<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ಗುಜರಾತ್ ನಲ್ಲಿ ಅವಾಂತರ ! ಡಾಂಗ್ ನದಿ ಅಪಾಯ ಮಟ್ಟ ಮೀರಿ ಹರಿವು

ಗುಜರಾತ್ ನಲ್ಲಿ ಅವಾಂತರ ! ಡಾಂಗ್ ನದಿ ಅಪಾಯ ಮಟ್ಟ ಮೀರಿ ಹರಿವು
Summary: Due to incessant rains, the Dang river in Gujarat is overflowing its banks, raising the threat of flooding. Many low-lying areas are inundated.

Belagavi News:

ಗುಜರಾತ್ ನಲ್ಲಿ ಸುರಿಯುತ್ತಿರುವ ನಿರಂತರ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ವಿಶೇಷವಾಗಿ ಡಾಂಗ ನದಿ ಉಕ್ಕಿ ಹರಿಯುತ್ತಿದ್ದು, ನದಿಯ ತೀರ ಪ್ರದೇಶಗಳಲ್ಲಿ ನೀರಿನ ಮಟ್ಟ ವೇಗವಾಗಿ ಏರಿಕೆಯಾಗಿದೆ. ರಘು ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿರುವ ಕಾರಣ ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ.

ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಮಳೆಯ ಅಬ್ಬರ ಮುಂದುವರಿದಿದ್ದು, ನದಿಗಳು ಮತ್ತು ಹೊಳೆಗಳು ತುಂಬಿ ಹರಿಯುತ್ತಿವೆ. ಕೆಲ ರಸ್ತೆಗಳಲ್ಲಿ ನೀರು ನಿಂತಿರುವುದರಿಂದ ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿದೆ. ಸ್ಥಳೀಯ ಆಡಳಿತ ಪ್ರವಾಹ ಪೀಡಿತ ಪ್ರದೇಶಗಳ ಮೇಲೆ ನಿಗಾ ವಹಿಸಿದ್ದು, ಅಗತ್ಯ ಮುನ್ನೆಚ್ಚರಿಕ ಅಕ್ರಮಗಳನ್ನು ಕೈಗೊಂಡಿದೆ.

ಹವಾಮಾನ ಇಲಾಖೆಯ ಮುಂದಿನ ಕೆಲವು ದಿನಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ. ಅಗತ್ಯವಿದ್ದರೆ ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರ ಗೊಳ್ಳುವಂತೆ ಸೂಚಿಸಲಾಗಿದೆ.

ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ರಕ್ಷಣಾ ಸಿಬ್ಬಂದಿ ಮತ್ತು ಸ್ಥಳೀಯ ಆಡಳಿತ ಸಜ್ಜಾಗಿದ್ದು, ಪರಿಸ್ಥಿತಿಯನ್ನು ನಿರಂತರವಾಗಿ ಪರಿಶೀಲಿಸಲಾಗುತ್ತಿದೆ. ಜನರು ಅಧಿಕೃತ ಹವಾಮಾನ ಹಾಗೂ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ಗುಜರಾತ್ ನಲ್ಲಿ ಮುಂಗಾರು ಅಬ್ಬರ - ವ್ಯಾಪಕ ಪ್ರವಾಹ, ಹಲವು ಜಿಲ್ಲೆಗಳು ಜಲಾವೃತ - ಜನ ಜೀವನ ಸಂಪೂರ್ಣ ಅಸ್ತವ್ಯಸ್ತ :

ಗುಜರಾತ್ ನಲ್ಲಿ ಮುಂಗಾರು ಮಳೆ ತನ್ನ ಆರ್ಭಟವನ್ನು ಮುಂದುವರಿಸಿದ್ದು, ರಾಜ್ಯದ ಹಲವು ಭಾಗಗಳಲ್ಲಿ ವ್ಯಾಪಕ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿರಂತರವಾಗಿ ಸುರಿಯುತ್ತಿರುವ ಭಾರಿ ಮಳೆಯಿಂದ ರಸ್ತೆ, ಸೇತುವೆಗಳು ಮತ್ತು ತಗ್ಗು ಪ್ರದೇಶಗಳು ಜಲಾವೃತಗೊಂಡಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ಭಾರಿ ಮಳೆಯ ಪರಿಣಾಮವಾಗಿ ರಾಜ್ಯದ ಸಾರಿಗೆ ಸಂಪರ್ಕಕ್ಕೆ ತೀವ್ರ ಹೊಡೆತ ಬಿದ್ದಿದೆ. ಪ್ರಮುಖ ರಸ್ತೆಗಳು ನೀರಿನಲ್ಲಿ ಮುಳುಗಿರುವ ಕಾರಣ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದ್ದು, ಹಲಬೇಡಿ ಸಂಪರ್ಕ ಮಾರ್ಗಗಳು ಕಡಿತಗೊಂಡಿವೆ. ಇದರಿಂದ ಸಾರ್ವಜನಿಕರು ದೈನಂದಿನ ಸಂಚಾರದಲ್ಲಿ ತೊಂದರೆ ಅನುಭವಿಸುತ್ತಿದ್ದಾರೆ.

ದಕ್ಷಿಣ ಗುಜರಾತ್, ಸೌರಾಷ್ಟ್ರರ, ಉತ್ತರ ಗುಜರಾತ್ ಹಾಗೂ ಮಧ್ಯ ಗುಜರಾತ್ ನ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದೆ. ಹಲವು ವಸತಿ ಪ್ರದೇಶಗಳಿಗೆ ಪ್ರವಾಹದ ನೀರು ನುಗ್ಗಿದ್ದು, ಜನರು ಸುರಕ್ಷಿತ ತಳಗಳಿಗೆ ತೆರಳುವ ಪರಿಸ್ಥಿತಿ ಎದುರಾಗಿದೆ. ನದಿಗಳು ಮತ್ತು ಜಲಾಶಯಗಳ ನೀರಿನ ಮಟ್ಟವು ಏರಿಕೆಯಾಗಿದ್ದು, ಆಡಳಿತ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.

ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಮುನ್ಸೂಚನೆ ನೀಡಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ತ್ವರಿತಗೊಳಿಸಲಾಗಿದ್ದು, ಸಾರ್ವಜನಿಕರು ಅನಗತ್ಯ ಪ್ರಯಾಣವನ್ನು ತಪ್ಪಿಸಿ, ಸ್ಥಳೀಯ ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಮನವಿ ಮಾಡಲಾಗಿದೆ.

ಗುಜರಾತ್ ನಲ್ಲಿ ಮಳೆಯ ಅಬ್ಬರ ಮುಂದುವರಿಕೆ - 24 ಗಂಟೆಯಲ್ಲಿ 172 ತಾಲ್ಲೂಕುಗಳಲ್ಲಿ ಮಳೆ, ಮಾಂಗ್ರೋಲ್ ನಲ್ಲಿ 13 ಇಂಚು ದಾಖಲು :

ಗುಜರಾತ್ ನಲ್ಲಿ ಮುಂಗಾರು ಮಳೆ ಅಬ್ಬರ ಮುಂದುವರಿದಿದ್ದು, ಕಳೆದ 24 ಗಂಟೆಗಳಲ್ಲಿ ರಾಜ್ಯದ 172 ತಾಲೂಕುಗಳಲ್ಲಿ ಗಮನಾರ್ಹ ಮಳೆಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಭಾರಿ ಮಳೆಯಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ಜನಜೀವನದ ಮೇಲೆ ಪರಿಣಾಮ ಬೀರಿದೆ.

ಅಧಿಕೃತ ಅಂಕಿ ಅಂಶಗಳ ಪ್ರಕಾರ, ಜುನಾಗಢ್ ಜಿಲ್ಲೆಯ ಮಾಂಗ್ರೋಲ್ ನಲ್ಲಿ ಅತ್ಯಧಿಕ 13 ಇಂಚು ಮಳೆಯ ದಾಖಲಾಗಿದೆ. ಬಾರಿ ಮಳೆಯ ಪರಿಣಾಮವಾಗಿ ನಗು ಪ್ರದೇಶಗಳು ಜಲಾವೃತಗೊಂಡಿದ್ದು, ನದಿಗಳು ಮತ್ತು ಹೊಳೆಗಳ ನೀರಿನ ಮಟ್ಟ ಏರಿಕೆಯಾಗಿದೆ.

ಇನ್ನು ಮುಂಜಾನೆ ಆರು ಗಂಟೆಯಿಂದ ಮಧ್ಯಾಹ್ನ 12 ಗಂಟೆಯವರೆಗೆ 68 ತಾಲೂಕುಗಳಲ್ಲಿ ಮತ್ತಷ್ಟು ಮಳೆಯಾಗಿದೆ. ಈ ಅವಧಿಯಲ್ಲಿ ಡಾಂಗ್ ಜಿಲ್ಲೆಯ ವಘಾಯ್ ನಲ್ಲಿ 5.5 ಇಂಚು ಮಳೆ ದಾಖಲಾಗಿದ್ದು, ಹಲೋ ಜಿಲ್ಲೆಗಳಲ್ಲಿ ನೀರು ನಿಂತು ಸಂಚಾರಕ್ಕೆ ಅಡಚಣೆ ಉಂಟಾಗಿದೆ.

ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿಯೂ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಆಡಳಿತದ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು, ಸಾರ್ವಜನಿಕರು ನದಿ ತೀರ ಹಾಗೂ ತಗ್ಗು ಪ್ರದೇಶಗಳಿಗೆ ತೆರಳದಂತೆ ಸೂಚಿಸಲಾಗಿದೆ.

ಗುಜರಾತ್ ನಲ್ಲಿ ಭಾರಿ ಮಳೆಯ ಅಬ್ಬರ - ಉಕ್ಕಿ ಹರಿಯುತ್ತಿರುವ ಗಿರಾ ಜಲಪಾತ, ಡಾಂಗ್ ಜಿಲ್ಲೆಯಲ್ಲಿ ಪ್ರವಾಹದಂತ ಪರಿಸ್ಥಿತಿ :

ಗುಜರಾತ್ ನಲ್ಲಿ ಮುಂಗಾರುಮಳೆಯ ಅಬ್ಬರ ಮುಂದುವರೆದಿದ್ದು, ಡಾಂಗ್ ಜಿಲ್ಲೆಯ ಪ್ರಸಿದ್ಧ ಗಿರಾ ಜಲಪಾತ ಭಾರಿ ಮಳೆಯ ಪರಿಣಾಮವಾಗಿ ತುಂಬಿ ಭೋರ್ಗರಿಯುತ್ತಿದೆ. ನಿರಂತರ ಮಳೆಯಿಂದ ಜಲಪಾತಕ್ಕೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹದಂತ ಪರಿಸ್ಥಿತಿ ನಿರ್ಮಾಣವಾಗಿದೆ.

ಉಕ್ಕಿ ಹರಿಯುತ್ತಿರುವ ನೀರಿನ ರಭಸ, ಪ್ರಬಲ ಜಲ ಪ್ರವಾಹ ಮತ್ತು ನದಿ ದಂಡೆಗಳ ನೀರಿನ ಮಟ್ಟ ಏರಿಕೆಯಿಂದ ಗಿರಾ ಜಲಪಾತದ ಸುತ್ತಮುತ್ತ ಆತಂಕದ ವಾತಾವರಣ ನಿರ್ಮಾಣವಾಗಿದೆ. ಭಾರಿ ನೀರಿನ ಹರಿವಿನಿಂದ ಜಲಪಾತದ ದೃಶ್ಯ ವೈಭವ ಹೆಚ್ಚಿದರು, ಅಪಾಯವು ಅಷ್ಟೇ ಹೆಚ್ಚಿರುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದ್ದಾರೆ.

ಸ್ಥಳೀಯ ಆಡಳಿತ ಪ್ರವಾಸಿಗರು ಹಾಗೂ ಸಾರ್ವಜನಿಕರು ಜಲಪಾತ ಸಮೀಕ್ಷೆಗೆ ತೆರಳದಂತೆ ಸೂಚನೆ ನೀಡಿದ್ದು, ನದಿ ತೀರ ಹಾಗೂ ತಗ್ಗು ಪ್ರದೇಶಗಳಲ್ಲಿ ಎಚ್ಚರಿಕೆವಹಿಸಲು ಮನವಿ ಮಾಡಿದೆ. ಹವಾಮಾನ ಇಲಾಖೆ ಮುಂದಿನ ದಿನಗಳಲ್ಲಿ ರಾಜ್ಯದ ಹಲವು ಭಾಗಗಳಲ್ಲಿ ಭಾರಿ ಮಳೆಯ ಸಾಧ್ಯತೆ ಇರುವುದಾಗಿ ಮುನ್ಸೂಚನೆ ನೀಡಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online