<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Breaking News

'ಅರ್ಧ ಪಾಕಿಸ್ತಾನ್' ಹೇಳಿಕೆ ಪ್ರಕರಣಕ್ಕೆ ಟ್ವಿಸ್ಟ್ : ಯತ್ನಾಳ್ ಪರ ಹೈಕೋರ್ಟ್ ತೀರ್ಪು

'ಅರ್ಧ ಪಾಕಿಸ್ತಾನ್' ಹೇಳಿಕೆ  ಪ್ರಕರಣಕ್ಕೆ ಟ್ವಿಸ್ಟ್ : ಯತ್ನಾಳ್ ಪರ ಹೈಕೋರ್ಟ್ ತೀರ್ಪು
Summary: "The Karnataka High Court has quashed the cases registered against BJP leader Basava Gowda Patil Yatnal in connection with his controversial statement that 'Dinesh Gundu Rao has half Pakistan in his house'. The verdict has sparked a new debate in state politics and is drawing strong reactions from the political circles. What are the key points of the High Court's order? What is the background to the case? Read this report for complete information.

BELAGAVI NEWS:

ಬೆಂಗಳೂರು: ಕಾಂಗ್ರೆಸ್ ನಾಯಕ ದಿನೇಶ್ ಗುಂಡೂರಾವ್ ಕುರಿತು 'ಅವರ ಮನೆಯಲ್ಲಿ ಅರ್ಧ ಪಾಕಿಸ್ತಾನ ಇದೆ' ಎಂದು ಹೇಳಿಕೆ ನೀಡಿದ್ದ ಆರೋಗ್ಯಕ್ಕೆ ಸಂಬಂಧಿಸಿದಂತೆ ವಿಜಯಪುರ ಶಾಸಕ ಬಸವ ಪಾಟೀಲ್ ಯತ್ನಾಳ್ ವಿರುದ್ಧ ರಾಜ್ಯದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ನಾಲ್ಕು ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದುಪಡಿಸಿದೆ.

ವಿಜಯಪುರದ ಗಾಂಧಿ ಚೌಕ್, ಬೆಂಗಳೂರಿನ ಸಂಜಯ್ ನಗರ, ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಹಾಗೂ ಬಾಗಲಕೋಟೆ ಜಿಲ್ಲೆಯ ಮುಧೋಳ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ ಎಫ್ ಐಆರ್ ಗಳು ಮತ್ತು ಅವುಗಳಿಗೆ ಸಂಬಂಧಿಸಿದ ತನಿಖಾ ಪ್ರಕ್ರಿಯೆ ರದ್ದುಪಡಿಸುವಂತೆ ಯತ್ನಾಳ್ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ M. Nagaprasanna ಅವರಿದ್ದ ಏಕಸದಸ್ಯ ಪೀಠ ಮಹತ್ವದ ಆದೇಶ ನೀಡಿದೆ.

ವಿಚಾರಣೆ ವೇಳೆ ಸುಪ್ರೀಂಕೋರ್ಟ್ ನ ಹಲವು ತೀರ್ಪುಗಳನ್ನು ಉಲ್ಲೇಖಿಸಿದ ಹೈಕೋರ್ಟ್, ಯತ್ನಾಳ್ ಅವರ ಭಾಷಣವು ಕಾನೂನು ಬದ್ಧವಾಗಿ ಪ್ರಚೋದನಕಾರಿ ಭಾಷಣದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ಧ ದಾಖಲಾಗಿದ್ದ ಎಲ್ಲಾ ಪ್ರಕರಣಗಳನ್ನು ರದ್ದುಪಡಿಸಿ ಆದೇಶ ಹೊರಡಿಸಿದೆ.

Sponsored

ಈ ತೀರ್ಪು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ರಾಜಕೀಯ ವಲಯದಲ್ಲಿ ತೀವ್ರ ಪ್ರತಿಕ್ರಿಯೆಗಳು ವ್ಯಕ್ತವಾಗುವ ಸಾಧ್ಯತೆ ಇದೆ. ಯತ್ನಾಳ್ ಗೆ ಇದು ಮಹತ್ವದ ಕಾನೂನು ಜಯವೆಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯ ಪಡುತ್ತಿದ್ದಾರೆ.

ಪ್ರಕರಣ: ಸಚಿವ ದಿನೇಶ್ ಗುಂಡೂರಾವ್ ಅವರ ಕುರಿತು ವಿವಾಧಾತ್ಮಕ ಹೇಳಿಕೆ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಶಾಸಕ ಬಸವಗೌಡ ಪಾಟೀಲ ಯತ್ನಾಳ್ ವಿರುದ್ಧ ದಾಖಲಾಗಿದ್ದ 4 ಕ್ರಿಮಿನಲ್ ಪ್ರಕರಣಗಳನ್ನು ಕರ್ನಾಟಕ ಹೈಕೋರ್ಟ್ ರದ್ದು ಪಡಿಸಿದೆ. ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ಆಕ್ಷೇಪಾರ್ಹ ಪೋಸ್ಟ್ ಗಳ ಆರೋಪಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ವಿರುದ್ಧ ದಾಖಲಾಗಿದ್ದ ಮತ್ತೊಂದು ಪ್ರಕರಣವನ್ನು ಹೈಕೋರ್ಟ್ ರದ್ದು ಪಡಿಸಿ ಮಹತ್ವದ ಆದೇಶ ನೀಡಿದೆ.

