<?= $pageTitle ?>
Logo
ಮುಖಪುಟ ಓದುವುದು ಕೇಳು
Trending

ಸಂಸತ್ತಿನಲ್ಲಿ ಇಂದು ಕೋಲಾಹಲ: ವಿಪಕ್ಷಗಳ ಗದ್ದಲದಿಂದ ಮಧ್ಯಾಹ್ನ 2ಕ್ಕೆ ಸದನ ಮುಂದೂಡಿಕೆ

ಸಂಸತ್ತಿನಲ್ಲಿ ಇಂದು ಕೋಲಾಹಲ: ವಿಪಕ್ಷಗಳ ಗದ್ದಲದಿಂದ ಮಧ್ಯಾಹ್ನ 2ಕ್ಕೆ ಸದನ ಮುಂದೂಡಿಕೆ
Summary: There has been renewed uproar in Parliament over allegations of police lathi-charge on students protesting against the NEET question paper leak. Opposition members, including the Congress, raised slogans in the Lok Sabha and Rajya Sabha demanding an urgent discussion on the incident. The opposition parties have demanded that the police be held accountable for their actions, disrupting the proceedings of both the Houses.

belagavi news :

ಸಂಸತ್ತಿನ ಮುಂಗಾರು ಅಧಿವೇಶನ ಆರಂಭವಾದಾಗಿನಿಂದ ಮುಂದುವರೆದಿರುವ ಗದ್ದಲ ಇಂದು ಮುಂದುವರೆದಿದೆ. ಲೋಕಸಭೆ ಮತ್ತು ರಾಜ್ಯಸಭೆ ಕಲಾಪ ಆರಂಭವಾಗುತ್ತಿದ್ದಂತೆ ವಿಪಕ್ಷ ಸದಸ್ಯರು ನೀರು ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರಮಕ್ಕೆ ಹೊಣೆಗಾರಿಕೆ ನಿಗದಿ ಮಾಡುವಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸೋಮವಾರ ಸರ್ಕಾರ ಮಂಡಿಸಿದ್ದ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಮಸೂದೆ ಕುರಿತು ಮಹತ್ವದ ಚರ್ಚೆ ನಡೆಯುವ ನಿರೀಕ್ಷೆಯಿತ್ತು. ಆದರೆ ಕಲಾಪ ಆರಂಭವಾದ ಕೆಲವೇ ಕ್ಷಣಗಳಲ್ಲಿ ವಿಪಕ್ಷಗಳ ಪ್ರತಿಭಟನೆ ತೀವ್ರಗೊಂಡ ಪರಿಣಾಮ ಸದನದಲ್ಲಿ ಗದ್ದಲ ಉಂಟಾಯಿತು.

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಲಾಠಿಚಾರ್ಜ್ ಆರೋಪ ದ ಕುರಿತು ತುರ್ತು ಚರ್ಚೆಗೆ ಅವಕಾಶ ನೀಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಸದಸ್ಯರು ಒತ್ತಾಯಿಸಿದರು. ನಿರಂತರ ಗದ್ದಲದ ಹಿನ್ನೆಲೆಯಲ್ಲಿ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳನ್ನು ಮಧ್ಯಾಹ್ನ 2 ಗಂಟೆಯವರೆಗೆ ಮುಂದುಡಲಾಯಿತು.

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ನೀರ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆ ವಿಚಾರವಾಗಿ ಮತ್ತೆ ಗದ್ದಲ ಮುಂದುವರೆದಿದೆ. ಈ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ಪ್ರತಿಪಕ್ಷ ಸದಸ್ಯರಿಗೆ ಮನವಿ ಮಾಡಿದರು.

