<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಟ್ರಂಪ್ ಮಹತ್ವದ ಆದೇಶ: ಯುಎಸ್ ಮಿಲಿಟರಿ ದಾಳಿ ಸ್ಥಗಿತ?

ಇರಾನ್-ಅಮೆರಿಕ ಉದ್ವಿಗ್ನತೆ ನಡುವೆ ಟ್ರಂಪ್ ಮಹತ್ವದ ಆದೇಶ: ಯುಎಸ್ ಮಿಲಿಟರಿ ದಾಳಿ ಸ್ಥಗಿತ?
Summary: There has been a significant development regarding the US military strike on Iran. According to reports, US President Donald Trump has ordered a halt to military strikes against Iran. The development has raised concerns in the Middle East and the global security community.

Belagavi News :

ನ್ಯೂಯಾರ್ಕ್: ಇರಾನ್ ವಿರುದ್ಧ ಅಮೆರಿಕ ನಡೆಸುತ್ತಿದ್ದ ವೈಮಾನಿಕ ದಾಳಿಗೆ ತಾತ್ಕಾಲಿಕ ವಿರಾಮ ನೀಡುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸೇನೆಗೆ ನಿರ್ದೇಶನ ನೀಡಿದ್ದಾರೆ. ಕಳೆದ 13 ದಿನಗಳಿಂದ ಮುಂದುವರಿದಿದ್ದ ವಾಯುದಾಳಿ ಸದ್ಯಕ್ಕೆ ಸ್ಥಗಿತಗೊಂಡಿದ್ದು, ಮಧ್ಯಪ್ರಾಚ್ಯದಲ್ಲಿ ರಾಜತಾಂತ್ರಿಕ ಚಟುವಟಿಕೆಗಳು ಚುರುಕುಗೊಂಡಿವೆ.

ಅಕ್ಸಿಯೋಸ್ ವರದಿ ಪ್ರಕಾರ, ಹಾರ್ಮುಜ್ ಜಲಸಂಧಿಯನ್ನು ಪುನಃ ತೆರೆಯುವ ಕುರಿತು ಮಹತ್ವದ ಮಾತುಕತೆ ನಡೆಸಲು ಒಮಾನ್ ನಿಯೋಗ ಟೆಹ್ರಾನ್ ಗೆ ಆಗಮಿಸಿದ ಬೆನ್ನಲ್ಲೇ ಟ್ರಂಪ್ ಈ ನಿರ್ಧಾರ ಕೈಗೊಂಡಿದ್ದಾರೆ. ಒಮಾನ್ ಮತ್ತು ಇರಾನ್ ನಡುವಿನ ಮಾತುಕತೆಯಲ್ಲಿ ಪ್ರಮುಖ ಪ್ರಗತಿ ಸಾಧಿಸಲಾಗಿದ್ದು, ವಾರಾಂತ್ಯದಲ್ಲಿ ಒಪ್ಪಂದವೊಂದು ಅಂತಿಮಗೊಳ್ಳುವ ಸಾಧ್ಯತೆ ಇದೆ ಎಂದು ಪ್ರಾದೇಶಿಕ ಮೂಲಗಳನ್ನು ಉಲ್ಲೇಖಿಸಿ ವರದಿ ತಿಳಿಸಿದೆ.

ಪ್ರಸ್ತಾವಿತ ಒಪ್ಪಂದವನ್ನು ಒಪ್ಪಿಕೊಳ್ಳಬೇಕೇ ಅಥವಾ ಬೇಡವೇ ಎಂಬ ಅಂತಿಮ ನಿರ್ಧಾರ ಇದೀಗ ಅಧ್ಯಕ್ಷ ಟ್ರಂಪ್ ಅವರ ಮುಂದಿದೆ ಎಂದು ವರದಿ ಹೇಳಿದೆ. ಇದೇ ವೇಳೆ, ಅಮೆರಿಕ ಸೇನೆ ಯಾವುದೇ ಸಂಭವನೀಯ ದೊಡ್ಡ ಪ್ರಮಾಣದ ಕಾರ್ಯಾಚರಣೆಗಳಿಗೆ ಸಿದ್ಧತೆ ಮುಂದುವರೆಸಿದ್ದು, ದಾಳಿಗಳನ್ನು ಮತ್ತೆ ಆರಂಭಿಸುವ ಆದೇಶ ಬಂದರೆ ಅದನ್ನು ಜಾರಿಗೊಳಿಸಲು ಸಜ್ಜಾಗಿದೆ.

ಕಳೆದ ಎರಡು ವಾರಗಳಲ್ಲಿ ಪ್ರತಿದಿನ ಮಧ್ಯಾಹ್ನದ ವೇಳೆಗೆ ಟ್ರಂಪ್ ಅನುಮೋದನೆಯೊಂದಿಗೆ ಅಮೆರಿಕ ಸೇನೆ ಕಾರ್ಯಾಚರಣೆ ನಡೆಸುತ್ತಿತ್ತು. ಶುಕ್ರವಾರ ಕೂಡ ದಾಳಿಗೆ ಯೋಜನೆ, ರೂಪಿಸಲಾಗಿದ್ದರೂ, ಬಳಿಕ ಟ್ರಂಪ್ ದಾಳಿ ಮುಂದುವರಿಸದಂತೆ ಸೇನೆಗೆ ಸೂಚನೆ ನೀಡಿದ್ದಾರೆ ಎಂದು ಆಕ್ಸಿಯೋಸ್ ವರದಿ ತಿಳಿಸಿದೆ.

ಶುಕ್ರವಾರ ಸಂಜೆ ಶ್ವೇತಭವನದಲ್ಲಿ ನಡೆದ ಭೋಜನಕೂಟದಲ್ಲಿ ಮಾತನಾಡಿದ ಟ್ರಂಪ್, ಇರಾನ್ ಈ ಕ್ಷಣದಲ್ಲಿ ಒಪ್ಪಂದಕ್ಕೆ ಸಿದ್ಧವಾಗಿಲ್ಲ ಎಂಬ ಮಾಹಿತಿ ಇದೆ. ಆದರೆ ಮಾತುಕತೆಗೆ ತಾನು ಸಿದ್ಧನಿದ್ದೇನೆ ಎಂಬ ಸಂದೇಶ ನೀಡಿದ್ದಾರೆ ಎಂದು ವರದಿ ಹೇಳಿದೆ.

ಇರಾನ್ ವಿರುದ್ಧದ ದಾಳಿಗೆ ಟ್ರಂಪ್ ಹಠಾತ್ ವಿರಾಮ ನೀಡಿರುವುದು ಅಮೆರಿಕದ ಪ್ರಾದೇಶಿಕ ಮಿತ್ರ ರಾಷ್ಟ್ರಗಳಲ್ಲಿ ಅಚ್ಚರಿ ಮೂಡಿಸಿದೆ. ಮುಂದಿನ ದಿನಗಳಲ್ಲಿ ಒಮಾನ್ ಮಧ್ಯಸ್ಥಿಕೆಯಲ್ಲಿ ನಡೆಯುವ ಮಾತುಕತೆಗಳು ಮಧ್ಯಪ್ರಾಚ್ಯದ ಭದ್ರತಾ ಪರಿಸ್ಥಿತಿಗೆ ಮಹತ್ವದ ತಿರುವು ನೀಡುವ ಸಾಧ್ಯತೆ ಇದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online