<?= $pageTitle ?>
Logo
ಮುಖಪುಟ ಓದುವುದು ಕೇಳು
Breaking News

ತುಂಗಭದ್ರಾ ಡ್ಯಾಂ ನೀರಿನ ಮಟ್ಟ ಕುಸಿತ : ಮುಂಗಾರು ಬೆಳೆಗಳಿಗೆ ಸಂಕಷ್ಟ

ತುಂಗಭದ್ರಾ ಡ್ಯಾಂ ನೀರಿನ ಮಟ್ಟ ಕುಸಿತ : ಮುಂಗಾರು ಬೆಳೆಗಳಿಗೆ ಸಂಕಷ್ಟ
Summary: The inflow into the reservoir has decreased sharply due to the lack of expected rainfall in the Tungabhadra basin so far. Due to this, the water storage in the reservoir is not saturated and it is not possible to release water through canals for monsoon crops at present, officials said in a statement. Farmers have been requested to plan their crops keeping in mind the situation.

belagavi news :

ಬಳ್ಳಾರಿ: ತುಂಗಭದ್ರಾ ಜಲಾಶಯದಲ್ಲಿ ನೀರಿನ ಸಂಗ್ರಹ ತೀವ್ರವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ ಬೆಳೆಗಳಿಗೆ ಬಲದಂಡೆ ಹಾಗೂ ಎಡದಂಡೆ ಕಾಲುವೆಗಳ ಮೂಲಕ ನೀರು ಹರಿಸಲು ಸಾಧ್ಯವಿಲ್ಲ ಎಂದು ತುಂಗಭದ್ರಾ ಯೋಜನೆ ಹಾಗೂ ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯರ ಕಾರ್ಯದರ್ಶಿ ಮತ್ತು ಅಧಿಕ್ಷಕ ಇಂಜಿನಿಯರ್ ಎಸ್.ಬಿ.ಮಲ್ಲಿಗವಾಡ ತಿಳಿಸಿದ್ದಾರೆ.

ಅವರು ನೀಡಿರುವ ಪ್ರಕಟಣೆಯ ಪ್ರಕಾರ, ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಈ ಇವರಿಗೆ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಕಾರಣ ಜಲಾಶಯಕ್ಕೆ ಒಳಹರಿವು ತೀವ್ರವಾಗಿ ಕುಂಠಿತಗೊಂಡಿದೆ. ಇದರ ಪರಿಣಾಮವಾಗಿ ಜಲಾಶಯದಲ್ಲಿ ನೀರಿನ ಸಂಗ್ರಹಾವು ಅತ್ಯಂತ ಕಡಿಮೆ ಮಟ್ಟದಲ್ಲಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಕೃಷಿ ನೀರಾವರಿಗೆ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಈ ಬೆಳವಣಿಗೆಯಿಂದ ಬಳ್ಳಾರಿ, ವಿಜಯನಗರ, ಕೊಪ್ಪಳ, ರಾಯಚೂರು ಸೇರಿದಂತೆ ತುಂಗಭದ್ರಾ ನೀರಾವರಿ ವ್ಯಾಪ್ತಿಯ ಸಾವಿರಾರು ರೈತರು ಆತಂಕಕೊಳ್ಳಗಾಗಿದ್ದಾರೆ. ಕುರಿತು ಸಮಗ್ರ ಮುಂಗಾರು ಬೆಳೆಗಳ ಬಿತ್ತನೆ ಹಾಗೂ ನೀರಾವರಿ ಯೋಜನೆಗಳ ಮೇಲೆ ಇದರ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಮುಂದಿನ ದಿನಗಳಲ್ಲಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗಿ ಜಲಾಶಯಕ್ಕೆ ಒಳಹರಿವು ಹೆಚ್ಚಳದಲ್ಲಿ ಪರಿಸ್ಥಿತಿಯನ್ನು ಮರು ಪರಿಶೀಲಿಸಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಜಲಾಶಯದಲ್ಲಿ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕಾಗಿ ಮಾತ್ರ ಬಳಸುವಂತೆ ನಿರ್ದೇಶನ ನೀಡಿರುವ ಹಿನ್ನೆಲೆಯಲ್ಲಿ, ಬಲದಂಡೆ ಮತ್ತು ಎಡದಂಡೆ ನಾಲೆಗಳ ಮೂಲಕ ಮುಂಗಾರು ಬೆಳೆಗಳಿಗೆ ನೀರು ಹರಿಸಲಾಗುವುದಿಲ್ಲ ಎಂದು ತಿಳಿಸಿದ್ದಾರೆ.

ತುಂಗಭದ್ರಾ ಜಲಾಶಯದಿಂದ ನೀರು ಬಿಡುಗಡೆ ಸ್ಥಗಿತಗೊಳಿಸಿರುವ ನಿರ್ಧಾರದಿಂದ ಬಳ್ಳಾರಿ, ವಿಜಯನಗರ ಸೇರಿದಂತೆ ಅಚ್ಚುಕಟ್ಟು ಪ್ರದೇಶದ ಸಾವಿರಾರು ರೈತರು ಆತಂಕ ಕೊಳಗಾಗಿದ್ದಾರೆ. ಮಳೆ ಕೊರತೆಯಿಂದ ಈಗಾಗಲೇ ಮುಂಗಾರು ಬಿತ್ತನೆ ವಿಳಂಬವಾಗಿದ್ದು, ಇದೀಗ ನೀರಾವರಿ ನೀರು ದೊರೆಯದಿರುವುದು ರೈತರ ಸಂಕಷ್ಟವನ್ನು ಮತ್ತಷ್ಟು ಹೆಚ್ಚಿಸಿದೆ. ಉತ್ತಮ ಮಳೆಯ ನಿರೀಕ್ಷೆಯಲ್ಲಿರುವ ರೈತರು ಜಲಾಶಯಕ್ಕೆ ಒಳಹರಿವು ಹೆಚ್ಚುವವರೆಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ.

ಈ ಸಂಕಷ್ಟದ ಸಂದರ್ಭದಲ್ಲಿ ಅಚ್ಚುಕಟ್ಟು ಪ್ರದೇಶದ ರೈತರು ಇಲಾಖೆಯೊಂದಿಗೆ ಸಹಕರಿಸುವಂತೆ ತುಂಗಭದ್ರಾ ಯೋಜನೆಯ ಹಾಗೂ ವಿಜಯನಗರ ಕಾಲುವೆಗಳ ನೀರಾವರಿ ಸಲಹಾ ಸಮಿತಿ ಸದಸ್ಯ ಕಾರ್ಯದರ್ಶಿ ಮತ್ತು ಅಧಿಕ್ಷಕ ಇಂಜಿನಿಯರ್ ಎಸ್.ಬಿ.ಮಲ್ಲಿಗವಾಡ ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ತುಂಗಭದ್ರಾ ಜಲಾನಯನ ಪ್ರದೇಶದಲ್ಲಿ ಉತ್ತಮ ಪ್ರಮಾಣದ ಮಳೆಯಾಗಿ ಜಲಾಶಯಕ್ಕೆ ಸಮರ್ಪಕ ಅನುಗುಣವಾಗಿ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ಜಲಾಶಯದಲ್ಲಿ ನೀರಿನ ಸಂಗ್ರಹ ಪ್ರಾಪ್ತವಾಗಿರುವುದರಿಂದ ಕೃಷಿ ನೀರಾವರಿಗಾಗಿ ನೀರು ಬಿಡುಗಡೆ ಮಾಡುವ ಪ್ರಶ್ನೆ ಇಲ್ಲ ಎಂದು ಇಲಾಖೆ ಸ್ಪಷ್ಟಪಡಿಸಿದೆ. ಹೀಗಾಗಿ ರೈತರು ಹವಾಮಾನ ಪರಿಸ್ಥಿತಿ ಹಾಗೂ ಸರ್ಕಾರದ ಮುಂದಿನ ಪ್ರಕಟಣೆಗಳನ್ನು ಗಮನಿಸಿ ಕೃಷಿ ಚಟುವಟಿಕೆಗಳನ್ನು ಯೋಜಿಸಿಕೊಳ್ಳುವಂತೆ ಸೂಚಿಸಲಾಗಿದೆ.

ರಾಜ್ಯದಲ್ಲಿ ಮಳೆ ಕೊರತೆ ಮತ್ತು ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಅಣೆಕಟ್ಟು ನೀರನ್ನು ನಂಬಿಕೊಂಡು ಬೆಳೆ ಹಾಕಬಾರದು ಎಂದು ಮುಖ್ಯಮಂತ್ರಿಯ ಡಿಕೆ ಶಿವಕುಮಾರ್ ಈಗಾಗಲೇ ಮನವಿ ಮಾಡಿದ್ದರು. ಮಳೆಯ ಪ್ರಭಾವದಿಂದ ಕೃಷಿ ನೀರಾವರಿಗೆ ನೀರು ಪೂರೈಕೆ ಕಷ್ಟಕರವಾಗುವುದರಿಂದ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡೆ ಕೃಷಿ ಚಟುವಟಿಕೆಗಳನ್ನು ಕೈಗೊಳ್ಳುವಂತೆ ಅವರು ಸಲಹೆ ನೀಡಿದ್ದರು.

ಜಲಾಶಯಗಳಲ್ಲಿ ಸಮರ್ಪಕ ಪ್ರಮಾಣದ ನೀರಿಲ್ಲದ ಕಾರಣ ನೀರು ಬಿಡುಗಡೆಗೆ ರೈತರು ಒತ್ತಡ ಹೇರಬಾರದು ಎಂದು ಅವರು ಮನವಿ ಮಾಡಿದ್ದರು. ಮುಂದಿನ ದಿನಗಳಲ್ಲಿ ರಾಜ್ಯದ ವಿವಿಧ ಜಲಾಶಯದ ಪ್ರದೇಶಗಳಲ್ಲಿ ಉತ್ತಮ ಮಳೆಯಾಗಿ ಜಲಾಶಯಗಳಿಗೆ ಒಳಹರಿವು ಹೆಚ್ಚಾದರೆ, ಪರಿಸ್ಥಿತಿಯನ್ನು ಪರಿಶೀಲಿಸಿ ಕೃಷಿ ನೀರಾವರಿಗೆ ಅಗತ್ಯ ನೀರನ್ನು ಒದಗಿಸಲಾಗುವುದು ಎಂದು ತಿಳಿಸಿದ್ದರು.

ತುಂಗಭದ್ರಾ ಸೇರಿದಂತೆ ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನಮಟ್ಟ ಕುಸಿದಿರುವ ಹಿನ್ನೆಲೆಯಲ್ಲಿ ರೈತರು ಹವಾಮಾನ ಮುನ್ಸೂಚನೆ, ಮಳೆಯ ಪ್ರಮಾಣ ಮತ್ತು ಸರ್ಕಾರದ ಮುಂದಿನ ನಿರ್ಧಾರಗಳನ್ನು ಗಮನದಲ್ಲಿಟ್ಟುಕೊಂಡು ಮುಂಗಾರು ಬೆಳೆಗಳತ್ತ ಬಿತ್ತನೆ ಕುರಿತು ನಿರ್ಧಾರ ಕೈಗೊಳ್ಳುವುದು ಸೂಕ್ತ ಎಂದು ಸಲಹೆ ನೀಡಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online