<?= $pageTitle ?>
Logo
ಮುಖಪುಟ ಓದುವುದು ಕೇಳು
Politics

ಲೋಕಸಭೆ-ರಾಜ್ಯಸಭೆಯಲ್ಲಿ ಗದ್ದಲ: ಸ್ಪೀಕರ್, ಸಭಾಧ್ಯಕ್ಷರಿಂದ ಕಲಾಪ ಮುಂದೂಡಿಕೆ

ಲೋಕಸಭೆ-ರಾಜ್ಯಸಭೆಯಲ್ಲಿ ಗದ್ದಲ: ಸ್ಪೀಕರ್, ಸಭಾಧ್ಯಕ್ಷರಿಂದ ಕಲಾಪ ಮುಂದೂಡಿಕೆ
Summary: Lok Sabha and Rajya Sabha proceedings have been adjourned till 12 noon due to intense noise and protests by the opposition parties. Here is the complete information on today's developments in the Parliament session, objections by the opposition parties and the work activities of the House.

Belagavi News:

ನವದೆಹಲಿ: ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ವಿರುದ್ಧ ಜುಲೈ 20ರಂದು ದೆಹಲಿಯಲ್ಲಿ ನಡೆದ ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಹಾಗೂ ಪೆಲೆಟ್ ಗನ್ ಬಳಕೆ ನಡೆದಿದೆ ಎಂಬ ಆರೋಪಗಳ ಕುರಿತು ಸಂಸತ್ತಿನ ಉಭಯ ಸದನಗಳಲ್ಲಿ ಚರ್ಚೆಗೆ ವಿಪಕ್ಷಗಳು ಒತ್ತಾಯಿಸಿದವು. ಕಲಾಪ ಆರಂಭವಾಗುತ್ತಿದ್ದಂತೆ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯಲ್ಲಿ ಗದ್ದಲ ಉಂಟಾಯಿತು.

ತೀವ್ರ ಗದ್ದಲದ ನಡುವೆಯೇ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸಂಸದ ಕಲಾಪವನ್ನು ಮಧ್ಯಾಹ್ನ 12 ಗಂಟೆಯವರೆಗೆ ಮುಂದೂಡಿದರು. ಇದೇ ವೇಳೆ ರಾಜ್ಯಸಭೆಯಲ್ಲೂ ವಿಪಕ್ಷ ಸದಸ್ಯರ ಪ್ರತಿಭಟನೆ ಮುಂದುವರಿದ ಕಾರಣ ಸಭಾಧ್ಯಕ್ಷರು ಕಲಾಪವನ್ನು ಮಧ್ಯಾಹ್ನ 12 ಗಂಟೆಗೆ ಮುಂದೂಡಿದರು.

ಪ್ರಧಾನಿ, ಗೃಹ ಸಚಿವರ ಕ್ಷಮೆ ಕೇಳಲಿ: ಪ್ರಿಯಾಂಕಾ ವಾದ್ರಾ

ಇದಕ್ಕೂ ಮುನ್ನ ಸಂಸತ್ ಭವನದ ಆವರಣದಲ್ಲಿ ಮಾತನಾಡಿದ ಕಾಂಗ್ರೆಸ್ ನಾಯಕಿ ಹಾಗೂ ಸಂಸದ ಪ್ರಿಯಾಂಕಾ ವಾದ್ರಾ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಪ್ರತಿಭಟನೆ ನಡೆಸಿದ್ದು ವಿದ್ಯಾರ್ಥಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಮೇಲೆ ನಡೆದ ಕ್ರಮಗಳಿಗೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರು ಕ್ಷಮೆಯಾಚಿಸಬೇಕು ಎಂದು ಅವರು ಆಗ್ರಹಿಸಿದರು.

ಬಿಹಾರ್ ಮತ್ತು ಪಶ್ಚಿಮ ಬಂಗಾಳದಲ್ಲಿ ವಿದ್ಯಾರ್ಥಿಗಳ ವಿರುದ್ಧ ಇನ್ನೂ ಎಫ್ಐಆರ್ ಗಳು ದಾಖಲಾಗುತ್ತಿವೆ ಎಂಬ ಮಾಹಿತಿ ಕೇಳಿ ಬಂದಿದೆ ಎಂದು ಹೇಳಿದ ಅವರು ಈ ಬಗ್ಗೆ ಪರಿಶೀಲನೆ ಅಗತ್ಯವಿದೆ ಎಂದರು ವಿದ್ಯಾರ್ಥಿಗಳ ಸಮಸ್ಯೆಗಳನ್ನು ಸರಕಾರ ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.

ನೀಟ್ ವಿವಾದ, ಪ್ರತಿಭಟನೆ ವೇಳೆ ನಡೆದ ಪೊಲೀಸ್ ಕ್ರಮ ಹಾಗೂ ವಿದ್ಯಾರ್ಥಿಗಳ ವಿರುದ್ಧದ ಪ್ರಕರಣಗಳ ಕುರಿತು ಸಂಸತ್ತಿನಲ್ಲಿ ಚರ್ಚೆ ನಡೆಸಬೇಕೆಂಬುದು ವಿಪಕ್ಷಗಳ ಪ್ರಮುಖ ಬೇಡಿಕೆಯಾಗಿದೆ.

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online