ಸದನದಲ್ಲಿ ಚರ್ಚೆ ಮತ್ತು ಸಂವಾದಗಳಿಗೆ ಆದ್ಯತೆ ನೀಡಬೇಕು. ಪ್ರತಿಯೊಬ್ಬ ಸದಸ್ಯರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗುವುದು. ಸಂಸತ್ತಿನಲ್ಲಿ ಆರೋಗ್ಯಕರ ಚರ್ಚೆಗಳು ನಡೆದಾಗ ಮಾತ್ರ ದೇಶಕ್ಕೆ ಸಕಾರಾತ್ಮಕ ಸಂದೇಶ ರವಾನೆಯಾಗುತ್ತದೆ ಎಂದು ಸ್ಪೀಕರ್ ತಿಳಿಸಿದರು.

ಆದರೆ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿಚಾರ್ಜ್ ನಡೆಸಿದ ಆರೋಪದ ಕುರಿತು ತುರ್ತು ಚರ್ಚೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ತಮ್ಮ ನಿಲುವಿನಲ್ಲಿ ಮುಂದುವರಿದರು. ಈ ವೇಳೆ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ಪ್ರತಿಪಕ್ಷ ಸದಸ್ಯರಿಗೆ ಮನವಿ ಮಾಡಿದರು.

ಸದನದಲ್ಲಿ ಚರ್ಚೆ ಮತ್ತು ಸಂವಾದಗಳಿಗೆ ಆದ್ಯತೆ ನೀಡಬೇಕು. ಪ್ರತಿಯೊಬ್ಬ ಸದಸ್ಯರಿಗೂ ತಮ್ಮ ಅಭಿಪ್ರಾಯ ವ್ಯಕ್ತಪಡಿಸಲು ಅವಕಾಶ ನೀಡಲಾಗುವುದು. ಸಂಸತ್ತಿನಲ್ಲಿ ಆರೋಗ್ಯಕರ ಚರ್ಚೆಗಳು ನಡೆದಾಗ ಮಾತ್ರ ದೇಶಕ್ಕೆ ಸಕಾರಾತ್ಮಕ ಸಂದೇಶ ರವಾನಿಯಾಗುತ್ತದೆ ಎಂದು ಸ್ಪೀಕರ್ ತಿಳಿಸಿದರು.

ಆದರೆ, ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಟಿಚಾರ್ಜ್ ನಡೆಸಿದ ಆರೋಪದ ಕುರಿತು ತುರ್ತು ಚರ್ಚೆಗೆ ಆಗ್ರಹಿಸಿ ಕಾಂಗ್ರೆಸ್ ಸದಸ್ಯರು ತಮ್ಮ ನಿಲುವಿನಲ್ಲಿ ಮುಂದುವರೆದರು. ರಾಜ್ಯಸಭೆಯಲ್ಲಿ ಕಾಂಗ್ರೆಸ್ ಸಂಸದರಾದ ರಣದೀಪ್ ಸುರ್ಜೆವಾಲಾ ಮತ್ತು ಸೈಯದ್ ನಾಸಿರ್ ಹುಸೇನ್ ಅವರು ನಿಯಮ 267ರ ಅಡಿಯಲ್ಲಿ ಚರ್ಚೆಗೆ ನೋಟಿಸ್ ಸಲ್ಲಿಸಿದರು.

ಲೋಕಸಭೆಯಲ್ಲಿ ಕಾಂಗ್ರೆಸ್ ಉಪನಾಯಕ ಗೌರವ್ ಗೊಗೊಯ್ ಮತ್ತು ಸಂಸದ ಮನೀಶ್ ತಿವಾರಿ ಅವರು ನಿಗದಿತ ಕಲಾಪವನ್ನು ಮುಂದೂಡಿ ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ಕುರಿತು ಚರ್ಚೆ ನಡೆಯುವಂತೆ ನಿಲುವಳಿ ಸೂಚನೆ ಮಂಡಿಸಿದರು.

ಪ್ರತಿಭಟನೆ ವೇಳೆ ವಿದ್ಯಾರ್ಥಿಗಳ ಲಾಠಿ ಮತ್ತು ಪೆಲೆಟ್ ಗನ್ ಬಳಕೆಯಾಗಿದೆ ಎಂಬ ಆರೋಪದ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನದಲ್ಲಿ ಸ್ಪಷ್ಟನೆ ನೀಡಬೇಕು ಎಂದು ಕಾಂಗ್ರೆಸ್ ಸೇರಿದಂತೆ ವಿಪಕ್ಷ ಸದಸ್ಯರು ಒತ್ತಾಯಿಸಿದರು. ನೀಟ್ ವಿವಾದ ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ವಿಚಾರ ಸಂಸತ್ ನಲ್ಲಿ ಪ್ರಮುಖ ರಾಜಕೀಯ ಚರ್ಚೆಯಾಗಿ ಮುಂದುವರೆದಿದೆ.

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ವಿಚಾರವಾಗಿ ಸಂಸತ್ತಿನಲ್ಲಿ ಗದ್ದಲ ಮುಂದುವರೆದಿದೆ. ರಾಜ್ಯಸಭೆಯಲ್ಲೂ ವಿಪಕ್ಷ ಸದಸ್ಯರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸದನಕ್ಕೆ ಆಗಮಿಸಿ ಈ ಕುರಿತು ಸ್ಪಷ್ಟನೆ ನೀಡಬೇಕು ಎಂದು ಒತ್ತಾಯಿಸಿದರು .

ವಿಪಕ್ಷಗಳ ಈ ಬೇಡಿಕೆಯನ್ನು ಆಡಳಿತ ಪಕ್ಷದ ಸದಸ್ಯರು ತಿರಸ್ಕರಿಸಿದ ಹಿನ್ನೆಲೆಯಲ್ಲಿ ಸದನದಲ್ಲಿ ಗದ್ದಲ ಉಂಟಾಯಿತು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ರಾಜ್ಯಸಬೆ ಕಲಾಪವನ್ನು ಮುಂದೂಡಲಾಯಿತು.

ಇದರ ನಡುವೆ, ಪರೀಕ್ಷಾ ಅಕ್ರಮಗಳು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ತಡೆಯುವ ಉದ್ದೇಶದಿಂದ ಕೇಂದ್ರ ಸಚಿವ ಜಿತೇಂದ್ರ ಸಿಂಗ್ ಅವರು ಸೋಮವಾರ ಸದನದಲ್ಲಿ ಸಾರ್ವಜನಿಕ ಪರೀಕ್ಷೆಗಳು ತಿದ್ದುಪಡಿ ಮಸೂದೆ, 2026 ಮಂಡಿಸಿದ್ದರು. ಈ ಮಸೂದೆ ಇನ್ನೂ ಅಂಗೀಕಾರವಾಗಬೇಕಿದೆ.

ಮಸೂದೆ ಕುರಿತು ಸುಗಮಾ ಚರ್ಚೆ ನಡೆಯುವಂತೆ ಮಾಡಲು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಸದನದ ನಾಯಕರ ಸಭೆ ಕರೆದು ಸದಸ್ಯರು ಚರ್ಚೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಿದ್ದರು. ಆದರೆ ನೀಟ್ ವಿವಾದ ಮತ್ತು ವಿದ್ಯಾರ್ಥಿಗಳ ಮೇಲಿನ ಪೊಲೀಸ್ ಕ್ರಮದ ವಿಚಾರವಾಗಿ ವಿಪಕ್ಷಗಳ ಪ್ರತಿಭಟನೆ ಮುಂದುವರಿದ ಪರಿಣಾಮ ಸಂಸತ್ ಕಲಾಪಕ್ಕೆ ಅಡ್ಡಿಯಾಗಿದೆ.

Also Read:

RSS ನೋಂದಣಿ ವಿಚಾರದಲ್ಲಿ ಹೊಸ ಚರ್ಚೆ: ರಾಷ್ಟ್ರಮಟ್ಟದ ಅಭಿಯಾನಕ್ಕೆ ಪ್ರಿಯಾಂಕ್ ಖರ್ಗೆ ಬೆಂಬಲ?

Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online