belagavi news:
ದೊಡ್ಡಬಳ್ಳಾಪುರದಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ ಅಕ್ರಮ ಸಂಬಂಧದ ಹಿನ್ನೆಲೆ ಅತಿಥಿ ಉಪನ್ಯಾಸಕಿಯೊಬ್ಬರ ಭೀಕರ ಕೊಲೆ ನಡೆದಿದೆ. ಮದುವೆಗೆ ನಿರಾಕರಿಸಿದ ಕಾರಣದಿಂದ ಆಕ್ರೋಶಗೊಂಡ ಆರೋಪಿ ಮಹಿಳೆಯನ್ನು ಹತ್ಯೆಗೈದಿದ್ದು, ಬಳಿಕ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಗ್ರಾಮಂತರ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಡೆದ ಈ ದ್ವಿತೀಯ ದುರ್ಘಟನೆ (ಡಬಲ್ ಟ್ರ್ಯಾಜೆಡಿ) ಸ್ಥಳೀಯರಲ್ಲಿ ಆಘಾತ ಮೂಡಿಸಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಪ್ರಕರಣ ದಾಖಲಿಸಿ ಮುಂದಿನ ತನಿಖೆ ಕೈಗೊಂಡಿದ್ದಾರೆ.
ದೇವನಹಳ್ಳಿ ಮೇ 5: ಮದುವೆಯಾಗಲು ನಿರಾಕರಿಸಿದ ಕಾರಣಕ್ಕೆ ತನ್ನೊಂದಿಗೆ ಅನೈತಿಕ ಸಂಬಂಧ ಹೊಂದಿದ ಮಹಿಳೆಯನ್ನು ಭೀಕರವಾಗಿ ಕೊಲೆ ಮಾಡಿದ ಬಳಿಕ ವ್ಯಕ್ತಿ ಒಬ್ಬ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ತಾಲೂಕಿನ ಜಿಂಕೆಬಚ್ಚಹಳ್ಳಿ ಗ್ರಾಮದ ಬಳಿ ನಡೆದಿದೆ.
ಕೊಲೆಯಾದ ಮಹಿಳೆಯನ್ನು ಸರೋಜಾ (40) ಎಂದು ಗುರುತಿಸಲಾಗಿದ್ದು ನಂತರ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ರಾಮಾಂಜಿ (45) ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆ ಸ್ಥಳೀಯರಲ್ಲಿ ಆತಂಕ ಹಾಗೂ ಆಘಾತ ವನ್ನು ಉಂಟು ಮಾಡಿದ್ದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.
ಕೊಲೆ ಮಾಡಿ ಕಾರಿಗೆ ಬೆಂಕಿ: ದೇವನಹಳ್ಳಿ ಬಳಿಯ ಖಾಸಗಿ ಕಾಲೇಜೊಂದರ ಅತಿಥಿ ಉಪನ್ಯಾಸಕಿಯಾಗಿದ್ದ ಸರೋಜಾ ಮತ್ತು ರಾಮಾಂಜಿ ಕಳೆದೊಂದು ವರ್ಷದಿಂದ ಅನೈತಿಕ ಸಂಬಂಧದಲ್ಲಿದ್ದರೂ. ಗಂಡನಿಗೆ ವಿಚ್ಛೇದನ ನೀಡಿದ ಸರೋಜಾ, ರಾಮಾಂಜಿಯೊಂದಿಗೆ ಸಂಪರ್ಕದಲ್ಲಿದ್ದಳು ಎಂದು ತಿಳಿದು ಬಂದಿದೆ.
ಈ ನಡುವೆ ಮದುವೆಯಾಗುವಂತೆ ರಾಮಾಂಜಿ ಒತ್ತಾಯಿಸಿದ್ದರೂ ಸರೋಜಾ ಅದಕ್ಕೆ ವಿರುದ್ಧ ವ್ಯಕ್ತಪಡಿಸಿದ್ದಳು. ಇದೇ ವಿಚಾರಕ್ಕೆ ಇಬ್ಬರ ನಡುವೆ ಭಿನ್ನಾಭಿಪ್ರಾಯ ಉಂಟಾಗಿತ್ತು ಎಂದು ಹೇಳಲಾಗಿದೆ. ನಂತರ ಲಾಂಗ್ ಡ್ರೈವ್ ಗೆ ಎಂದು ಕರೆದುಕೊಂಡು ಹೋಗಿದ ಆರೋಪಿ ಸರೋಜಾಳನ್ನು ಹತ್ಯೆಗೈದು ಬಳಿಕ ಕಾರಿಗೂ ಬೆಂಕಿ ಹಚ್ಚಿದ್ದಾನೆ ಎಂಬುದು ತಿಳಿದು ಬಂದಿದೆ.
ಪೂರ್ವಯೋಜಿತ ಕೊಲೆ : ಸೋಶಿಯಲ್ ಮೀಡಿಯಾ ಮೂಲಕ ಪರಿಚಯವಾಗಿದ್ದ ಸರೋಜಾ ಮದುವೆಗೆ ನಿರಾಕರಿಸಿದ ಕಾರಣ ರಾಮಾಂಜಿ ಆಕೆಯ ಮೇಲೆ ಸಿಟ್ಟುಗೊಂಡಿದ್ದಾನೆ ಎಂದು ತಿಳಿದುಬಂದಿದೆ. ಇದೇ ಕಾರಣಕ್ಕೆ ಕೊಲೆ ಮಾಡಲು ಮೊದಲೇ ಯೋಜನೆ ರೂಪಿಸಿ ಆಯ್ಕೆಯನ್ನು ತನ್ನೊಂದಿಗೆ ಕರೆದುಕೊಂಡು ಬಂದಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭ್ಯವಾಗಿದೆ.
ಮಹಿಳೆಯನ್ನು ಹತ್ಯೆಗೈದ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಆರಂಭಿಸಿದ್ದರು. ಈ ವೇಳೆ ಮತ್ತೊಂದು ಶಾಕಿಂಗ್ ಮಾಹಿತಿ ಬೆಳಕಿಗೆ ಬಂದಿದ್ದು ಸರೋಜಾ ಕೊಲೆ ಬಳಿಕ ರಾಮಾಂಜಿ ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವುದು ದೃಢಪಟ್ಟಿದೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
Also Read: