Belagavi News :
ಬೇಲೂರಿನ ಪ್ರಸಿದ್ಧ ಚನ್ನಕೇಶವ ಸ್ವಾಮಿ ದೇವಸ್ಥಾನದಲ್ಲಿ ಹುಂಡಿಯ ಎಣಿಕೆ ವೇಳೆ ಹಣ ಕಳುವು ಮಾಡಲು ಯತ್ನಿಸಿದ ಘಟನೆ ಬೆಳಕಿಗೆ ಬಂದಿದೆ. ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದ್ದ ಸಂದರ್ಭದಲ್ಲಿ ವ್ಯಕ್ತಿ ಒಬ್ಬ ₹ 1.98 ಲಕ್ಷ ಹಣವನ್ನು ಜಾಕೆಟ್ ಒಳಗೆ ಬಚ್ಚಿಟ್ಟು ತೆಗೆದುಕೊಂಡು ಹೋಗಲು ಯತ್ನಿಸಿ ಸಿಕ್ಕಿಬಿದ್ದಿದ್ದಾನೆ.
ದೇವಸ್ಥಾನದ ಉಂಡೆ ಎಣಿಕೆ ಕಾರ್ಯದಲ್ಲಿ ಭಾಗಿಯಾಗಿದ್ದ ವೇಳೆ ಆರೋಪಿ ಹಣವನ್ನು ತನ್ನ ಜಾಕೆಟ್ ನಲ್ಲಿ ಇಳಿಸಿಕೊಂಡಿದ್ದ ಎನ್ನಲಾಗಿದೆ. ಅವಮಾನಗೊಂಡ ಸಿಬ್ಬಂದಿ ತಕ್ಷಣ ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿದ್ದು, ಬಳಿಕ ಆತನನ್ನು ವಶಕ್ಕೆ ಪಡೆಯಲಾಗಿದೆ.
ಘಟನೆ ಸಂಭಂದ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.ಪವಿತ್ರ ಕ್ಷೇತ್ರದಲ್ಲಿ ನಡೆಯುತ್ತಿರುವ ಈ ಘಟನೆ ಭಕ್ತರು ಹಾಗೂ ಸಾರ್ವಜನಿಕರಲ್ಲಿ ಚರ್ಚೆಗೆ ಕಾರಣವಾಗಿದೆ.
ಬೇಲೂರು ಚನ್ನಕೇಶವ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ವೇಳೆ ₹ 1.98 ಲಕ್ಷ ಹಣ ಕಳವು ಯತ್ನ - ಜರ್ಕಿನ್ ನಲ್ಲಿ ಬಚ್ಚಿಟ್ಟಿದ್ದ ವ್ಯಕ್ತಿ ಸಿಕ್ಕಿಬಿದ್ದ :
ದೇವಸ್ಥಾನಗಳ ದೇಣ್ಣಿಗೆ ಹಾಗೂ ಹುಂಡಿ ಹಣದ ವಿಚಾರಗಳು ರಾಜ್ಯ ಮತ್ತು ದೇಶದಾದ್ಯಂತ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಐತಿಹಾಸಿಕ ಚನ್ನಕೇಶವ ಸ್ವಾಮಿ ದೇವಸ್ಥಾನದಲ್ಲಿ ನಡೆದ ಘಟನೆ ಗಮನ ಸೆಳೆದಿದೆ.
ದೇವಾಲಯದ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿದ್ದ ವೇಳೆ ವ್ಯಕ್ತಿ ಒಬ್ಬ ₹ 1,98,000 ಹಣವನ್ನು ಜರ್ಕಿನ್ (ಜಾಕೆಟ್ ) ಒಳಗೆ ಬಚ್ಚಿಟ್ಟು ಎದುರಿಸಲು ಯತ್ನಿಸಿದ ಘಟನೆ ನಡೆದಿದೆ. ಹುಂಡಿ ಹಣ ಎಣಿಕೆ ಸಂದರ್ಭದಲ್ಲಿ ಅನುಮಾನ ಗೊಂಡ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಹಣ ಪತ್ತೆಯಾಗಿದ್ದು, ಆರೋಪಿ ಸಿಕ್ಕಿಬಿದ್ದಿದ್ದಾನೆ ಎನ್ನಲಾಗಿದೆ.
ಇತ್ತೀಚೆಗೆ ದೇವಸ್ಥಾನಗಳ ದೇನಿಗೆ ಹಣ ನಿರ್ವಹಣೆ, ಪಾರದರ್ಶಕತೆ ಹಾಗೂ ಗುಂಡಿ ಎಣಿಕೆ ಪ್ರಕ್ರಿಯೆಗಳ ಕುರಿತು ಚರ್ಚೆಗಳು ನಡೆಯುತ್ತಿರುವ ನಡುವೆಯೇ ಬೇಲೂರಿನ ಈ ಘಟನೆ ಬೆಳಕಿಗೆ ಬಂದಿದೆ.
ಚೆನ್ನಕೇಶವ ಸ್ವಾಮಿ ದೇವಸ್ಥಾನದ ಹುಂಡಿ ಹಣ ಎಣಿಕೆ ವೇಳೆ ನಡೆದಿರುವ ಈ ಪ್ರಕರಣದ ಕುರಿತು ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ಸಂಗ್ರಹಿಸುತ್ತಿದ್ದು, ಮುಂದಿನ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಲಾಗುತ್ತಿದೆ.
ಬೇಲೂರು ಚೆನ್ನಕೇಶವ ಸ್ವಾಮಿ ದೇವಸ್ಥಾನದಲ್ಲಿ ಹುಂಡಿ ಹಣ ಕಳವು ಯತ್ನ - ವೀಡಿಯೋ ಗ್ರಾಫಿಗೆ ಬಂದಿದ್ದ ವ್ಯಕ್ತಿಯೇ ಆರೋಪಿ :
ಬೇಲೂರಿನ ಐತಿಹಾಸಿಕ ಚನ್ನಕೇಶವ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ವೇಳೆ ನಡೆದ ಹಣಕಾಳು ಯತ್ನ ಪ್ರಕರಣದಲ್ಲಿ ಹೊಸ ಮಾಹಿತಿ ಹೊರಬಿದ್ದಿದೆ. ಹುಂಡಿ ಎಣಿಕೆಯ ವಿಡಿಯೋ ಗ್ರಾಫಿ ಮಾಡಲು ಬಂದಿದ್ದ ವ್ಯಕ್ತಿಯೇ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.
ಹುಂಡಿ ಎಣಿಕೆ ಕಾರ್ಯದ ದೃಶ್ಯ ಚಿತ್ರೀಕರಣಕ್ಕಾಗಿ ಬಂದಿದ್ದ ಕರ್ನಾಟಕ ಒನ್ ಕೇಂದ್ರದ ಮಾಲೀಕ ನೀಲಕಂಠ ಎಂಬಾತ , ಎಣಿಕೆ ವೇಳೆ ಹಣವನ್ನು ಜರ್ಕಿನ್ ಒಳಗೆ ಬಚ್ಚಿಟ್ಟು ತೆಗೆದುಕೊಂಡು ಹೋಗಲು ಯತ್ನಿಸಿದ್ದಾನೆ ಎಂದು ಆರೋಪಿಸಲಾಗಿದೆ.
₹ 1.98 ಲಕ್ಷ ಹಣವನ್ನು ಜರ್ಕಿನ್ ನಲ್ಲಿ ಇರಿಸಿಕೊಂಡಿದ್ದ ವೇಳೆ ಅನುಮಾನ ಗೊಂಡ ಸಿಬ್ಬಂದಿ ಪರಿಶೀಲನೆ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ. ಬಳಿಕ ಆತನನ್ನು ವಶಕ್ಕೆ ಪಡೆದು ಸಂಬಂಧಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದೆ.
ದೇವಸ್ಥಾನದ ಹುಂಡಿ ಹಣ ಸುರಕ್ಷತೆ ಮತ್ತು ಎಣಿಕೆ ಪ್ರಕ್ರಿಯೆಗಳ ಕುರಿತು ಈ ಘಟನೆ ಮತ್ತೆ ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ. ಒಟ್ಟಾರೆಯಾಗಿ ಹೇಳುವುದಾದರೆ ಚೆನ್ನಕೇಶವ ಸ್ವಾಮಿ ದೇವಸ್ಥಾನ ಬೇಲೂರಿನಲ್ಲಿ ಸುಪ್ರಸಿದ್ಧ ದೇವಸ್ಥಾನವಾಗಿದ್ದು ಅಲ್ಲಿ ಹುಂಡಿ ಎಣಿಕೆ ಕಾರ್ಯ ನಡೆಯುತ್ತಿರುವ ಸಂದರ್ಭದಲ್ಲಿ ಈ ಎಣಿಕೆಯನ್ನು ವಿಡಿಯೋ ಗ್ರಾಫಿ ಮಾಡಲು ಬಂದಿದ್ದ ವ್ಯಕ್ತಿ ನೀಲಕಂಠ ಎಂಬಾತ ಹಣವನ್ನು ತಾನು ಧರಿಸಿರುವ ಅಂತಹ ಜಾಕೆಟ್ ನಲ್ಲಿ ಬಚ್ಚಿಟ್ಟುಕೊಂಡು ಪಾರಾಗಲು ಯತ್ನಿಸಿದ್ದಾನೆ ಎಂದು ಹೇಳಲಾಗಿದೆ. ನಂತರ ಅಲ್ಲಿರುವ ವ್ಯಕ್ತಿಯೊಬ್ಬರು ಆತನನ್ನು ಚೆಕ್ ಮಾಡಿದಾಗ ಸಿಕ್ಕಿಬಿದ್ದಿದ್ದಾನೆ.
ಬೇಲೂರು ದೇವಸ್ಥಾನದ ಹುಂಡಿ ಹಣ ಕಳವು ಯತ್ನ ಬಯಲು - ಸಿಸಿಟಿವಿ ಪರಿಶೀಲನೆ ವೇಳೆ ಸತ್ಯ ಬಯಲು, ಆರೋಪಿ ವಶಕ್ಕೆ :
ಬೇಲೂರು ಚೆನ್ನಕೇಶವ ಸ್ವಾಮಿ ದೇವಸ್ಥಾನದ ಹುಂಡಿ ಎಣಿಕೆ ವೇಳೆ ನಡೆದಿರುವ ₹ 1.98 ಲಕ್ಷ ಹಣ ಕಳುವು ಯತ್ನ ಪ್ರಕರಣದಲ್ಲಿ ಸಿಸಿಟಿವಿ ದೃಶ್ಯಗಳ ಮೂಲಕ ಘಟನೆ ಬೆಳಕಿಗೆ ಬಂದಿದೆ.
ಆರೋಪಿಯ ಚಲನವಲನದ ಬಗ್ಗೆ ಅವಮಾನಗೊಂಡ ಮುಜರಾಯಿ ಇಲಾಖೆ ಸಿಬ್ಬಂದಿ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಹಣವನ್ನು ಜರ್ಕಿನ್ ಒಳಗೆ ಬಚ್ಚಿಟ್ಟಿರುವುದು ಪತಿಯಾಗಿದೆ ಎನ್ನಲಾಗಿದೆ.
ಈ ಕುರಿತು ಬೇಲೂರು ತಶಿಲ್ದಾರ್ ಶ್ರೀಧರ್ ಕಂಕನವಾಡಿ ಅವರು ಬೇಲೂರು ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಹುಂಡಿ ಎಣಿಕೆ ವೇಳೆ ನಡೆದಿರುವ ಈ ಘಟನೆ ದೇವಸ್ಥಾನದ ಭದ್ರತೆ ಹಾಗೂ ಹಣ ನಿರ್ವಹಣೆ ಕುರಿತು ಚರ್ಚೆಗೆ ಕಾರಣವಾಗಿದೆ. ಪ್ರಕರಣದ ಕುರಿತು ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.