belagavi news :
ಕೇಂದ್ರ ವಿದೇಶಾಂಗ ಸಚಿವ ಎಸ್ ಜಯಶಂಕರ್ ಅವರು ಅಮೆರಿಕ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರುಬಿಯೋ ಅವರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ, ಕೊಲ್ಲಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ ಅಮೆರಿಕ ನೌಕಾಪಡೆ ದಾಳಿಗೆ ತೀವ್ರ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಜಯಶಂಕರ ಅವರು, ಹಾರ್ಮುಜ್ ಜಲಸಂದಿ ಬಳಿಕ ನಡೆದ ಈ ಘಟನೆ ಅಸಮರ್ಥನೀಯ ಎಂದು ಹೇಳಿದ್ದಾರೆ. ಅಮೆರಿಕ ಸೇನೆಯ ಕ್ರಮದ ಬಗ್ಗೆ ಭಾರತದ ಗಂಭೀರ ಆಕ್ಷೇಪವನ್ನು ಅವರು ಪುನರುಚ್ಚರಿಸಿದ್ದು, ಈ ವಿಷಯವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಬೇಕೆಂದು ಒತ್ತಾಯಿಸಿದ್ದಾರೆ.
ವರದಿಗಳ ಪ್ರಕಾರ, ಒಮನ್ ಕೊಲ್ಲಿಯಲ್ಲಿ ವಾಣಿಜ್ಯ ಹಡಗಿನ ಮೇಲೆ ಅಮೆರಿಕ ನೌಕಾಪಡೆ ನಡೆಸಿದ ದಾಳಿಯಲ್ಲಿ ಮೂವರು ಭಾರತೀಯ ನಾವಿಕರು ಸಾವನ್ನಪ್ಪಿದ್ದಾರೆ. ಇರಾನ್ ಬಂದರುಗಳ ಮೇಲಿನ ನೌಕ ದಿಗ್ಬಂಧನವನ್ನು ಉಲ್ಲಂಘಿಸಿದ ಆರೋಪದ ಮೇಲೆ ಎಂಟಿ ಸೆಟ್ಟೆಬೆಲ್ಲೊ ಎಂಬ ಹಡಗು ಗುರಿಯಾಗಿದ್ದು, ಈ ಸಂದರ್ಭದಲ್ಲಿ ಮುಂದಿನ ದಾರಿ ನಡೆದಿರುವುದಾಗಿ ತಿಳಿದು ಬಂದಿದೆ.
ಈ ಘಟನೆಯು ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ಪ್ರತಿಕ್ರಿಯೆ ಹುಟ್ಟಿಸಿದ್ದು, ಭಾರತ-ಅಮೇರಿಕಾ ಸಂಬಂಧಗಳಲ್ಲೂ ಚರ್ಚೆಗೆ ಕಾರಣವಾಗಿದೆ.
ಇದಕ್ಕೂ ಮೊದಲು, ಅಮೆರಿಕ ಅಧ್ಯಕ್ಷರು ಡೊನಾಲ್ಡ್ ಟ್ರಂಪ್, ಹಾರ್ಮುಜ್ ಜಲಸಂಧಿಯಿಂದ ಹೊರಡುವ ಭಾರತೀಯ ಹಡಗುಗಳ ಮೇಲೆ ಇರಾನ್ ಡ್ರೋನ್ ದಾಳಿ ನಡೆಸುತ್ತಿದೆ ಎಂದು ಆರೋಪಿಸಿದರು. ಇದು ಸಂಪೂರ್ಣವಾಗಿ ಸ್ವೀಕಾರಾರ್ಹವಲ್ಲ ಆಧಾರರಹಿತ ಆರೋಪ ಎಂದು ಇಸ್ಲಾಮಿಕ್ ಗಣರಾಜ್ಯ ಹೇಳಿತು.
