆ ಹೊಂದುವಂತೆ ಪ್ರಚಾರ ಕಾರ್ಯಗಳಲ್ಲಿ ರೂಪಿಸುವಲ್ಲಿ ಅವರು ಯಶಸ್ವಿಯಾಗಿದ್ದಾರೆ. ರಾಜಕೀಯ ಅಡೆತಡೆಗಳ ನಡುವೆ ತಮ್ಮ ಸಂಘಟನಾ ಸಾಮರ್ಥ್ಯವನ್ನು ತೋರಿಸಿ ಮತ್ತೆ ಸಕ್ರಿಯವಾಗಿ ಕಾರ್ಯ ನಿರ್ವಹಿಸಿರುವುದು ಗಮನಾರ್ಹವಾಗಿದೆ.
ಸ್ವಗ್ರಾಮ ಭಿನ್ನಡಿಗೆ ಆಗಮಿಸಿದ ಅರುಣ್ ಅವರನ್ನು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದ್ದಾರೆ. ಕೊಟ್ಟಿಗೆಹಾರ ಸಮೀಪದ ಭಿನ್ನಾಡಿ ಗ್ರಾಮದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ಪಕ್ಷದ ಮುಖಂಡರು ಭಾಗವಹಿಸಿದ್ದು, "ಕರ್ನಾಟಕದ ಯುವಕ ರಾಷ್ಟ್ರ ಮಟ್ಟದಲ್ಲಿ ಮಿಂಚಿದ ಹೆಮ್ಮೆಯ ಕ್ಷಣ" ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
293 ವಿಧಾನಸಭಾ ಕ್ಷೇತ್ರಗಳನ್ನು ಒಳಗೊಂಡಿರುವ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 206 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಜಯ ವಿಜಯ ದಾಖಲಿಸಿದೆ. ತೃಣ ಮೂಲ ಕಾಂಗ್ರೆಸ್ ಕೇವಲ 81 ಸ್ಥಾನಗಳನ್ನು ಪಡೆದುಕೊಂಡಿತು. ಕಾಂಗ್ರೆಸ್ ಕೇವಲ 2 ಸ್ಥಾನಗಳನ್ನು ಗೆದ್ದಿದೆ.
Also Read:
ಐತಿಹಾಸಿಕ ಹೆಜ್ಜೆ ! ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಶು ಪಾಲನಾ ಕೇಂದ್ರ ಸ್ಥಾಪನೆ