belagavi news :
ಬಿಡದಿಯಲ್ಲಿ ಟೌನ್ ಶಿಪ್ ಯೋಜನೆ ಜಾರಿಗೊಳಿಸುವ ವೇಳೆ ರೈತರನ್ನು ಬಲವಂತವಾಗಿ ಸ್ಥಳಾಂತರಿಸಲಾಗುವುದಿಲ್ಲ. ಅದರ ವಿಶ್ವಾಸ ಗಳಿಸಿ, ಸಂಪೂರ್ಣ ಒಪ್ಪಿಗೆ ಪಡೆದ ನಂತರವೇ ಜಾಮೀನು ಸ್ವಾಧೀನ ಪಡಿಸಿಕೊಳ್ಳುವಂತೆ ಮುಖ್ಯಮಂತ್ರಿ ಸೂಚನೆ ನೀಡಿದ್ದಾರೆ ಎಂದು ಅವರು ಹೇಳಿದರು.
ರೈತರಿಗೆ ನೀಡಲಾಗುತ್ತಿರುವ ಪರಿಹಾರ ಸಮರ್ಪಕವಾಗಿಲ್ಲ ಎಂಬ ಅಭಿಪ್ರಾಯ ವ್ಯಕ್ತವಾದರೆ ಅದನ್ನು ಹೆಚ್ಚಿಸುವ ಸಾಧ್ಯತೆ ಇದೆ. ಯಾವುದೇ ಗೊಂದಲ ಅಥವಾ ಒತ್ತಾಯವಿಲ್ಲದೆ, ರೈತರ ಸಹಮತಿಯೊಂದಿಗೆ ಟೌನ್ ಶಿಪ್ ಅಭಿವೃದ್ಧಿಪಡಿಸದೆ ಸರ್ಕಾರದ ಉದ್ದೇಶ ಎಂದು ಪರಮೇಶ್ವರ್ ತಿಳಿಸಿದರು.
ಬಿಡದಿ ಟೌನ್ ಶಿಪ್ ಯೋಜನೆ ಎಐ ಹಬ್ ಗಾಗಿ ಅಲ್ಲ, ಬೆಂಗಳೂರಿನ ಮೇಲಿನ ಒತ್ತಡ ಕಡಿಮೆ ಮಾಡುವ ಉದ್ದೇಶದಿಂದ ರೂಪಿಸಲಾಗಿದೆ ಎಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ವ್ಯಕ್ತಪಡಿಸಿದ್ದಾರೆ.
ಎಐ ಹಬ್ ಗಳಿಂದ ಹೆಚ್ಚಿನ ನೀರಿನ ಅಗತ್ಯವಿರುವ ಕುರಿತು ಕೇಳಿದ್ದ ಪ್ರಶ್ನೆಗೆ ಉತ್ತರಿಸಿದ ಅವರು, ಸೆಂಟರ್ ಸಂಸ್ಥಾಪನೆಗೆ ಇರುವ ಮಾನದಂಡಗಳ ಬಗ್ಗೆ ಇನ್ನು ಸ್ಪಷ್ಟ ಮಾಹಿತಿ ಇಲ್ಲ ಎಂದು ಹೇಳಿದರು.ಸರ್ಕಾರ ವಿವಿಧ ಆಯಾಮಗಳಲ್ಲಿ ಮಾಹಿತಿ ಸಂಗ್ರಹಿಸುತ್ತಿದ್ದು, ಬಿಡದಿ ಟೌನ್ ಶಿಪ್ ಯೋಜನೆಗೆ ಎಐ ಹಬ್ ದೊಂದಿಗೆ ಯಾವುದೇ ಸಂಬಂಧ ಇಲ್ಲ ಎಂದು ತಿಳಿಸಿದರು.
ಬೆಂಗಳೂರಿನಲ್ಲಿ ಸಂಚಾರದಟ್ಟನೆ ಸೇರಿದಂತೆ ವಿವಿಧ ಒತ್ತಡಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ,ಅದರ ಸುತ್ತಮುತ್ತಲಿನ ಕೋಲಾರ,ತುಮಕೂರು ಮತ್ತು ರಾಮನಗರದಂತಹ ನಗರಗಳನ್ನು ಅಭಿವೃದ್ಧಿಪಡಿಸುವ ಮೂಲಕ ರಾಜ್ಯಧಾನಿಯ ಮೇಲಿನ ಒತ್ತಡವನ್ನು ಕಡಿಮೆ ಮಾಡುವುದು, ಸರ್ಕಾರದ ಉದ್ದೇಶವಾಗಿದೆ. ಈ ದೃಷ್ಟಿಯಿಂದ ಬಿಡದಿಯಲ್ಲಿ ಟೌನ್ ಶಿಪ್ ನಿರ್ಮಾಣವಾದರೆ ಪ್ರದೇಶದ ಅಭಿವೃದ್ಧಿಗೆ ಸಹಕಾರಿಯಾಗಲಿದೆ ಎಂದು ಪರಮೇಶ್ವರ್ ಹೇಳಿದರು.
ರಾಜ್ಯದಲ್ಲಿ ಹಂತವಾಗಿ ಖಾಲಿ ಸರ್ಕಾರಿ ಹುದ್ದೆಗಳ ಭರ್ತಿ ನಡೆಯಲಿದೆ ಎಂದು ಸಚಿವರು ತಿಳಿಸಿದ್ದಾರೆ.
ಸರ್ಕಾರ ಅಧಿಕಾರಕ್ಕೆ ಬಂದಾಗ ಸುಮಾರು 2.5ಲಕ್ಷ ಸರ್ಕಾರಿ ಹುದ್ದೆಗಳು ಖಾಲಿ ಇದ್ದವು. ಅವುಗಳನ್ನು ಹಂತ ಹಂತವಾಗಿ ಭರ್ತಿ ಮಾಡುವ ಭರವಸೆಯನ್ನು ಪ್ರಣಾಳಿಕೆಯಲ್ಲಿ ನೀಡಲಾಗಿತ್ತು. ಆದರೆ ಒಳ ಮೀಸಲಾತಿ ವಿಚಾರ ಬಗೆಹರಿಯದೆ ಇದ್ದ ಕಾರಣ ನೇಮಕಾತಿ ಪ್ರಕ್ರಿಯೆ ವಿಳಂಬವಾಯಿತು ಎಂದು ಅವರು ಹೇಳಿದರು.
ನ್ಯಾಯಮೂರ್ತಿ ನಾಗ ಮೋಹನ ದಾಸ್ ಸಮಿತಿಯ ವರದಿ ಆಧರಿಸಿ ಒಳ ಮೀಸಲಾತಿ ಸಮಸ್ಯೆಯನ್ನು ಸರ್ಕಾರ ಪರಿಹರಿಸಿದೆ. ಅದರ ನಂತರವೇ ಬಜೆಟ್ ನಲ್ಲಿ 56,942 ಸರ್ಕಾರಿ ಹುದ್ದೆಗಳ ನೇಮಕಾತಿ ಮಾಡುವುದಾಗಿ ಘೋಷಿಸಲಾಗಿದ್ದು, ನೇಮಕಾತಿ ಪ್ರಕ್ರಿಯೆ ಹಂತ ಹಂತವಾಗಿ ಮುಂದುವರೆಯಲಿದೆ ಎಂದು ಸಚಿವರು ತಿಳಿಸಿದರು.
ರಾಜ್ಯದಲ್ಲಿ 72,000 ಸರ್ಕಾರಿ ಹುದ್ದೆಗಳ ಭರ್ತಿಗೆ ಸರ್ಕಾರ ವೇಗ ನೀಡಿದೆ ಎಂದು ಸಚಿವರು ತಿಳಿಸಿದ್ದಾರೆ.
ಮೊದಲ ಹಂತದಲ್ಲಿ 24,000 ಹುದ್ದೆಗಳ ಭರ್ತಿಗೆ ಹಣಕಾಸು ಇಲಾಖೆ ಅನುಮತಿ ನೀಡಿದ್ದು, ಇಲಾಖೆಗಳಿಗೆ ನೇಮಕಾತಿ ಅಧಿಸೂಚನೆ ಹೊರಡಿಸಲು ಸೂಚಿಸಲಾಗಿತ್ತು. ಬಳಿಕ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆಯಾದ ನಂತರ ಪ್ರಕ್ರಿಯೆಯನ್ನು ಮರು ಪರಿಶೀಲಿಸಿ, ಒಟ್ಟು 72 ಸಾವಿರ ಹುದ್ದೆಗಳನ್ನು ಭರ್ತಿ ಮಾಡಲು ತೀರ್ಮಾನಿಸಲಾಗಿದೆ ಎಂದು ಅವರು ಹೇಳಿದರು.
ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಶೀಘ್ರದಲ್ಲೇ ನೇಮಕಾತಿ ಅಧಿಸೂಚನೆ ಹೊರಡಿಸಲಿದೆ. ಶಿಕ್ಷಕರು,ವೈದ್ಯರು,ನರ್ಸ್ ಗಳು, ಇಂಜಿನಿಯರ್ಗಳು ಸೇರಿದಂತೆ ಎಲ್ಲಾ ಇಲಾಖೆಗಳ ನೇಮಕಾತಿಯನ್ನು ವಿಳಂಬವಿಲ್ಲದೆ ಪೂರ್ಣಗೊಳಿಸುವಂತೆ ಇತ್ತೀಚಿನ ಸಚಿವ ಸಂಪುಟ ಸಭೆಯಲ್ಲಿ ನಿರ್ದೇಶನ ನೀಡಲಾಗಿದೆ.
ನೇಮಕಾತಿ ಪ್ರಕ್ರಿಯೆಯ ಮೇಲ್ವಿಚಾರಣೆಗಾಗಿ ಮುಖ್ಯಮಂತ್ರಿ ಇಬ್ಬರು ಐಎಎಸ್ ಅಧಿಕಾರಿಗಳಾದ ಉಮಾ ಮಹದೇವನ್ ಮತ್ತು ಗೌರವ ಗುಪ್ತ ಅವರನ್ನು ನೇಮಿಸಿದ್ದಾರೆ ಎಂದು ಸಚಿವರು ಮಾಹಿತಿ ನೀಡಿದ್ದರು.
Also Read:
ನಾಳೆಯಿಂದ ಉತ್ತರ ಕರ್ನಾಟಕದಲ್ಲಿ ಭರ್ಜರಿ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