<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ ಭೀಕರ ದುರಂತ : ಎಂಟು ಕಾರ್ಮಿಕರ ಸಾವು; ಪಿಎಂ ನಿಂದ ಪರಿಹಾರ ಘೋಷಣೆ

ವಿಶಾಖಪಟ್ಟಣಂ ಉಕ್ಕು ಸ್ಥಾವರದಲ್ಲಿ ಭೀಕರ ದುರಂತ : ಎಂಟು ಕಾರ್ಮಿಕರ ಸಾವು; ಪಿಎಂ ನಿಂದ ಪರಿಹಾರ ಘೋಷಣೆ
Summary: Eight workers died in a horrific industrial accident that occurred at the Visakhapatnam Steel Plant in Andhra Pradesh on Tuesday evening. Initial information said that the accident occurred around 4:30 pm due to the handling of a ladle carrying a metal pole in the SMS section of the plant.

BELAGAVI NEWS :

ಆಂಧ್ರಪ್ರದೇಶದ ವಿಶಾಖಪಟ್ಟಣಂ ನಲ್ಲಿರುವ ವಿಶಾಖಪಟ್ಟಣ ಸ್ಟೀಲ್ ಪ್ಲಾಂಟ್ ನಲ್ಲಿ ಸೋಮವಾರ ಸಂಜೆ ಸಂಭವಿಸಿದ ಭೀಕರ ಕೈಗಾರಿಕಾ ದುರಂತದಲ್ಲಿ ಎಂಟು ಕಾರ್ಮಿಕರು ಸಾವನ್ನಪ್ಪಿದ್ದು, ಹನ್ನೊಂದಕ್ಕು ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಅಧಿಕಾರಿಗಳ ಮಾಹಿತಿ ಪ್ರಕಾರ, ಸಂಜೆ ಸುಮಾರು 4.15 ರ ವೇಳೆಗೆ ಸಾವಿರದ ಎಸ್ಎಂಎಸ್ ವಿಭಾಗದಲ್ಲಿ ಭಾರವಾದ ಲೋಹದ ಲ್ಯಾಡಲ್ ಅಸಮರ್ಪಕವಾಗಿ ಕಾರ್ಯನಿರ್ವಹಿಸಿ ಕುಸಿದು ಬಿದ್ದಿದೆ. ಇದರಿಂದ ಸುಮಾರು 1,500 ಡಿಗ್ರಿ ಸೆಲ್ಸಿಯ ಸ್ಥಾಪಮಾನ ಹೊಂದಿದ್ದ ಕರಗಿದ ಲೋಹ ಕಾರ್ಮಿಕರ ಮೇಲೆ ಚಲ್ಲಲ್ಪಟ್ಟ ಪರಿಣಾಮ ಈ ದುರಂತ ಸಂಭವಿಸಿದೆ.

ತೀವ್ರ ಉಷ್ಣಾಂಶದ ದ್ರುವ ಲೋಹ ಕಾರ್ಮಿಕರನ್ನು ಅಪಾಯಕ್ಕೆ ಸಿಲುಕಿಸಿದ್ದು, ಘಟನಾ ಸ್ಥಳದಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಈ ಅವಘಡ ಅನೇಕ ಸಾವು ನೋವುಗಳಿಗೆ ಕಾರಣವಾಗಿದೆ ಎಂದು ಕಾರ್ಮಿಕ ಸಂಘದ ಮುಖಂಡರೊಬ್ಬರು ತಿಳಿಸಿದ್ದಾರೆ.

