<?= $pageTitle ?>
Logo
ಮುಖಪುಟ ಓದುವುದು ಕೇಳು
Advertisement
Politics

'ವಿಜಯೇಂದ್ರನನ್ನು ಕಿತ್ತು ಬಿಸಾಕಿ' ಆಡಿಯೋ ವೈರಲ್ : ಸದಾನಂದ ಗೌಡ ಸ್ಪಷ್ಟನೆ

'ವಿಜಯೇಂದ್ರನನ್ನು ಕಿತ್ತು ಬಿಸಾಕಿ' ಆಡಿಯೋ ವೈರಲ್ : ಸದಾನಂದ ಗೌಡ ಸ್ಪಷ್ಟನೆ
Summary: Former Chief Minister D.V. Sadananda Gowda has reacted to the viral audio titled 'Vijayendra was killed and thrown away', and the issue has led to a new debate in state BJP politics.

Belagavi News:

ಕರ್ನಾಟಕ ಬಿಜೆಪಿ ರಾಜಕೀಯದಲ್ಲಿ ಸಂಚಲನ ಮೂಡಿಸಿರುವ 'ವಿಜಯೇಂದ್ರ ಅನ್ನೋ ಕಿತ್ತು ಬಿಸಾಕಿ' ಎಂಬ ಆಡಿಯೋ ಕುರಿತು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಪ್ರತಿಕ್ರಿಯೆ ನೀಡಿದ್ದು, ಈ ವಿಚಾರ ರಾಜಕೀಯ ವಲಯದಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ.

ವೈರಲ್ ಆಗಿರುವ ಆಡಿಯೋದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಕುರಿತು ಕೇಳಿ ಬಂದಿರುವ ಹೇಳಿಕೆಗಳು ಪಕ್ಷದೊಳಗಿನ ಬೆಳವಣಿಗೆಗಳ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟು ಹಾಕಿವೆ. ಈ ಹಿನ್ನೆಲೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಸದಾನಂದ ಗೌಡ, ಆಡಿಯೋ ವೈರಲ್ ವಿಚಾರಕ್ಕೆ ಸಂಬಂಧಿಸಿದಂತೆ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

ಅವರು, ಪಕ್ಷದ ಎಲ್ಲಾ ನಾಯಕರು ಸಂಘಟನೆಯ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸಬೇಕು ಎಂದು ಹೇಳಿದ್ದು, ಯಾವುದೇ ವಿಚಾರವನ್ನು ಊಹಾಪೋಹಗಳ ಆಧಾರದ ಮೇಲೆ ನಿರ್ಧರಿಸಬಾರದು ಎಂದು ಅಭಿಪ್ರಾಯ ಪಟ್ಟಿದ್ದಾರೆ. ಪಕ್ಷದ ಆಂತರಿಕ ವಿಚಾರಗಳನ್ನು ಪಕ್ಷದ ವೇದಿಕೆಯಲ್ಲಿಯೇ ಚರ್ಚಿಸುವುದು ಸೂಕ್ತ ಎಂದು ಅವರು ತಿಳಿಸಿದ್ದಾರೆ.

Sponsored

ಇದೇ ವೇಳೆ ವೈರಲ್ ಆಡಿಯೋ ದ ಸತ್ಯಾ ಸತ್ಯತೆ ಕುರಿತು ಅಧಿಕೃತ ಮಾಹಿತಿ ಹೊರಬರಬೇಕಿದ್ದು, ಪರಿಶೀಲನೆ ಪೂರ್ಣಗೊಳ್ಳುವ ಮುನ್ನ ಯಾವುದೇ ತೀರ್ಮಾನಕ್ಕೆ ಬರಬಾರದು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ವೈರಲ್ ಆಡಿಯೋ ಪ್ರಕರಣ ಇದೀಗ ರಾಜ್ಯ ಬಿಜೆಪಿ ರಾಜಕೀಯದಲ್ಲಿ ತೀವ್ರ ಕುತೂಹಲ ಮೂಡಿಸಿದ್ದು, ಮುಂದಿನ ಬೆಳವಣಿಗೆಗಳತ್ತ ಎಲ್ಲರ ಗಮನ ನೆಟ್ಟಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಉದ್ಘಾಟನೆ ಕುರಿತು ವೈರಲ್ ಆಡಿಯೋ ; ಸದಾನಂದ ಗೌಡ ಹೆಸರಿನ ಆಡಿಯೋದಿಂದ ರಾಜ್ಯ ರಾಜಕೀಯದಲ್ಲಿ ಸಂಚಲನ :

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ಉಚ್ಚಾಟನೆ ಕುರಿತು ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ರಾಜ್ಯ ರಾಜಕೀಯದಲ್ಲಿ ತೀರ ಸಂಚಲನಕ್ಕೆ ಕಾರಣವಾಗಿದೆ.

Sponsored

ವೈರಲ್ ಆಗಿರುವ ಆಡಿಯೋದಲ್ಲಿ ವಿಜಯೇಂದ್ರ ಅವರ ನಾಯಕತ್ವ ಮತ್ತು ಬಿಜೆಪಿ ಸಂಘಟನೆ ಕುರಿತ ಕೆಲವು ಹೇಳಿಕೆಗಳು ಕೇಳಿ ಬಂದಿವೆ ಎನ್ನಲಾಗಿದ್ದು, ಈ ಬೆಳವಣಿಗೆ ಪಕ್ಷದ ಆಂತರಿಕ ರಾಜಕೀಯದ ಬಗ್ಗೆ ಹೊಸ ಚರ್ಚೆಗೆ ನಾಂದಿ ಹಾಡಿದೆ.

ಆಡಿಯೋ ವೈರಲ್ ಆದ ಬೆನ್ನಲ್ಲೇ ಬಿಜೆಪಿ ವಲಯದಲ್ಲಿ ವಿವಿಧ ರೀತಿಯ ಊಹಾಪೋಹಗಳು ಹರಿದಾಡುತ್ತಿದ್ದು, ಅದರ ಸತ್ಯಾಸತ್ಯ ಕುರಿತು ರಾಜಕೀಯ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಈ ಕುರಿತು ಅಧಿಕೃತ ಸ್ಪಷ್ಟನೆ ಮತ್ತು ಪರಿಶೀಲನೆಗಾಗಿ ಹಲವು ನಾಯಕರು ಆಗ್ರಹಿಸಿದ್ದಾರೆ.

ರಾಜ್ಯ ರಾಜಕೀಯದಲ್ಲಿ ಈ ಬೆಳವಣಿಗೆ ಕುತೂಹಲ ಮೂಡಿಸಿದ್ದು, ಮುಂದಿನ ದಿನಗಳಲ್ಲಿ ಪಕ್ಷದ ನಾಯಕತ್ವದಿಂದ ಯಾವ ರೀತಿಯ ಪ್ರತಿಕ್ರಿಯೆ ಹೊರಬರುತ್ತದೆ ಎಂಬುದರತ್ತ ಎಲ್ಲರ ಗಮನ ನೆಟ್ಟಿದೆ.

ವಿಜೇಂದ್ರ ಆಡಿಯೋ ವಿವಾದಕ್ಕೆ ಸದಾನಂದ ಗೌಡ ಆಕ್ರೋಶ ; 'ಇದು ನನ್ನ ವಿರುದ್ಧದ ಪಿತೂರಿ' ಎಂದು ಆರೋಪ :

Sponsored

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಕುರಿತು ವೈರಲ್ ಆಗಿರುವ ಆಡಿಯೋ ವಿವಾದಕ್ಕೆ ಮಾಜಿ ಮುಖ್ಯಮಂತ್ರಿ ಡಿವಿ ಸದಾನಂದ ಗೌಡ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆಡಿಯೋವನ್ನು ತಮ್ಮ ವಿರುದ್ಧ ರೂಪಿಸಲಾಗಿರುವ ಪಿತೂರಿ ಎಂದು ಆರೋಪಿಸಿರುವ ಅವರು, ಘಟನೆಗೆ ಸಂಬಂಧಿಸಿದಂತೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಆಡಿಯೋ ವೈರಲ್ ಆದ ಬಳಿಕ ರಾಜ್ಯ ಬಿಜೆಪಿ ರಾಜಕೀಯದಲ್ಲಿ ಹೊಸ ಚರ್ಚೆ ಆರಂಭವಾಗಿದ್ದು, ಪಕ್ಷದೊಳಗಿನ ಭಿನ್ನಮತದ ಕುರಿತು ಹಲವು ಹಾಪೋಹಗಳು ಕೇಳಿ ಬರುತ್ತಿವೆ. ಆದರೆ ಈ ಆಡಿಯೋ ಕುರಿತು ಹೆಚ್ಚಿನ ಪ್ರತಿಕ್ರಿಯೆ ನೀಡಲು ಸದಾನಂದ ಗೌಡ ನಿರಾಕರಿಸಿದ್ದಾರೆ.

ಆದರೂ, ಈ ಬೆಳವಣಿಗೆಯ ಬಗ್ಗೆ ಸಂಕ್ಷಿಪ್ತವಾಗಿ ಪ್ರತಿಕ್ರಿಯಿಸಿದವರು, ಇದು ತಮ್ಮ ವಿರುದ್ಧದ ಸಂಚು ಎಂದು ಹೇಳಿದ್ದು, ಸತ್ಯಾಸತ್ಯ ಹೊರ ಬರಬೇಕಿದೆ ಎಂದು ಅಭಿಪ್ರಾಯ ಪಟ್ಟಿದ್ದಾರೆ. ಪರಿಶೀಲನೆ ಪೂರ್ಣಗೊಳ್ಳುವ ಮುನ್ನ ಯಾವುದೇ ನಿರ್ಧಾರಕ್ಕೆ ಬರಬಾರದು ಎಂಬ ಸಂದೇಶವನ್ನು ನೀಡಿದ್ದಾರೆ.

ವೈರಲ್ ಆಡಿಯೋ ಪ್ರಕರಣದ ಕುರಿತು ಇನ್ನು ಅಧಿಕೃತ ದೃಢೀಕರಣವಾಗಿಲ್ಲ. ಅದಾಗಿಯೂ, ಈ ಬೆಳವಣಿಗೆ ರಾಜ್ಯ ಬಿಜೆಪಿಯ ಆಂತರಿಕ ರಾಜಕೀಯದ ಬಗ್ಗೆ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಬೆಳವಣಿಗೆಗಳತ್ತ ರಾಜಕೀಯ ವಲಯದಲ್ಲಿ ಗಮನ ನೆಟ್ಟಿದೆ.

Sponsored

'ನೋ ಕಾಮೆಂಟ್ಸ್' - ವೈರಲ್ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಲು ನಿರಾಕರಿಸಿದ ಸದಾನಂದ ಗೌಡ :

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಅವರ ಕುರಿತಾಗಿ ವೈರಲ್ ಆಗಿರುವ ಆಡಿಯೋ ವಿವಾದಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಡಿ ವಿ ಸದಾನಂದ ಗೌಡ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. ಆಡಿಯೋ ಕುರಿತು ಸತ್ಯಾಸತ್ಯತೆ ಹೊರಬರಲಿ ಎಂದು ಹೇಳಿರುವ ಅವರು, ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಸದಾನಂದ ಗೌಡ,"ನೋ ಕಾಮೆಂಟ್ಸ್ . ಆಡಿಯೋ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಈ ಆಡಿಯೋ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ಅದರಿಂದ ಉತ್ತರ ಕೊಡುವ ಪ್ರಶ್ನೆಯೇ ಇಲ್ಲ. ಮೊದಲು ಸತ್ಯ ಸಂಗತಿ ಹೊರಬರಲಿ" ಎಂದು ಹೇಳಿದರು.

ಇದೇ ವೇಳೆ, ತಮ್ಮ ಬಗ್ಗೆ ಹಲವು ದಿನಗಳಿಂದ ಚರ್ಚೆಗಳು ನಡೆಯುತ್ತಿವೆ ಎಂದು ಹೇಳಿದ ಅವರು, "ಕೋರ್ ಕಮಿಟಿ ಸಭೆಯಲ್ಲಿ ಕೆಲವು ವಿಷಯಗಳನ್ನು ಪ್ರಸ್ತಾಪಿಸಿದ್ದೇನೆ. ಕೇಂದ್ರ ನಾಯಕರು ಅಥವಾ ರಾಜ್ಯನಾಯಕರು ಕೇಳಿದರೆ ಅವರಿಗೆ ಸೂಕ್ತ ಉತ್ತರ ನೀಡುತ್ತೇನೆ" ಎಂದು ಸ್ಪಷ್ಟಪಡಿಸಿದರು.

Sponsored

ವೈರಲ್ ಆಗಿರುವ ಆಡಿಯೋ ದ ಸತ್ಯಾಸತ್ಯ ಕುರಿತು ಇನ್ನು ಯಾವುದೇ ಅಧಿಕೃತ ದೃಢೀಕರಣ ಲಭ್ಯವಾಗಿಲ್ಲ. ಆದರೂ, ಈ ಬೆಳವಣಿಗೆ ರಾಜ್ಯ ಬಿಜೆಪಿ ರಾಜಕೀಯದಲ್ಲಿ ಹೊಸ ಚರ್ಚೆಗೆ ಕಾರಣವಾಗಿದ್ದು, ಮುಂದಿನ ಬೆಳವಣಿಗೆಗಳತ್ತ ರಾಜಕೀಯ ವಲಯದ ಗಮನ ನೆಟ್ಟಿದೆ.

Also Read:

ಸಿದ್ದರಾಮಯ್ಯ ಸೈಡ್ ಲೈನ್ ಚರ್ಚೆ: ಸತೀಶ್ ಜಾರಕಿಹೊಳಿ ಮಾತುಗಳು ರಾಜಕೀಯ ಕುತೂಹಲ ಹೆಚ್ಚಿಸಿದವು

You May Also Like
Sponsored
Stay Updated

Get the latest news delivered to your inbox

We respect your privacy. Unsubscribe anytime.

Trending News

Related News

View All
logo

H16NEWS

ತ್ವರಿತ ಸುದ್ದಿ. ಅನಂತ ಒಳನೋಟ
ADS

© H16news.online . All Rights Reserved. Designed by H16news.online