ಹಾರ್ಮುಜ್ ಜಲಸಂಧಿಯಿಂದ ಹೊರಡುವ ಭಾರತೀಯ ಹಡಗುಗಳ ಮೇಲೆ ನಡೆದ ದ್ರೋಣ್ ದಾಳಿಯ ಕುರಿತು ಇರಾನ್ ನೀಡಿರುವ ಪ್ರತಿಕ್ರಿಯೆ ಹಾಗೂ ಅಮೆರಿಕದ ಆರೋಪಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಈ ಕುರಿತು ಅಮೆರಿಕ ಮಾಜಿ ಅಧ್ಯಕ್ಷರು ಡೊನಾಲ್ಡ್ ಟ್ರಂಪ್ ತಮ್ಮ ಟ್ರೂತ್ ಸೋಷಿಯಲ್ನಲ್ಲಿ ನಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಹಾರ್ಮುಜ್ ಜಲಸಂಧಿ ಇಂದ ಹೊರಡುವ ಭಾರತೀಯ ಹಡಗುಗಳ ಮೇಲೆ ನಡೆದ ಡ್ರೋನ್ ದಾರಿಯನ್ನು ಇರಾನ್ ಸಂಪೂರ್ಣವಾಗಿ ತಿರಸ್ಕರಿಸಿದೆ ಎಂದು ಹೇಳಿದ್ದಾರೆ. ಅವರು "ಒಟ್ಟಾಗಿ ಮತ್ತು ಬೇಗನೆ ಕ್ರಮ ಕೈಗೊಳ್ಳುವುದು ಉತ್ತಮ" ಎಂದು ಕೂಡ ಅಭಿಪ್ರಾಯ ಪಟ್ಟಿದ್ದಾರೆ.
ಇದರ ಮಧ್ಯೆ, ಭಾರತದಲ್ಲಿನ ಇರಾನ್ ರಾಯಭಾರ ಕಚೇರಿಯ ಅಧಿಕೃತ ಎಕ್ಸ್ ಖಾತೆಯಿಂದ ನೀಡಿರುವ ಹೇಳಿಕೆಯಲ್ಲಿ, ಅಮೆರಿಕ ಅಧ್ಯಕ್ಷ ಆರೋಪಗಳನ್ನು ಸಂಪೂರ್ಣವಾಗಿ ತಳ್ಳಿ ಹಾಕಲಾಗಿದೆ. ಹಾರ್ಮುಜ್ ಜಲಸಂಧಿಯಲ್ಲಿ ಭಾರತೀಯ ಹಡಗಿನ ಮೇಲೆ ಇರಾನ್ ವಿರುದ್ಧ ಮಾಡಲಾಗಿರುವ ಆರೋಪಗಳು ಆಧಾರರಹಿತವಾಗಿವೆ ಎಂದು ಅದು ಸ್ಪಷ್ಟಪಡಿಸಿದೆ.ಜೊತೆಗೆ, ಒಂದು ವಾರಕ್ಕಿಂತ ಕಡಿಮೆ ಅವಧಿಯಲ್ಲಿ ಅಮೆರಿಕ ಮೂರು ಭಾರತೀಯ ಹಡಗುಗಳ ಮೇಲೆ ದಾಳಿ ಮಾಡಿ 3 ಅಮಾಯಕ ಭಾರತೀಯ ನಾವಿಕರನ್ನು ಕೊಂದಿದೆ ಎಂದು ಗಂಭೀರ ಆರೋಪವನ್ನು ಇರಾನ್ ಮಾಡಿದೆ.
ವರದಿಗಳ ಪ್ರಕಾರ, ಹಡಗಿನಲ್ಲಿದ್ದ ಒಟ್ಟು 24 ಭಾರತೀಯ ಸಿಬ್ಬಂದಿಯಲ್ಲಿ 21 ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದ್ದು, ಮೂವರು ಸಾವನ್ನಪ್ಪಿದ್ದಾರೆ ಎಂದು ದೃಢಪಡಿಸಲಾಗಿದೆ. ಈ ಘಟನೆ ಜಾಗತಿಕ ಮಟ್ಟದಲ್ಲಿ ಆತಂಕ ಮೂಡಿಸಿದೆ.
ಈ ಮಧ್ಯೆ, ಒಮನ್ ಕರಾಳಿಯಲ್ಲಿ ವಾಣಿಜ್ಯ ಹಡಗುಗಳ ಮೇಲೆ ನಡೆಯುತ್ತಿರುವ ದಾಳಿಗಳ ಕುರಿತು ಭಾರತ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ. ಈ ಹಿನ್ನಲೆಯಲ್ಲಿ ವಿದೇಶಾಂಗ ಸಚಿವಾಲಯ ಶುಕ್ರವಾರ ಅಮೆರಿಕಾದ ಉಸ್ತುವಾರಿ ಅಧಿಕಾರಿ ಜೇಸನ್ ಮಿಕ್ಸ್ ಅವರನ್ನು ಕರೆಸಿ ಬಲವಾದ ಪ್ರತಿಭಟನೆ ಸಲ್ಲಿಸಿದೆ.
ಇತ್ತೀಚಿಗೆ ನಡೆದ ಮತ್ತೊಂದು ಘಟನೆಯ ಬಳಿಕ, ಕಡಲ ಭದ್ರತಾ ಪರಿಸ್ಥಿತಿ ಕುರಿತು ಭಾರತ ಮತ್ತು ಅಮೆರಿಕ ನಡುವೆ ರಾಜತಾಂತ್ರಿಕ ಒತ್ತಡ ಮತ್ತಷ್ಟು ಹೆಚ್ಚಾಗಿದೆ.
ವರದಿಗಳ ಪ್ರಕಾರ, ಈ ಘಟನೆಯಲ್ಲಿ 20 ಭಾರತೀಯ ಸಿಬ್ಬಂದಿ ಇದ್ದ ವಾಣಿಜ್ಯ ಹಡಗಿನ ಮೇಲೆ ಅದೇ ಪ್ರದೇಶದಲ್ಲಿ ದಾರಿ ನಡೆದಿದೆ. ಈ ಹೆಚ್ಚುತ್ತಿರುವ ಕಡಲ ಭದ್ರತಾ ಸಮಸ್ಯೆಗಳ ಹಿನ್ನೆಲೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಅಮೆರಿಕಾದ ನಿಯೋಗಕ್ಕೆ ಎರಡನೆ ಬಾರಿ ಸಮನ್ಸ್ ಜಾರಿ ಮಾಡಿದೆ ಎಂದು ತಿಳಿದು ಬಂದಿದೆ.
ಈ ನಡುವೆ, ಎಂಟಿ ಸೆಟ್ಟಿಬೆಲ್ಲೊ ಹಡಗಿನ ಮೇಲಿನ ದಾಳಿಯಲ್ಲಿ ಮೂರು ಭಾರತೀಯ ನಾವಿಕರು ಸಾವನ್ನಪ್ಪಿದ ಘಟನೆ ಕುರಿತು ಅವರ ಗುರುತು ದೃಢಪಡಿಸಲಾಗಿದೆ. ಮೃತದೇಹಗಳನ್ನು ಸಾಧ್ಯವಾದಷ್ಟು ಬೇಗ ಭಾರತಕ್ಕೆ ತರಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ವಿದೇಶಾಂಗ ಸಚಿವಾಲಯ ಗುರುವಾರ ತಿಳಿಸಿದೆ.
ವಿದೇಶಾಂಗ ಸಚಿವಾಲಯದ ವಕ್ತಾರರು ಹೇಳಿಕೆಯೊಂದರಲ್ಲಿ, "ಈ ಪ್ರದೇಶದಲ್ಲಿ ಬಿಡುಬಿಟ್ಟಿರುವ ಯುಎಸ್ ನೌಕಾಪಡೆಗಳು ಈ ದಾಳಿಗಳನ್ನು ನಡೆಸಿವೆ. ವಿವಿಧ ವಿವರಗಳಲ್ಲಿಯೂ ಹಾಗೂ ನಮ್ಮ ಹೇಳಿಕೆಗಳಲ್ಲಿಯೂ ಸ್ಪಷ್ಟವಾಗಿದೆ, ಈ ಘಟನೆಗಳಲ್ಲಿ ಭಾಗಿಯಾಗಿರುವ ಮೂರು ಹಡಗುಗಳು ವಿದೇಶಿ ದ್ವಜ ಹೊಂದಿದ್ದವು" ಎಂದು ತಿಳಿಸಿದ್ದಾರೆ. ಈ ಹೇಳಿಕೆಯನ್ನು ವಕ್ತಾರ ಜೈಸ್ವಾಲ್ ನೀಡಿದ್ದಾರೆ ಎಂದು ವರದಿಯಾಗಿದೆ.
ಈ ಬೆಳವಣಿಗೆಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದು, ಹಾರ್ಮುಜ್ ಪ್ರದೇಶದ ಕಡಲ ಭದ್ರತೆ ಕುರಿತು ಗಂಭೀರ ಚರ್ಚೆಗೆ ಕಾರಣವಾಗಿದೆ.
Also Read:
ಮುತ್ತಪ್ಪ ರೈ ಮಗನ ವಿರುದ್ಧ ಆಕ್ರೋಶ : ಸೈಲೆನ್ಸರ್ ನಲ್ಲಿ ಬೆಂಕಿ ಉಗುಳುತ್ತಾ ಕಾರು ಚಲಾಯಿಸಿದ ವಿಡಿಯೋ ವೈರಲ್