Sponsored

ಘಟನೆ ಸಂಭವಿಸಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ತುರ್ತು ಪ್ರತಿಕ್ರಿಯೆ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಮತ್ತು ಅಗ್ನಿ ನಂದಿಸುವ ಕಾರ್ಯಾಚರಣೆ ಆರಂಭಿಸಿವೆ. ಗಾಯಗೊಂಡ ಕಾರ್ಮಿಕರನ್ನು ತಕ್ಷಣವೇ ಸಮೀಪದ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ದುರಂತದ ನಿಖರ ಕಾರಣವನ್ನು ಪತ್ತೆಹಚ್ಚಲು ತನಿಖೆ ಆರಂಭಿಸಲಾಗಿದ್ದು, ಸುರಕ್ಷತಾ ಕ್ರಮಗಳ ಅನುಷ್ಠಾನ ಮತ್ತು ಲ್ಯಾಡಲ್ ನಿರ್ವಹಣೆಯಲ್ಲಿ ನಡೆದಿರುವ ಲೋಕಗಳ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ. ಮೃತರ ಕುಟುಂಬಗಳಿಗೆ ಸರ್ಕಾರ ಮತ್ತು ಸಂಬಂಧಿತ ಸಂಸ್ಥೆಗಳಿಂದ ನೆರವು ಒದಗಿಸಲು ಕುರಿತು ಕ್ರಮ ಕೈಗೊಳ್ಳಲಾಗುತ್ತಿದೆ.

ಘಟನೆಯ ನಂತರ, ಇತರ ಕಾರ್ಮಿಕರು ಭಯಬೀತರಾಗಿ ಸುತ್ತಾಮುತ್ತಲಿನ ಪ್ರದೇಶದಿಂದ ಓಡಿಹೋಗಿ ಪ್ರಾಣ ಕಾಪಾಡಿಕೊಂಡಿದ್ದಾರೆ. ಅತ್ತ ಸುದ್ದಿ ತಿಳಿದು ಕಾರ್ಮಿಕರ ಕುಟುಂಬದವರು ತಮ್ಮವರ ಬರುವಿಕೆಗಾಗಿ ಕುಳಿತಿದ್ದರು.

ವಿಶಾಖಪಟ್ಟಣಂ ಉಕ್ಕು ಸಾಗರದಲ್ಲಿ ಸಂಭವಿಸಿದ ಭೀಕರ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಮ್ಮ ಆಳವಾದ ದುಃಖವನ್ನು ವ್ಯಕ್ತಪಡಿಸಿದವರು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳ ನೋವಿನಲ್ಲಿ ತಾವು ಭಾಗಿಯಾಗಿದ್ದಾಗಿ ತಿಳಿಸಿದ್ದಾರೆ.

Sponsored

ಅಲ್ಲದೆ, ಗಾಯಗೊಂಡಿರುವ ಕಾರ್ಮಿಕರು ಶೀಘ್ರವಾಗಿ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿರುವ ಪ್ರಧಾನಿ,ಸಂತ್ರಸ್ತರಿಗೆ ಅಗತ್ಯವಿರುವ ಎಲ್ಲ ನೆರವು ಮತ್ತು ವೈಯಕ್ತಿಕ ಸೌಲಭ್ಯಗಳನ್ನು ಒದಗಿಸುವಂತೆ ಸ್ಥಳೀಯ ಆಡಳಿತ ಮತ್ತು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ದುರಂತದಲ್ಲಿ ಮೃತಪಟ್ಟ ಪ್ರತಿಯೊಬ್ಬ ಕಾರ್ಮಿಕರ ಕುಟುಂಬಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರ ನೀಡುವುದಾಗಿ ಪ್ರಧಾನಿ ಘೋಷಿಸಿದ್ದಾರೆ. ಜೊತೆಗೆ, ಗಾಯಗೊಂಡವರಿಗೆ 50,000 ಆರ್ಥಿಕ ನೆರವು ನೀಡಲಾಗುವುದು ಎಂದು ತಿಳಿಸಿದ್ದಾರೆ. ಈ ಮಧ್ಯೆ,ಘಟನೆಯ ಕಾರಣಗಳ ಕುರಿತು ತನಿಖೆ ಆರಂಭವಾಗಿದ್ದು, ಭವಿಷ್ಯದಲ್ಲಿ ಇಂತಹ ಅವಗಡಗಳು ಮರುಕಳಿಸದಂತೆ ಅಗತ್ಯ ಸುರಕ್ಷತಾ ಕ್ರಮಗಳನ್ನು ಬಲಪಡಿಸುವ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ವಿಶಾಖಪಟ್ಟಣಂ ಸ್ಟೀಲ್ ಪ್ಲಾಂಟ್ ನಲ್ಲಿ ನಡೆದ ಅಪಘಾತದಿಂದ ದುಖಿತನಾಗಿದ್ದೇನೆ. ತಮ್ಮ ಪ್ರೀತಿ ಪಾತ್ರರನ್ನು ಕಳೆದುಕೊಂಡವರಿಗೆ ಸಂತಾಪ ಸೂಚಿಸುತ್ತೇನೆ. ಗಾಯಾಳುಗಳು ಆದಷ್ಟು ಬೇಗ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಪ್ರಧಾನಿ ತಮ್ಮ ಎಕ್ಸ್ ನಲ್ಲಿ ತಿಳಿಸಿದ್ದಾರೆ.

