<?= $pageTitle ?>
Logo
ಮುಖಪುಟ ಓದುವುದು ಕೇಳು
Business

ಇರಾನ್ ಗೆ ಅಮೆರಿಕದ 300 ಡಾಲರ್ ನೆರವು: ಇಸ್ರೇಲ್ ದಾಳಿಗೆ ಇರಾನ್ ತೀವ್ರ ಪ್ರತಿಕ್ರಿಯೆ

ಇರಾನ್ ಗೆ ಅಮೆರಿಕದ 300 ಡಾಲರ್ ನೆರವು: ಇಸ್ರೇಲ್ ದಾಳಿಗೆ ಇರಾನ್ ತೀವ್ರ ಪ್ರತಿಕ್ರಿಯೆ
Summary: Amidst continued tensions in the Middle East, the US has provided $300 million in financial aid to Iran. Meanwhile, Iran has strongly condemned Israel's recent attack on Lebanon, a development that has sparked fresh debate in the global political arena. Here's more on US-Iran relations, the Israel-Lebanon conflict and its regional implications.

Belagavi News:

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತಾರಕಕ್ಕೇರುತ್ತಿರುವ ನಡುವೆಯೇ, ಅಮೆರಿಕವು ಇರಾನ್ ಗೆ 300 ಬಿಲಿಯನ್ ಡಾಲರ್ ಆರ್ಥಿಕ ನೆರವು ನೀಡಲು ಒಪ್ಪಿಗೆ ಸೂಚಿಸಿದೆ ಎಂದು ಇರಾನ್ ನ ವಿದೇಶಾಂಗ ಸಚಿವರು ತಿಳಿಸಿದ್ದಾರೆ. ಈ ಹಣವನ್ನು ಯುದ್ಧ ಹಾಗೂ ನಿರ್ಬಂಧಗಳಿಂದ ಹಾನಿಗೊಳಗಾದ ಮೂಲಸೌಕರ್ಯಗಳ ಪುನನಿರ್ಮಾಣ ಮತ್ತು ಆರ್ಥಿಕ ಚೇತರಿಕೆ ಕಾರ್ಯಗಳಿಗೆ ಬಳಸಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಈ ಮಹತ್ವದ ಬೆಳವಣಿಗೆಯ ನಡುವೆಯೇ, ಇಸ್ರೇಲ್ ಮತ್ತು ಇರಾನ್ ನಡುವಿನ ರಾಜಕೀಯ ಹಾಗೂ ಭದ್ರತಾ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು, ಲೆಬನಾನ್ ಗಡಿ ಭಾಗದಲ್ಲಿ ನಿಯೋಜಿಸಲಾದ ಇಸ್ರೇಲಿ ಸೇನೆಯನ್ನು ಯಾವುದೇ ಕಾರಣಕ್ಕೂ ಹಿಂಪಡೆಯುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ದೇಶದ ಭದ್ರತೆ ಮತ್ತು ಗಡಿ ರಕ್ಷಣೆಯ ದೃಷ್ಟಿಯಿಂದ ಈ ನಿರ್ಧಾರ ಅನಿವಾರ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಇದೇ ವೇಳೆ, ಇರಾನ್ ಪರಮಾಣು ಅಸ್ತ್ರಗಳನ್ನು ಅಭಿವೃದ್ಧಿಪಡಿಸುವ ಅಥವಾ ಹೊಂದುವ ಯಾವುದೇ ಪ್ರಯತ್ನವನ್ನು ಇಸ್ರೇಲ್ ಸಹಿಸುವುದಿಲ್ಲ ಎಂದು ನೆತನ್ಯಾಹು ಕಠಿಣ ಎಚ್ಚರಿಕೆ ನೀಡಿದ್ದಾರೆ. ಇರಾನ್ ನ ಪರಮಾಣು ಕಾರ್ಯಕ್ರಮವು ಪ್ರದೇಶದ ಸ್ಥಿರತೆಗೆ ಗಂಭೀರ ಬೆದರಿಕೆ ಉಂಟುಮಾಡುತ್ತದೆ ಎಂದು ಇಸ್ರೇಲ್ ಆರೋಪಿಸಿದ್ದು, ಅಗತ್ಯವಿದ್ದರೆ ಕಠಿಣ ಕ್ರಮ ಕೈಗೊಳ್ಳಲು ಹಿಂದೆಮುಂದೆ ನೋಡುವುದಿಲ್ಲ ಎಂಬ ಸಂದೇಶವನ್ನೂ ರವಾನಿಸಿದೆ.

ಅಮೆರಿಕದ ಆರ್ಥಿಕ ನೆರವು ಘೋಷಣೆ, ಇಸ್ರೇಲ್ ನ ಭದ್ರತಾ ನಿಲುವು ಮತ್ತು ಇರಾನ್ ಗೆ ಸಂಬಂಧಿಸಿದ ಬೆಳವಣಿಗೆಗಳು ಮಧ್ಯಪ್ರಾಚ್ಯದ ರಾಜಕೀಯ ಸಮೀಕರಣಗಳ ಮೇಲೆ ಮಹತ್ವದ ಪರಿಣಾಮ ಬೀರುವ ಸಾದ್ಯತೆ ಇದೆ. ಈ ಬೆಳವಣಿಗೆಯನ್ನು ಜಾಗತಿಕ ಸಮುದಾಯವು ನಿಕಟವಾಗಿ ಗಮನಿಸುತ್ತಿದೆ.

ಈ ಹಿಂದೆ ಯುದ್ಧವನ್ನು ನಿಲ್ಲಿಸಿ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದರೂ, ಹಾಗೂ 60 ದಿನಗಳ ಕಾಲ ಯುದ್ಧ ವಿರಾಮ ಇರಬೇಕು ಎಂದು ಹೇಳಿದ್ದರು, ಮಧ್ಯಪ್ರಾಚ್ಯದ ಪರಿಸ್ಥಿತಿ ಇನ್ನಷ್ಟು ಗೊಂದಲಕಾರಿಯಾಗಿದೆ.

ಇರಾನ್ ಮತ್ತು ಅಮೆರಿಕ ನಡುವಿನ ಶಾಂತಿ ಮಾತುಕತೆಗಳು ಆರಂಭವಾಗುವ ಮುನ್ನವೇ ಡೊನಾಲ್ಡ್ ಟ್ರಂಪ್ ಅವರು ಇರಾನ್ ಗೆ ಎಚ್ಚರಿಕೆ ನೀಡಿದ್ದು, ಹಿಜ್ಬುಲ್ಲಾ ಉಗ್ರ ಗುಂಪುಗಳ ಮೂಲಕ ನಡೆಯುತ್ತಿರುವ ದಾಳಿಗಳನ್ನು ತಕ್ಷಣ ನಿಲ್ಲಿಸುವಂತೆ ಒತ್ತಾಯಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯೆಯಾಗಿ ಇರಾನ್- ಇಸ್ರೇಲ್ ದಾಳಿಗಳನ್ನು ನಿಲ್ಲಿಸುವವರೆಗೂ ಯಾವುದೇ ಮಾತುಕತೆ ಸಾಧ್ಯವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಪರಸ್ಪರ ಆರೋಪ- ಪ್ರತ್ಯಾರೋಪಗಳು ಮತ್ತು ನಿಲುವಿನ ಕಠಿಣತೆ ಮಧ್ಯಪ್ರಾಚ್ಯದಲ್ಲಿ ಶಾಂತಿ ಸ್ಥಾಪನೆಯ ಸಾಧ್ಯತೆಗಳ ಬಗ್ಗೆ ಮತ್ತಷ್ಟು ಅನಿಶ್ಚಿತತೆಯನ್ನು ಹೆಚ್ಚಿಸಿದೆ.

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಗಳು ಮುಂದುವರಿದಿರುವ ನಡುವೆಯೇ ಅಮೆರಿಕ -ಇರಾನ್ ಸಂಬಂಧದಲ್ಲಿ ಹೊಸ ಬೆಳವಣಿಗೆಗಳು ಗಮನ ಸೆಳೆಯುತ್ತಿವೆ.

ಇರಾನ್ ನ ವಿದೇಶಾಂಗ ಸಚಿವರು ಅಮೆರಿಕವು ಇರಾನ್ ಗೆ ಸುಮಾರು 300 ಬಿಲಿಯನ್ ಡಾಲರ್ ಆರ್ಥಿಕ ನೆರವು ನೀಡಲು ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ. ಈ ಹಣವನ್ನು ಇರಾನ್ ನ ಪುನರ್ನಿರ್ಮಾಣ ಕಾರ್ಯಗಳಿಗೆ ಬಳಸಲಾಗುತ್ತದೆ ಎಂದು ಹೇಳಲಾಗಿದೆ.

ಆದರೆ ಈ ಬೆಳವಣಿಗೆಗೆ ಸಂಬಂಧಿಸಿದ ಅಮೆರಿಕದೊಳಗೂ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲೂ ಮಿಶ್ರ ಪ್ರತಿಕ್ರಿಯೆಗಳು ವ್ಯಕ್ತವಾಗಿವೆ. ಕೆಲವರು ಈ ಕ್ರಮವನ್ನು ವಿರೋಧಿಸುತ್ತಿದ್ದು, " ಹಾನಿ ಮಾಡುವವರು ಇವರೇ, ನಂತರ ಪುನರ ನಿರ್ಮಾಣಕ್ಕೆ ಹಣ ನೀಡುವವರು ಇವರೇ" ಎಂಬ ರೀತಿಯ ಟೀಕೆಗಳು ಕೇಳಿ ಬರುತ್ತಿವೆ. ಇದು ಮಧ್ಯಪ್ರಾಚ್ಯದ ರಾಜಕೀಯ ಮತ್ತು ಶಾಂತಿ ಪ್ರಕ್ರಿಯೆಯ ಸಂಕೀರ್ಣತೆಯನ್ನು ಮತ್ತೊಮ್ಮೆ ಎತ್ತಿ ತೋರಿಸಿರಿ.

Also Read:

ವರುಣನ ಆರ್ಭಟಕ್ಕೆ ಕರ್ನಾಟಕ ತತ್ತರ : ಕರಾವಳಿ - ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಅಬ್ಬರ - ಜನರಿಗೆ ಎಚ್ಚರಿಕೆ ಸಂದೇಶ

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online