Belagavi news:
ಹಾಸನ: ಕಳೆದ ಹಲವು ತಿಂಗಳುಗಳಿಂದ ರಾಜ್ಯ ರಾಜಕೀಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದ್ದ ಕಾಂಗ್ರೆಸ್ ಪಕ್ಷದ ನಾಯಕತ್ವ ಬದಲಾವಣೆ ವಿಚಾರಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಬುಧವಾರ ಡಿ.ಕೆ. ಶಿವಕುಮಾರ್ ಅವರು ಕರ್ನಾಟಕದ 34ನೇ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.ಈ ಬೆಳವಣಿಗೆ ರಾಜ್ಯದಾದ್ಯಂತ ಹೊಸ ನೀರಿಗೆಗಳನ್ನು ಹುಟ್ಟು ಹಾಕಿದ್ದು. ಹಾಸನ ಜಿಲ್ಲೆಯ ಜನತೆ ಡಿಕೆಶಿ ನಾಯಕತ್ವದ ಬಗ್ಗೆ ಅಪಾರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಅಹಿಂದ ನಾಯಕ ಸಿದ್ದರಾಮಯ್ಯ ಅವರ ರಾಜೀನಾಮೆ ಪ್ರಕ್ರಿಯೆಯ ಬಳಿಕ ಮುಖ್ಯಮಂತ್ರಿ ಹುದ್ದೆ ಅಲಂಕರಿಸಿರುವ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಅಭಿವೃದ್ಧಿಗೆ ಯಾವ ರೀತಿಯ ಯೋಜನೆಗಳುನ್ನು ರೂಪಿಸಲಿದ್ದಾರೆ ಎಂಬ ಕುತೂಹಲ ಜನರಲ್ಲಿ ಮನೆ ಮಾಡಿದೆ. ವಿಶೇಷವಾಗಿ ಹಾಸನ ಜಿಲ್ಲೆಯ ಜನರು, ಜಿಲ್ಲೆಯ ಅಭಿವೃದ್ಧಿ. ರಸ್ತೆ ಮೂಲ ಸೌಕರ್ಯ, ಕುಡಿಯುವ ನೀರಿನ ಯೋಜನೆಗಳು, ರೈತರ ಸಮಸ್ಯೆಗಳ ಪರಿಹಾರ ಹಾಗೂ ಉದ್ಯೋಗ ಸೃಷ್ಟಿ ವಿಚಾರಗಳಲ್ಲಿ ಹೊಸ ಮುಖ್ಯಮಂತ್ರಿ ಹೆಚ್ಚಿನ ಗಮನ ಹರಿಸಲಿದ್ದಾರೆ ಎಂಬ ನಿರೀಕ್ಷೆ ಹೊಂದಿದ್ದಾರೆ.
"ಡಿಕೆಶಿ ಅವರು ಆಡಳಿತ ಅನುಭವ ಹೊಂದಿರುವ ನಾಯಕ. ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಸಮಾನ ಆದ್ಯತೆ ನೀಡುವ ಮೂಲಕ ಅಭಿವೃದ್ಧಿಗೆ ವೇಗ ನೀಡುತ್ತಾರೆ ಎಂಬ ನಂಬಿಕೆ ನಮ್ಮದು." ಎಂದು ಹಾಸನದ ಹಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ, ಯುವಕರಿಗೆ ಉದ್ಯೋಗಾವಕಾಶಗಳು ಹಾಗೂ ರೈತ ಪರ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಹಾಸನಕ್ಕೆ ಹೊಸದಿಕ್ಕು ಸಿಗಲಿದೆ ಎಂಬ ಆಶಾಭಾವನೆ ವ್ಯಕ್ತವಾಗಿದೆ.
ಒಟ್ಟಾರೆ, ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ನಾಯಕತ್ವದಲ್ಲಿ ಹಾಸನ ಜಿಲ್ಲೆಯ ಅಭಿವೃದ್ಧಿಗೆ ಹೊಸ ಅಧ್ಯಾಯ ಆರಂಭವಾಗಿದೆ ಎಂಬ ವಿಶ್ವಾಸ ಜನರಲ್ಲಿ ಹೆಚ್ಚಾಗಿದ್ದು. ಮುಂದಿನ ದಿನಗಳಲ್ಲಿ ಸರ್ಕಾರದ ಕಾರ್ಯ ವೈಖರಿಯುತ್ತ ಎಲ್ಲರ ಚಿತ್ತ ನೆಟ್ಟಿದೆ.