ಈ ಭೀಕರ ದುರಂತಕ್ಕೆ ಎನ್ ಚಂದ್ರಬಾಬು ನಾಯ್ಡು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಘಟನೆ ಕುರಿತು ಮಾಹಿತಿ ದೊರೆಯುತ್ತಿದ್ದಂತೆಯೇ ಅವರು ಆಘಾತ ವ್ಯಕ್ತಪಡಿಸಿ, ಉಕ್ಕುಸ್ಥಾವರದ ಅಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿ ಪರಿಸ್ಥಿತಿಯ ಬಗ್ಗೆ ಮಾಹಿತಿ ಪಡೆದಿದ್ದಾರೆ.

Sponsored

ರಕ್ಷಣಾ ಹಾಗೂ ಪರಿಹಾರ ಕಾರ್ಯಚರಣೆಗಳನ್ನು ಯುದ್ಧೋಪಾದಿಯಲ್ಲಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಮುಖ್ಯಮಂತ್ರಿ, ಘಟನಾ ಸ್ಥಳದಲ್ಲಿ ಸಿಲುಕಿರುವವರನ್ನು ಸುರಕ್ಷಿತವಾಗಿ ಹೊರ ತೆಗೆದು ಅಗತ್ಯ ನೆರವು ಒದಗಿಸಬೇಕು ಎಂದು ನಿರ್ದೇಶನ ನೀಡಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಎಲ್ಲಾ ಇಲಾಖೆಗಳು ಪರಸ್ಪರ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಿ ಸಂತ್ರಸ್ತರಿಗೆ ತ್ವರಿತ ಸಹಾಯ ಒದಗಿಸಬೇಕು ಎಂದು ಅವರು ಹೇಳಿದ್ದಾರೆ.

ದುರಂತದಲ್ಲಿ ಮೃತಪಟ್ಟ ಕಾರ್ಮಿಕರ ಕುಟುಂಬಗಳಿಗೆ ತಮ್ಮ ಸಂತಾಪ ಸೂಚಿಸಿರುವ ನಾಯ್ಡು, ಸರಕಾರದಿಂದ ಅಗತ್ಯವಿರುವ ಎಲ್ಲಾ ರೀತಿಯ ನೆರವು ಮತ್ತು ಬೆಂಬಲವನ್ನು ಒದಗಿಸುವ ಭರವಸೆ ನೀಡಿದ್ದಾರೆ. ಗಾಯಗೊಂಡಿರುವವರ ಚಿಕಿತ್ಸೆಗೆ ಯಾವುದೇ ಕೊರತೆ ಆಗದಂತೆ ನೋಡಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಇದೆ ವೇಳೆ, ಘಟನೆಯ ಹಿಂದಿರುವ ಕಾರಣಗಳು ಮತ್ತು ಯಾವುದೇ ನಿರ್ಲಕ್ಷ ಅಥವಾ ತಾಂತ್ರಿಕ ಲೋಪ ನಡೆದಿದೆಯೇ ಎಂಬುದನ್ನು ಪತ್ತೆಹಚ್ಚಲು ಉಕ್ಕು ಸ್ಥಾವರದ ಆಡಳಿತ ಮಂಡಳಿ ಅಧಿಕೃತ ತನಿಖೆಗೆ ಆದೇಶಿಸಿದೆ. ತನಿಕಾ ವರದಿ ಬಂದ ಬಳಿಕ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Also Read:

Sponsored

ರಾಜಕೀಯ ವಲಯದಲ್ಲಿ ಸಂಚಲನ : ದೇವೇಗೌಡರ ರಾಜ್ಯಸಭೆ ಟಿಕೆಟ್ ಕೈ ತಪ್ಪಲು ಕಾರಣವೇನು?

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online