<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

ಗೃಹಲಕ್ಷ್ಮೀ ಹಣ ಪಡೆಯುವವರಿಗೆ ಇದು ಕಡ್ಡಾಯ

ಗೃಹಲಕ್ಷ್ಮೀ ಹಣ ಪಡೆಯುವವರಿಗೆ ಇದು ಕಡ್ಡಾಯ
Summary: ಗೃಹ ಲಕ್ಷ್ಮೀ ಯೋಜನೆಯಿಂದ ಹಣ ಪಡೆಯುವವರಿಗೆ ಜೀವಿತ ಪ್ರಮಾಣಪತ್ರ ಕಡ್ಡಾಯ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

belagavi news:

ಗೃಹಲಕ್ಷ್ಮೀ ಯೋಜನೆಯಿಂದ ಹಣ ಪಡೆಯುತ್ತಿರುವ ಮಹಿಳೆಯರಿಗೆ ಜೀವಿತ ಪ್ರಮಾಣ ಪತ್ರವನ್ನು ಕಡ್ಡಾಯವಾಗಿ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮುಖ್ಯ ಕಾರ್ಯದರ್ಶಿಗಳಿಗೆ ಈ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಗೃಹಲಕ್ಷ್ಮಿ ಯೋಜನೆಯಿಂದ ಹಣ ಪಡೆಯುತ್ತಿರುವ ಮಹಿಳೆಯರಲ್ಲಿ ಯಾರು ಮರಣ ಹೊಂದಿದ್ದಾರೆ ಎಂಬುದನ್ನು ತಿಳಿದುಕೊಂಡು. ಅವರ ಹೆಸರಿನಲ್ಲಿ ಪಡೆದುಕೊಳ್ಳುವ ಗೃಹಲಕ್ಷ್ಮೀ ಹಣವನ್ನು ತಪ್ಪಿಸಲು ಕ್ರಮಕೈಗೊಳ್ಳಲು ಸರ್ಕಾರ ಯೋಚನೆ ಮಾಡಿದೆ.

ರಾಜ್ಯ ಗ್ಯಾರಂಟಿ ಪ್ರಾಧಿಕಾರ ಉಪಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯರಾಗಿರುವ ದಿನೇಶ್ ಗೂಳಿಗೌಡ ಅವರು ಸಿಎಂ ಸಿದ್ದರಾಮಯ್ಯನವರು ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಈ ವಿಷಯದ ಬಗ್ಗೆ ಮನವಿಯನ್ನು ಸಲ್ಲಿಸಿದರು. ಅದಕ್ಕೆ ಪ್ರತಿಕ್ರಿಸಿದ ಸಿಎಂ ಸಿದ್ದರಾಮಯ್ಯನವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರಿಗೆ ಇದರ ಬಗ್ಗೆ ಪರಿಶೀಲನೆ ಮಾಡಬೇಕು ಎಂದು ಮತ್ತು ಶೀಘ್ರದಲ್ಲಿಯೇ ಅದರ ಬಗ್ಗೆ ಕ್ರಮ ಕೈಗೊಳ್ಳಲು ಅವರಿಗೆ ತಿಳಿಸಿದರು.

ಗೃಹಲಕ್ಷ್ಮೀ ಫಲಾನುಭವಿಗಳಲ್ಲಿ ಮರಣ ಹೊಂದಿದವರು ಈ ಗೃಹಲಕ್ಷ್ಮೀ ಹಣವನ್ನು ತೆಗೆದುಕೊಳ್ಳುತ್ತಿರುವುದರಿಂದ ಅದನ್ನು ತಡೆಗಟ್ಟಲು ಸರ್ಕಾರ ಈಗ ಕ್ರಮ ಕೈಗೊಳ್ಳುತ್ತಿದೆ. ಇದರಿಂದ ಗೃಹಲಕ್ಷ್ಮೀ ಹಣವನ್ನು ಪಡೆಯಲು ಯಾರು ಅರ್ಹರಿರುತ್ತಾರೋ ಅವರಿಗೆ ಮಾತ್ರ ಈ ಹಣವನ್ನು ಪಾವತಿ ಮಾಡಲು ಸರ್ಕಾರವು ಮುಂದಾಗಿದೆ. ಆದ್ದರಿಂದ ಇದರ ಬಗ್ಗೆ ಪರಿಶೀಲನೆ ನಡೆಸಬೇಕೆಂದು ಎಂದು ಮುಖ್ಯ ಕಾರ್ಯದರ್ಶಿಯವರಿಗೆ ಸಿಎಂ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರವು 5 ಪಂಚ ಗ್ಯಾರಂಟಿ ಯೋಜನೆಗಳನ್ನು ಈಗಾಗಲೇ ರಾಜ್ಯಾದ್ಯಂತ ಜಾರಿಗೆ ತಂದಿದೆ. ಈಗ ಅವು ಮುಂದುವರಿತಿವೆ ಅವುಗಳನ್ನು ಸರಿಯಾದ ರೀತಿಯಲ್ಲಿ ನಡೆಸಿಕೊಂಡು ಹೋಗುವುದು ಸರ್ಕಾರದ ಜವಾಬ್ದಾರಿಯಾಗಿದೆ. ಅದರಲ್ಲಿ ಒಂದು ಗೃಹಲಕ್ಷ್ಮೀ ಯೋಜನೆ, 2023 ಜೂನ್ ತಿಂಗಳಲ್ಲಿ ಈ ಯೋಜನೆಯನ್ನು ಸರ್ಕಾರವು ಜಾರಿಗೆ ತಂದಿತು. ಈ ಯೋಜನೆಯಡಿ ಮಹಿಳೆಯರಿಗೆ ಮಾಸಿಕ ಎರಡು ಸಾವಿರ ರೂಪಾಯಿಯನ್ನು ತಮ್ಮ ಬ್ಯಾಂಕ್ ಖಾತೆಗೆ ನೀಡುತ್ತಿದೆ.

ಇದರಿಂದ 1,24,12,543 ಅರ್ಹ ಫಲಾನುಭವಿಗಳು ಹಣವನ್ನು ಪಡೆಯುತ್ತಿದ್ದಾರೆ. ಬೆಳಗ್ಗಿಸಿದ ಇಲ್ಲಿಯವರೆಗೆ 57300 ಕೋಟಿ ರೂಪಾಯಿಗಳ ಆರ್ಥಿಕ ಸಹಾಯವನ್ನು ನೀಡಿದೆ. ನಿವೃತ್ತರಾಗಿರುವ ಸರ್ಕಾರಿ ನೌಕರರಿಗೆ ಪಾವತಿಸುವ ಪಿಂಚಣಿ ಮೊತ್ತವನ್ನು ಪಡೆಯಲು ಅವರು ಪ್ರತಿವರ್ಷ ಅವರಿಗೆ ಸಂಬಂಧಪಟ್ಟ ಬ್ಯಾಂಕುಗಳಿಗೆ ಹೋಗಿ ತಮ್ಮ ಜೀವಿತ ಪ್ರಮಾಣ ಪತ್ರವನ್ನು ನೀಡುತ್ತಾರೆ. ಅದನ್ನು ಸರ್ಕಾರವು ಕಡ್ಡಾಯಗೊಳಿಸಿದೆ.

ಅದರ ಮಾದರಿಯಂತೆ ಗೃಹಲಕ್ಷ್ಮಿ ಹಣವನ್ನು ಪಡೆಯುವ ಪ್ರತಿ ಮಹಿಳೆಯರಿಗೆ ಪ್ರತಿವರ್ಷ ಅವರಿಗೆ ಸಂಬಂಧಪಟ್ಟ ಬ್ಯಾಂಕುಗಳಿಗೆ ಹೋಗಿ ಅವರ ಜೀವಿತ ಪ್ರಮಾಣ ಪತ್ರವನ್ನು ಸಲ್ಲಿಸಬೇಕು ಎಂಬುದನ್ನು ಕಡ್ಡಾಯಗೊಳಿಸುವ ಸಲುವಾಗಿ ಅದಕ್ಕೆ ಸಂಬಂಧಪಟ್ಟಂತ ಮಾರ್ಗೋಪಾಯಗಳನ್ನು ಪರಿಶೀಲನೆ ನಡೆಸಬೇಕು ಎಂದು ಸರ್ಕಾರವು ಈ ನೀಟ್ಟಿನಲ್ಲಿ ಕ್ರಮವನ್ನು ಕೈಗೊಳ್ಳಲು ತೀರ್ಮಾನಿಸಬೇಕು.

Sponsored

ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ವಿತರಿಸುವ ಬಿಪಿಎಲ್,ಐಪಿಎಲ್ ಮತ್ತು ಪಡಿತರ ಚೀಟಿಗಳಲ್ಲಿ ಕುಟುಂಬ ಪ್ರತಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯಿಂದ ಹಣ ಪಡೆಯುತ್ತಿರುವ ಫಲಾನುಭವಿಗಳಾಗಿದ್ದಾರೆ. ಸಿದ್ದರಾಮಯ್ಯನವರಿಗೆ ಇದರ ಬಗ್ಗೆ ಸಂಪೂರ್ಣವಾದ ಮಾಹಿತಿಯನ್ನು ನೀಡಿ ಅವರಿಗೆ ದಿನೇಶ್ ಗೌಳಿ ಗೌಡ ಅವರು ಮನವಿಯನ್ನು ಸಲ್ಲಿಸಿದ್ದಾರೆ.

ಅದಕ್ಕೆ ಪ್ರತಿಕ್ರಿಯೆಯನ್ನು ನೀಡಿದ ಸಿದ್ದರಾಮಯ್ಯನವರು ಯಾರು ಅರ್ಹ ಫಲಾನುಭವಿಗಳಿದ್ದಾರೋ ಅವರಿಗೆ ಮಾತ್ರ ಈ ಹಣವು ದೊರೆಯಬೇಕು. ಅದಕ್ಕೆ ಬೇಕಾದ ಕ್ರಮಗಳನ್ನು ಕೈಗೊಳ್ಳುವಂತೆ ಅವರು ಮುಖ್ಯ ಕಾರ್ಯದರ್ಶಿಯವರಿಗೆ ಸಲಹೆಯನ್ನು ನೀಡಿದ್ದಾರೆ.

ಇನ್ನಷ್ಟು ಓದಿರಿ:

ರಷ್ಯಾ ತೈಲ ಖರೀದಿ ಬಗ್ಗೆ ವಿದೇಶಾಂಗ ಸಚಿವಾಲಯದಿಂದ ಮಾಹಿತಿ : ಗೋಯೆಲ್

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online