"ಹಾಸನ ಜಿಲ್ಲೆಯಲ್ಲಿ ಇಂದಿನಿಂದ ಹೊಸ ರಾಜಕೀಯ ಪರ್ವ ಆರಂಭವಾಗಲಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಜಿಲ್ಲೆಯ ಎಲ್ಲಾ ಏಳು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲುವು ಸಾಧಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಪಾತ್ರ ಮಹತ್ವದ್ದಾಗಿರುತ್ತದೆ. ಅಭಿವೃದ್ಧಿ ವಿಚಾರದಲ್ಲಿ ಅವರು ಹಾಸನ ಜಿಲ್ಲೆಗೆ ವಿಶೇಷ ಆದ್ಯತೆ ನೀಡುತ್ತಾರೆ ಎಂಬ ನಂಬಿಕೆ ನನಗಿದೆ" ಎಂದು ಹೇಳಿದರು.
ದೇಶದ ವಿವಿಧ ರಾಜ್ಯಗಳಲ್ಲಿ ಕಾಂಗ್ರೆಸ್ ಪಕ್ಷ ಸಂಕಷ್ಟ ಎಂದುರಿಸಿದ ಸಂದರ್ಭಗಳಲ್ಲಿ ಡಿ.ಕೆ. ಶಿವಕುಮಾರ್ ಪಕ್ಷವನ್ನು ಸಂಘಟಿಸಿ ಬಲಪಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ. ಅವರ ನಾಯಕತ್ವದಲ್ಲಿ ಹಾಸನ ಜಿಲ್ಲಾ ಕಾಂಗ್ರೆಸ್ ಇನ್ನಷ್ಟು ಬಲಿಷ್ಠವಾಗಿಲಿದೆ. ಎಂಬ ವಿಶ್ವಾಸವಿದೆ ಎಂದು ಅವರು ತಿಳಿಸಿದರು.
ಹಾಸನದ ಅಭಿವೃದ್ಧಿಗೆ ಡಿಕೆಶಿ ಕೊಡುಗೆ ನೀಡಲಿದ್ದಾರೆ: ತಾ.ರಾ ಚಂದನ್:
ಹಾಸನ ಮಹಿಳಾ ಕಾಂಗ್ರೆಸ್ ಅಧ್ಯಕ್ಷ ತಾ.ರಾ ಚಂದನ್ ಮಾತನಾಡಿ, ''ಡಿ.ಕೆ .ಶಿವಕುಮಾರ್ ಮುಖ್ಯಮಂತ್ರಿ ಆಗಿ ಪ್ರಮಾಣ ವಚನ ಸ್ವೀಕರಿಸಿರುವುದು ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ಮೂಡಿಸಿದೆ. ಸರ್ಕಾರ ಹಾಗೂ ರಾಜಕೀಯ ವಲಯದಲ್ಲಿ ಹೊಸ ಬದಲಾವಣೆಯ ಗಾಳಿ ಬಿಸಲಿದ್ದು, ಹಾಸನ ಜನರ ನಿರೀಕ್ಷೆಗಳನ್ನು ಈಡೇರಿಸಲು ಡಿಕೆಶಿ ಶ್ರಮಿಸಲಿದ್ದಾರೆ" ಎಂದು ಹೇಳಿದರು.
ಇದಲ್ಲದೆ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷ ಮುಂಚೂಣಿ ಪಾತ್ರ ವಹಿಸುವುದರ ಜೊತೆಗೆ ಅಧಿಕಾರದ ಚುಕ್ಕಾಣಿ ಹಿಡಿಯುವಲ್ಲಿ ಯಶಸ್ಸು ಸಾಧಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ಮಹಿಳೆಯರಿಗೆ ಹೆಚ್ಚಿನ ಪ್ರಾತಿನಿಧ್ಯ ನೀಡಬೇಕು: ವಸಂತ ಕುಮಾರಿ:
ಕಾಂಗ್ರೆಸ್ ಕಾರ್ಯಕರ್ತೆ ವಸಂತ ಕುಮಾರಿ ಮಾತನಾಡಿ, "ಇಲ್ಲಿಯವರೆಗೆ ಆಡಳಿತ ನಡೆಸಿದ ಹಲವಾರು ಮುಖ್ಯಮಂತ್ರಿಗಳು ಮಹಿಳೆಯರಿಗೆ ಸಮರ್ಪಕ ಪ್ರಾತಿನಿಧ್ಯ ನೀಡುವಲ್ಲಿ ವಿಫಲರಾಗಿದ್ದಾರೆ. ಡಿ.ಕೆ. ಶಿವಕುಮಾರ್ ಮಹಿಳೆಯರ ಬಗ್ಗೆ ವಿಶೇಷ ಗೌರವ ಹೊಂದಿರುವ ನಾಯಕರು. ಈ ಬಾರಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಹೆಚ್ಚಿನ ಮಹಿಳೆಯರಿಗೆ ಅವಕಾಶ ನೀಡಬೇಕು. ಜೊತೆಗೆ ನಾಮನಿರ್ದೇಶಿತ ಸದಸ್ಯರ ಸ್ಥಾನಗಳಲ್ಲೂ ಮಹಿಳೆಯರಿಗೆ ಆದ್ಯತೆ ನೀಡಬೇಕು ಎಂಬುದು ನಮ್ಮ ಪ್ರಮುಖ ಬೇಡಿಕೆಯಾಗಿದೆ" ಎಂದು ಹೇಳಿದರು.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಹಾಸನ ಜಿಲ್ಲೆಯ ಅಭಿವೃದ್ಧಿ. ಕಾಂಗ್ರೆಸ್ ಸಂಘಟನೆ ಬಲವರ್ಧನೆ ಹಾಗೂ ಮಹಿಳಾ ಸಬಲೀಕರಣಕ್ಕೆ ಹೊಸ ಅವಕಾಶಗಳು ಸಿಗಲಿವೆ ಎಂಬ ನಿರೀಕ್ಷೆಯನ್ನು ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಮುಖಂಡ ನಾಗೇಶ್ ಪಟೇಲ್ ಮಾತನಾಡಿ, "ಹಿಂದಿನ ಸರ್ಕಾರದ ಅವಧಿಯಲ್ಲಿ ಹಾಸನ ಜಿಲ್ಲೆಗೆ ನಿರೀಕ್ಷಿತ ಮಟ್ಟದ ಅಭಿವೃದ್ಧಿ ಕಾರ್ಯಗಳು ನಡೆದಿಲ್ಲ.ಗ್ಯಾರಂಟಿ ಯೋಜನೆಗಳಿಗಿಂತಲೂ ರೈತರು, ವಿದ್ಯಾರ್ಥಿಗಳು ಮತ್ತು ಯುವಕರಿಗೆ ಅನುಕೂಲವಾಗುವ ಶಾಶ್ವತ ಯೋಜನೆಗಳನ್ನು ಜಾರಿಗೆ ತರಬೇಕು. ರಾಜ್ಯದ ರಸ್ತೆ, ಶಿಕ್ಷಣ, ಆರೋಗ್ಯ ಸೇಂದಿರಂತೆ ಮೂಲ ಸೌಕರ್ಯ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಗಮನ ಹರಿಸಬೇಕು" ಎಂದು ಹೇಳಿದರು.
ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಧೀರ್ಘಕಾಲಿಕ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಡಿ.ಕೆ. ಶಿವಕುಮಾರ್ ಜನರ ವಿಶ್ವಾಸ ಉಳಿಸಿಕೊಳ್ಳಬೇಕು ಎಂದು ಅವರು ಅಭಿಪ್ರಾಯಪಟ್ಟರು.
ಎಲ್ಲಾ ಕ್ಷೇತ್ರಗಳಿಗೆ ಸಮಾನ ಅನುದಾನ ನೀಡಲಿ: ಜೆಡಿಎಸ್ ಮುಖಂಡ ಹೊಂಗೆರೆ ರಘು:
ಜೆಡಿಎಸ್ ಮುಖಂಡರು ಹೊಂಗೆರೆ ರಘು ಮಾತನಾಡಿ, "ಹಿಂದಿನ ಅವಧಿಯಲ್ಲಿ ಹಾಸನ ಜಿಲ್ಲೆಗೆ ನಿರೀಕ್ಷಿತ ಮಟ್ಟದ ಹೊಸ ಯೋಜನೆಗಳು ದೊರಕಿಲ್ಲ. ಸರ್ಕಾರ ಯಾವುದೇ ಪಕ್ಷದ ಭೇದವಿಲ್ಲದೆ ಎಲ್ಲಾ ಕ್ಷೇತ್ರಗಳಿಗೆ ಸಮಾನ ಅಭಿವೃದ್ಧಿ ಅವಕಾಶಗಳನ್ನು ಕಲ್ಪಿಸಬೇಕು. ಕಾಂಗ್ರೆಸ್,ಬಿಜೆಪಿ ಹಾಗೂ ಜೆಡಿಎಸ್ ಶಾಸಕರ ಕ್ಷೇತ್ರಗಳಿಗೂ ಸಮಾನ್ ಅನುದಾನ ನೀಡಬೇಕು" ಎಂದು ಒತ್ತಾಯಿಸಿದರು.