ಕಳೆದ ಲೋಕಸಭೆ ಚುನಾವಣೆ ವೇಳೆ ವಿಜಯಪುರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ್ದ ಯತ್ನಾಳ್ , ದಿನೇಶ್ ಗುಂಡೂರಾವ್ ಅವರ ಮನೆಯಲ್ಲಿ 'ಅರ್ಧ ಪಾಕಿಸ್ತಾನ ಇದೆ' ಎಂದು ಹೇಳಿಕೆ ನೀಡಿದ್ದರು. ಈ ಸಂಬಂಧ 2024ರ ಎಪ್ರಿಲ್ ನಲ್ಲಿ ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದರು. ಇದೇ ಪ್ರಕರಣದಲ್ಲಿ ದಿನೇಶ್ ಗುಂಡೂರಾವ್ ಅವರ ಪತ್ನಿ Tabu Gundu Rao ಅವರು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ದೂರು ನೀಡಿದ್ದರು.

ಇದರ ಜೊತೆಗೆ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಹಾಗೂ ಬಾಗಲಕೋಟೆ ಜಿಲ್ಲೆಯ ಮುಧೋಳನಲ್ಲಿ ನಡೆದ ಹಿಂದೂ ಮಹಾಗಣಪತಿ ವಿಸರ್ಜನೆ ಕಾರ್ಯಕ್ರಮಗಳಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ್ದಾರೆಯೆಂಬ ಆರೋಪದಡಿ 2024ರ ಸೆಪ್ಟೆಂಬರ್ ನಲ್ಲಿ ಯತ್ನಾಳ್ ವಿರುದ್ಧ ಮತ್ತೆರಡು ಪ್ರಕಾರಗಳು ದಾಖಲಾಗಿದ್ದವು. ಈ ಎಲ್ಲಾ ಎಫ್ಐಆರ್ ಗಳನ್ನು ಪ್ರಶ್ನಿಸಿ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.

Sponsored

ನ್ಯಾಯಮೂರ್ತಿ M. Nagaprasanna ಅವರಿದ್ದ ಏಸದಸ್ಯ ಪೀಠ, ಸುಪ್ರೀಂಕೋರ್ಟ್ ನ ವಿವಿಧ ತೀರ್ಪುಗಳನ್ನು ಉಲ್ಲೇಖಿಸಿ, ಯತ್ನಾಳ್ ಅವರ ಭಾಷಣಗಳು ಕಾನೂನುಬದ್ಧವಾಗಿ ಪ್ರಚೋದನಕಾರಿ ಭಾಷಣದ ವ್ಯಾಪ್ತಿಗೆ ಬರುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಪ್ರಕರಣಗಳನ್ನು ರದ್ದುಪಡಿಸಿ ಆದೇಶಿಸಿದೆ.

ಇನ್ನೊಂದೆಡೆ, ಬಿಜೆಪಿ ಮುಖಂಡರ ಚಿತ್ರಗಳನ್ನು ಆಕ್ಷೇಪಾರ್ಹ ಹೇಳಿಕೆಗಳೊಂದಿಗೆ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡ ಆರೋಪಕ್ಕೆ ಸಂಬಂಧಿಸಿದಂತೆ ದಾಖಲಾಗಿದ್ದ ಪ್ರಕರಣವನ್ನು ರದ್ದುಪಡಿಸುವಂತೆ ಡಿ.ಕೆ ಶಿವಕುಮಾರ್ ಸಲ್ಲಿಸಿದ ಅರ್ಜಿಯನ್ನು ಹೈಕೋರ್ಟ್ ಪುರಸ್ಕರಿಸಿದೆ.

ವಿಚಾರಣೆ ವೇಳೆ ಶಿವಕುಮಾರ್ ಪರ ವಕೀಲರು, ವಿವಾದಾತ್ಮಕ ಪೋಸ್ಟ್ ಗಳನ್ನು ಕಾಂಗ್ರೆಸ್ ನ ಸಾಮಾಜಿಕ ಜಾಲತಾಣ ವಿಭಾಗದ ಮುಖ್ಯಸ್ಥರು ಅಪ್ಲೋಡ್ ಮಾಡಿದ್ದು, ಅರ್ಜಿದಾರರು ಆಗ ಕೆಪಿಸಿಸಿ ಅಧ್ಯಕ್ಷರಾಗಿದ್ದ ಕಾರಣಕ್ಕೆ ಮಾತ್ರ ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ವಾದ ಮಂಡಿಸಿದರು. ಈ ವಾದವನ್ನು ಒಪ್ಪಿದ ನ್ಯಾಯಪೀಠ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ ಪ್ರಕರಣವನ್ನು ರದ್ದುಪಡಿಸಿ ಆದೇಶಿಸಿದೆ.

ರಾಜಕೀಯವಾಗಿ ಸಂಚಲನ ಮೂಡಿಸಿರುವ ಈ ಎರಡು ತೀರ್ಪುಗಳು ರಾಜ್ಯ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಸಾಮಾಜಿಕ ಜಾಲತಾಣಗಳಲ್ಲಿನ ಹೊಣೆಗಾರಿಕೆ ಕುರಿತು ಚರ್ಚೆಯನ್ನು ಮತ್ತಷ್ಟು ತೀವ್ರಗೊಳಿಸಿವೆ.

Sponsored

Also Read:

ಗೃಹಲಕ್ಷ್ಮಿ ಹಣ ಪಡೆಯುವವರಿಗೆ ಎಚ್ಚರಿಕೆ : ಮನೆ ಬಾಗಿಲಿಗೆ ಬರುವ ಅಧಿಕಾರಿಗಳು

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online