<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಟ್ರಂಪ್ ರಿಂದ ಇರಾನ್ ಗೆ ಕಠಿಣ ಎಚ್ಚರಿಕೆ: ಮುಂದಿನ ವಾರ ದಾಳಿಯ ಬೆದರಿಕೆ

ಟ್ರಂಪ್ ರಿಂದ ಇರಾನ್ ಗೆ ಕಠಿಣ ಎಚ್ಚರಿಕೆ: ಮುಂದಿನ ವಾರ ದಾಳಿಯ ಬೆದರಿಕೆ
Summary: In an interview with Fox News, US President Donald Trump warned of intensifying US military operations against key Iranian infrastructure such as power plants and bridges if nuclear talks do not resume. Read the full details of Trump's statement, the tensions between Iran and the US and its global implications.

belagavi news :

ವಾಷಿಂಗ್ಟನ್, ಅಮೆರಿಕ: ಇರಾನ್ ಮಾತುಕತೆ ಮೇಜಿಗೆ ಮರಳದಿದ್ದರೆ ಮುಂದಿನ ವಾರ ಕಠಿಣ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ. ವಾಷಿಂಗ್ಟನ್ ನೊಂದಿಗೆ ಒಪ್ಪಂದಕ್ಕೆ ಬರಲು ಇರಾನ್ ವಿಫಲವಾದರೆ, ಅಮೆರಿಕ ತನ್ನ ಮಿಲಿಟರಿ ಕಾರ್ಯಾಚರಣೆಯನ್ನು ಮತ್ತಷ್ಟು ತೀವ್ರಗೊಳಿಸಲಿದೆ ಎಂದು ಅವರು ಹೇಳಿದ್ದಾರೆ.

ಫಾಕ್ಸ್ ನ್ಯೂಸ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್, ಮಾತುಕತೆಗಳು ಪುನರಾರಂಭವಾಗದಿದ್ದರೆ ಇರಾನ್ ನ ಪ್ರಮುಖ ಮೂಲಸೌಕರ್ಯಗಳಾದ "ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಗುರಿಯಾಗಿಸಿ ದಾಳಿ ನಡೆಸುವ ಸಾಧ್ಯತೆ" ಇದೆ ಎಂದು ತಿಳಿಸಿದ್ದಾರೆ. ಈ ಹೇಳಿಕೆ ಮಧ್ಯಪ್ರಾಚ್ಯದಲ್ಲಿ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

ಇರಾನ್ ಮತ್ತು ಅಮೆರಿಕ ನಡುವಿನ ಉದ್ವಿಗ್ನತೆ ಮುಂದುವರಿದಿರುವ ಬೆನ್ನಲ್ಲೇ ಟ್ರಂಪ್ ನೀಡಿರುವ ಈ ಎಚ್ಚರಿಕೆ ಜಾಗತಿಕ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿದೆ. ರಾಜತಾಂತ್ರಿಕ ಮಾತುಕತೆಗಳ ಮೂಲಕ ಸಮಸ್ಯೆ ಬಗೆಹರಿಯಲಿದೆಯೇ ಅಥವಾ ಸಂಘರ್ಷ ಮತ್ತಷ್ಟು ಉಲ್ಬಣಗೊಳ್ಳಲಿದೆಯೇ ಎಂಬ ಕುತೂಹಲ ಮೂಡಿದೆ.

ಟ್ರಂಪ್ ಅವರ ಹೇಳಿಕೆಯ ಬಳಿಕ ಇರಾನ್ ನ ಮುಂದಿನ ಪ್ರತಿಕ್ರಿಯೆ ಹಾಗೂ ಅಮೆರಿಕಾದ ಮುಂದಿನ ನಡೆ ಮೇಲೆ ವಿಶ್ವದ ಗಮನ ನೆಟ್ಟಿದೆ.

ಮಾತುಕತೆಗೆ ಇರಾನ್ ಮರಳದಿದ್ದರೆ ಪರಿಣಾಮ ಗಂಭೀರವಾಗಲಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತೊಮ್ಮೆ ಎಚ್ಚರಿಕೆ ನೀಡಿದ್ದಾರೆ. ಫಾಕ್ಸ್ ನ್ಯೂಸ್ ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಅವರು, ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ಮುಂದುವರಿಸುವುದಾಗಿ ಹಾಗೂ ಅಗತ್ಯವಿದ್ದರೆ ಪ್ರಮುಖ ಮೂಲ ಸೌಕರ್ಯಗಳನ್ನು ಗುರಿಯಾಗಿಸುವುದಾಗಿ ಹೇಳಿದ್ದಾರೆ.

ಮಾತುಕತೆಗಳು ಪುನರಾರಂಭವಾಗದಿದ್ದರೆ ಅಮೆರಿಕ ದಾಳಿಯನ್ನು ತೀವ್ರಗೊಳಿಸಲಿದೆ ಎಂದು ಹೇಳಿದ ಟ್ರಂಪ್, ಮುಂದಿನ ಹಂತದಲ್ಲಿ ಇರಾನ್ ನ " ವಿದ್ಯುತ್ ಸ್ಥಾವರಗಳು ಮತ್ತು ಸೇತುವೆಗಳನ್ನು ಗುರಿಯಾಗಿಸಬಹುದು" ಎಂದು ಎಚ್ಚರಿಸಿದ್ದಾರೆ. ರಾಜ ತಾಂತ್ರಿಕ ಒಪ್ಪಂದಕ್ಕೆ ಬರುವವರೆಗೆ ಕಾರ್ಯಾಚರಣೆ ನಿಲ್ಲಿಸುವುದಿಲ್ಲ ಎಂಬ ಸಂದೇಶವನ್ನು ಅವರು ನೀಡಿದ್ದಾರೆ.

ಪಶ್ಚಿಮ ಏಷ್ಯಾದಲ್ಲಿ ನಡೆಯುತ್ತಿರುವ ಸಂಘರ್ಷದ ನಡುವೆ ಅಮೆರಿಕ ಮತ್ತು ಇರಾನ್ ನಡುವಿನ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದೆ. ವಾಷಿಂಗ್ಟನ್ ಮತ್ತು ಟೆಹ್ರಾನ್ ನಡುವಿನ ಒಪ್ಪಂದದ ಪ್ರಯತ್ನಗಳು ವಿಫಲವಾದ ಬಳಿಕ ಅಮೆರಿಕ ಇರಾನ್ ವಿರುದ್ಧ ಸತತ ಮಿಲಿಟರಿ ಕ್ರಮಗಳನ್ನು ಮುಂದುವರಿಸಿದೆ ಎಂದು ವರದಿಯಾಗಿದೆ.

ಅಮೆರಿಕ ಮತ್ತು ಇರಾನ್ ಪ್ರತಿನಿಧಿಗಳು ಸಂಪರ್ಕದಲ್ಲಿದ್ದರು, ಹಾರ್ಮುಜ್ ಜಲಸಂಧಿಯ ಮೂಲಕ ಸಾಗುವ ಸಮುದ್ರ ಸಂಚಾರದ ಮೇಲಿನ ನಿರ್ಬಂಧಗಳಿಂದ ಮಾತುಕತೆ ಪ್ರಕ್ರಿಯೆಗೆ ಅಡ್ಡಿಯಾಗಿದೆ ಎಂದು ಟ್ರಂಪ್ ಆಡಳಿತ ಹೇಳಿದೆ.

"ಭೂ ಕಾರ್ಯಾಚರಣೆಯ ಸುಳಿವು "

ಅಮೆರಿಕದ ಮಿಲಿಟರಿ ಕಾರ್ಯಚರಣೆ ಎಷ್ಟು ದಿನ ಮುಂದುವರಿಯಲಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಟ್ರಂಪ್, ಮುಂದಿನ ನಿರ್ಧಾರ ಕೈಗೊಳ್ಳುವವರೆಗೆ ದಾಳಿಗಳು ಮುಂದುವರಿಯಬಹುದು ಎಂದು ಹೇಳಿದ್ದಾರೆ. ಇದೇ ವೇಳೆ ಇರಾನ್ ವಿರುದ್ಧ ಭೂ ಸೇನಾ ಕಾರ್ಯಾಚರಣೆಯ ಸಾಧ್ಯತೆಯನ್ನು ಸಂಪೂರ್ಣವಾಗಿ ತಳ್ಳಿಹಾಕದಿರುವ ಮೂಲಕ ಮತ್ತಷ್ಟು ಊಹಾಪೋಹಗಳಿಗೆ ಕಾರಣರಾಗಿದ್ದಾರೆ.

ಇದೇ ವೇಳೆ ನಾಗರೀಕರ ಸುರಕ್ಷತೆಗೆ ಆದ್ಯತೆ ನೀಡಲಾಗುತ್ತಿದೆ ಎಂದು ಟ್ರಂಪ್ ಹೇಳಿದ್ದಾರೆ. ಕಾರ್ಯಾಚರಣೆ ವೇಳೆ ನಾಗರಿಕ ಸಾವು ನೋವುಗಳನ್ನು ಕಡಿಮೆ ಮಾಡಲು ಅಮೆರಿಕ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ತಿಳಿಸಿದ್ದಾರೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online