ಮುಖ್ಯಮಂತ್ರಿ ರಾಜ್ಯದ ಎಲ್ಲಾ ಮತದಾರರನ್ನು ಹಾಗೂ ಎಲ್ಲಾ ಪಕ್ಷಗಳ ಜನಪ್ರತಿನಿಧಿಗಳನ್ನು ಸಮಾನ ದೃಷ್ಟಿಯಿಂದ ಕಾಣಬೇಕು. ಅಭಿವೃದ್ಧಿಯ ವಿಚಾರದಲ್ಲಿ ಯಾವುದೇ ಭೇದ ಭಾವವಿಲ್ಲದೆ ಕಾರ್ಯನಿರ್ವಹಿಸುವುದು ಜನಪ್ರತಿನಿಧಿಯ ಜವಾಬ್ದಾರಿಯಾಗಿದೆ ಎಂದು ಅವರು ಹೇಳಿದರು.
ಹಾಸನದ ಪ್ರಮುಖ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಅಗತ್ಯ:
ಬಿಜೆಪಿ ಮಾಧ್ಯಮ ಪ್ರಮುಖ ವಿಜಯ್ ಕುಮಾರ್ ಮಾತನಾಡಿ, ''ಹಾಸನ ಜಿಲ್ಲೆಯ ಹಲವು ಸಮಸ್ಯೆಗಳು ಇನ್ನೂ ಬಾಕಿ ಉಳಿದಿವೆ. ರೈಲ್ವೆ ಮೇಲ್ಸೇತುವೆ ಕಾಮಗಾರಿ, ಮಲೆನಾಡು ಭಾಗದಲ್ಲಿ ಹೆಚ್ಚುತ್ತಿರುವ ಆನೆ- ಮಾನವ ಸಂಘರ್ಷ ಸೇರಿದಂತೆ ಹಲವು ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಂಡು ಹಿಡಿಯಬೇಕು. ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿವೃದ್ಧಿಯ ವಿಚಾರದಲ್ಲಿ ಎಲ್ಲರನ್ನು ಸಮಾನವಾಗಿ ಪರಿಗಣಿಸಿ ಕೆಲಸ ಮಾಡುತ್ತಾರೆ ಎಂಬ ನಿರೀಕೆ ನಮಗಿದೆ" ಎಂದು ಹೇಳಿದರು.
ಡಿಕೆಶಿ ನಾಯಕತ್ವ ದತ್ತ ಜನರ ಚಿತ್ತ:
ಒಟ್ಟಾರೆ ಹಾಸನ ಜಿಲ್ಲೆಯ ಜನರು ಮಾತ್ರವಲ್ಲದೆ ರಾಜ್ಯದ ವಿವಿಧ ಭಾಗಗಳ ಜನರು ಕೊಡ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನಾಯಕತ್ವದತ್ತ ಹೆಚ್ಚಿನ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಶಿಕ್ಷಣ, ಕೃಷಿ, ಆರೋಗ್ಯ, ಗ್ರಾಮೀಣ ಅಭಿವೃದ್ಧಿ ಹಾಗೂ ಮೂಲಸೌಕರ್ಯ ಈ ಕ್ಷೇತ್ರಗಳಲ್ಲಿ ವೇಗವಾದ ಅಭಿವೃದ್ಧಿ ಕಾರ್ಯಗಳು ನಡೆಯಬೇಕು ಎಂಬುದು ಜನರ ಪ್ರಮುಖ ಆಶಯವಾಗಿದೆ.
ಶಾಲಾ-ಕಾಲೇಜು ವಿದ್ಯಾರ್ಥಿಗಳ ಸೌಲಭ್ಯ, ರೈತರ ಸಮಸ್ಯೆಗಳ ಪರಿಹಾರ, ಸರಕಾರಿ ಆಸ್ಪತ್ರೆಗಳ ಅಭಿವೃದ್ಧಿ ಹಾಗೂ ಗ್ರಾಮೀಣ ಭಾಗದ ಮೂಲಭೂತ ಸೌಕರ್ಯಗಳ ಸುಧಾರಣೆಗೆ ಸರ್ಕಾರ ವಿಶೇಷ ಆದ್ಯತೆ ನೀಡಲಿದೆ ಎಂಬ ವಿಶ್ವಾಸ ಜನರಲ್ಲಿ ವ್ಯಕ್ತವಾಗಿದ್ದು, ಹೊಸ ಸರ್ಕಾರದ ಮುಂದಿನ ಕಾರ್ಯಚಟುವಟಿಕೆಗಳತ್ತ ರಾಜ್ಯದ ಜನರ ಗಮನ ನೆಟ್ಟಿದೆ.
Also Read:
ವಿದೇಶದಲ್ಲಿ ಹಾಕಿ ಆಡಿಸುವುದಾಗಿ ನಂಬಿಸಿ ಲಕ್ಷಾಂತರ ವಂಚನೆ? ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಿರಾಕರಣೆ